Rahul Gandhi
ನೆಹರು ಕುಟುಂಬದ ನಾಲ್ಕನೇ ತಲೆಮಾರಿನ ಐದನೇ ನಾಯಕ ರಾಹುಲ್ ಗಾಂಧಿ. ನೆಹರು ಮರಿ ಮೊಮ್ಮಗ, ಇಂದಿರಾರ ಮೊಮ್ಮಗ ಹಾಗೂ ರಾಜೀವ್-ಸೋನಿಯಾ ಮಗ ಎನ್ನುವುದು ರಾಹುಲ್‌ಗೆ ಪ್ಲಸ್ ಹಾಗೂ ಮೈನಸ್ ಎರಡೂ ಹೌದು. ಕಳೆದ ಎರಡು ದಶಕಗಳಿಂದ ಭಾರತದ ರಾಜಕೀಯದಲ್ಲಿ ಸಕ್ರಿಯರಾಗಿರುವ ರಾಹುಲ್, ಪ್ರಧಾನಿಯಾಗುವ ಮಹತ್ವಾಕಾಂಕ್ಷೆ ಹೊಂದಿದ್ದಾರೆ. ಎಐಸಿಸಿ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ರಾಹುಲ್, ಸತತ ಐದು ಬಾರಿ ಸಂಸದರಾಗಿ ಕೆಲಸ ಮಾಡಿದ್ದಾರೆ. ಆರಂಭದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರಾಹುಲ್, ಈಗ ವಯ್ನಾಡು ಕ್ಷೇತ್ರ ಸದಸ್ಯರಾಗಿದ್ದಾರೆ. ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾಗಿರುವ ರಾಹುಲ್ ಗಾಂಧಿ, ಇದೇ ಕಾರಣದಿಂದ ಸಂಸದ ಸ್ಥಾನದಿಂದ ಅನರ್ಹರಾಗಿದ್ದರು. ಸದ್ಯ ಕೋರ್ಟ್‌ನಿಂದ ರಕ್ಷಣೆ ಪಡೆದು, ಮತ್ತೆ ಸದಸ್ಯತ್ವ ಪಡೆದಿದ್ದಾರೆ. ಮನಮೋಹನ್ ಸಿಂಗ್ ಸರ್ಕಾರದ ಸುಗ್ರೀವಾಜ್ಞೆಯನ್ನು ಹರಿದುಹಾಕಿದ್ದು, ರಫೇಲ್ ಹಾಗೂ ಅದಾನಿ ವಿರುದ್ಧ ಪ್ರಕರಣದಲ್ಲಿ ಧ್ವನಿ ಎತ್ತಿದ್ದು, ಎಐಸಿಸಿ ಅಧ್ಯಕ್ಷರಾಗಿ ಲೋಕಸಭೆ ಸೇರಿ ಹಲವು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಸೋತಿದ್ದು ಹಾಗೂ ಭಾರತ್ ಜೋಡೋ ಯಾತ್ರೆಯು ರಾಹುಲ್ ಅವರ ರಾಜಕೀಯ ಪಥದಲ್ಲಿನ ಪ್ರಮುಖಾಂಶಗಳು. ರಾಹುಲ್ ಗಾಂಧಿ ಎನ್ನುವ ರಾಜಕೀಯ ವ್ಯಕ್ತಿಯು ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಕ್ಕೂ ಪ್ರಮುಖ ದಾಳವಾಗಿದ್ದಾರೆ. ತಮ್ಮ ಪ್ರಚಾರಗಳಿಗೆ ಇವರಿಬ್ಬರೂ ರಾಹುಲ್ ಅವರನ್ನು ಬಳಸಿಕೊಳ್ಳುವುದು ವಿಶೇಷ.
ಕೇರಳ, ತಮಿಳುನಾಡು ಮಾದರಿ: ಡಿಕೆಶಿ ಸಂಪುಟದಲ್ಲಿ 3-4 ಯುವ ಮುಖಗಳಿಗೆ ಮಣೆ ಸಾಧ್ಯತೆ
ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಬದಲಾವಣೆಯ ಕಸರತ್ತು ಜೋರಾಗಿದ್ದು, ಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಡಾ. ಜಿ ಪರಮೇಶ್ವರ್ ದೆಹಲಿ ತಲುಪಿದ್ದಾರೆ. ಭರತ್ ರೆಡ್ಡಿ, ಪ್ರದೀಪ್ ಈಶ್ವರ್ ಸೇರಿದಂತೆ ಯುವ ಮುಖಗಳಿಗೆ ಮಣೆ ಹಾಕುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಕೇರಳ, ತಮಿಳುನಾಡು ರೀತಿ ಹೊಸ ಹಾಗೂ ಯುವ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ.
- Prasanna Gaonkar
- Updated on: Jun 11, 2026
- 7:12 am
ಕಾಂಗ್ರೆಸ್ ಜೊತೆ ವಿಲೀನವಾಗುತ್ತಾ ಟಿಎಂಸಿ? ಮಮತಾ ಬ್ಯಾನರ್ಜಿಗೆ ದೊಡ್ಡ ಹುದ್ದೆಯ ಆಫರ್
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತದ ಹಿನ್ನೆಲೆಯಲ್ಲಿ ಟಿಎಂಸಿ ಸಂಸದರು ಮತ್ತು ನಾಯಕರು ಸಾಲು ಸಾಲು ರಾಜೀನಾಮೆ ನೀಡುತ್ತಿದ್ದಾರೆ. ಇದರ ಬೆನ್ನಲ್ಲೇ ಟಿಎಂಸಿ ಕಾಂಗ್ರೆಸ್ ಜೊತೆ ವಿಲೀನವಾಗಲಿದೆ ಎಂಬ ಸುದ್ದಿಗಳೂ ಹರಿದಾಡುತ್ತಿವೆ. ಮಮತಾ ಬ್ಯಾನರ್ಜಿ 2 ದಿನಗಳಿಂದ ಕಾಂಗ್ರೆಸ್ ನಾಯಕರೊಂದಿಗೆ ಸಾಲು ಸಾಲು ಮಾತುಕತೆ ನಡೆಸುತ್ತಿರುವುದು ಈ ವದಂತಿಗೆ ಇನ್ನಷ್ಟು ಪುಷ್ಠಿ ನೀಡಿದೆ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಜೊತೆ ಟಿಎಂಸಿ ವಿಲೀನವಾಗುತ್ತಾ? ಎಂಬ ಕುತೂಹಲ ಮೂಡಿದೆ.
- Sushma Chakre
- Updated on: Jun 10, 2026
- 5:27 pm
ಆತ್ಮನಿರ್ಭರ ಭಾರತವನ್ನು ಲೇವಡಿ ಮಾಡಿದ್ದಕ್ಕೆ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಸೂರತ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ರ‍್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿರುವ ಕೆಲವು ನಿರಾಶಾವಾದಿಗಳು ಸದಾ ಸರ್ಕಾರದ 'ಆತ್ಮನಿರ್ಭರ ಭಾರತ' (ಸ್ವಾವಲಂಬಿ ಭಾರತ) ಅಭಿಯಾನವನ್ನು ಲೇವಡಿ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಕಿಡಿಕಾರಿದರು. ಕಳೆದ 12 ವರ್ಷಗಳಿಂದ ಕಾಂಗ್ರೆಸ್ ಪಕ್ಷವು ದೇಶದಲ್ಲಿ ಅರಾಜಕತೆ ಮತ್ತು ಅನಿಶ್ಚಿತತೆಯನ್ನು ಹರಡುವ ಮೂಲಕ ರಾಜಕೀಯ ಲಾಭ ಹುಡುಕುತ್ತಿದೆ, ಆದರೆ ಜನತೆ ಅವರಿಗೆ ಪದೇ ಪದೇ ತಕ್ಕ ಉತ್ತರ ನೀಡಿದ್ದಾರೆ ಎಂದು ಮೋದಿ ಹೇಳಿದರು.
- Sushma Chakre
- Updated on: Jun 5, 2026
- 8:40 pm
ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆ್ಯಮ್ ಹ್ಯಾಪಿ ಎಂದ ಸಚಿವ ಕೆ.ಹೆಚ್.ಮುನಿಯಪ್ಪ
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸರ್ಕಾರ ರಚನೆಯಾದ ಆರಂಭದಲ್ಲೇ ಒಂದರಿಂದೊಂದು ಸಂಕಷ್ಟ ಎದುರಾಗುತ್ತಿವೆ. ಬಯಸಿದ ಖಾತೆ ಸಿಗದ್ದಕ್ಕೆ ಹಿರಿಯ ಸಚಿವರು ಅಸಮಾಧಾನಗೊಂಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದಿದ್ದಕ್ಕೆ ರಾಮಲಿಂಗಾ ರೆಡ್ಡಿ ಅವರು ಆಪ್ತರ ಮನವೊಲಿಕೆ ನಡುವೆಯೂ ರಾಜೀನಾಮೆ ನೀಡಿದ್ದು, ಭಾರೀ ಸಂಚನಲಕ್ಕೆ ಕಾರಣವಾಗಿದೆ. ಇದರ ನಡುವೆ ಆಹಾರ ಇಲಾಖೆ ಬೇಡವೆಂದು ಅಸಮಾಧಾನಗೊಂಡಿದ್ದ ಮುನಿಯಪ್ಪ ಅವರಿಗೆ ರಾಹುಲ್ ಗಾಂಧಿ ಮಹತ್ವದ ಭರವಸೆ ನೀಡಿದ್ದಾರೆ.
- Ramesh B Jawalagera
- Updated on: Jun 5, 2026
- 4:52 pm
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ: ವಿಡಿಯೋ ನೋಡಿ
ಡಿ.ಕೆ.ಶಿವಕುಮಾರ್ ಅವರ ಮುಖ್ಯಮಂತ್ರಿ ಪ್ರಮಾಣ ವಚನ ಸಮಾರಂಭಕ್ಕಾಗಿ ಆಗಮಿಸಿದ ರಾಹುಲ್ ಗಾಂಧಿ, ಲೋಕಭವನದ ಮುಂದೆ ನೆರೆದಿದ್ದ ಕಾರ್ಯಕರ್ತರತ್ತ ಕಾರಿನಿಂದ ಕೈ ಬೀಸಿ, ಫ್ಲೈಯಿಂಗ್ ಕಿಸ್ ನೀಡಿದರು. ಕೆ.ಸಿ.ವೇಣುಗೋಪಾಲ್ ಮತ್ತು ಮಲ್ಲಿಕಾರ್ಜುನ ಖರ್ಗೆಯವರೂ ಈ ಸಂದರ್ಭದಲ್ಲಿ ಹಾಜರಿದ್ದರು. ರಾಹುಲ್ ಗಾಂಧಿಯವರನ್ನು ನೋಡಿದ ಅಭಿಮಾನಿಗಳು ಸರ್ ವೇವ್ ಯುವರ್ ಹ್ಯಾಂಡ್ ಎಂದು ಪದೇ ಪದೇ ಕೂಗುತ್ತಾ ಸಂಭ್ರಮಿಸಿದರು.
- Shivaprasad B
- Updated on: Jun 3, 2026
- 4:16 pm
ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು: ವರಿಷ್ಠರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿ!
ಕರ್ನಾಟಕ ಸಚಿವ ಸಂಪುಟ ರಚನೆ ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿಗಳನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದು, ದೆಹಲಿಯಲ್ಲಿ ಮ್ಯಾರಥಾನ್ ಸಭೆಗಳು ನಡೆದಿವೆ. ಜಾತಿ ಸಮೀಕರಣ, ಹಿರಿಯರಿಗೆ ಹಾಗೂ ಹೊಸಬರಿಗೆ ಅವಕಾಶ ಕಲ್ಪಿಸುವ ಬಗ್ಗೆ ಹೈಕಮಾಂಡ್ ತೀವ್ರ ಚಿಂತನೆ ನಡೆಸಿದೆ. ಮೊದಲ ಹಂತದ ಪಟ್ಟಿ ಇಂದೇ ಅಂತಿಮವಾಗುವ ಸಾಧ್ಯತೆ ಇದೆ.
- Prasanna Gaonkar
- Updated on: Jun 2, 2026
- 11:56 am
ಸಿದ್ದರಾಮಯ್ಯ ಪತ್ನಿಗೆ ರಾಜ್ಯಸಭಾ ಆಫರ್ ನೀಡಿದ್ದ ರಾಹುಲ್ ಗಾಂಧಿ: ಬೇಡವೆಂದಿದ್ದ ಮಾಜಿ ಸಿಎಂ ಇಟ್ಟಿದ್ದು ಬೇರೆಯೇ ಬೇಡಿಕೆ!
ಸಚಿವ ಸಂಪುಟ ರಚನೆ ಹಾಗೂ ಡಿಸಿಎಂ ಹುದ್ದೆಗಳ ಸೃಷ್ಟಿಯ ಕುರಿತು ಹೈಕಮಾಂಡ್ ಜೊತೆ ಚರ್ಚಿಸಲು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಮತ್ತು ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಗೆ ತೆರಳುತ್ತಿದ್ದಾರೆ. ಮತ್ತೊಂದೆಡೆ, ತಮ್ಮ ಪತ್ನಿಗೆ ರಾಹುಲ್ ಗಾಂಧಿ ನೀಡಿದ್ದ ರಾಜ್ಯಸಭಾ ಸ್ಥಾನದ ಆಫರನ್ನು ಸಿದ್ದರಾಮಯ್ಯ ತಿರಸ್ಕರಿಸಿರುವ ವಿಚಾರ ತಿಳಿದುಬಂದಿದೆ.
- Prasanna Gaonkar
- Updated on: Jun 1, 2026
- 9:27 am
ವೀರೇಂದ್ರ ಪಾಟೀಲರಿಗೆ ಅಪ್ಪ,ಸಿದ್ದರಾಮಯ್ಯಗೆ ಮಗ ಅಪಮಾನ:ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಸಿದ ಕೈ ಎಂದ ಜೋಶಿ
2930 ದಿನ. ಎರಡು ಅವಧಿ. 8 ವರ್ಷ 8 ದಿನ ಆಡಳಿತ ನಡೆಸಿದ ಸಿದ್ದರಾಮಯ್ಯ ಇಂದು (ಮೇ 28) ನಾಡಿನ ದೊರೆಯ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಲೋಕಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದು, ಸಿದ್ದರಾಮಯ್ಯ ರಾಜೀನಾಮೆ ಕೇವಲ ಅಭಿಮಾನಿಗಳಿಗಷ್ಟೇ ಅಲ್ಲ, ಸಂಪುಟ ಸಹದ್ಯೋಗಿಗಳಿಗೂ ಆಘಾತ ತಂದಿದೆ. ಅಲ್ಲದೇ ವಿರೋಧ ಪಕ್ಷದ ನಾಯಕರು ಸಹ ಸಿದ್ದರಾಮಯ್ಯನವರನ್ನ ಕೆಳಗಿಳಿಸಿದ್ದಕ್ಕೆ ಬೇಸರ, ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದರಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
- Ramesh B Jawalagera
- Updated on: May 28, 2026
- 8:22 pm
ಹಿಂದಿನ ತಪ್ಪು ನಿರ್ಧಾರಗಳಿಂದ ಪಾಠ ಕಲಿತ ‘ಕೈ’ ಕಮಾಂಡ್: ಕರ್ನಾಟಕ ವಿಷಯದಲ್ಲಿ ಎಚ್ಚರಿಕೆಯ ನಡೆ
ಪಂಜಾಬ್, ರಾಜಸ್ಥಾನ ಸೇರಿ ಹಲವು ರಾಜ್ಯಗಳಲ್ಲಿ ಈ ಹಿಂದೆ ತೆಗೆದುಕೊಂಡಿದ್ದ ತಪ್ಪು ನಿರ್ಧಾರಗಳಿಂದ ಪಾಠ ಕಲಿತ ಕಾಂಗ್ರೆಸ್ ಹೈಕಮಾಂಡ್, ಕರ್ನಾಟಕದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಕಗ್ಗಂಟನ್ನು ಅತ್ಯಂತ ಚಾಣಾಕ್ಷತನದಿಂದ ಬಗೆಹರಿಸಿದೆ. ಸಿದ್ದರಾಮಯ್ಯನವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಜೊತೆ ಜೊತೆಗೆ, ಎಲ್ಲ ಸಮುದಾಯಗಳಿಗೂ ಸರ್ಕಾರದಲ್ಲಿ ಪ್ರಾಮುಖ್ಯತೆ ನೀಡುವ ನಿರ್ಧಾರ ಮಾಡಿದೆ. ಯಾವುದೇ ರೀತಿಯಲ್ಲಿಯೂ ತಮ್ಮ ನಿರ್ಧಾರ ವೋಟ್ ಬ್ಯಾಂಕ್ ಅಥವಾ ಪಕ್ಷ ನಾಯಕರ ಮೇಲೆ ವ್ಯತಿರಿಕ್ತ ಪರಿಣಾಮ ಬೀರದ ರೀತಿಯಲ್ಲಿ ತಂತ್ರ ರೂಪಿಸಿದೆ.
- Harish GR
- Updated on: May 28, 2026
- 4:21 pm
ಇದ್ದ ನಿರೀಕ್ಷೆಯೇ ಒಂದು, ಹೈಕಮಾಂಡ್ ಹೇಳಿದ್ದೇ ಮತ್ತೊಂದು: ಸಿದ್ದರಾಮಯ್ಯಗೆ ಭರ್ಜರಿ ಶಾಕ್ ಕೊಟ್ಟ ರಾಹುಲ್ ಗಾಂಧಿ
ಹೈಕಮಾಂಡ್ ಬುಲಾವ್ ಹಿನ್ನೆಲೆ ಸಚಿವ ಸಂಪುಟ ಪುನಾರಚನೆ ಮತ್ತು ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ಸಂಬಂಧ ಚರ್ಚೆಗೆ ತಯಾರಿಯಲ್ಲಿ ತೆರಳಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಹೈಕಮಾಂಡ್ ಭರ್ಜರಿ ಶಾಕ್ ಕೊಟ್ಟಿದೆ. ನೀವು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಾಹುಲ್ ಗಾಂಧಿ ಖಡಕ್ ಆಗಿ ತಿಳಿಸಿದ್ದು, ಸಿದ್ದರಾಮಯ್ಯ ಅವರ ಯಾವುದೇ ಮನವೊಲಿಕೆಗೂ ಅವರು ಒಪ್ಪಿಲ್ಲ ಎನ್ನಲಾಗಿದೆ.
- Pramod Shastri G
- Updated on: May 27, 2026
- 4:59 pm
ಪಟ್ಟದ ಪಗಡೆಯಾಟಕ್ಕೆ ಹೊಸ ಟ್ವಿಸ್ಟ್: ರಾಹುಲ್ ಬಳಿ ಪರಮೇಶ್ವರ್ರನ್ನ ಸಿಎಂ ಮಾಡಿ ಎಂದರಾ ಸಿದ್ದರಾಮಯ್ಯ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದ್ದು, ತೆರವಾಗುವ ಸಿಎಂ ಸ್ಥಾನಕ್ಕೆ ಡಾ. ಜಿ. ಪರಮೇಶ್ವರ ಅವರ ಹೆಸರನ್ನು ಸಿದ್ದರಾಮಯ್ಯನವರು ರಾಹುಲ್ ಗಾಂಧಿ ಮುಂದೆ ಪ್ರಸ್ತಾಪಿಸಿದ್ದಾರೆ. ಪಕ್ಷ ಸಂಘಟನೆ ಮತ್ತು ಅಧಿಕಾರದ ಅನುಭವದ ಆಧಾರದ ಮೇಲೆ ಈ ಶಿಫಾರಸು ಮಾಡಲಾಗಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
- Pramod Shastri G
- Updated on: May 27, 2026
- 1:05 pm
ಸಿಎಂ ಕುರ್ಚಿ ಬಿಡಲು ಸಿದ್ದರಾಮಯ್ಯ ಕೊನೆಗೂ ಒಪ್ಪಿದ್ಯಾಕೆ? ಇಲ್ಲಿದೆ ಇಂಟರೆಸ್ಟಿಂಗ್ ಮಾಹಿತಿ
ಕೊನೆಗೂ ರಾಜ್ಯ ಕಾಂಗ್ರೆಸ್ನ ಅಧಿಕಾರ ಹಂಚಿಕೆ ಸಮರಕ್ಕೆ ತೆರೆ ಬೀಳುವ ಎಲ್ಲ ಲಕ್ಷಣಗಳು ಗೋಚರಿಸಿವೆ. ಕಾಂಗ್ರೆಸ್ ಹೈಕಮಾಂಡ್ ಸಂಧಾನ ಯಶಸ್ವಿಯಾಗಿದ್ದು ರಾಹುಲ್ ಗಾಂಧಿ ಭರವಸೆಗೆ ಒಪ್ಪಿದ ಸಿದ್ದರಾಮಯ್ಯ ಕೊನೆಗೂ ಸಿಎಂ ಸ್ಥಾನ ತ್ಯಜಿಸಲು ಸಿದ್ಧರಾಗಿದ್ದು, ನಾಳೆಯೇ ರಾಜೀನಾಮೆ ನೀಡುವ ಸಾಧ್ಯತೆ ಇದೆ. ರಾಜ್ಯಪಾಲರ ಭೇಟಿಗೆ ಅವರು ಸಮಯವನ್ನೂ ಕೇಳಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ಸಿದ್ದರಾಮಯ್ಯ ಸ್ಥಾನ ತ್ಯಜಿಲು ಒಪ್ಪಿದ್ದು ಯಾಕೆ ಎಂಬ ಮಾಹಿತಿ ಇಲ್ಲಿದೆ.
- Prasanna Gaonkar
- Updated on: May 27, 2026
- 11:47 am