AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pralhad Joshi

Pralhad Joshi

ಪ್ರಲ್ಹಾದ್ ಜೋಶಿ ಒಬ್ಬ ಖ್ಯಾತ ರಾಜಕಾರಣಿಯಾಗಿದ್ದು, 2024ರ ಜೂನ್ 10 ರಿಂದ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 1962 ರ ನವೆಂಬರ್ 27 ರಂದು ಜನಿಸಿದರು. 2004 ರಿಂದ ಜೋಶಿ ಸಂಸತ್ ಸದಸ್ಯರಾಗಿದ್ದಾರೆ. ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 1992 ರಿಂದ 1994 ರ ಅವಧಿಯಲ್ಲಿ ಕರ್ನಾಟಕದ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜಾರೋಹಣಕ್ಕಾಗಿ ನಡೆದ ಚಳವಳಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಜೋಶಿಯವರ ರಾಜಕೀಯ ಜೀವನ ಪ್ರಾರಂಭವಾಯಿತು. ನಂತರ ಅವರು ಧಾರವಾಡ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾದರು ಮತ್ತು 2004ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಗೆಲುವುದ ಸಾಧಿಸುವ ಮೂಲಕ ಸಂಸತ್ ಪ್ರವೇಶಿಸಿದರು. ಅಲ್ಲಿಂದ ರಾಷ್ಟ್ರ ರಾಜಕಾರಣದಲ್ಲಿ ಅವರ ಛಾಪು ಮುಂದುವರಿದಿದೆ.

ಇನ್ನೂ ಹೆಚ್ಚು ಓದಿ

ಡಿ.8ರ ಸಭೆ ಬರಲಾಗಲ್ಲ: ಕಾರಣ ಸಮೇತ ಸಿದ್ದರಾಮಯ್ಯಗೆ ಮರುಪತ್ರ ಬರೆದ ಸಚಿವ ಜೋಶಿ

ಕರ್ನಾಟಕದ ಅಭಿವೃದ್ಧಿ ಮತ್ತು ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರದ ಗಮನ ಸೆಳೆಯಲೆಂದು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವದೆಹಲಿಯಲ್ಲಿ ಡಿಸೆಂಬರ್ 8ರಂದು ರಾಜ್ಯವನ್ನು ಪ್ರತಿನಿಧಿಸುವ ಸಂಸದರ ಸಭೆ ಕರೆದಿದ್ದರು. ಆದ್ರೆ, ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ಸಭೆಗೆ ಬರಲಾಗುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಿಎಂಗೆ ಮರುಪತ್ರ ಬರೆದಿದ್ದಾರೆ. ಹಾಗಾದ್ರೆ, ಪತ್ರದಲ್ಲೇನಿದೆ ಎನ್ನುವ ವಿವರ ಈ ಕೆಳಗಿನಂತಿದೆ.

ಮೆಕ್ಕೆಜೋಳ ಖರೀದಿ ವಿಚಾರವಾಗಿ ಡಿಸ್ಟಿಲರಿಗಳಿಗೆ ಪತ್ರ: ಸಿಎಂಗೆ ಈಗ ಜ್ಞಾನೋದಯವಾಯ್ತು ಎಂದ ಜೋಶಿ

ಸಿಎಂ ಸಿದ್ದರಾಮಯ್ಯ ಮೆಕ್ಕೆಜೋಳ ಖರೀದಿಗೆ ಎನ್​ಸಿಸಿಎಫ್, ನಾಫೆಡ್ ಜೊತೆ ಒಪ್ಪಂದ ಮಾಡಿಕೊಳ್ಳಲು ಡಿಸ್ಟಿಲರಿಗಳಿಗೆ ಪತ್ರ ಬರೆದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಿಎಂಗೆ ಈಗ ಜ್ಞಾನೋದಯವಾಗಿದೆ ಎಂದು ಟೀಕಿಸಿದ್ದಾರೆ. ಇನ್ನಾದರೂ ಕೇಂದ್ರದತ್ತ ಬೆರಳು ತೋರಿಸುವುದನ್ನು ಬಿಡಲಿ ಎಂದು ಕಿಡಿಕಾರಿದ್ದಾರೆ.

ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ; ಪ್ರಲ್ಹಾದ್ ಜೋಶಿ ಆರೋಪ

ಮೆಕ್ಕೆಜೋಳ ಖರೀದಿಯ ವಿಷಯದಲ್ಲಿ ಕರ್ನಾಟಕ ಸರ್ಕಾರವು ವಿನಾಕಾರಣ ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತಿದೆ. ವಾಸ್ತವದ ವಿಚಾರವೆಂದರೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ತನ್ನದೇ ಆದ ಮಟ್ಟದಲ್ಲಿ ಅತ್ಯಂತ ತುರ್ತು ಮತ್ತು ಅಗತ್ಯ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಮುಖ್ಯಮಂತ್ರಿಗಳು 17.94 ಲಕ್ಷ ಟನ್ ಮೆಕ್ಕೆಜೋಳ ಆಮದು ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇದು ತಪ್ಪು ಮಾಹಿತಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಡಿಕೆಶಿ ಬಿಜೆಪಿಗೆ ಬಂದು ಸಿಎಂ ಆಗ್ತಾರಾ, ವಿಜಯೇಂದ್ರ ಡಿಸಿಎಂ ಆಗ್ತಾರಾ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು ನೋಡಿ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ಬಿಜೆಪಿಗಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಡಿಕೆ ಶಿವಕುಮಾರ್ ಸಿಎಂ, ಬಿವೈ ವಿಜಯೇಂದ್ರ ಡಿಸಿಎಂ ಆಗುವ ವದಂತಿಗಳನ್ನು ತಳ್ಳಿಹಾಕಿದ ಅವರು, ಜನಾದೇಶ ಪಡೆದ ಸರ್ಕಾರ ತನ್ನ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸಬೇಕು ಎಂದಿದ್ದಾರೆ. INDI ಮೈತ್ರಿಕೂಟ ಅಸ್ವಾಭಾವಿಕ ಎಂದೂ ಟೀಕಿಸಿದ್ದಾರೆ.

ಕಬ್ಬು ದರ ಜಟಾಪಟಿ: ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಪ್ರಲ್ಹಾದ್​ ಜೋಶಿ

ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಮುಂದುವರೆದಿರುವ ಬೆನ್ನಲ್ಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೇಂದ್ರದ ನೀತಿಗಳು ರೈತ ಸ್ನೇಹಿಯಾಗಿವೆ ಎಂದಿರುವ ಜೋಶಿ, ರಾಜ್ಯ ಸರ್ಕಾರದ ತೆರಿಗೆ ಹೆಚ್ಚಳ ಮತ್ತು ನಿರ್ಲಕ್ಷ್ಯ ಕಬ್ಬು ಬೆಳೆಗಾರರ ಸಂಕಷ್ಟಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ಕಬ್ಬು ಬೆಳೆಗಾರರಿಗಾಗಿ ಕೇಂದ್ರ ಮಾಡಿದ್ದೇನು? ದಾಖಲೆ ಸಮೇತ ಸಿಎಂ ಸಿದ್ದರಾಮಯ್ಯಗೆ ಪ್ರಲ್ಹಾದ್ ಜೋಶಿ ತಿರುಗೇಟು

ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರ ಹಿತ ಕಾಯಲು ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವಧಿಯಲ್ಲಿ FRP ಹೆಚ್ಚಳ, ಎಥೆನಾಲ್ ಉತ್ಪಾದನೆಗೆ ಉತ್ತೇಜನ ಹಾಗೂ ಸಕ್ಕರೆ ರಫ್ತಿನಿಂದ ರೈತರಿಗೆ ಲಾಭವಾಗಿದೆ ಎಂಬುದನ್ನು ಒತ್ತಿಹೇಳಿದ ಅವರು, ಕರ್ನಾಟಕ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ದಾಖಲೆಗಳ ಸಮೇತ ಉತ್ತರ ನೀಡಿದ್ದಾರೆ.

ವಿರೋಧ ಪಕ್ಷದಲ್ಲಿದ್ದಾಗ ಬೆಲೆ ನಿಗದಿ ಮಾಡಿ ಎಂದವರು ಈಗ ಕೇಂದ್ರವನ್ನು ದೂರೋದು ಯಾಕೆ? ಜೋಶಿ ಕಿಡಿ

ಕಬ್ಬು ಬೆಳೆಗಾರರ ಹೋರಾಟ ಇಂದಿಗೆ 9ನೇ ದಿನಕ್ಕೆ ಕಾಲಿಟ್ಟಿದೆ. ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ ಮಾಡಿದ್ದಾರೆ. ನಿಮ್ಮ ದುರಾಡಳಿತದ ಪರಮಾವಧಿಯಿಂದಲೇ ಇಂದು ರೈತರು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದ್ದಾರೆ.

ಜಗತ್ತಿನ ಪ್ರಭಾವಿ ನಾಯಕರಾದ ಸಚಿವ ಪ್ರಲ್ಹಾದ್ ಜೋಶಿ; TIME 100 ಹವಾಮಾನ ಪಟ್ಟಿಯಲ್ಲಿ ಸ್ಥಾನ ಪಡೆದ ಮೊದಲ ಭಾರತೀಯ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೆಸರು ಈಗ ಜಾಗತಿಕ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿದೆ. ಜಗತ್ತಿನಲ್ಲಿ ಹವಾಮಾನ ಸುಸ್ಥಿರತೆ ಕಾಪಾಡುತ್ತಿರುವವರ ಕುರಿತು ಸಿದ್ಧಪಡಿಸಲಾದ TIME 100 climate most powerfull leader" ಪಟ್ಟಿಯಲ್ಲಿ ಪ್ರಲ್ಹಾದ್ ಜೋಶಿ ಅವರ ಹೆಸರು ಕೂಡ ಇದೆ. ಈ ಮೂಲಕ ಪ್ರಧಾನಿ ಮೋದಿಯವರ ಸಂಪುಟದ ಸಚಿವರಾದ ಪ್ರಲ್ಹಾದ್ ಜೋಶಿ ವಿಶ್ವದ ಪ್ರಮುಖ ಪ್ರಭಾವಿ ನಾಯಕರಲ್ಲೊಬ್ಬರಾಗಿದ್ದಾರೆ. ಈ ಸ್ಥಾನ ಪಡೆದ ಮೊದಲ ಭಾರತೀಯರೆಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

ಖಾದ್ಯ ತೈಲ ಘಟಕ ನೋಂದಣಿ ಕಡ್ಡಾಯ, ಪಾಲಿಸದಿದ್ದರೆ ಕಠಿಣ ಕ್ರಮ: ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ

ಖಾದ್ಯ ತೈಲ ವಲಯದಲ್ಲಿ ಪಾರದರ್ಶಕತೆ ಮತ್ತು ನಿಯಂತ್ರಣ ಹೆಚ್ಚಿಸಲು ಕೇಂದ್ರ ಸರ್ಕಾರ VOPPA ಆದೇಶಕ್ಕೆ ತಿದ್ದುಪಡಿ ತಂದಿದೆ. ಇನ್ನು ಮುಂದೆ ಖಾದ್ಯ ತೈಲ ತಯಾರಕರು, ಸಂಸ್ಕರಣಾ ಘಟಕಗಳು ರಾಷ್ಟ್ರೀಯ ಏಕ ಗವಾಕ್ಷಿ ವ್ಯವಸ್ಥೆ ಮೂಲಕ ಕಡ್ಡಾಯವಾಗಿ ನೋಂದಾಯಿಸಿಕೊಳ್ಳಬೇಕು. ಆನ್‌ಲೈನ್‌ನಲ್ಲಿ ಮಾಸಿಕ ಉತ್ಪಾದನೆ ಮತ್ತು ಸ್ಟಾಕ್ ವಿವರಗಳನ್ನು ಸಲ್ಲಿಸುವುದು ಸಹ ಕಡ್ಡಾಯವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಅನುದಾನ ಯುದ್ಧ: ಕೇಂದ್ರದ ವಿರುದ್ಧ ಮತ್ತೆ ಬೊಟ್ಟು ಮಾಡಿದ ಸಿದ್ದರಾಮಯ್ಯ, ಪ್ರಲ್ಹಾದ್​ ಜೋಶಿ ಕಿಡಿ

ಕರ್ನಾಟಕಕ್ಕೆ ಅನುದಾನ ಬಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದು, ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕತೆ ಹದಗೆಟ್ಟಿದೆ. 80 ಸಾವಿರ ಕೋಟಿ ಸಾಲ ಏರಿಕೆಯಾಗಿದೆ. ಕೇಂದ್ರದ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಜೋಶಿ ವಾಗ್ದಾಳಿ ಮಾಡಿದ್ದಾರೆ.