Sankranti
ಮಕರ ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು. ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು “ಎಳ್ಳು ಬೆಲ್ಲ”. ಮನೆಯಲ್ಲಿ ಎಳ್ಳ್ಳು ಬೆಲ್ಲವನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ “ಎಳ್ಳುಹಂಚುವುದು” ಸಂಕ್ರಾಂತಿಯ ಸಂಪ್ರದಾಯ. ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು, ಹಣ್ಣು ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಬೆಲ್ಲ, ಒಣ ಕೊಬ್ಬರಿ, ಹುರಿಗಡಲೆ, ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ “ಎಳ್ಳು ಬೆಲ್ಲ” ತಯಾರಿಸಲಾಗುತ್ತದೆ. ಕರ್ನಾಟಕದ ರೈತರಿಗೆ ಸುಗ್ಗಿ ಅಥವಾ ಸುಗ್ಗಿಯ ಹಬ್ಬ. ಈ ಮಂಗಳಕರ ದಿನದಂದು, ಯುವ ಹೆಣ್ಣುಮಕ್ಕಳು, ಮಕ್ಕಳು ಮತ್ತು ಹದಿಹರೆಯದವರು ಹೊಸ ಬಟ್ಟೆಗಳನ್ನು ಧರಿಸಿ ಒಂದು ತಟ್ಟೆಯಲ್ಲಿ ಎಳ್ಳುಬೆಲ್ಲದೊಂದಿಗೆ ಹತ್ತಿರದ ಜನರನ್ನು ಮತ್ತು ಸಂಬಂಧಿಗಳನ್ನು ಭೇಟಿಯಾಗಿ ಎಳ್ಳುಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ. “ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡೋಣ” ಎಂದು ಹೇಳಿಕೊಳ್ಳುತ್ತಾರೆ. ಪ್ಲೇಟ್ ಸಹ ಕಬ್ಬಿನ ತುಂಡು ವಿವಿಧ ಆಕಾರಗಳನ್ನು ಸಕ್ಕರೆ ಅಚ್ಚುಗಳನ್ನು ಹೊಂದಿರುತ್ತದೆ.