AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab Kings

Punjab Kings

Punjab Kings

ಪ್ರೀತಿ ಜಿಂಟಾ ಒಡೆತನದ ಪಂಜಾಬ್ ಕಿಂಗ್ಸ್ ತಂಡವನ್ನು ತೊರೆದ ಕನ್ನಡಿಗ

Punjab Kings: ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಪಂಜಾಬ್ ಕಿಂಗ್ಸ್ ತಂಡದ ಸ್ಪಿನ್ ಬೌಲಿಂಗ್ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಸಿಸಿಐನ ಸೆಂಟರ್ ಆಫ್ ಎಕ್ಸಲೆನ್ಸ್ (COE) ಸೇರಲಿದ್ದಾರೆ. ಈ ಮೂಲಕ ಯುವ ಆಟಗಾರರ ತರಬೇತಿ ಮತ್ತು ಅಭಿವೃದ್ಧಿಗೆ ಒತ್ತು ನೀಡಲಿದ್ದಾರೆ. ಇದು ಐಪಿಎಲ್ 2026 ಸಿದ್ಧತೆಗಳ ಭಾಗವಾಗಿ ಪಂಜಾಬ್ ಕಿಂಗ್ಸ್ ತಂಡದಲ್ಲಿನ ಪ್ರಮುಖ ಬದಲಾವಣೆಯಾಗಿದೆ.

ಭಾರತ- ಪಾಕ್ ಪಂದ್ಯಕ್ಕೂ ಮುನ್ನ ಐಪಿಎಲ್- ಪಿಎಸ್​ಎಲ್ ತಂಡಗಳ ನಡುವೆ ಪೋಸ್ಟರ್ ವಾರ್

India vs Pakistan Asia Cup 2025: ಏಷ್ಯಾಕಪ್ 2025 ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ನಿರೀಕ್ಷಿತ ಪಂದ್ಯಕ್ಕೂ ಮುನ್ನ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಯುದ್ಧ ಶುರುವಾಗಿದೆ. ಪಂಜಾಬ್ ಕಿಂಗ್ಸ್ ಪಾಕಿಸ್ತಾನವನ್ನು ಅವಮಾನಿಸುವ ಪೋಸ್ಟರ್ ಹಂಚಿಕೊಂಡಿದ್ದರೆ, ಕರಾಚಿ ಕಿಂಗ್ಸ್ ಪ್ರತಿಕ್ರಿಯಿಸಿದೆ. ಭಾರತೀಯ ಅಭಿಮಾನಿಗಳು ಕರಾಚಿ ಕಿಂಗ್ಸ್‌ನ ಪ್ರತಿಕ್ರಿಯೆಯನ್ನು ಗೇಲಿ ಮಾಡಿದ್ದಾರೆ. ಪಂದ್ಯದ ಮೊದಲೇ ಉಭಯ ದೇಶಗಳ ಅಭಿಮಾನಿಗಳಲ್ಲಿ ಉತ್ಸಾಹ ಹೆಚ್ಚಿದೆ.

Punjab Floods: ಪ್ರವಾಹ ಸಂತ್ರಸ್ತರ ನೆರವಿಗೆ ನಿಂತ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ; ಕೊಟ್ಟಿದ್ದು ಎಷ್ಟು ಹಣ?

Punjab Kings' Flood Relief: ಪಂಜಾಬ್‌ನಲ್ಲಿನ ಭೀಕರ ಪ್ರವಾಹದಿಂದಾಗಿ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಐಪಿಎಲ್ ತಂಡವಾದ ಪಂಜಾಬ್ ಕಿಂಗ್ಸ್ 34 ಲಕ್ಷ ರೂಪಾಯಿಗಳನ್ನು ದೇಣಿಗೆಯಾಗಿ ನೀಡಿ ಮತ್ತು ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಆರಂಭಿಸಿ ಸಹಾಯ ಮಾಡಿದೆ. ಈ ಹಣವನ್ನು ಪರಿಹಾರ ಕಾರ್ಯಾಚರಣೆಗಳು, ರಕ್ಷಣಾ ದೋಣಿಗಳು ಮತ್ತು ಪೀಡಿತರಿಗೆ ಅಗತ್ಯ ವಸ್ತುಗಳ ಒದಗಿಸಲು ಬಳಸಲಾಗುವುದು. ಪಂಜಾಬ್ ಕಿಂಗ್ಸ್ ತಮ್ಮ ಅಭಿಮಾನಿಗಳನ್ನು ಮತ್ತು ಸಾರ್ವಜನಿಕರನ್ನು ದೇಣಿಗೆ ನೀಡುವಂತೆ ಕರೆ ನೀಡಿದೆ.

ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯ ತಂಡಕ್ಕೆ RCB ಮಾಜಿ ಆಟಗಾರ ಕ್ಯಾಪ್ಟನ್..!

CPL 2025: ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಕಣಕ್ಕಿಳಿಯುವ ಸೇಂಟ್ ಲೂಸಿಯಾ ಕಿಂಗ್ಸ್ ತಂಡವು ಐಪಿಎಲ್​ನ  ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯ ಒಡೆತನದಲ್ಲಿರುವ ಟೀಮ್. ಈ ಫ್ರಾಂಚೈಸಿಯು ಇದೀಗ ಅನುಭವಿ ಆಲ್​ರೌಂಡರ್​ನನ್ನು ನಾಯಕನಾಗಿ ಆಯ್ಕೆ ಮಾಡಿಕೊಂಡಿದೆ. ಕಳೆದ ಸೀಸನ್​ನಲ್ಲಿ ಸೇಂಟ್ ಲೂಸಿಯಾ ಕಿಂಗ್ಸ್ ತಂಡವನ್ನು ಫಾಫ್ ಡುಪ್ಲೆಸಿಸ್ ಮುನ್ನಡೆಸಿದ್ದರು.

ಟಿ20 ಇತಿಹಾಸದಲ್ಲೇ ಅತಿ ಹೆಚ್ಚು ವೀಕ್ಷಣೆ; ವಿಶ್ವ ದಾಖಲೆ ಬರೆದ ಆರ್​ಸಿಬಿ- ಪಂಜಾಬ್ ಫೈನಲ್ ಪಂದ್ಯ

RCB's IPL Victory Record-Breaking Viewership: ಆರ್​ಸಿಬಿ ಐಪಿಎಲ್ 2025ರಲ್ಲಿ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದೆ. ಈ ಫೈನಲ್ ಪಂದ್ಯ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ವೀಕ್ಷಣೆ ಪಡೆದ ದಾಖಲೆ ಕೂಡ ನಿರ್ಮಿಸಿದೆ. 31.7 ಬಿಲಿಯನ್ ನಿಮಿಷಗಳ ವೀಕ್ಷಣೆ ದಾಖಲೆಯಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ ಡಿಜಿಟಲ್ ವೀಕ್ಷಕರಲ್ಲಿ 29% ಏರಿಕೆಯಾಗಿದೆ ಎಂದು ಜಿಯೋಹಾಟ್‌ಸ್ಟಾರ್ ವರದಿ ಮಾಡಿದೆ.

ಭರ್ಜರಿ ವೀವ್ಸ್ ಕೊಟ್ಟ ಆರ್​​ಸಿಬಿ; ಐಪಿಎಲ್ ಇತಿಹಾಸದಲ್ಲೇ ಅತಿಹೆಚ್ಚು ವೀಕ್ಷಣೆ; ಬೇರೆ ಕ್ರೀಡೆಗಳಿಗೆ ಇರೋ ವೀಕ್ಷಕರ ಬಳಗ ಎಷ್ಟು?

Comparing IPL viewership with FIFA and FIBA world cups: 18ನೇ ಆವೃತ್ತಿಯ ಐಪಿಎಲ್ ಟೂರ್ನಿಯನ್ನು ವೀಕ್ಷಿಸಿದವರ ಸಂಖ್ಯೆ 100 ಕೋಟಿ ದಾಟಿದೆ. ಇದು ಐಪಿಎಲ್ ಇತಿಹಾಸದಲ್ಲೇ ಹೊಸ ದಾಖಲೆ ಎನಿಸಿದೆ. ಟಿವಿ ಮತ್ತು ಡಿಜಿಟಲ್ ಪ್ಲಾಟ್​​ಫಾರ್ಮ್​​ಗಳಲ್ಲಿ ಒಟ್ಟು 840 ಬಿಲಿಯನ್ ನಿಮಿಷಗಳಷ್ಟು ವೀಕ್ಷಣೆಯನ್ನು ಈ ಟೂರ್ನಿ ಪಡೆದಿದೆ. ಫುಟ್ಬಾಲ್​​ಗೆ ಹೋಲಿಸಿದರೆ ಐಪಿಎಲ್ ಟೂರ್ನಿಗೆ ಕಡಿಮೆ ವೀಕ್ಷಕರಿದ್ದರೂ ಒಂದು ದೇಶಕ್ಕೆ ಸೀಮಿತವಾದ ಟೂರ್ನಿಗೆ ಇಷ್ಟು ದೊಡ್ಡ ವೀಕ್ಷಣೆ ಸಿಕ್ಕಿದ್ದು ಗಮನಾರ್ಹ.

ಪಂಜಾಬ್ ಕಿಂಗ್ಸ್ ಫ್ರಾಂಚೈಸಿಯ ತಂಡಕ್ಕೆ ಟಿಮ್ ಡೇವಿಡ್ ಎಂಟ್ರಿ..!

Tim David: ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 12 ಪಂದ್ಯಗಳನ್ನಾಡಿದ್ದ ಟಿಮ್ ಡೇವಿಡ್ 9 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ 14 ಸಿಕ್ಸ್ ಹಾಗೂ 16 ಫೋರ್​ಗಳೊಂದಿಗೆ ಒಟ್ಟು 187 ರನ್ ಕಲೆಹಾಕಿದ್ದರು. ಈ ಮೂಲಕ ಆರ್​ಸಿಬಿ ತಂಡವು ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

IPL 2025: ಶ್ರೇಯಸ್ ನನ್ನ ಕೆನ್ನೆಗೆ ಬಾರಿಸಿದ್ದರೆ ಚೆನ್ನಾಗಿರುತ್ತಿತ್ತು; ನಾಯಕ ಮಾಡಿದ್ದು ಸರಿ ಎಂದ ಶಶಾಂಕ್ ಸಿಂಗ್

Shashank Singh's Honest Confession: ಐಪಿಎಲ್ 2025ರ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ವಿರುದ್ಧ ಸೋತ ಪಂಜಾಬ್ ಕಿಂಗ್ಸ್ ಚಾಂಪಿಯನ್ ಪಟ್ಟ ಕಳೆದುಕೊಂಡಿತು. ಇದೀಗ ಕ್ವಾಲಿಫೈಯರ್‌ 2ನಲ್ಲಿ ರನ್ ಔಟ್ ಆಗಿದ್ದ ಶಶಾಂಕ್ ಸಿಂಗ್ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ನಾಯಕ ಶ್ರೇಯಸ್ ಆ ಕ್ಷಣದಲ್ಲಿ ಮಾಡಿದ್ದು ಸರಿಯಾಗಿತ್ತು ಎಂದಿದ್ದಾರೆ.

IPL 2025: ಐಪಿಎಲ್ ಫೈನಲ್ ಸೋಲಿನ ಬಗ್ಗೆ ಕೊನೆಗೂ ಮೌನ ಮುರಿದ ಪ್ರೀತಿ ಜಿಂಟಾ

Preity Zinta's Emotional Post: ಪಂಜಾಬ್ ಕಿಂಗ್ಸ್ ತಂಡ ಐಪಿಎಲ್ 2025ರ ಫೈನಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೋತರೂ, ಅದ್ಭುತ ಪ್ರದರ್ಶನ ನೀಡಿದೆ. ತಂಡದ ಮಾಲಕಿ ಪ್ರೀತಿ ಜಿಂಟಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದು, ತಂಡದ ಹೋರಾಟ ಮತ್ತು ಭಾರತೀಯ ಅನ್‌ಕ್ಯಾಪ್ಡ್ ಆಟಗಾರರ ಪ್ರದರ್ಶನವನ್ನು ಶ್ಲಾಘಿಸಿದ್ದಾರೆ. ಫೈನಲ್ ಸೋಲಿನ ಹೊರತಾಗಿಯೂ, ಮುಂದಿನ ವರ್ಷ ಬಲಿಷ್ಠವಾಗಿ ಮರಳುವ ಭರವಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.

RCBಗೆ ಸೋಲು… ತಲೆಕೆಳಗಾದ ಸೆಹ್ವಾಗ್ ಲೆಕ್ಕಾಚಾರ

IPL 2025 RCB vs PBKS Final: ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 190 ರನ್ ಕಲೆಹಾಕಿದರೆ, ಪಂಜಾಬ್ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 184 ರನ್ ಬಾರಿಸಿ 6 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ