Monsoon Rain
ಮಾನ್ಸೂನ್ ಮೂಲತಃ ಹಿಂದೂ ಮಹಾಸಾಗರ ಮತ್ತು ಅರಬ್ಬೀ ಸಮುದ್ರದಿಂದ ಭಾರತದ ನೈಋತ್ಯ ಕರಾವಳಿಗೆ ಬೀಸುವ ಗಾಳಿಯಾಗಿದೆ. ಇದು ಭಾರತ, ಪಾಕಿಸ್ತಾನ, ಬಾಂಗ್ಲಾದೇಶಗಳಿಗೆ ಮಳೆಯ ಮೋಡಗಳು ಚಲಿಸಲು ಕಾರಣವಾಗುತ್ತದೆ. ಇವುಗಳು ಕಾಲೋಚಿತ (ಸೀಸನಲ್) ಮಾರುತಗಳಾಗಿವೆ. ಇದು ಜೂನ್ ನಿಂದ ಸೆಪ್ಟೆಂಬರ್ ವರೆಗೆ ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಸುಮಾರು ನಾಲ್ಕು ತಿಂಗಳುಗಳವರೆಗೆ ಸಕ್ರಿಯವಾಗಿರುತ್ತದೆ. ಮಾನ್ಸೂನ್ ಪದವನ್ನು ಮೊದಲು ಬ್ರಿಟಿಷ್ ಆಡಳಿತದ ಭಾರತದಲ್ಲಿ (ಇಂದಿನ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ) ಮತ್ತು ನೆರೆಯ ರಾಷ್ಟ್ರಗಳಲ್ಲಿ ಬಳಸಲಾಯಿತು. ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಿಂದ ಬೀಸುವ ದೊಡ್ಡ ಋತುಮಾನದ ಮಾರುತಗಳಿಗೆ ಇದನ್ನು ಬಳಸಲಾಗುತ್ತಿತ್ತು. ಇದು ನೈಋತ್ಯದಿಂದ ಬೀಸುತ್ತದೆ ಮತ್ತು ಮೇಲೆ ಉಲ್ಲೇಖಿಸಿದ ಪ್ರದೇಶಗಳಲ್ಲಿ ಭಾರೀ ಮಳೆಗೆ ಕಾರಣವಾಗುತ್ತದೆ.
ಪ್ರವಾಸಿಗರೇ ಗಮನಿಸಿ, ಮಂಗಳೂರಿನ ಬೀಚ್‌ಗಳಲ್ಲಿ ಹೈಅಲರ್ಟ್: ವಾಟರ್ ಸ್ಪೋರ್ಟ್ಸ್ ಸಂಪೂರ್ಣ ಸ್ಥಗಿತ, ಸಮುದ್ರಕ್ಕಿಳಿಯುವಂತಿಲ್ಲ
ಮುಂಗಾರು ಮಳೆ ಆರಂಭವಾಗಿರುವುದರಿಂದ ಮಂಗಳೂರಿನ ಪಣಂಬೂರು, ತಣ್ಣೀರುಬಾವಿ ಹಾಗೂ ಸೋಮೇಶ್ವರ ಬೀಚ್‌ಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ತೇಲುವ ಸೇತುವೆ, ಬೋಟಿಂಗ್ ಸೇರಿದಂತೆ ಎಲ್ಲಾ ವಾಟರ್ ಸ್ಪೋರ್ಟ್ಸ್‌ಗಳನ್ನು ಸ್ಥಗಿತಗೊಳಿಸಲಾಗಿದ್ದು, ಪ್ರವಾಸಿಗರು ನೀರಿಗೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪೊಲೀಸರು ಮತ್ತು ಲೈಫ್ ಗಾರ್ಡ್‌ಗಳು ಹೆಚ್ಚಿನ ನಿಗಾ ಇರಿಸಿದ್ದಾರೆ.
- Pruthviraj
- Updated on: Jun 11, 2026
- 12:34 pm
Karnataka Weather forecast: ಮುಂದಿನ 5 ದಿನ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗಾದ್ರೆ, ಯಾವಾಗ, ಯಾವ್ಯಾವ ಕಡೆ ಮಳೆಯಾಗಲಿದೆ ಎನ್ನುವ ಡಿಟೇಲ್ಸ್ ಈ ಕೆಳಗಿನಂತಿದೆ ನೋಡಿ.
- Ramesh B Jawalagera
- Updated on: Jun 10, 2026
- 5:12 pm
TV9 Kannada Live: ಇಂದಿನ ಇಡೀ ದಿನದ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು
Karnataka News Live Updates: ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಸಚಿವ ಸಂಪುಟದಲ್ಲಿನ ಖಾತೆ ಹಂಚಿಕೆ ಅಸಮಾಧಾನ, ಸಂಪುಟ ವಿಸ್ತರಣೆ ಕಸರತ್ತು, ಸುದೀರ್ಘ ಅವಧಿಗೆ ಪ್ರಧಾನಿಯಾದ ದಾಖಲೆ ನಿರ್ಮಿಸಿದ ನರೇಂದ್ರ ಮೋದಿ, ರಾಜ್ಯಸಭೆ ಚುನಾವಣೆ, ಇರಾನ್ ಯುದ್ಧ ಸೇರಿದಂತೆ ಪ್ರಮುಖ ವಿದ್ಯಮಾನಗಳ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.
- Ganapathi Sharma
- Updated on: Jun 10, 2026
- 9:55 pm
Karnataka Weather Forecast: ರಾಜ್ಯದ ಈ ಜಿಲ್ಲೆಗಳಲ್ಲಿ ಜೋರಾಗಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!
Monsoon 2026: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹವಾಮಾನ ಇಲಾಖೆಯು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಇನ್ನು ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆಡೆ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಬಲವಾದ ಗಾಳಿ ಬೀಸಲಿದೆ.
- Bhavana Hegde
- Updated on: Jun 10, 2026
- 7:54 am
ಬೆಳಗಾವಿಯಲ್ಲಿ ವರುಣನ ಅಬ್ಬರಕ್ಕೆ ನೆಲಕ್ಕುರುಳಿದ 8 ಮನೆಗಳು, ಉಟ್ಟ ಬಟ್ಟೆ ಬಿಟ್ಟು ಎಲ್ಲಾ ನೀರುಪಾಲು
ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ ಜಪರಾಗಿದ್ದು, ಭಾರೀ ಅವಾಂತರ ಸೃಷ್ಟಿಸಿದೆ. ಬೆಳಗಾವಿಯಲ್ಲಂತೂ ವ್ಯಾಪರಸ್ಥರು ವರುಣಾರ್ಭಟಕ್ಕೆ ಹೈರಾಣಾಗಿ ಹೋಗಿದ್ದಾರೆ. ಇನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದ ಕಲ್ಮಠ ಎಂಬ ಓಣಿಯಲ್ಲಿ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ವರುಣಾರ್ಭಟಕ್ಕೆ ಒಂದೇ ಕಡೆ ಬರೋಬ್ಬರಿ 8 ಮನೆಗಳು ಧರೆಗುರುಳಿದ್ದು, ಅದೃಷ್ಟವಶಾತ್ 8 ಮನೆಗಳಲ್ಲಿದ್ದ ಜನ ಪವಾಡ ರೀತಿ ಪಾರಾಗಿದ್ದಾರೆ. ಇಲ್ಲಿ ಬಾಡಿಗೆಗೆ ಇದ್ದ ಜನರೆಲ್ಲರೂ ಕೂಲಿಕಾರ್ಮಿಕರು. ಬಟ್ಟೆ, ದವಸ ಧಾನ್ಯ, ದಾಖಲೆಗಳು, ಹಣ ಎಲ್ಲವೂ ಈಗ ಮಣ್ಣುಪಾಲಾಗಿದೆ. ಉಟ್ಟ ಬಟ್ಟೆ ಬಿಟ್ಟು ಎಲ್ಲವನ್ನೂ ಕಳೆದಕೊಂಡ ಜನ ಬೀದಿಗೆ ಬಿದ್ದಿದ್ದು, ಟಿವಿ9 ಬಳಿ ತಮ್ಮ ಅಳಲು ತೋಡಿಕೊಂಡು ಕಣ್ಣೀರಿಟ್ಟಿದ್ದಾರೆ
- Ramesh B Jawalagera
- Updated on: Jun 9, 2026
- 7:19 pm
Karnataka Weather Forecast: ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ! ರಾಜ್ಯಾದ್ಯಂತ ಮುಂದಿನ 3 ದಿನ ಭಾರಿ ಮಳೆ
Monsoon 2026: ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿಯ 3 ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿದೆ. ಮುಂದಿನ 3 ದಿನ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತ 24 ಗಂಟೆಗಳ ತುರ್ತು ಸಹಾಯವಾಣಿ ಆರಂಭಿಸಿದೆ. ಸಾರ್ವಜನಿಕರು ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಡಿಸಿ ಭಂವರ್ ಸಿಂಗ್ ಮೀನಾ ಆದೇಶಿಸಿದ್ದಾರೆ.
- Bhavana Hegde
- Updated on: Jun 9, 2026
- 7:44 am
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಪ್ರಸಿದ್ಧ ಮಹಾಬಲೇಶ್ವರ ದೇಗುಲವು ಮಳೆಯಿಂದಾಗಿ ಕೊಳಚೆ ನೀರಿನಿಂದ ಆವೃತವಾಗಿದೆ. ಆತ್ಮಲಿಂಗವೂ ಸಹ ಕೊಳಚೆ ನೀರಿನಲ್ಲಿ ಮುಳುಗಿದ್ದು, ಇದು ಕಳೆದ ಎರಡು ವರ್ಷಗಳಿಂದ ಪುನರಾವರ್ತನೆಯಾಗುತ್ತಿರುವ ಸಮಸ್ಯೆಯಾಗಿದೆ. ದೇಗುಲದ ಸುತ್ತಲಿನ ಒತ್ತುವರಿ ಹಾಗೂ ಶೌಚಾಲಯದ ನೀರನ್ನು ಸಮುದ್ರಕ್ಕೆ ಬಿಡುತ್ತಿರುವುದೇ ಇದಕ್ಕೆ ಕಾರಣ ಎಂದು ಆರೋಪಿಸಲಾಗಿದ್ದು, ಆಡಳಿತ ಮಂಡಳಿಯ ನಿರ್ಲಕ್ಷ್ಯವೂ ಎದ್ದು ಕಾಣುತ್ತಿದೆ.
- Suraj Mahaveer Utture
- Updated on: Jun 9, 2026
- 9:40 am
Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಮುಂದಿನ 6 ದಿನ ಭಾರೀ ಮಳೆ ಎಚ್ಚರಿಕೆ,ಕರಾವಳಿಗೆ ರೆಡ್ ಅಲರ್ಟ್
ರಾಜ್ಯದಲ್ಲಿ ನೈಋತ್ಯ ಮುಂಗಾರು (Monsoon 2026) ಚುರುಕುಗೊಂಡಿದ್ದು, ಮುಂದಿನ ಆರು ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ 'ಅತಿ ಭಾರೀ ಮಳೆ'ಯಾಗುವ ಸಾಧ್ಯತೆ ಇದ್ದು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
- Ramesh B Jawalagera
- Updated on: Jun 8, 2026
- 5:06 pm
ಬಳ್ಳಾರಿಯಲ್ಲಿ ಮುಂಗಾರು ಮಳೆ ಅಬ್ಬರ, ಭಾರಿ ಅವಾಂತರ: ವಿಮ್ಸ್ ಆಸ್ಪತ್ರೆ, ಕೆಇಬಿ ಕಚೇರಿಗಳಿಗೆ ನುಗ್ಗಿದ ನೀರು
ಬಳ್ಳಾರಿಯಲ್ಲಿ ಸುರಿದ ಭಾರಿ ಮಳೆಗೆ ವಿಮ್ಸ್ ಆಸ್ಪತ್ರೆ ಮತ್ತು ಕೆಇಬಿ ಕೇಂದ್ರಗಳು ಜಲಾವೃತಗೊಂಡಿವೆ. ಆಸ್ಪತ್ರೆಯೊಳಗೆ ನೀರು ನುಗ್ಗಿದ್ದರಿಂದ ರೋಗಿಗಳು ಪರದಾಡುವಂತಾಯಿತು. ಇಡೀ ನಗರದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಇದರ ನಡುವೆ, ಹಂದ್ರಾಳ ಹಳ್ಳದಲ್ಲಿ ಪ್ರಗತಿ ಬ್ಯಾಂಕ್ ಉದ್ಯೋಗಿ ಅನಿಷಾ ಫಾತೀಮಾ ಮೃತದೇಹ ಪತ್ತೆಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Vinayak Badiger
- Updated on: Jun 8, 2026
- 7:25 am
Karnataka Weather Forecast: ಮುಂಗಾರು ಮಳೆ ಚುರುಕು, ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; 2 ದಿನ ರೆಡ್ ಅಲರ್ಟ್
Monsoon 2026: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಭಾರಿ ಮಳೆಯಿಂದ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ನೀರು ನುಗ್ಗಿದ್ದರೆ, ಬಾಗಲಕೋಟೆಯಲ್ಲಿ ದೇವಸ್ಥಾನ ಜಲಾವೃತಗೊಂಡಿದೆ. ಹವಾಮಾನ ಇಲಾಖೆಯು ಜೂನ್ 9 ಮತ್ತು 10 ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ.
- Ganapathi Sharma
- Updated on: Jun 8, 2026
- 8:02 am
Karnataka Weather forecast: ಕರ್ನಾಟಕದಲ್ಲಿ 1 ವಾರ ಭಾರೀ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ
ನೈಋತ್ಯ ಮುಂಗಾರು (Southwest Monsoon) ಕರ್ನಾಟಕ ಪ್ರವೇಶಿಸಿದ್ದು, ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕವಾಗಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗದಲ್ಲಿ ಅತ್ಯಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ತೀವ್ರ ಮುನ್ನೆಚ್ಚರಿಕೆಯನ್ನು (ರೆಡ್/ಆರೆಂಜ್ ಅಲರ್ಟ್) ನೀಡಿದೆ.
- Ramesh B Jawalagera
- Updated on: Jun 7, 2026
- 5:45 pm
ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರ ನೆಮ್ಮದಿ ಕಸಿದ ಮಳೆರಾಯ: ಮನೆಗಳಿಗೆ ನುಗ್ಗಿದ ನೀರು, ಕುಸಿದ ಸೇತುವೆ
ಕೇರಳಕ್ಕೆ ಮುಂಗಾರು ಪ್ರವೇಶದೊಂದಿಗೆ ಕರ್ನಾಟಕದಲ್ಲಿ ಮಳೆ ಚುರುಕುಗೊಂಡಿದೆ. ಬೆಂಗಳೂರು, ಬಳ್ಳಾರಿ, ಕಲಬುರಗಿ, ಗದಗ, ಹಾವೇರಿ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದೆ. ಪರಿಣಾಮ ಹಲವೆಡೆ ಅವಾಂತರಗಳು ಸಂಭವಿಸಿವೆ. ಮನೆಗಳಿಗೆ ನೀರು ನುಗ್ಗಿವೆ. ಸೇತುವೆ ಕುಸಿದು, ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಇಲ್ಲಿವೆ ನೋಡಿ ಫೋಟೋಸ್.
- Gangadhar Saboji
- Updated on: Jun 7, 2026
- 8:08 am