AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Operation Sindoor

Operation Sindoor

ಆಪರೇಷನ್ ಸಿಂಧೂರ್
ಭಾರತದ ಸೇನೆಯು ಪಾಕಿಸ್ತಾನದ ಮೇಲೆ ವಾಯು ದಾಳಿ ನಡೆಸಿದ್ದು ಈ ದಾಳಿಗೆ ಆಪರೇಷನ್ ಸಿಂಧೂರ್ ಎಂದು ಹೆಸರಿಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್​ನಾಗ್ ಜಿಲ್ಲೆಯಲ್ಲಿರುವ ಪಹಲ್ಗಾಮ್​ನಲ್ಲಿ ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ನಿನ್ನ ಧರ್ಮ ಯಾವುದು ಎಂದು ಕೇಳಿ ಹಿಂದೂಗಳ ಮೇಲೆ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಮತ್ತು ವಾಯುಪಡೆ ಆಪರೇಷನ್​ ಸಿಂಧೂರ್​ ಮೂಲಕ ಪಾಕಿಸ್ತಾನದ 9 ಕಡೆ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ ಪಾಕಿಸ್ತಾನದ ನಿದ್ದೆಗೆಡಿಸಿದೆ

ಇನ್ನೂ ಹೆಚ್ಚು ಓದಿ

ಆಪರೇಷನ್ ಸಿಂಧೂರ್ ವೇಳೆ ಶ್ರೀಕೃಷ್ಣನ ಸಂದೇಶವನ್ನು ಅನುಸರಿಸಿದೆವು; ಕುರುಕ್ಷೇತ್ರದಲ್ಲಿ ಸಚಿವ ರಾಜನಾಥ್ ಸಿಂಗ್

ಪಹಲ್ಗಾಮ್ ದಾಳಿಗೆ ಭಾರತದ ಪ್ರತಿಕ್ರಿಯೆ ದೃಢ ಮತ್ತು ನಿರ್ಣಾಯಕವಾಗಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಮೂಲಕ, ಸಶಸ್ತ್ರ ಪಡೆಗಳು ಜವಾಬ್ದಾರಿಯುತರಿಗೆ ಬಲವಾದ ಸಂದೇಶವನ್ನು ನೀಡಿತು, ಆ ಸಂದೇಶವನ್ನು ಅವರು ಇಂದಿನವರೆಗೂ ಮರೆಯಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತದ ಪ್ರತಿಕ್ರಿಯೆಯು ಶ್ರೀಕೃಷ್ಣ ಪಾಂಡವರಿಗೆ ನೀಡಿದ ಸಂದೇಶದಿಂದ ರೂಪುಗೊಂಡಿದೆ ಎಂದು ಇಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ ಭಾರತದ ಮೇಲೆ ದಾಳಿ ನಡೆಸಿದ್ದೇವೆ; ಕೊನೆಗೂ ಒಪ್ಪಿಕೊಂಡ ಪಾಕಿಸ್ತಾನ!

ದೆಹಲಿಯ ಕೆಂಪು ಕೋಟೆ ಬಳಿಯ ಮೆಟ್ರೋ ಸ್ಟೇಷನ್ ಹೊರಗೆ ನಡೆದ ಕಾರು ಬಾಂಬ್ ದಾಳಿಯ ಹಿಂದೆ ಉಗ್ರರ ಕೈವಾಡವಿದೆ ಎಂದು ಭಾರತದ ಎನ್​ಐಎ ತನಿಖೆಯಲ್ಲಿ ಬಹಿರಂಗವಾಗಿತ್ತು. ಇದೀಗ ಖುದ್ದು ಪಾಕಿಸ್ತಾನವೇ ಈ ಬಗ್ಗೆ ದೊಡ್ಡ ಸತ್ಯ ಹೊರಹಾಕಿದೆ. ಪಾಕಿಸ್ತಾನದ ನಾಯಕ ಚೌಧರಿ ಅನ್ವರುಲ್ ಹಕ್ ಪಾಕಿಸ್ತಾನದ ಸದನದಲ್ಲಿ ಮಾತನಾಡುವಾಗ ತಮ್ಮದೇನೋ ದೊಡ್ಡ ಸಾಧನೆಯೆಂಬಂತೆ ಈ ವಿಚಾರವನ್ನು ಬಹಿರಂಗಪಡಿಸುವ ಮೂಲಕ ಜಗತ್ತಿನೆದುರು ಮತ್ತೊಮ್ಮೆ ಪಾಕಿಸ್ತಾನದ ಭಯೋತ್ಪಾದಕತೆಯ ಮುಖ ತೆರೆದಿಟ್ಟಿದ್ದಾರೆ!

ಭಾರತದಲ್ಲಿ ಮತ್ತೊಂದು ಉಗ್ರರ ದಾಳಿಯ ಎಚ್ಚರಿಕೆ; ಜಮ್ಮು ಕಾಶ್ಮೀರದಲ್ಲಿ ಹೆಚ್ಚಿದ ಭದ್ರತೆ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭೀಕರ ಉಗ್ರರ ದಾಳಿ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಅದಾಗಿ 6 ತಿಂಗಳಾಗಿವೆ. ಇದೀಗ ಮತ್ತೆ ಭಾರತದಲ್ಲಿ ಮತ್ತೊಂದು ಪ್ರಮುಖ ಭಯೋತ್ಪಾದಕ ಸಂಚಿನ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಘಟಿತ ದಾಳಿಗಳಿಗೆ ಎಲ್‌ಇಟಿ, ಜೆಇಎಂ ಪ್ಲಾನ್ ಮಾಡುತ್ತಿವೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ, ಭದ್ರತೆಯನ್ನು ಹೆಚ್ಚಿಸಲಾಗಿದೆ.

ನೀವು ಸಿಖ್ಖರಲ್ಲ; ಗುರುನಾನಕ್ ಜಯಂತಿಗೆ ಭಾರತದ 14 ಹಿಂದೂಗಳಿಗೆ ಪ್ರವೇಶ ನಿರಾಕರಿಸಿದ ಪಾಕಿಸ್ತಾನ

ಗುರುನಾನಕ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಪಾಕಿಸ್ತಾನಕ್ಕೆ ತೆರಳಿದ್ದ ಭಾರತದ 14 ಹಿಂದೂ ಯಾತ್ರಿಕರಿಗೆ ಅವರು ಸಿಖ್ ಧರ್ಮದವರಲ್ಲ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಗುರುನಾನಕ್ ಜಯಂತಿಗೆ ಪಾಕಿಸ್ತಾನಕ್ಕೆ ಭೇಟಿ ನೀಡಲು ಸುಮಾರು 2100 ಜನರಿಗೆ ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ. ಇಸ್ಲಾಮಾಬಾದ್ ಕೂಡ ಅದೇ ಸಂಖ್ಯೆಯ ಸಂದರ್ಶಕರಿಗೆ ಪ್ರಯಾಣದ ದಾಖಲೆಗಳನ್ನು ನೀಡಿತ್ತು. ಇದಲ್ಲದೆ ಸ್ವತಂತ್ರವಾಗಿ ತಾವೇ ವೀಸಾಕ್ಕಾಗಿ ಅರ್ಜಿ ಸಲ್ಲಿಸಿದ 300 ಜನರನ್ನು ಗೃಹ ಸಚಿವಾಲಯದ ಅನುಮೋದನೆ ಇಲ್ಲದ ಕಾರಣ ಭಾರತದ ಗಡಿಯಲ್ಲಿ ವಾಪಾಸ್ ಕಳುಹಿಸಲಾಗಿದೆ

ಮೋದಿ ಬಹಳ ಸುಂದರ ವ್ಯಕ್ತಿ; ಹೊಗಳಿ ಅಟ್ಟಕ್ಕೇರಿಸಿ ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದ ಟ್ರಂಪ್!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಪ್ರಧಾನಿ ಮೋದಿ ನೋಡಲು ಬಹಳ ಸುಂದರವಾಗಿರುವ ವ್ಯಕ್ತಿಯೆಂದು ಹೊಗಳಿದ್ದಾರೆ. ಮೋದಿ ಕಿಲ್ಲರ್ ಲುಕ್ ಹೊಂದಿದ್ದಾರೆ ಎಂದಿರುವ ಟ್ರಂಪ್ ಮತ್ತೊಮ್ಮೆ ಭಾರತ ಹಾಗೂ ಪಾಕಿಸ್ತಾನದ ನಡುವಿನ ಯುದ್ಧವನ್ನು ನಾನೇ ನಿಲ್ಲಿಸಿದ್ದು ಎಂದು ಹಳೇ ರಾಗ ಹಾಡಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತಕ್ಕೆ ವ್ಯಾಪಾರ ನಿರ್ಬಂಧದ ಬೆದರಿಕೆಯೊಡ್ಡಿ ಕದನವಿರಾಮಕ್ಕೆ ಒಪ್ಪಿಸಿದ್ದೆ ಎಂದು ಟ್ರಂಪ್ ಪುನರುಚ್ಚರಿಸಿದ್ದಾರೆ.

ಪಾಕಿಸ್ತಾನಕ್ಕೆ ಮತ್ತೊಂದು ಸಂಕಷ್ಟ; ಭಾರತದ ಬಳಿಕ ಅಫ್ಘಾನಿಸ್ತಾನದಿಂದಲೂ ಪಾಕ್​ಗೆ ನೀರು ಬಿಡದಿರಲು ನಿರ್ಧಾರ

ಅಫ್ಘಾನಿಸ್ತಾನ ಪಾಕಿಸ್ತಾನದ ಮೇಲೆ ಒಂದಿಲ್ಲೊಂದು ರೀತಿಯಲ್ಲಿ ಒತ್ತಡ ಹೇರುತ್ತಲೇ ಇದೆ. ಅಫ್ಘಾನ್ ಮತ್ತು ಪಾಕಿಸ್ತಾನದ ಗಡಿ ದಾಳಿಗಳ ನಂತರ ಅಫ್ಘಾನಿಸ್ತಾನ ಪಾಕಿಸ್ತಾನಕ್ಕೆ ಬಿಡುವ ನೀರಿನ ಮೇಲೆ ಹಿಡಿತವನ್ನು ಬಿಗಿಗೊಳಿಸಲು ನಿರ್ಧರಿಸಿದೆ. ತಾಲಿಬಾನ್ ಆಡಳಿತವು ಕುನಾರ್ ನದಿಗೆ ಅಣೆಕಟ್ಟು ನಿರ್ಮಿಸಲು ಯೋಜಿಸುತ್ತಿದೆ. ಭಾರತ ಈಗಾಗಲೇ ಸಿಂಧೂ ನದಿ ಒಪ್ಪಂದವನ್ನು ರದ್ದುಗೊಳಿಸಿರುವುದರಿಂದ ಭಾರೀ ಹೊಡೆತ ಅನುಭವಿಸುತ್ತಿರುವ ಪಾಕಿಸ್ತಾನಕ್ಕೆ ತಾಲಿಬಾನ್ ತೆಗೆದುಕೊಂಡಿರುವ ಈ ನಿರ್ಧಾರದಿಂದ ಮತ್ತಷ್ಟು ಸಂಕಷ್ಟ ಎದುರಾಗಿದೆ.

800 ಕಿಮೀ ಶ್ರೇಣಿಯ ಬ್ರಹ್ಮೋಸ್ ಕ್ಷಿಪಣಿಗಳ ಪರೀಕ್ಷೆ; ಮುಂದಿನ ವರ್ಷವೇ ಸೇನೆಯ ಬಲ ಹೆಚ್ಚಿಸಲಿವೆ ಈ ಪ್ರಬಲ ಮಿಸೈಲ್​ಗಳು

India tests 800 km BrahMos: ಈಗಿರುವ ಬ್ರಹ್ಮೋಸ್ ಕ್ಷಿಪಣಿಯನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗಿದ್ದು, 450 ಕಿಮೀ ಶ್ರೇಣಿಯನ್ನು 800 ಕಿಮೀಗೆ ಹೆಚ್ಚಿಸಲಾಗಿದೆ. ಇದರ ಪರೀಕ್ಷೆಗಳು ನಡೆಯುತ್ತಿದ್ದು, ಅವು ಯಶಸ್ವಿಯಾದಲ್ಲಿ ಮುಂದಿನ ವರ್ಷಾಂತ್ಯದೊಳಗೆ ಸೇನೆಗೆ ನಿಯೋಜನೆಗೊಳ್ಳಲಿವೆ. ಅಸ್ತ್ರ ಮಾರ್ಕ್-2 ಕ್ಷಿಪಣಿಗಳನ್ನೂ ತಯಾರಿಸಲಾಗುತ್ತಿದ್ದು ಇವೂ ಕೂಡ 2027ರೊಳಗೆ ಸಿದ್ಧವಿರಲಿವೆ.

ನೌಕಾಪಡೆಯ ಸಿಬ್ಬಂದಿಗೆ ಸ್ವೀಟ್ ತಿನ್ನಿಸಿ ದೀಪಾವಳಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ

ಭಾರತದ ಮೊದಲ ದೇಶೀಯವಾಗಿ ನಿರ್ಮಿಸಲಾದ ವಿಮಾನವಾಹಕ ನೌಕೆ ಐಎನ್ಎಸ್ ವಿಕ್ರಾಂತ್‌ನಲ್ಲಿರುವ ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಈ ವರ್ಷ ದೀಪಾವಳಿಯನ್ನು ಆಚರಿಸಿದರು. ಪಹಲ್ಗಾಮ್ ದಾಳಿಯ ನಂತರ ನಡೆದ ಆಪರೇಷನ್ ಸಿಂಧೂರ್ ವೇಳೆ ನೌಕಾಪಡೆ ತೋರಿದ ಧೈರ್ಯ ಮತ್ತು ಸಾಹಸಕ್ಕೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.

ಐಎನ್ಎಸ್ ವಿಕ್ರಾಂತ್‌ನಲ್ಲಿ ಪ್ರಧಾನಿ ಮೋದಿಗಾಗಿ ಆಪರೇಷನ್ ಸಿಂಧೂರ್ ಹಾಡು ಹಾಡಿದ ನೌಕಾಪಡೆಯ ಸಿಬ್ಬಂದಿ

ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಇಂದು) ಭಾರತೀಯ ನೌಕಾಪಡೆಯ ಸಿಬ್ಬಂದಿಯೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಕಾರ್ಯಾಚರಣೆಯ ಕುರಿತು ಹಾಡನ್ನು ಸಹ ಪ್ರಸ್ತುತಪಡಿಸಿದ್ದಾರೆ. ಪ್ರಧಾನಿ ಮೋದಿಗಾಗಿ 'ಕಸಮ್ ಸಿಂಧೂರ್ ಕಿ' ಎಂಬ ಹಾಡನ್ನು ಬರೆದ ನೌಕಾಪಡೆಯ ಸಿಬ್ಬಂದಿ ಒಟ್ಟಾಗಿ ಮೋದಿ ಮುಂದೆ ಆ ಹಾಡನ್ನು ಹಾಡಿದ್ದಾರೆ. ಇದು ಆಪರೇಷನ್ ಸಿಂಧೂರ್ ಕುರಿತಾದ ಹಾಡಾಗಿದೆ. ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಭಾರತದ ಬ್ರಹ್ಮೋಸ್ ಕ್ಷಿಪಣಿಗೆ ಹೆಚ್ಚಿದ ಬೇಡಿಕೆ; ರಹಸ್ಯವಾಗಿ 4,000 ಕೋಟಿ ರೂ ಮೊತ್ತಕ್ಕೆ ಒಪ್ಪಂದ ಮಾಡಿಕೊಂಡ ಎರಡು ದೇಶಗಳು

Brahmos missiles, 2 countries ink contracts with India: ಇಡೀ ವಿಶ್ವದ ಗಮನವನ್ನು ಸೆಳೆದಿರುವ ಬ್ರಹ್ಮೋಸ್ ಕ್ಷಿಪಣಿಯನ್ನು ಪಡೆಯಲು ಎರಡು ದೇಶಗಳು ಒಪ್ಪಂದ ಮಾಡಿಕೊಂಡಿರುವುದು ತಿಳಿದುಬಂದಿದೆ. ಈ ಎರಡು ಒಪ್ಪಂದಗಳ ಒಟ್ಟು ಮೌಲ್ಯ ಅಂದಾಜು 4,000 ಕೋಟಿ ರೂ ಆಗಿದೆ. ಆದರೆ, ಆ ಎರಡು ದೇಶಗಳ ಹೆಸರನ್ನು ಬಹಿರಂಗಪಡಿಸಲಾಗಿಲ್ಲ. ರಷ್ಯಾ ಮತ್ತು ಭಾರತ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಬ್ರಹ್ಮೋಸ್ ಕ್ಷಿಪಣಿಯ ಸಾಮರ್ಥ್ಯ ಆಪರೇಷನ್ ಸಿಂದೂರ್ ವೇಳೆ ದೃಢಪಟ್ಟಿತ್ತು.