AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

S Janaki

S Janaki

S Janaki – ಭಾರತೀಯ ಚಿತ್ರರಂಗದ ದಂತಕಥೆ, ಗಾನಕೋಕಿಲೆ ಎಸ್. ಜಾನಕಿ ಅವರು ಏಪ್ರಿಲ್ 23, 1938 ರಂದು ಆಂಧ್ರಪ್ರದೇಶದಲ್ಲಿ ಜನಿಸಿದರು. ಜುಲೈ 11, 2026 ರಂದು ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದರು. ಏಳು ದಶಕಗಳಿಗೂ ಹೆಚ್ಚು ಕಾಲ ಸಂಗೀತ ಲೋಕವನ್ನು ಆಳಿದ ಇವರು ಕನ್ನಡ, ತೆಲುಗು, ತಮಿಳು, ಮಲಯಾಳಂ ಸೇರಿದಂತೆ 17ಕ್ಕೂ ಹೆಚ್ಚು ಭಾಷೆಗಳಲ್ಲಿ 48,000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಡಾ. ರಾಜ್‌ಕುಮಾರ್ ಹಾಗೂ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರೊಂದಿಗೆ ಜಾನಕಮ್ಮ ಹಾಡಿದ ಯುಗಳ ಗೀತೆಗಳು ಸದಾ ಹಸಿರು. ಇವರ ಅಪ್ರತಿಮ ಸಾಧನೆಗಾಗಿ 4 ರಾಷ್ಟ್ರ ಪ್ರಶಸ್ತಿಗಳು ಹಾಗೂ 30ಕ್ಕೂ ಹೆಚ್ಚು ರಾಜ್ಯ ಪ್ರಶಸ್ತಿಗಳು ಒಲಿದು ಬಂದಿವೆ. ಬಹುಮುಖ ಧ್ವನಿಯ ಮೂಲಕ ಎಲ್ಲ ವಯೋಮಾನದ ಪಾತ್ರಗಳಿಗೆ ಜೀವ ತುಂಬುತ್ತಿದ್ದ ಜಾನಕಮ್ಮನವರ ನಿಧನದಿಂದ ಸಂಗೀತ ಲೋಕದ ಸುವರ್ಣ ಯುಗವೊಂದು ಮುಕ್ತಾಯಗೊಂಡಂತಾಗಿದೆ.

ಇನ್ನೂ ಹೆಚ್ಚು ಓದಿ

ಫೋಟೋ ನೋಡಿಯೇ ಪ್ರೀತಿಯಲ್ಲಿ ಬಿದ್ದಿದ್ದ ಗಾನಕೋಕಿಲೆ; ಎಸ್. ಜಾನಕಿ ಅಪರೂಪದ ಪ್ರೇಮಕಥೆ

ಗಾನಕೋಕಿಲೆ ಎಸ್. ಜಾನಕಿ ಅವರ ಮಧುರ ಕಂಠದ ಹಿಂದೆ ಅಡಗಿರುವ ಅತ್ಯಂತ ಸುಂದರ ಹಾಗೂ ಅಪರೂಪದ ಪ್ರೇಮಕಥೆಯನ್ನು ಈ ಲೇಖನ ಅನಾವರಣಗೊಳಿಸುತ್ತದೆ. ಕೇವಲ ಒಂದು ಫೋಟೋ ನೋಡಿ ರಾಮ್ ಪ್ರಸಾದ್ ಅವರ ಪ್ರೀತಿಯಲ್ಲಿ ಬಿದ್ದ ಜಾನಕಮ್ಮ, ಮುಂದೆ ಅವರನ್ನೇ ಕೈಹಿಡಿದು ಯಶಸ್ವಿ ಗಾಯಕಿಯಾಗಿ ಹೊರಹೊಮ್ಮಿದ ರೋಚಕ ಕಥೆ ಇಲ್ಲಿದೆ. ಪತಿಯ ನಿರಂತರ ಬೆಂಬಲ ಹಾಗೂ ಇತ್ತೀಚಿನ ಅವರ ನಿಧನದವರೆಗಿನ ಕೌಟುಂಬಿಕ ಪಯಣದ ಸಂಪೂರ್ಣ ವಿವರ ಇಲ್ಲಿದೆ.

ತಮ್ಮಿಷ್ಟದ ಮೈಸೂರಿನಲ್ಲೇ ಪಂಚಭೂತಗಳಲ್ಲಿ ಲೀನರಾದ ಎಸ್ ಜಾನಕಿ

S Janaki: ಭಾರತೀಯ ಚಿತ್ರರಂಗದ ಮೇರು ಗಾಯಕಿ ಎಸ್ ಜಾನಕಿ ಅವರು ಮೈಸೂರಿನ ಕನಿಯನ ಹುಂಡಿಯಲ್ಲಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತಿಮ ಸಂಸ್ಕಾರದ ವಿಧಿ ವಿಧಾನಗಳನ್ನು ನೆರವೇರಿಸಲಾಗಿದೆ. ಪುತ್ರ, ಪತಿ ಇಲ್ಲದ ಕಾರಣ ಅವರ ಮೊಮ್ಮಗಳಾದ ಅಪ್ಸರಾ ಅವರು ಅಜ್ಜಿಯ ಅಂತಿಮ ಸಂಸ್ಕಾರ ವಿಧಿವಿಧಾನಗಳನ್ನು ನೆರವೇರಿಸಿದ್ದಾರೆ.

ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು

S Janaki: ಖ್ಯಾತ ಗಾಯಕಿ ಎಸ್ ಜಾನಕಿ ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿಯಿಂದಲೇ ಹಲವಾರು ಮಂದಿ ಸೆಲೆಬ್ರಿಟಿಗಳು ಜಾನಕಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಮೈಸೂರಿನ ಮಹಾರಾಜ ಕಾಲೇಜಿಗೆ ಆಗಮಿಸಿ ಎಸ್ ಜಾನಕಿ ಅವರ ಅಂತಿಮ ದರ್ಶನ ಪಡೆದು, ಟಿವಿ9 ಜೊತೆಗೆ ವಿಶೇಷವಾಗಿ ಮಾತನಾಡಿದರು.

ಗಾನ ಕೋಗಿಲೆ ಎಸ್ ಜಾನಕಿ ಅಂತ್ಯಕ್ರಿಯೆ ಎಲ್ಲಿ? ಯಾವಾಗ?

S Janaki Songs: ಗಾಯಕಿ ಎಸ್ ಜಾನಕಿ ಅವರು ನಿಧನ ಹೊಂದಿದ್ದು ನಿನ್ನೆ ರಾತ್ರಿಯಿಂದಲೂ ಲಕ್ಷಾಂತರ ಜನ ತಂಡೋಪತಂಡವಾಗಿ ಆಗಮಿಸಿ ಜಾನಕಿ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಕನ್ನಡ ಚಿತ್ರರಂಗ ಮತ್ತು ಪರಭಾಷೆ ಚಿತ್ರರಂಗದ ಗಣ್ಯರು ಸಹ ಜಾನಕಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ರಾಜ್ಯದ ಕೆಲ ಪ್ರಮುಖ ರಾಜಕಾರಣಿಗಳು ಸಹ ಜಾನಕಿ ಅವರ ಅಂತಿಮ ದರ್ಶನ ಪಡೆದಿದ್ದಾರೆ.

ಒಂದು ಹಾಡು ನಾಲ್ಕು ಧ್ವನಿ: ಎಸ್ ಜಾನಕಿ ಹಾಡಿರುವ ಈ ಹಾಡು ಕೇಳಿದ್ದೀರಾ?

S Janaki: ಎಸ್ ಜಾನಕಿ ಅವರಿಗೆ ಪ್ರತಿ ಭಾಷೆಯಲ್ಲಿಯೂ ಹಲವಾರು ಸೂಪರ್ ಹಿಟ್ ಹಾಡುಗಳಿವೆ. ಸುಮಧುರ ಗಾಯಕಿ ಆಗಿದ್ದ ಜೊತೆಗೆ ಜಾನಕಿ ಅವರು ಪ್ರಯೋಗಗಳಿಗೂ ಒಗ್ಗಿಕೊಳ್ಳುವ ಮನಸ್ಥಿತಿ ಉಳ್ಳವರಾಗಿದ್ದರು. ಅವರು ಒಮ್ಮೆ ಒಂದೇ ಹಾಡನ್ನು ನಾಲ್ಕು ಭಿನ್ನ ಧ್ವನಿಗಳಿಂದ ಹಾಡಿದ್ದರು ಎಂಬುದು ನಿಮಗೆ ಗೊತ್ತೆ? ಮಾಹಿತಿ ಇಲ್ಲಿದೆ ನೋಡಿ...

ಗಾಯಕಿ ಎಸ್. ಜಾನಕಿ ನಿಧನ: ಕಂಬನಿ ಮಿಡಿದ ಪ್ರಧಾನಿ ಮೋದಿ, ಸಿಎಂ ವಿಜಯ್, ರಜನಿ, ಕಮಲ್

ಖ್ಯಾತ ಗಾಯಕಿ ಎಸ್. ಜಾನಕಿ ಅವರ ನಿಧನದಿಂದ ಭಾರತೀಯ ಸಿನಿಮಾ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಖ್ಯಾತ ನಟರಾದ ಕಮಲ್ ಹಾಸನ್, ರಜನಿಕಾಂತ್, ಚಿರಂಜೀವಿ, ತಮಿಳುನಾಡು ಸಿಎಂ ದಳಪತಿ ವಿಜಯ್ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಮೈಸೂರಿನಲ್ಲೇ ಎಸ್. ಜಾನಕಿ ಸ್ಮಾರಕ ಆಗಲಿ: ಕಣ್ಣೀರು ಹಾಕುತ್ತಾ ಹಂಸಲೇಖ ವಿನಂತಿ

ಲೆಜೆಂಡರಿ ಗಾಯಕಿ ಎಸ್. ಜಾನಕಿ ಅವರು ವಿಧಿವಶರಾಗಿದ್ದು, ಮೈಸೂರಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಹಂಸಲೇಖ ಅವರು ಎಸ್. ಜಾನಕಿ ಸ್ಮಾರಕದ ಬಗ್ಗೆ ಮಾತನಾಡಿದ್ದಾರೆ. ಸ್ಮಾರಕ ನಿರ್ಮಾಣದ ಕುರಿತಂತೆ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಜಯಮಾಲಾ ಬಳಿ ಮನವಿ ಮಾಡಿಕೊಂಡಿದ್ದಾರೆ. ಆ ಬಗ್ಗೆ ಮಾಹಿತಿ ಇಲ್ಲಿದೆ..

ಸಂಗೀತ ಲೋಕದ ಮಹಾರಾಣಿ ಇನ್ನಿಲ್ಲ: ಜಾನಕಮ್ಮನ ಅಗಲಿಕೆಗೆ ಕಂಬನಿ ಮಿಡಿದ ಇಂಟರ್ನೆಟ್ ಜಗತ್ತು!

ದಕ್ಷಿಣ ಭಾರತದ ಖ್ಯಾತ ಹಿನ್ನೆಲೆ ಗಾಯಕಿ, 'ಗಾನಕೋಗಿಲೆ' ಎಸ್. ಜಾನಕಮ್ಮ (88) ಅವರ ನಿಧನಕ್ಕೆ ಇಡೀ ಚಿತ್ರರಂಗ ಹಾಗೂ ಅಭಿಮಾನಿ ಲೋಕ ತೀವ್ರ ಕಂಬನಿ ಮಿಡಿದಿದೆ. ಆರು ದಶಕಗಳ ಕಾಲ ಚಿತ್ರರಂಗವನ್ನು ಆಳಿದ ದಿವ್ಯ ಚೇತನದ ಅಗಲಿಕೆಗೆ ಎಕ್ಸ್ (ಟ್ವಿಟರ್) ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಭಾವುಕರಾಗಿ ಕಣ್ಣೀರಿನ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಎಸ್. ಜಾನಕಿ ನಿಧನ: ಶಿವಣ್ಣ, ಜಗ್ಗೇಶ್, ತ್ರಿಶಾ ಸೇರಿ ಹಲವು ಸೆಲೆಬ್ರಿಟಿಗಳ ಸಂತಾಪ

ಖ್ಯಾತ ಗಾಯಕಿ ಎಸ್. ಜಾನಕಿ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಜಾನಕಿ ಅವರು ಮೈಸೂರಿನಲ್ಲಿ ಶನಿವಾರ (ಜುಲೈ 11) ನಿಧನರಾದರು. ಅವರ ಅಗಲಿಕೆಗೆ ಶಿವರಾಜ್​ಕುಮಾರ್, ಜಗ್ಗೇಶ್, ತ್ರಿಶಾ ಸೇರಿದಂತೆ ಹಲವು ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ.

ಹೈದರಾಬಾದ್​​ನಲ್ಲಿ ಪ್ಯಾಲೇಸ್​​ನಂತಹ ಮನೆಯಿದ್ದರೂ ಮೈಸೂರಲ್ಲಿಯೇ ವಾಸ: ಹೇಗಿತ್ತು ಗೊತ್ತಾ ಗಾನಕೋಗಿಲೆ ಎಸ್​. ಜಾನಕಿ ಅಂತಿಮ ದಿನಗಳು?

S Janaki Passes Away: ಮೈಸೂರಿನಲ್ಲಿ ನೆಲೆಸಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಕೊನೆಯ ದಿನಗಳ ಬಗ್ಗೆ ಕೇರ್ ಟೇಕರ್ ನವೀನ್ ಮಾಹಿತಿ ಹಂಚಿಕೊಂಡಿದ್ದಾರೆ. ಹೈದರಾಬಾದ್‌ನಲ್ಲಿ ಅರಮನೆಯಂತಹ ಮನೆಯಿದ್ದರೂ ಅವರು ಮೈಸೂರನ್ನೇ ಆಯ್ದುಕೊಂಡಿದ್ದರು. ಜಾನಕಿಯವರಿಗೆ ಕಾಲಿನ ಇನ್ಫೆಕ್ಷನ್​​ ಆಗಿ ನೋವು ಆರಂಭವಾಗಿತ್ತು. ಹಾಸ್ಪಿಟಲ್​​ ಅಂದರೆ ಜಾನಕಮ್ಮ ಭಯ ಪಡುತ್ತಿದ್ದ ಕಾರಣ ಮನೆಗೇ ನರ್ಸ್​​ ಕರೆಸಿ ಚಿಕಿತ್ಸೆ ಕೊಡಿಸುತ್ತಿದ್ದೆವು. ಈ ನಡುವೆ ಪರಿಸ್ಥಿತಿ ತೀರಾ ಹದಗೆಟ್ಟ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದವರು ತಿಳಿಸಿದ್ದಾರೆ.

ಉಮಾಶ್ರೀ ಹೇಳಿದ ಆ ಒಂದು ಮಾತಿಗೆ ಕಣ್ಣೀರು ಹಾಕಿದ್ದ ಎಸ್​. ಜಾನಕಿ

ಖ್ಯಾತ ಗಾಯಕಿ ಎಸ್. ಜಾನಕಿ ನಿಧನದಿಂದ ಸಂಗೀತ ಲೋಕಕ್ಕೆ ದೊಡ್ಡ ನಷ್ಟವಾಗಿದೆ. ಕನ್ನಡದ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಜಾನಕಿ, 2014ರ ರಾಜ್ಯೋತ್ಸವ ಪ್ರಶಸ್ತಿ ಸಂದರ್ಭದಲ್ಲಿ ಉಮಾಶ್ರೀ 'ಅಮ್ಮ' ಎಂದಾಗ ಭಾವುಕರಾಗಿದ್ದರು. ಅಭಿಮಾನಿಗಳ ಅಪಾರ ಪ್ರೀತಿಗೆ ಮನಸೋತು ಪ್ರಶಸ್ತಿ ಸ್ವೀಕರಿಸಿದ್ದಾಗಿ ಹೇಳಿದ್ದರು. ಅವರ ಕನ್ನಡಾಭಿಮಾನ ಮತ್ತು ಅಭಿಮಾನಿಗಳೊಂದಿಗಿನ ಬಾಂಧವ್ಯ ಸದಾ ಸ್ಮರಣೀಯ.

ಶಾಶ್ವತವಾಗಿ ಹಾಡು ನಿಲ್ಲಿಸಿದ ಕನ್ನಡಿಗರ ಹೆಮ್ಮೆಯ ಗಾನ ಕೋಗಿಲೆ ‘ಎಸ್‌ ಜಾನಕಮ್ಮ’: ಇಲ್ಲಿವೆ ಫೋಟೋಸ್​​

S Janaki Passes Away: ಕನ್ನಡಿಗರ ಹೆಮ್ಮೆಯ ಗಾನ ಕೋಗಿಲೆ ಎಸ್. ಜಾನಕಿ ಅವರು ತಮ್ಮ 88ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48,000ಕ್ಕೂ ಹೆಚ್ಚು ಗೀತೆಗಳಿಗೆ ಧ್ವನಿಯಾಗಿ, 4 ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದ ಅವರ ಸಂಗೀತ ಪಯಣ ಅವಿಸ್ಮರಣೀಯ. ಭಾರತೀಯ ಸಂಗೀತ ಲೋಕಕ್ಕೆ ಅವರ ಕೊಡುಗೆ ಅಪಾರ. ಇಲ್ಲಿವೆ ಫೋಟೋಸ್​.