AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiva Rajkumar

Shiva Rajkumar

ಕನ್ನಡ ಚಿತ್ರರಂಗದ ಜನಪ್ರಿಯ ನಟರಲ್ಲಿ ಶಿವರಾಜ್​ಕುಮಾರ್ ಕೂಡ ಪ್ರಮುಖರು. ಸಿನಿಮಾ ರಂಗದಲ್ಲಿ ಅವರಿಗೆ ಇರುವ ಅನುಭವ ಅಪಾರ. 130ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು ಕನ್ನಡ ಚಿತ್ರರಂಗಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಶಿವರಾಜ್​ಕುಮಾರ್​ ಜನಿಸಿದ್ದು 1962ರ ಜುಲೈ 12ರಂದು. ಡಾ. ರಾಜ್​ಕುಮಾರ್ ಅವರ ಪುತ್ರನಾದರೂ ಕೂಡ ತಮ್ಮದೇ ಛಾಪನ್ನು ಶಿವರಾಜ್​ಕುಮಾರ್​ ಮೂಡಿಸಿದ್ದಾರೆ. ಎಲ್ಲ ಬಗೆಯ ಪಾತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಅವರು ನಟಿಸಿದ ಮೊದಲ ಸಿನಿಮಾ ‘ಆನಂದ್’ ಸೂಪರ್​ ಹಿಟ್​ ಆಯಿತು. ನಂತರದ ವರ್ಷಗಳಲ್ಲಿ ಅವರು ಕನ್ನಡ ಚಿತ್ರರಂಗದ ಪ್ರಮುಖ ಸ್ಟಾರ್​ ನಟನಾಗಿ ಬೆಳೆದರು. ಅವರ ಪತ್ನಿ ಗೀತಾ ಶಿವರಾಜ್​ಕುಮಾರ್​ ಅವರು ನಿರ್ಮಾಪಕಿಯಾಗಿ ಗುರುತಿಸಿಕೊಂಡಿದ್ದಾರೆ. ಜನುಮದ ಜೋಡಿ, ಓಂ, ಜೋಗಿ, ಟಗರು, ತವರಿಗೆ ಬಾ ತಂಗಿ, ಮಫ್ತಿ ಮುಂತಾದವು ಶಿವರಾಜ್​ಕುಮಾರ್​ ನಟನೆಯ ಪ್ರಮುಖ ಸಿನಿಮಾಗಳು. ನಟನೆ ಮಾತ್ರವಲ್ಲದೇ ಸಮಾಜಮುಖಿ ಕೆಲಸಗಳಿಂದಲೂ ಶಿವರಾಜ್​ಕುಮಾರ್​ ಅವರು ಜನಮೆಚ್ಚುಗೆ ಪಡೆದಿದ್ದಾರೆ

ಇನ್ನೂ ಹೆಚ್ಚು ಓದಿ

ಮುಂಬೈನಲ್ಲಿ ‘ಧುರಂಧರ್’ ಬಗ್ಗೆ ಮನಸಾರೆ ಮಾತಾಡಿದ ಶಿವರಾಜ್​ಕುಮಾರ್

‘45’ ಸಿನಿಮಾದ ಹಿಂದಿ ವರ್ಷನ್ ಬಿಡುಗಡೆ ಪ್ರಯುಕ್ತ ಮುಂಬೈನಲ್ಲಿ ಚಿತ್ರತಂಡದ ಸದಸ್ಯರು ಸುದ್ದಿಗೋಷ್ಠಿ ನಡೆಸಿದ್ದಾರೆ. ಶಿವರಾಜ್​ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ಧುರಂಧರ್’ ಚಿತ್ರದ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ. ರಣವೀರ್ ಸಿಂಗ್ ಹಾಗೂ ಅಕ್ಷಯ್ ಖನ್ನಾ ಅವರ ಅಭಿನಯವನ್ನು ಶಿವರಾಜ್​ಕುಮಾರ್ ಅವರು ಬಹಳ ಮೆಚ್ಚಿಕೊಂಡಿದ್ದಾರೆ.

‘ಮಾರ್ಕ್’ ಹಾಗೂ ‘45’ ಸಿನಿಮಾಗಳು ಒಂದು ವಾರಕ್ಕೆ ಗಳಿಸಿದ್ದು ಎಷ್ಟು?

45 And Mark Movie Collection: ಮಾರ್ಕ್ ಹಾಗೂ 45 ಚಿತ್ರಗಳು ಬಿಡುಗಡೆಯಾಗಿ ಒಂದು ವಾರ ಕಳೆದಿದ್ದು, ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಮಾಡಿವೆ. ಎರಡೂ ಸಿನಿಮಾಗಳು ದೊಡ್ಡ ಬಜೆಟ್‌ನವಾಗಿದ್ದು, ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿವೆ. ಒಟ್ಟಾರೆ, ಈ ಚಿತ್ರಗಳು ನಿರ್ಮಾಪಕರಿಗೆ ಲಾಭ ತಂದಿವೆ ಎನ್ನಲಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಸೋಮವಾರವೂ ‘ಮಾರ್ಕ್’, ‘45’ ಅಬ್ಬರದ ಕಲೆಕ್ಷನ್; ‘ಡೆವಿಲ್’ ಕಥೆ ಏನು?

ಕ್ರಿಸ್​ಮಸ್ ಪ್ರಯುಕ್ತ ತೆರೆಕಂಡ 'ಮಾರ್ಕ್' ಹಾಗೂ '45' ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿವೆ. ಸಕಾರಾತ್ಮಕ ವಿಮರ್ಶೆ ಪಡೆದ ಈ ಚಿತ್ರಗಳು ಸೋಮವಾರವೂ ಉತ್ತಮ ಗಳಿಕೆ ಕಂಡಿವೆ. ಆದರೆ, ಈ ಎರಡು ಚಿತ್ರಗಳ ಅಬ್ಬರದ ನಡುವೆ 'ಡೆವಿಲ್' ಸಿನಿಮಾ ಗಳಿಕೆ ಕುಗ್ಗಿದ್ದು, ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣುತ್ತಿಲ್ಲ.

ನಾಲ್ಕು ದಿನಕ್ಕೆ ‘ಮಾರ್ಕ್’, ‘45’ ಮಾಡಿದ ಕಲೆಕ್ಷನ್ ಎಷ್ಟು ಕೋಟಿ?

ಡಿಸೆಂಬರ್‌ 25ರಂದು ತೆರೆಕಂಡ ಕನ್ನಡ ಸಿನಿಮಾಗಳಾದ ‘ಮಾರ್ಕ್’ ಮತ್ತು ‘45’ ಚಿತ್ರಗಳು ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿವೆ. ಹೊಸ ವರ್ಷದ ರಜಾದಿನಗಳಲ್ಲಿ ಎರಡೂ ಚಿತ್ರಗಳ ಗಳಿಕೆ ಹೆಚ್ಚುವ ನಿರೀಕ್ಷೆ ಇದೆ. ‘ಮಾರ್ಕ್’ ಚಿತ್ರದಲ್ಲಿ ಸುದೀಪ್ ನಟಿಸಿದರೆ, ‘45’ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿ, ಉಪೇಂದ್ರ ಹಾಗೂ ಶಿವಣ್ಣ ನಟಿಸಿದ್ದಾರೆ.

‘45’ ಚಿತ್ರದ ಬಗ್ಗೆ ಅಪಪ್ರಚಾರ ಮಾಡುವವರಿಗೆ ಕಾನೂನು ಕ್ರಮದ ಎಚ್ಚರಿಕೆ

ಶಿವರಾಜ್​​ಕುಮಾರ್, ರಾಜ್​ ಬಿ. ಶೆಟ್ಟಿ ಅಭಿನಯದ '45' ಸಿನಿಮಾ ವಿರುದ್ಧದ ನೆಗೆಟಿವ್ ಪ್ರಚಾರಕ್ಕೆ ಚಿತ್ರತಂಡ ಗಂಭೀರ ಎಚ್ಚರಿಕೆ ನೀಡಿದೆ. ಬೆಂಗಳೂರಿನ ನ್ಯಾಯಾಲಯವು ಮಧ್ಯಂತರ ಆದೇಶ ಹೊರಡಿಸಿದ್ದು, ಚಿತ್ರಕ್ಕೆ ಹಾನಿಯುಂಟು ಮಾಡುವ ಅವಹೇಳನಕಾರಿ ವಿಷಯಗಳನ್ನು ಹರಡುವುದನ್ನು ನಿರ್ಬಂಧಿಸಿದೆ. ನ್ಯಾಯಾಲಯದ ಆದೇಶ ಉಲ್ಲಂಘಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಬಂಧನ ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು '45' ತಂಡ ಸ್ಪಷ್ಟಪಡಿಸಿದೆ.

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..

ಉಪೇಂದ್ರ, ರಾಜ್​ ಬಿ. ಶೆಟ್ಟಿ, ಶಿವರಾಜ್​​ಕುಮಾರ್ ನಟನೆಯ ‘45’ ಚಿತ್ರ ಬಿಡುಗಡೆ ಆಗಿದೆ. ಈ ಸಿನಿಮಾದ ಬಾಕ್ಸ್ ಆಫೀಸ್​ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಚಿತ್ರದ ಪೈರಸಿ ಆಗಿರುವುದು ಬೇಸರದ ಸಂಗತಿ. ಈ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಬಾಯ್ಬಿಟ್ಟ ಸ್ಟಾರ್ ನಟ

ಹಿಂದಿ ಚಿತ್ರರಂಗದ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರು ಈ ವಿಷಯ ಬಹಿರಂಗಪಡಿಸಿದ್ದಾರೆ. ಈ ಸುದ್ದಿ ತಿಳಿದು ಅಭಿಮಾನಿಗಳಿಗೆ ಸಖತ್ ಖುಷಿ ಆಗಿದೆ. ಸಿನಿಮಾದ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ಶಾರುಖ್ ಖಾನ್, ರಜನಿಕಾಂತ್, ಶಿವಣ್ಣ ಅವರನ್ನು ಒಟ್ಟಿಗೆ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಮೊದಲ ದಿನವೇ ಅಬ್ಬರದ ಕಲೆಕ್ಷನ್ ಮಾಡಿದ ‘ಮಾರ್ಕ್’ ಹಾಗೂ ‘45’ ಸಿನಿಮಾ

ಕ್ರಿಸ್‌ಮಸ್‌ಗೆ ಬಿಡುಗಡೆಯಾದ '45' ಮತ್ತು 'ಮಾರ್ಕ್' ಕನ್ನಡ ಚಲನಚಿತ್ರಗಳು ಮೊದಲ ದಿನವೇ ಉತ್ತಮ ಗಳಿಕೆ ಕಂಡಿವೆ. ಶನಿವಾರ, ಭಾನುವಾರ ಮತ್ತು ಹೊಸ ವರ್ಷದಂದು ಈ ಚಿತ್ರ ಅಬ್ಬರದ ಕಲೆಕ್ಷನ್ ಮಾಡೋದು ಪಕ್ಕಾ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟಾಗುತ್ತದೆ ಎಂಬ ಕುತೂಹಲ ಮೂಡಿದೆ. ಮೊದಲ ದಿನದ ಗಳಿಕೆ ಬಗ್ಗೆ ಇಲ್ಲಿದೆ ವಿವರ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಕೆಲವು ಕಿಡಿಗೇಡಿಗಳು ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಕುರಿತು ಅಶ್ಲೀಲ ಕಮೆಂಟ್ ಮಾಡುತ್ತಿದ್ದಾರೆ. ಅಂಥವರ ವಿರುದ್ಧ ಈಗಾಗಲೇ ವಿಜಯಲಕ್ಷ್ಮಿ ದರ್ಶನ್ ದೂರು ನೀಡಿದ್ದಾರೆ. ಈ ಎಲ್ಲ ಘಟನೆಗಳ ಬಗ್ಗೆ ನಟ ಶಿವರಾಜ್​ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಅವರು ಮಾತನಾಡಿದ ವಿಡಿಯೋ ಇಲ್ಲಿದೆ.

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್

ಇತ್ತೀಚಿನ ದಿನಗಳಲ್ಲಿ ಫ್ಯಾನ್ಸ್ ವಾರ್ ಜೋರಾಗಿದೆ. ಕಿಚ್ಚ ಸುದೀಪ್ ಅಭಿಮಾನಿಗಳು ಮತ್ತು ದರ್ಶನ್ ಅಭಿಮಾನಿಗಳು ಪರಸ್ಪರ ಕಿತ್ತಾಡಿಕೊಳ್ಳುತ್ತಿದ್ದಾರೆ. ಕೆಟ್ಟ ಕಮೆಂಟ್​​ಗಳನ್ನು ಮಾಡಲಾಗುತ್ತಿದೆ. ಇದರಿಂದ ಸಿನಿಮಾದ ಮೇಲೆ ಪರಿಣಾಮ ಬೀರುತ್ತಿದೆ. ಈ ಕುರಿತು ಶಿವರಾಜ್​​ಕುಮಾರ್ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

‘ಡೆವಿಲ್’ ಬಳಿಕ ರೇಟಿಂಗ್ ಕೊಡದಂತೆ ಕೋರ್ಟ್​​ನಿಂದ ಆರ್ಡರ್ ತಂದ ‘45’, ‘ಮಾರ್ಕ್​​’

`ಬುಕ್ ಮೈ ಶೋನಲ್ಲಿ ದ್ವೇಷಪೂರಿತ ವಿಮರ್ಶೆಗಳಿಂದ ಸಿನಿಮಾಗಳ ರೇಟಿಂಗ್ ಕುಸಿಯುವುದನ್ನು ತಡೆಯಲು ಕನ್ನಡ ಚಿತ್ರತಂಡಗಳು ಹೊಸ ತಂತ್ರಕ್ಕೆ ಮೊರೆ ಹೋಗಿವೆ. 'ಡೆವಿಲ್' ಚಿತ್ರದ ನಂತರ ಈಗ 'ಮಾರ್ಕ್' ಮತ್ತು '45' ತಂಡಗಳು ಕೋರ್ಟ್ ಆದೇಶದ ಮೂಲಕ ಬುಕ್ ಮೈ ಶೋ ರೇಟಿಂಗ್ ಆಯ್ಕೆಯನ್ನು ನಿಷ್ಕ್ರಿಯಗೊಳಿಸಿವೆ. ಇದರಿಂದ ದೊಡ್ಡ ಬಜೆಟ್ ಸಿನಿಮಾಗಳು ನಕಾರಾತ್ಮಕ ಪ್ರಚಾರದಿಂದ ಪಾರಾಗಲು ಪ್ರಯತ್ನಿಸುತ್ತಿವೆ.

‘45’ ಸಿನಿಮಾ ಹೇಗಿದೆ? ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಫ್ಯಾನ್ಸ್

45 Movie Twitter Review: ‘ಶಿವಣ್ಣನ ಶಿವತಾಂಡವ’ ಎಂದು ಕೆಲವರು ಹೇಳಿದ್ದಾರೆ. ‘45’ ಚಿತ್ರದ ಕ್ಲೈಮ್ಯಾಕ್ಸ್ ಇಷ್ಟ ಆಯಿತು ಎಂದು ಅನೇಕರು ಕಮೆಂಟ್ ಮಾಡುತ್ತಿದ್ದಾರೆ. ಶಿವರಾಜ್​​ಕುಮಾರ್, ಉಪೇಂದ್ರ ಹಾಗೂ ರಾಜ್ ಅವರಿಗೆ ಸರಿಯಾದ ರೀತಿಯಲ್ಲಿ ಸ್ಕ್ರೀನ್​ಸ್ಪೇಸ್​ ಸಿಕ್ಕಿದೆ ಎಂದು ಅನೇಕರು ಹೇಳಿದ್ದಾರೆ.