Rohit Sharma
2007 ರಲ್ಲಿ ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದ ರೋಹಿತ್ ಶರ್ಮಾ, ಅದೇ ವರ್ಷ ಟಿ20 ಕ್ರಿಕೆಟ್ಗೂ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದರು. ಏಕದಿನ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ 7 ವರ್ಷಗಳ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿ ಚೊಚ್ಚಲ ಅವಕಾಶ ಪಡೆದ ರೋಹಿತ್ ಶರ್ಮಾ, ಅಂದಿನಿಂದ ಇಂದಿನವರೆಗೆ ಟೀಂ ಇಂಡಿಯಾದಲ್ಲಿ ಸಾಕಷ್ಟು ಏರಿಳಿತಗಳನ್ನು ಕಂಡಿದ್ದಾರೆ. ಪ್ರಸ್ತುತ ನಾಯಕನಾಗಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ತಂಡ ಡಬ್ಲ್ಯುಟಿಸಿ ಫೈನಲ್ ಸೇರಿದಂತೆ ಒಂದು ಏಕದಿನ ವಿಶ್ವಕಪ್ ಫೈನಲ್ ಕೂಡ ಆಡಿದೆ. ಆದರೆ ತಂಡಕ್ಕೆ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಟೀಂ ಇಂಡಿಯಾ ಪರ ಇದುವರೆಗೆ ಮೂರು ಮಾದರಿಯ ಕ್ರಿಕೆಟ್‌ನಲ್ಲಿ 469 ಪಂದ್ಯಗಳನ್ನಾಡಿರುವ ರೋಹಿತ್, 46 ಶತಕ ಹಾಗೂ 100 ಅರ್ಧಶತಕ ಹಾಗೂ 4 ದ್ವಿಶತಕದ ಆಧಾರದ ಮೇಲೆ ಒಟ್ಟು 18511 ರನ್ ಕಲೆಹಾಕಿದ್ದಾರೆ. ಹಾಗೆಯೇ ಐಪಿಎಲ್ನಲ್ಲೂ ತಮ್ಮ ಮ್ಯಾಜಿಕ್ ತೋರಿರುವ ರೋಹಿತ್ ಶರ್ಮಾ ತಮ್ಮ ನಾಯಕತ್ವದಲ್ಲಿ ತಂಡವನ್ನು ದಾಖಲೆಯ 6 ಬಾರಿ ಚಾಂಪಿಯನ್ ಮಾಡಿದ್ದಾರೆ.