AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi

Narendra Modi

ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ

ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್‌ಎಸ್‌ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.

2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್‌ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.

ಇನ್ನೂ ಹೆಚ್ಚು ಓದಿ

TV9 Kannada Live: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ

Karnataka News Today Live Updates: ಕರ್ನಾಟಕ ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿದ್ದು, ಎರಡನೇ ಹಂತದಲ್ಲಿ ಹೊರಬೀಳಲಿರುವ ಮಂತ್ರಿಗಳ ಹೆಸರಿನ ಬಗ್ಗೆ ಕುತೂಹಲ ಹೆಚ್ಚಿದೆ. ಮತ್ತೊಂದೆಡೆ ಕೇಂದ್ರದಲ್ಲಿ NDA ಸರ್ಕಾರ 12 ವರ್ಷ ಪೂರೈಸಿದ ಹಿನ್ನೆಲೆ ಪ್ರಧಾನಿ ಮೋದಿ ಮ್ಯಾರಥಾನ್​​ ಸಭೆಗಳನ್ನು ನಡೆಸುತ್ತಿದ್ದಾರೆ. ಈ ಎಲ್ಲ ಪ್ರಮುಖ ವಿದ್ಯಮಾನಗಳ ಕ್ಷಣ ಕ್ಷಣದ ಅಪ್ಡೇಟ್ಸ್​​ ಇಲ್ಲಿವೆ.

ಕಾಂಗ್ರೆಸ್​​ ದುರಾಡಳಿತದಿಂದ ಭಾರತವನ್ನು ಮುಕ್ತಗೊಳಿಸಿದ್ದೇ ನಮ್ಮ ಸರ್ಕಾರದ ಅತಿದೊಡ್ಡ ಸಾಧನೆ; ಪ್ರಧಾನಿ ಮೋದಿ ವಾಗ್ದಾಳಿ

ಎನ್‌ಡಿಎ ಸರ್ಕಾರದ 12 ವರ್ಷಗಳ ಸಾಧನೆಯನ್ನು ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ, ಭಾರತದ ಮಂದಗತಿಯ ಬೆಳವಣಿಗೆಯ ಅವಧಿಯನ್ನು ತಪ್ಪಾಗಿ 'ಹಿಂದೂ ಗ್ರೋತ್ ರೇಟ್' ಎಂದು ಕರೆಯಲಾಗಿತ್ತು. ವಾಸ್ತವದಲ್ಲಿ ಅದನ್ನು 'ಕಾಂಗ್ರೆಸ್ ಗ್ರೋತ್ ರೇಟ್' ಎಂದೇ ಕರೆಯಬೇಕಿತ್ತು ಎಂದರು. ಕಾಂಗ್ರೆಸ್ ಸರ್ಕಾರಗಳು ವರ್ಷಗಳ ಕಾಲ ತಮ್ಮ ನೀತಿ ಮತ್ತು ಆಡಳಿತಾತ್ಮಕ ವೈಫಲ್ಯಗಳ ಮೂಲಕ ದೇಶವನ್ನು ಅಸಹಾಯಕತೆ, ಸಂಕಷ್ಟ ಮತ್ತು ಕೀಳರಿಮೆಯ ಕೂಪಕ್ಕೆ ತಳ್ಳಿದ್ದವು ಎಂದು ಅವರು ಆರೋಪಿಸಿದರು. ದೇಶವನ್ನು ಕಾಂಗ್ರೆಸ್ ಆಡಳಿತದ ಹಳೆಯ ಪರಂಪರೆಯಿಂದ ಮುಕ್ತಗೊಳಿಸಿದ್ದೇ ಎನ್‌ಡಿಎ ಸರ್ಕಾರದ 12 ವರ್ಷಗಳ ಅಧಿಕಾರದ ಅತ್ಯಂತ ದೊಡ್ಡ ಸಾಧನೆ ಎಂದು ಮೋದಿ ಹೇಳಿದರು.

ಇಷ್ಟು ದೂರ ಬರುತ್ತೇನೆಂದು ಕನಸಲ್ಲೂ ಅಂದುಕೊಂಡಿರಲಿಲ್ಲ; ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

ಕೇಂದ್ರದ ಆಡಳಿತಾರೂಢ ಮೈತ್ರಿಕೂಟವು ಅಧಿಕಾರದಲ್ಲಿ 12 ವರ್ಷಗಳನ್ನು ಪೂರೈಸಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಅತ್ಯಂತ ಸುದೀರ್ಘ ಅವಧಿಗೆ ಸತತವಾಗಿ ಚುನಾಯಿತರಾದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಐತಿಹಾಸಿಕ ಸಂದರ್ಭವನ್ನು ಆಚರಿಸಲು ಇಂದು ರಾಷ್ಟ್ರ ರಾಜಧಾನಿಯ 'ಭಾರತ್ ಮಂಟಪ'ದಲ್ಲಿ ಎನ್‌ಡಿಎ ಪಾಲುದಾರ ಪಕ್ಷಗಳ ಬೃಹತ್ ಸಮಾವೇಶ ನಡೆಯಿತು. ಈ ನಿರ್ಣಾಯಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಬಿಜೆಪಿಯ ಹಿರಿಯ ನಾಯಕರು ಮತ್ತು ಎನ್​ಡಿಎ ಮೈತ್ರಿಕೂಟದ ಎಲ್ಲಾ ಪಾಲುದಾರ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

PM Modi Speech Live: ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ; ಲೈವ್​​ ವಿಡಿಯೋ ಇಲ್ಲಿದೆ ನೋಡಿ

ಧಾನಿ ಮೋದಿ ಅವರು ದೇಶವನ್ನು ಉದ್ದೇಶಿ ಮಾತನಾಡುತ್ತಿದ್ದಾರೆ. ದೆಹಲಿಯಲ್ಲಿ ಭಾರತ್ ಮಂಟಪಂನಲ್ಲಿ ಎನ್​​ಡಿಎ ಸಭೆಯ ನಂತರ ಈ ಭಾಷಣ ಮಾಡುತ್ತಿದ್ದಾರೆ. ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ. ಮೂರನೇ ಬಾರಿಗೆ ಅಧಿಕಾರ ಹಿಡಿದಿರುವ ಎನ್‌ಡಿಎ ಮೈತ್ರಿಕೂಟದ ಮುಂದಿನ ಆಡಳಿತಾತ್ಮಕ ಕಾರ್ಯತಂತ್ರಗಳು, ಅಭಿವೃದ್ಧಿ ಯೋಜನೆಗಳು ಹಾಗೂ ದೇಶದ ಸರ್ವತೋಮುಖ ಪ್ರಗತಿಯ ದೃಷ್ಟಿಯಿಂದ ಇಂದಿನ ಸಭೆ ಅತ್ಯಂತ ಮಹತ್ವದ್ದಾಗಿತ್ತು.

ನೆಹರು ದಾಖಲೆ ಮುರಿದ ಪ್ರಧಾನಿ ಮೋದಿಗೆ ಸಂಪುಟ ಸಚಿವರಿಂದ ಎದ್ದು ನಿಂತು ಚಪ್ಪಾಳೆಯ ಗೌರವ

ಈ ಐತಿಹಾಸಿಕ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಇಂದು ರಾತ್ರಿ 7 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಮುಖ ಭಾಷಣ ಮಾಡಲಿದ್ದಾರೆ. ಸರ್ಕಾರಿ ಅಂಕಿ-ಅಂಶಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪ್ರಧಾನಿ ಕಚೇರಿಯಲ್ಲಿ ಸತತ 4,399 ದಿನಗಳನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಜವಾಹರಲಾಲ್ ನೆಹರು ಅವರ 4,398 ದಿನಗಳ ಚುನಾಯಿತ ಅಧಿಕಾರಾವಧಿಯ ದಾಖಲೆಯನ್ನು ಅವರು ಹಿಂದಿಕ್ಕಿದ್ದಾರೆ.

ದೀರ್ಘಾವಧಿ ಪ್ರಧಾನಿ ದಾಖಲೆ: ಕೈಯಲ್ಲಿ ‘ಮೋದಿ’ ಮೆಹಂದಿ ಹಾಕಿಕೊಂಡು ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ಬರ್ತ್‌ಡೇ ಆಚರಣೆ

ಪ್ರಧಾನಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲೇ ಅತ್ಯಂತ ಸುದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ದಾಖಲೆ ಬರೆದ ಹಿನ್ನೆಲೆಯಲ್ಲಿ, ಗಾಲಿ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ತಮ್ಮ ಹುಟ್ಟುಹಬ್ಬದಂದು ಕೈಯಲ್ಲಿ ಮೋದಿಯವರ ಭಾವಚಿತ್ರದ ಮೆಹಂದಿ ಬಿಡಿಸಿಕೊಂಡು ಸಂಭ್ರಮಿಸಿದ್ದಾರೆ. ಶಾಸಕ ಜನಾರ್ದನ ರೆಡ್ಡಿ ಮೋದಿಯವರ ದೀರ್ಘಾಯುಷ್ಯಕ್ಕೆ ಶುಭ ಹಾರೈಸಿದ್ದಾರೆ.

ರಾಜ್ಯಸಭಾ ಟಿಕೆಟ್​​ ಕೈತಪ್ಪಿದ ಬಗ್ಗೆ ಮೌನ ಮುರಿದ ದೇವೇಗೌಡರು: ಯಾರ ಹಂಗಿಲ್ಲದೆ ಮಾತಾಡ್ತೇನೆ ಎಂದ ಹೆಚ್​​ಡಿಡಿ

ರಾಜ್ಯಸಭಾ ಟಿಕೆಟ್ ಕೈತಪ್ಪಿದ ಬಳಿಕ ಮೌನ ಮುರಿದ ಹೆಚ್.ಡಿ. ದೇವೇಗೌಡರು, ಪಿಎಂ ಮೋದಿ ಮತ್ತು ತಮ್ಮ ನಡುವಿನ ಸಂಬಂಧ ಒಂದು ಸೀಟಿಗೆ ಸೀಮಿತವಲ್ಲ ಎಂದಿದ್ದಾರೆ. ಯಾರ ಹಂಗಿಲ್ಲದೆ ದೇಶದ ವಿಚಾರವಾಗಿ ಮಾತನಾಡುತ್ತೇನೆ. ಜೆಡಿಎಸ್​​ ಪಕ್ಷದ ಬೆಳವಣಿಗೆಗೂ ಶಕ್ತಿ ಮೀರಿ ಕೆಲಸ ಮಾಡ್ತೇನೆ. ರಾಜ್ಯ ಸಭಾ ಸದಸ್ಯ ಸ್ಥಾನ ಇಲ್ಲ ಅಂದರೂ ಮೋದಿಯವರ ಜೊತೆ ನನ್ನ ಪತ್ರ ವ್ಯವಹಾರ ಇರುತ್ತದೆ ಎಂದವರು ತಿಳಿಸಿದ್ದಾರೆ.

  • Sunil MH
  • Updated on: Jun 10, 2026
  • 1:54 pm

ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ: ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ 12 ವರ್ಷಗಳ ಪ್ರಧಾನಿ ಅವಧಿಯ ಮೈಲಿಗಲ್ಲಿನ ಸಂದರ್ಭದಲ್ಲಿ ಉತ್ತಮ ಆಡಳಿತ ಮತ್ತು ಜನಸೇವೆ ಕುರಿತು ಸಂದೇಶ ನೀಡಿದ್ದಾರೆ. ವಿನಮ್ರತೆ, ಸಮರ್ಪಣಾ ಭಾವನೆ ಹಾಗೂ ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡುವವರು ಮಾತ್ರ ಜನರ ವಿಶ್ವಾಸ ಗಳಿಸುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ. ಸಾರ್ವಜನಿಕ ಸೇವೆಯೇ ಉತ್ತಮ ಆಡಳಿತದ ಶ್ರೇಷ್ಠ ಮಾನದಂಡ ಎಂದು ಮೋದಿ ಒತ್ತಿಹೇಳಿದ್ದಾರೆ.

ಪ್ರಧಾನಿ ಮೋದಿ ಒಳಿತಿಗಾಗಿ ಅರಳಿಕಟ್ಟೆ ಮುನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ವಿಪಕ್ಷ ನಾಯಕ ಅಶೋಕ್​

ವಿಧಾನಸೌಧದ ಅರಳಿಕಟ್ಟೆ ಮುನೇಶ್ವರ ದೇವಾಲಯದಲ್ಲಿ ವಿಪಕ್ಷ ನಾಯಕ ಅಶೋಕ್, ಶಾಸಕ ಚನ್ನಬಸಪ್ಪ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದರು. ನೆಹರು ಅವರ ದಾಖಲೆ ಮುರಿದ ಮೋದಿಗಾಗಿ ನಡೆದ ಈ ಪ್ರಾರ್ಥನೆಯಲ್ಲಿ ಮೋದಿ ಅವರ ಭಾವಚಿತ್ರವನ್ನು ಇರಿಸಿ ನರೇಂದ್ರ ಮೋದಿ ಅವರಿಗೆ ಜಯವಾಗಲಿ ಎಂಬ ಘೋಷಣೆಗಳನ್ನು ಕೂಗಲಾಯಿತು.

ಕಳೆದ 12 ವರ್ಷದಲ್ಲಿ ಆಡಳಿತ ಮತ್ತು ಹಣಕಾಸು ವ್ಯವಸ್ಥೆಯಲ್ಲಿ ಸಂಚಲನ ಸೃಷ್ಟಿಸಿದ ಡಿಜಿಟಲ್ ಸೇವೆಗಳು

Modi Govt's Digital Transformation: ಮೋದಿ ಸರ್ಕಾರದ 12 ವರ್ಷಗಳ ಅವಧಿಯಲ್ಲಿ ಡಿಜಿಟಲ್ ಸೇವೆಗಳು ಭಾರತೀಯರ ದೈನಂದಿನ ಜೀವನವನ್ನು ಪರಿವರ್ತಿಸಿವೆ. ಯುಪಿಐ, ಜನ ಧನ್ ಖಾತೆ, ಆಧಾರ್, ಡಿಬಿಟಿ, ಫಾಸ್ಟ್‌ಟ್ಯಾಗ್‌ನಂತಹ ಯೋಜನೆಗಳು ಹಣಕಾಸು ಸೇರ್ಪಡೆ, ಆಡಳಿತದ ಪಾರದರ್ಶಕತೆ ಮತ್ತು ದಕ್ಷತೆಯನ್ನು ಹೆಚ್ಚಿಸಿವೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ನಾಗರಿಕರಿಗೆ ಸುಲಭ ಹಾಗೂ ಸುಗಮ ಸೇವೆಗಳನ್ನು ಒದಗಿಸಿ, ಡಿಜಿಟಲ್ ನಂಬಿಕೆಯನ್ನು ಮೂಡಿಸಿವೆ.

ನೆಹರು ದಾಖಲೆ ಮುರಿದ ಪ್ರಧಾನಿ ಮೋದಿ: ಜಗತ್ತಿನಾದ್ಯಂತ ಹರಿದುಬಂದ ಅಭಿನಂದನೆಗಳ ಮಹಾಪೂರ, ವಿಶ್ವ ನಾಯಕರು ಹೇಳಿದ್ದೇನು?

India’s Longest-Serving Prime Minister: ಪ್ರಧಾನಿ ನರೇಂದ್ರ ಮೋದಿ ಅವರು ಜವಾಹರಲಾಲ್ ನೆಹರು ಅವರ ದಾಖಲೆಯನ್ನು ಮುರಿದು, ಸತತ 4,399 ದಿನಗಳ ಸುಸ್ಥಿರ ಆಡಳಿತ ಪೂರೈಸಿದ ಭಾರತದ ಮೊದಲ ಅತಿ ದೀರ್ಘಾವಧಿ ಪ್ರಧಾನಿ ಎಂಬ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ಸಾಧನೆಗೆ ಮಾಲ್ಡೀವ್ಸ್, ನೈಜೀರಿಯಾ, ಶ್ರೀಲಂಕಾ ಸೇರಿದಂತೆ ಜಗತ್ತಿನಾದ್ಯಂತ ಪ್ರಮುಖ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ಭಾರತವನ್ನು ವಿಶ್ವದ 5ನೇ ಅತಿ ದೊಡ್ಡ ಆರ್ಥಿಕತೆಯನ್ನಾಗಿ ಬೆಳೆಸಿದ ಅವರ ನಾಯಕತ್ವಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ನರೇಂದ್ರ ಮೋದಿ ಪ್ರಧಾನಿಯಾಗಿ 12 ವರ್ಷ ಪೂರ್ಣ; ಬೆಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ವಿಶೇಷ ಪೂಜೆ

ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಆರ್‌ಪಿಸಿ ಲೇಔಟ್ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಕೇಂದ್ರ ಸಂಪುಟ ಪುನರ್‌ರಚನೆ ಮತ್ತು ತಮಗೆ ರಾಜ್ಯದ ಜವಾಬ್ದಾರಿ ಸಿಗುವ ವದಂತಿಗಳ ಕುರಿತು ಮಾತನಾಡಿದ ಅವರು, ವ್ಯಕ್ತಿಗಿಂತ ದೇಶ ದೊಡ್ಡದು, ಹೈಕಮಾಂಡ್ ಆದೇಶಕ್ಕೆ ತಲೆಬಾಗುವುದಾಗಿ ತಿಳಿಸಿದರು.