Priyanka Gandhi Vadra
ಪ್ರಿಯಾಂಕಾ ಗಾಂಧಿ ವಾದ್ರಾ: ಕೇರಳದ ವಯನಾಡಿನಲ್ಲಿ ರಾಹುಲ್ ಗಾಂಧಿಯಿಂದ ತೆರವಾದ ಸ್ಥಾನಕ್ಕೆ ಪ್ರಿಯಾಂಕಾ ಸ್ಪರ್ಧಿಸಿ ನಾಲ್ಕು ಲಕ್ಷಗಳ ಅಂತರದಿಂದ ಗೆಲುವು ಸಾಧಿಸಿದ್ದರು. ದಶಕಗಳಲ್ಲಿ ಮೊದಲ ಬಾರಿಗೆ, ನೆಹರು-ಗಾಂಧಿ ಕುಟುಂಬದ ಮೂವರೂ-ಸೋನಿಯಾ, ರಾಹುಲ್ ಮತ್ತು ಪ್ರಿಯಾಂಕಾ-ಇದೀಗ ಸಂಸತ್ತಿನ ಭಾಗವಾಗಿದ್ದಾರೆ. ಮೊದಲು ತಾಯಿ ಸೋನಿಯಾ ಮತ್ತು ಸಹೋದರ ರಾಹುಲ್ ಗಾಂಧಿ ಪರ ಪ್ರಚಾರ ಮಾಡುತ್ತಿದ್ದ ಪ್ರಿಯಾಂಕ ಅವರನ್ನು, ನಂತರ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಉಸ್ತುವಾರಿಯನ್ನಾಗಿ ಮಾಡಲಾಗಿತ್ತು. ಇದಾದ ನಂತರ ಪಕ್ಷದ ಸ್ಟಾರ್ ಕ್ಯಾಂಪೇನರ್ ಆದ ಪ್ರಿಯಾಂಕ, ಇದೇ ಮೊದಲ ಬಾರಿಗೆ ಚುನಾವಣಾ ರಾಜಕೀಯಕ್ಕೆ ಇಳಿದಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಠಿ ಮತ್ತು ವಯನಾಡ್ ನಿಂದ ಸ್ಪರ್ಧಿಸಿದ್ದರು. ಆ ಪೈಕಿ, ಅಮೇಠಿಯಲ್ಲಿ ಸೋತ ಹಿನ್ನಲೆಯಲ್ಲಿ ವಯನಾಡ್ ಕ್ಷೇತ್ರವನ್ನು ಉಳಿಸಿಕೊಂಡಿದ್ದರು.