AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Petrol

Petrol

ಪೆಟ್ರೋಲ್ ಈ ಭೂಮಿಯಲ್ಲಿ ಸೀಮಿತ ಪ್ರಮಾಣದಲ್ಲಿ ಲಭ್ಯ ಇರುವ ಸಂಪನ್ಮೂಲ. ಕಚ್ಚಾ ತೈಲ ಅಥವಾ ಪೆಟ್ರೋಲಿಯಂನಿಂದ ತಯಾರಿಸಲಾಗುವ ಉಪ ಉತ್ಪನ್ನಗಳಲ್ಲಿ ಪೆಟ್ರೋಲ್ ಒಂದು. ಮರಗಿಡ ಇತ್ಯಾದಿ ವಸ್ತುಗಳು ಲಕ್ಷಾಂತರ ವರ್ಷಗಳ ಕಾಲ ಭೂಗರ್ಭದಲ್ಲಿ ಹುದುಗಿ ಡೀಕಂಪೋಸ್ ಆದಾಗ ಪೆಟ್ರೋಲಿಯಂ ಆಗಿ ಪರಿವರ್ತಿತಗೊಳ್ಳುತ್ತದೆ. ಈ ಕಚ್ಚಾ ತೈಲವನ್ನು ಹೊರತೆಗೆದು, ಅದನ್ನು ಸಂಸ್ಕರಿಸಿ ಪೆಟ್ರೋಲ್, ಡೀಸೆಲ್, ಕೆರೋಸಿನ್, ಎಟಿಎಫ್, ಪ್ಯಾರಾಫಿನ್ ಇತ್ಯಾದಿ ಉಪ ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಪೆಟ್ರೋಲ್ ಅನ್ನು ಅಮೆರಿಕ ಮೊದಲಾದ ಕೆಲ ದೇಶಗಳಲ್ಲಿ ಗ್ಯಾಸೋಲಿನ್ ಎಂದೂ ಕರೆಯುತ್ತಾರೆ. ವಾಹನಗಳಿಗೆ ಇಂಧನವಾಗಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಬಳಸಲಾಗುತ್ತದೆ. ಹೀಗಾಗಿ, ಇವೆರಡಕ್ಕೆ ಬಹಳ ದೊಡ್ಡ ಬೇಡಿಕೆ ಇದೆ. ಅದರಲ್ಲೂ ನೂರು ವರ್ಷಗಳಿಂದ ಪೆಟ್ರೋಲ್ ಅತ್ಯಂತ ಬೇಡಿಕೆ ಹೊಂದಿದ್ದ ಸಂಪನ್ಮೂಲ ಎನಿಸಿದೆ. ಆದರೆ, ಪೆಟ್ರೋಲ್ ಅನ್ನು ಇಂಧನವಾಗಿ ಬಳಕೆ ಮಾಡಿದಾಗ ಪರಿಸರಕ್ಕೆ ಹಾನಿಯಾಗುವ ವಸ್ತುಗಳು ವಾತಾವರಣಕ್ಕೆ ಸೇರುತ್ತವೆ. ಈ ಕಾರಣಕ್ಕೆ ಜಗತ್ತು ಪೆಟ್ರೋಲ್​ನಿಂದ ವಿಮುಖವಾಗಿ ಪರ್ಯಾಯ ಇಂಧನದತ್ತ ವಾಲುತ್ತಿದೆ.

ಇನ್ನೂ ಹೆಚ್ಚು ಓದಿ

ಪೆಟ್ರೋಲ್ ಬೆಲೆ ಇಳಿಯುತ್ತಾ? ಎಥನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಸುಂಕ ರದ್ದುಗೊಳಿಸಿರುವುದು ಯಾರಿಗೆ ಲಾಭ?

Excise Duty Waived, But Petrol Price Won't Drop Yet: ಕೇಂದ್ರ ಸರ್ಕಾರವು ಹೆಚ್ಚಿನ ಎಥೆನಾಲ್ ಮಿಶ್ರಿತ ಪೆಟ್ರೋಲ್ (E22-E30) ಮೇಲಿನ ಅಬಕಾರಿ ಸುಂಕವನ್ನು ರದ್ದುಗೊಳಿಸಿದೆ. ಆದರೆ, ದೇಶದಲ್ಲಿ ಪ್ರಚಲಿತದಲ್ಲಿರುವ E20 ಪೆಟ್ರೋಲ್ ಗ್ರಾಹಕರಿಗೆ ತಕ್ಷಣಕ್ಕೆ ಬೆಲೆ ಇಳಿಕೆಯಾಗುವುದಿಲ್ಲ. ಈ ನಿರ್ಧಾರವು ಭಾರತದ E30 ಎಥೆನಾಲ್ ಗುರಿಯ ಭಾಗವಾಗಿದೆ. ಇದು ರೈತರ ಆದಾಯ ಹೆಚ್ಚಿಸಲು, ಕಚ್ಚಾ ತೈಲ ಆಮದು ವೆಚ್ಚ ಕಡಿಮೆ ಮಾಡಲು ಮತ್ತು ದೀರ್ಘಾವಧಿಯಲ್ಲಿ ಆರ್ಥಿಕತೆಗೆ ಪ್ರಯೋಜನ ನೀಡಲು ಸಹಾಯಕವಾಗಿದೆ.

ಇಂಧನ ಕ್ರಾಂತಿ: ಹೆಚ್ಚಿನ ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಸಂಪೂರ್ಣ ಮನ್ನಾ

ಕೇಂದ್ರ ಸರ್ಕಾರವು ಶೇ.22 ರಿಂದ 30ರಷ್ಟು ಎಥೆನಾಲ್ ಮಿಶ್ರಿತ ಪೆಟ್ರೋಲ್ (E22-E30) ಮೇಲಿನ ಅಬಕಾರಿ ಸುಂಕವನ್ನು ಸಂಪೂರ್ಣವಾಗಿ ಮನ್ನಾ ಮಾಡಿದೆ. ಇದು ಭಾರತದ ಇಂಧನ ಸ್ವಾವಲಂಬನೆ, ಪರಿಸರ ಸಂರಕ್ಷಣೆ ಮತ್ತು ಕೃಷಿ ವಲಯಕ್ಕೆ ಲಾಭ ತರಲಿದೆ. ಎಥೆನಾಲ್ ಮಿಶ್ರಣದಲ್ಲಿ ದೇಶದ ಅದ್ಭುತ ಪ್ರಗತಿಯನ್ನು ಇದು ಮತ್ತಷ್ಟು ಉತ್ತೇಜಿಸಲಿದೆ.

ಒಮಾನ್-ಭಾರತ ಗ್ಯಾಸ್ ಪೈಪ್​ಲೈನ್ ಪ್ರಾಜೆಕ್ಟ್​ಗೆ ಮರುಜೀವ; ಸಾಧ್ಯತಾ ವರದಿಗೆ ಸರ್ಕಾರ ಆದೇಶ; ಈ ಯೋಜನೆಯಿಂದ ಭಾರತಕ್ಕಿದೆಯಾ ಲಾಭ?

Oman-Gujarat deep-sea gas pipeline project, feasibility study ordered: ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ, ಭಾರತವು ₹40,000 ಕೋಟಿ ವೆಚ್ಚದ 'ಒಮಾನ್-ಗುಜರಾತ್ ಆಳಸಮುದ್ರ ನೈಸರ್ಗಿಕ ಅನಿಲ ಪೈಪ್‌ಲೈನ್' ಯೋಜನೆಗೆ ಮರುಜೀವ ನೀಡಿದೆ. ಇದು ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸಿ, ಹಾರ್ಮುಜ್ ಜಲಸಂಧಿ ಮತ್ತು ಪಾಕಿಸ್ತಾನದ ಹಸ್ತಕ್ಷೇಪವನ್ನು ತಪ್ಪಿಸುತ್ತದೆ. ಗೇಲ್, IOCL, EIL ಸಂಸ್ಥೆಗಳಿಗೆ ಸಾಧ್ಯತಾ ವರದಿ ಸಿದ್ಧಪಡಿಸಲು ನಿರ್ದೇಶಿಸಲಾಗಿದ್ದು, ಭಾರತದ 2030ರ ಇಂಧನ ಗುರಿ ತಲುಪಲು ಇದು ನಿರ್ಣಾಯಕವಾಗಿದೆ.

ರಷ್ಯಾದಿಂದ ತೈಲ ಖರೀದಿಸಬೇಡಿ ಎಂದು ಭಾರತಕ್ಕೆ ಯಾರೂ ಹೇಳಿಲ್ಲ; ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

ಇರಾನ್ ಸಂಘರ್ಷದಿಂದಾಗಿ 'ಸ್ಟ್ರೈಟ್ ಆಫ್ ಹಾರ್ಮುಜ್' ಮೂಲಕ ಇಂಧನ ಪೂರೈಕೆಗೆ ಅಡ್ಡಿಯಾಗಿದ್ದರೂ ಸಹ, ಜಾಗತಿಕವಾಗಿ ಗಗನಕ್ಕೇರುತ್ತಿದ್ದ ಇಂಧನ ಬೆಲೆಗಳ ಬಿಸಿಯಿಂದ ಭಾರತೀಯರನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಜಾಗತಿಕ ಮಟ್ಟದಲ್ಲಿ ಭಾರಿ ಏರುಪೇರುಗಳು ಮತ್ತು ಇಂಧನ ಪೂರೈಕೆಯಲ್ಲಿ ಸವಾಲುಗಳು ಎದುರಾಗಿದ್ದಾಗಲೂ ಭಾರತವು ಇಂಧನ ಬೆಲೆಗಳನ್ನು ನಿಯಂತ್ರಣದಲ್ಲಿಡುವಲ್ಲಿ ಯಶಸ್ವಿಯಾಗಿದೆ ಎಂದಿದ್ದಾರೆ. ಸರ್ಕಾರದ ಇಂಧನ ನೀತಿಯಲ್ಲಿ ಗ್ರಾಹಕರ ಹಿತಾಸಕ್ತಿಯೇ ಪ್ರಮುಖ ಕೇಂದ್ರಬಿಂದುವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿ ಮೋದಿಯೊಂದಿಗೆ ವೆನಿಜುವೆಲಾ ಅಧ್ಯಕ್ಷೆ ಮಾತುಕತೆ; ಪ್ರಸ್ತಾಪಿತ ಇಂಧನ ಒಪ್ಪಂದದಿಂದ ಭಾರತಕ್ಕೇನು ಲಾಭ?

India-Venezuela Oil Deal: ವೆನೆಜುವೆಲಾ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಭಾರತ ಭೇಟಿ ನೀಡಿ ಪ್ರಧಾನಿ ಮೋದಿಯವರೊಂದಿಗೆ ಮಾತುಕತೆ ನಡೆಸಿದರು. ಇಂಧನ, ವ್ಯಾಪಾರ, ಹೂಡಿಕೆ ಕ್ಷೇತ್ರದಲ್ಲಿ ದ್ವಿಪಕ್ಷೀಯ ಸಂಬಂಧ ಬಲಪಡಿಸಲು ಚರ್ಚಿಸಲಾಯಿತು. ವೆನೆಜುವೆಲಾದಿಂದ ಕಚ್ಚಾ ತೈಲ ಆಮದು ಭಾರತಕ್ಕೆ ಇಂಧನ ಭದ್ರತೆ ಒದಗಿಸುವುದಲ್ಲದೆ, ವಿದೇಶಿ ವಿನಿಮಯ ಉಳಿತಾಯ, ಇಂಧನ ಬೆಲೆ ನಿಯಂತ್ರಣ ಮತ್ತು ಹಣದುಬ್ಬರ ಇಳಿಕೆಗೆ ಸಹಕಾರಿಯಾಗಲಿದೆ. ಇದು ಭಾರತದ ಆರ್ಥಿಕತೆಗೆ ಉತ್ತೇಜನ ನೀಡಲಿದೆ.

ಇಂಧನ ಉಳಿಸಲು ಮೋದಿ ಕರೆ; ಒಂದೇ ಕಾರಿನಲ್ಲಿ ಸಂಪುಟ ಸಭೆಗೆ ತೆರಳಿದ ಕೇಂದ್ರ ಸಚಿವರು

ಸಾಮಾನ್ಯವಾಗಿ ವಿವಿಐಪಿ ಸಂಸ್ಕೃತಿಯಲ್ಲಿ ಪ್ರತಿಯೊಬ್ಬ ಸಚಿವರಿಗೂ ಪ್ರತ್ಯೇಕ ಬೆಂಗಾವಲು ಪಡೆ ಮತ್ತು ಕಾರುಗಳಿರುತ್ತವೆ. ಆದರೆ, ಈ ಸಾಂಪ್ರದಾಯಿಕ ಶೈಲಿಯನ್ನು ಬದಿಗೊತ್ತಿ ಸಚಿವರು ಒಟ್ಟಾಗಿ ಪ್ರಯಾಣಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸಾಮಾನ್ಯ ಜನರಿಗೂ ಇದು ಇಂಧನ ಉಳಿತಾಯದ ನಿಟ್ಟಿನಲ್ಲಿ ಪ್ರೇರಣೆಯಾಗಲಿದೆ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಧಾನಿಯವರ ಕರೆಯನ್ನು ಕೇವಲ ಭಾಷಣಕ್ಕೆ ಸೀಮಿತಗೊಳಿಸದೆ, ಕೇಂದ್ರ ಸಚಿವರೇ ಖುದ್ದಾಗಿ ಅದನ್ನು ಕಾರ್ಯರೂಪಕ್ಕೆ ತಂದು ಇಂಧನ ಉಳಿತಾಯದ ಜಾಗೃತಿಗೆ ಕರೆ ನೀಡಿದ್ದಾರೆ.

ಬೆಲೆ ಏರಿಕೆಯ ಬಿಸಿ: ಗೋಲ್ಡ್ ಸ್ಕೀಮ್ ಗಳಿಂದ ಹಿಂದೆ ಸರಿಯುತ್ತಿರುವ ಸಿಟಿ ಮಂದಿ

ಮಧ್ಯಮ ವರ್ಗದ ಜನರ ಜೀವನವೇ ಹಾಗೆ ಬಂಗಾರ ಇಷ್ಟ ಆದರೂ ಅದನ್ನ ಖರೀದಿ ಮಾಡಲು ಕಷ್ಟ ಪಡಬೇಕಾಗುತ್ತೆ. ಹೀಗಾಗಿ ಒಂದೇ ಸಲ ಅಷ್ಟೊಂದು ಹಣ ನೀಡಿ ಚಿನ್ನ ಖರೀದಿ ಮಾಡೋಕೆ ಆಗೋದಿಲ್ಲ ಅಂತ ಅನೇಕರು ಗೋಲ್ಡ್ ಸ್ಕೀಂಗಳ ಮೂಲಕ ಚಿನ್ನ ಖರೀದಿ ಮಾಡುತ್ತಿದ್ದರು. ಆದ್ರೆ, ಇದೀಗ ಈ ಸ್ಕೀಂಗಳಿಂದಲೂ ಕೂಡ ಜನರು ಹಿಂದೆ ಸರಿಯುವ ಪರಿಸ್ಥಿತಿ ಬಂದಿದ್ದು, ಜನರ ಜೀವನ ಬಲು ಕಷ್ಟ ಎನ್ನುವಂತಾಗಿದೆ. ಯಾಕೆ ಅಂತೀರಾ? ಈ ಕೆಳಗಿನಂತಿದೆ ನೋಡಿ.

ಪೆಟ್ರೋಲ್, ಡೀಸಲ್ ಮೇಲಿನ ರಫ್ತು ಸುಂಕ ತಗ್ಗಿಸಿದ ಸರ್ಕಾರ; ಇಂಧನ ಬೆಲೆ ಕಡಿಮೆಗೊಳ್ಳುತ್ತಾ?

Central govt reduces export tax on petrol, diesel and Jet Fuel: ಕೇಂದ್ರ ಸರ್ಕಾರ ಜೂನ್ 1ಕ್ಕೆ ಜಾರಿಗೆ ಬರುವಂತೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ರಫ್ತು ಸುಂಕವನ್ನು ಕಡಿಮೆ ಮಾಡಿದೆ. ಹಣಕಾಸು ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ, ಪೆಟ್ರೋಲ್ ಮೇಲಿನ ರಫ್ತು ಸುಂಕವನ್ನು 3 ರೂನಿಂದ ಒಂದೂವರೆ ರೂಗೆ ಇಳಿಸಲಾಗಿದೆ. ಡೀಸಲ್ ಮೇಲಿನ ರಫ್ತು ಸುಂಕವನ್ನು 16.5 ರೂನಿಂದ 13.5 ರೂಗೆ ತಗ್ಗಿಸಿದೆ. ಎಟಿಎಫ್ ರಫ್ತು ಸುಂಕವೂ ಕಡಿಮೆಗೊಂಡಿದೆ.

ಅಮೆರಿಕದ ಯುದ್ಧವೆಲ್ಲವೂ ತೈಲಕ್ಕಾಗಿಯೇ; ಇವಿ, ಸೋಲಾರ್ ದಾಂಗುಡಿ ಇಟ್ಟರೂ ಆಯಿಲ್​ಗೆ ಯಾಕಿಷ್ಟು ಬೇಡಿಕೆ? ಈ ಕಪ್ಪು ಚಿನ್ನ ಅಂತಿಂಥದ್ದಲ್ಲ

Why Green Energy & EVs Won't End Oil's Demand: ಜಗತ್ತು ಹಸಿರು ಇಂಧನ ಮತ್ತು ಎಲೆಕ್ಟ್ರಿಕ್ ವಾಹನಗಳತ್ತ ಸಾಗುತ್ತಿದ್ದರೂ ಕಚ್ಚಾ ತೈಲದ ಬೇಡಿಕೆ ಮುಂಬರುವ ದಶಕಗಳಲ್ಲಿ ಕಡಿಮೆಯಾಗುವುದಿಲ್ಲ. ಏಕೆಂದರೆ, ತೈಲ ಕೇವಲ ಇಂಧನವಲ್ಲ. ಪ್ಲಾಸ್ಟಿಕ್, ಔಷಧಿಗಳು, ಸೌಂದರ್ಯವರ್ಧಕಗಳು ಸೇರಿದಂತೆ ಸಾವಿರಾರು ದೈನಂದಿನ ವಸ್ತುಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್‌ಗಳು ಅವಶ್ಯಕ. EV ಯುಗದಲ್ಲೂ ಕೈಗಾರಿಕೆಗಳು ಮತ್ತು ನಮ್ಮ ನಿತ್ಯ ಜೀವನಕ್ಕೆ ತೈಲ ಅನಿವಾರ್ಯ.

ಮೋದಿ ಸರ್ಕಾರ ರಹಸ್ಯವಾಗಿ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ; ಪೆಟ್ರೋಲ್ ಏರಿಕೆ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಕುರಿತು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಮುಗಿದ ತಕ್ಷಣ ಇಂಧನ ದರಗಳನ್ನು ಹೆಚ್ಚಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಚುನಾವಣೆಯ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪದೇ ಪದೇ ಹೆಚ್ಚಿಸುವ ಮೂಲಕ ಸರ್ಕಾರವು ಗ್ರಾಹಕರ ಮೇಲೆ ಹೊರೆಯನ್ನು ಹೇರುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಚುನಾವಣೆ ಮುಗಿದ ತಕ್ಷಣ ಸರ್ಕಾರವು ಹಣದುಬ್ಬರದ ಹೊರೆಯನ್ನು ಸಾರ್ವಜನಿಕರ ಮೇಲೆ ಹೇರಲು ಪ್ರಾರಂಭಿಸಿದೆ ಮತ್ತು ಸಾರ್ವಜನಿಕ ವಿರೋಧವನ್ನು ತಗ್ಗಿಸಲು ಹಂತ ಹಂತವಾಗಿ ಇಂಧನ ಬೆಲೆಗಳನ್ನು ಹೆಚ್ಚಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಭಾರತದಲ್ಲಿ ಆದ ಪೆಟ್ರೋಲ್ ಬೆಲೆ ಏರಿಕೆ ಬಹಳ ದೊಡ್ಡ ಹೆಚ್ಚಳವಾ? ಇಲ್ಲಿದೆ ವಾಸ್ತವ ಸ್ಥಿತಿ

India's petrol price hike compared to other countries: ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟು ಉದ್ಭವವಾದ ಕಳೆದ ಮೂರು ತಿಂಗಳಲ್ಲಿ ಭಾರತ ಸರ್ಕಾರ ಪೆಟ್ರೋಲ್ ಬೆಲೆಯನ್ನು ಶೇ. 7.7ರಷ್ಟು ಏರಿಸಿದೆ. ಇದೇ ವೇಳೆ, ಜಾಗತಿಕವಾಗಿ ಹೆಚ್ಚಿನ ದೇಶಗಳು ಬಹಳ ದೊಡ್ಡ ಮಟ್ಟದಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಹೆಚ್ಚಿಸಿವೆ. ಭಾರತದಲ್ಲೂ ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಬೆಲೆಯಲ್ಲಿ ವ್ಯತ್ಯಾಸ ಇದ್ದ, ಇದಕ್ಕೆ ವ್ಯಾಟ್ ಅಂಶ ಕಾರಣ.

ಪೆಟ್ರೋಲ್ ಡೀಸೆಲ್ ಬೆಲೆ ಇನ್ನೂ ಏರಿಕೆಯಾಗುತ್ತಾ? ಇಂಧನ ದರದಲ್ಲಿ ಕೇಂದ್ರ, ರಾಜ್ಯಕ್ಕೆಷ್ಟು ಪಾಲು ಎಂಬ ಮಾಹಿತಿ ಇಲ್ಲಿದೆ

ಕೇವಲ 11 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ನಾಲ್ಕನೇ ಬಾರಿಗೆ ಏರಿಕೆಯಾಗಿದೆ. ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆ, ರೂಪಾಯಿ ಅಪಮೌಲ್ಯ ಮತ್ತು ಕೇಂದ್ರ-ರಾಜ್ಯ ಸರ್ಕಾರಗಳ ತೆರಿಗೆ ಪಾಲು ಈ ಹೆಚ್ಚಳಕ್ಕೆ ಪ್ರಮುಖ ಕಾರಣ. ತೆರಿಗೆ ಕಡಿತಗೊಳಿಸುವುದು ತಕ್ಷಣದ ಪರಿಹಾರವಾಗಿದ್ದು, ಇಲ್ಲದಿದ್ದರೆ ಅಗತ್ಯ ವಸ್ತುಗಳ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ.

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!