Siddaramaiah
ಕರ್ನಾಟಕ ರಾಜಕಾರಣದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ನಾಯಕರ ಪೈಕಿ ಸಿದ್ದರಾಮಯ್ಯ ಪ್ರಮುಖರು. ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ 1948ರ ಆಗಸ್ಟ್ 12ರಂದು ಜನಿಸಿದ ಸಿದ್ದರಾಮಯ್ಯನವರ ಪ್ರಾಥಮಿಕ ಶಿಕ್ಷಣ ಹುಟ್ಟೂರಿನಲ್ಲೇ ಆಯಿತು. ಮೈಸೂರಿನಲ್ಲಿ ಬಿಎಸ್ಸಿ ಹಾಗೂ ಕಾನೂನು ಪದವಿ ಪಡೆದ ಅವರು 1978ರ ವರೆಗೆ ವಕೀಲಿ ವೃತ್ತಿ ನಡೆಸುತ್ತಿದ್ದು, ನಂತರ ರಾಜಕೀಯಕ್ಕೆ ಧುಮುಕಿದರು.
1983ರ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾರತೀಯ ಲೋಕದಳದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ಸಿದ್ದರಾಮಯ್ಯ, ನಂತರ ರಾಜಕೀಯದಲ್ಲಿ ಹಿಂತಿರುಗಿ ನೋಡಲೇ ಇಲ್ಲ. ಬಳಿಕ ಜನತಾ ದಳಕ್ಕೆ ಸೇರಿದ ಅವರು, ತರುವಾಯ ನಾಯಕತ್ವದ ವಿರುದ್ಧ ಅಸಮಾಧಾನದಿಂದ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಎರಡು ಬಾರಿ ಉಪಮುಖ್ಯಮಂತ್ರಿಯಾಗಿದ್ದ ಅವರು ಹಣಕಾಸು ಸಚಿವರಾಗಿ ಹಲವು ಬಾರಿ ಕಾರ್ಯನಿರ್ವಹಿಸಿದ್ದಾರೆ.
ಹಿಂದುಳಿದ ವರ್ಗಗಳ ನಾಯಕನೆಂದು ತಮ್ಮನ್ನು ಬಿಂಬಿಸಿಕೊಂಡಿರುವ ಸಿದ್ದರಾಮಯ್ಯ, 2013ರ ವಿಧಾನಸಭೆ ಚುನಾವಣೆಗೂ ಮುನ್ನ ಬೃಹತ್ ಅಹಿಂದ ಸಮಾವೇಶ ಆಯೋಜಿಸಿ ರಾಜಕೀಯ ಬಲ ಪ್ರದರ್ಶನ ಮಾಡಿದ್ದರು.
ಕರ್ನಾಟಕದಲ್ಲಿ ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಅಧಿಕಾರ ಚಲಾಯಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಅವರದ್ದಾಗಿದೆ.
ಮುಖ್ಯಮಂತ್ರಿಯಾಗಿ ಮೊದಲ ಅವಧಿಯಲ್ಲಿ (2013 – 2018) ಅನ್ನಭಾಗ್ಯ, ಶಾದಿಭಾಗ್ಯ, ಕ್ಷೀರಭಾಗ್ಯಗಳಂತಹ ಹಲವು ‘ಭಾಗ್ಯ’ಗಳನ್ನು ಘೋಷಣೆ ಮಾಡಿದ್ದ ಸಿದ್ದರಾಮಯ್ಯ, ಭಾರೀ ಜನಪ್ರಿಯತೆಯ ಹೊರತಾಗಿಯೂ ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸೋಲನುಭವಿಸಿದ್ದರು. ಆದರೆ, ಬಾದಾಮಿಯಿಂದಲೂ ಸ್ಪರ್ಧಿಸಿದ್ದ ಅವರು, ಅಲ್ಲಿ ಗೆಲುವು ಸಾಧಿಸಿದ್ದರು. 2023ರ ವಿಧಾನಸಭೆ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದು, ಇದೀಗ ಎರಡನೇ ಅವಧಿಯಲ್ಲಿ 2023 ಮೇ ತಿಂಗಳಿನಿಂದ 2026 ಮೇ 28ರವರೆಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ
ಕಾಂಗ್ರೆಸ್‌ನಲ್ಲಿ ಜೋರಾಯ್ತು ಸಚಿವ ಸ್ಥಾನಕ್ಕಾಗಿ ಸರ್ಕಸ್: 20 ಸ್ಥಾನಗಳಿಗಾಗಿ 60ಕ್ಕೂ ಹೆಚ್ಚು ಶಾಸಕರಿಂದ ಮಹಾ ಲಾಬಿ
ಕರ್ನಾಟಕ ಕಾಂಗ್ರೆಸ್‌ನಲ್ಲಿ 20 ಸಚಿವ ಸ್ಥಾನಗಳ ಭರ್ತಿಗಾಗಿ 60ಕ್ಕೂ ಹೆಚ್ಚು ಶಾಸಕರು ಲಾಬಿ ನಡೆಸುತ್ತಿದ್ದಾರೆ. ಮಾಜಿ ಸಚಿವರು ತೀವ್ರ ಲಾಬಿ ಮಾಡುತ್ತಿದ್ದಾರೆ. ಮತ್ತೊಂದೆಡೆ, ಆಕಾಂಕ್ಷಿಗಳ ಸಂಖ್ಯೆ ನೋಡಿ ಬೆಚ್ಚಿಬಿದ್ದಿರುವ ಹೈಕಮಾಂಡ್, ವಿಧಾನ ಪರಿಷತ್ ಚುನಾವಣೆ ಮುಗಿದ ನಂತರವೇ ಸಂಪುಟ ವಿಸ್ತರಣೆಗೆ ಮುಂದಾಗುವ ಲಕ್ಷಣಗಳಿವೆ.
- Prasanna Gaonkar
- Updated on: Jun 8, 2026
- 9:06 am
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾ ರೆಡ್ಡಿ ರಾಜೀನಾಮೆಯಿಂದ ಆಕ್ರೋಶಗೊಂಡ ಬೆಂಬಲಿಗರು ಕೋರಮಂಗಲದ ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಜಲಸಂಪನ್ಮೂಲ ಖಾತೆ ಬದಲಾವಣೆಯಿಂದ ಮನನೊಂದ ರೆಡ್ಡಿ ಅವರು ರಾಜೀನಾಮೆ ನೀಡಿದ್ದಾರೆ. ಇದು ಅನ್ಯಾಯ ಎಂದು ಬೆಂಬಲಿಗರು ಖಂಡಿಸಿದ್ದಾರೆ. ಸೂಕ್ತ ಖಾತೆ ಹಾಗೂ ಸ್ಥಾನಮಾನಕ್ಕೆ ಆಗ್ರಹಿಸಿ ಘೋಷಣೆ ಕೂಗಿ, ಕಾರು ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Ganapathi Sharma
- Updated on: Jun 5, 2026
- 11:23 am
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಅವರ ಸಂಪುಟದಲ್ಲಿ ಸಚಿವರಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಸಚಿವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದು, ಪದಗ್ರಹಣದ ಬೆನ್ನಲ್ಲೇ ಯತೀಂದ್ರ ಅವರು ವೇದಿಕೆಯಲ್ಲೇ ತಮ್ಮ ತಂದೆಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ಪುತ್ರನ ಭುಜ ಮುಟ್ಟಿ ಸಿದ್ದರಾಮಯ್ಯ ಹಾರೈಸಿದ್ದಾರೆ.
- Kiran Haniyadka
- Updated on: Jun 3, 2026
- 6:19 pm
ಇತ್ತ ಡಿಕೆಶಿ ಪದಗ್ರಹಣದ ಬೆನ್ನಲ್ಲೇ ಅತ್ತ ವಿಧಾನಸೌಧದಲ್ಲಿ ಬದಲಾಯ್ತು ಸಿಎಂ ಕಚೇರಿಯ ನಾಮಫಲಕ
ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡ ನಂತರ ವಿಧಾನಸೌಧದ ಸಿಎಂ ಕಚೇರಿಯಲ್ಲಿ ನಾಮಫಲಕ ಬದಲಾವಣೆಯಾಗಿದೆ. ಈ ಹಿಂದೆ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕವಿದ್ದು, ಇದೀಗ ಸಿಬ್ಬಂದಿ ಅದನ್ನು ತೆಗೆದು ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರ ಹೆಸರಿನ ಫಲಕವನ್ನು ಅಳವಡಿಸಿದ್ದಾರೆ. ಈ ಬದಲಾವಣೆಯು ರಾಜ್ಯದ ನಾಯಕತ್ವ ಬದಲಾವಣೆಯನ್ನು ಅಧಿಕೃತವಾಗಿ ಸೂಚಿಸುತ್ತದೆ.
- Prasanna Hegde
- Updated on: Jun 3, 2026
- 5:15 pm
ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂಗಳನ್ನು ಆಹ್ವಾನಿಸಿದ ಡಿಕೆಶಿ: ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ನಿಯೋಜಿತ ಮುಖ್ಯಮಂತ್ರಿ
ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್, ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಖುದ್ದಾಗಿ ಭೇಟಿಯಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ರಾಜಕೀಯ ವೈರತ್ವ ಮರೆತು ದೇವೇಗೌಡರ ಕಾಲಿಗೆ ನಮಸ್ಕರಿಸಿ ಡಿಕೆಶಿ ಆಶೀರ್ವಾದ ಪಡೆದಿರುವುದು ಗಮನ ಸೆಳೆದಿದೆ.
- Prasanna Hegde
- Updated on: Jun 3, 2026
- 2:30 pm
DK Shivakumar Oath Taking Highlights: ಡಿಕೆ ಶಿವಕುಮಾರ್ ಯುಗಾರಂಭ: ಇಂದಿನ ಪದಗ್ರಹಣದ ಬೆಳವಣಿಗೆಗಳ ಹೈಲೈಟ್ಸ್
ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮ Highlights: ಸಿದ್ದರಾಮಯ್ಯ ರಾಜೀನಾಮೆ ನಂತರ ಕರ್ನಾಟಕದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. 4 ಗಂಟೆ 05 ನಿಮಿಷಕ್ಕೆ ಲೋಕಭವನದಲ್ಲಿ ಪದಗ್ರಹಣ ನೆರವೇರಿತು. ಡಿಕೆ ಶಿವಕುಮಾರ್ ಜೊತೆಗೆ 13 ಜನರು ಸಚಿವ ಸ್ಥಾನವನ್ನು ಅಲಂಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಸೇರಿದಂತೆ ದೇಶದ ಪ್ರಮುಖ ಗಣ್ಯರು ಹಾಗೂ ಸರ್ವಧರ್ಮದ 55 ಧರ್ಮಗುರುಗಳು ಭಾಗಿಯಾಗಿದ್ದರು.
- Bhavana Hegde
- Updated on: Jun 3, 2026
- 11:05 pm
ಪದತ್ಯಾಗಕ್ಕೆ ಬಂಪರ್ ಗಿಫ್ಟ್: ಸಿದ್ದರಾಮಯ್ಯಗೆ ಮಹತ್ವದ ಸ್ಥಾನಮಾನ ನೀಡಿದ ಹೈಕಮಾಂಡ್
ಯಾವುದೇ ತಂಟೆ ತಗಾದೆ ತೆಗೆಯದೇ ಒಂದೇ ಮಾತಿಗೆ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟು ಕೊಟ್ಟ ಸಿದ್ದರಾಮಯ್ಯನವಿರಗೆ ಹೈಕಮಾಂಡ್ ಮಹತ್ವದ ಹುದ್ದೆ ನೀಡಿದೆ. ರಾಜ್ಯಸಭೆ ಆಫರ್ ನಿರಾಕರಿಸಿದ್ದ ಸಿದ್ದರಾಮಯ್ಯನವರಿಗೆ ಎಐಸಿಸಿಯಲ್ಲಿ ಸ್ಥಾನಮಾನ ನೀಡಲಾಗಿದೆ. ಡಿಕೆ ಶಿವಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ಮುನ್ನವೆ ಸಿದ್ದರಾಮಯ್ಯನವರಿಗೆ ಮಹತ್ವದ ಹುದ್ದೆ ನೀಡಿ ಎಐಸಿಸಿ ಆದೇಶ ಹೊರಡಿಸಿದೆ. ಏನಿದು ಹುದ್ದೆ? ಎಷ್ಟು ಮಹತ್ವ ಹೊಂದಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.
- Harish GR
- Updated on: Jun 2, 2026
- 10:59 pm
ಡಿಕೆ ಶಿವಕುಮಾರ್ ಸಂಪುಟಕ್ಕೆ ಹೈಕಮಾಂಡ್‌ನಿಂದ ‘ಏಜ್ ಬೇಸ್ಡ್ ಫಾರ್ಮುಲಾ’: ಸಚಿವಾಕಾಂಕ್ಷಿಗಳಲ್ಲಿ ಢವಢವ
ಡಿಕೆ ಶಿವಕುಮಾರ್ ನೂತನ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ‘ವಯೋಮಿತಿ ಸೂತ್ರ’ ಪ್ರಕಟಿಸಿದ್ದು, 40 ವರ್ಷದೊಳಗಿನವರಿಗೆ 10 ಸ್ಥಾನ ಹಾಗೂ ಹಿರಿಯರಿಗೆ 20 ಸ್ಥಾನಗಳನ್ನು ಹಂಚಿಕೆ ಮಾಡಲು ಮುಂದಾಗಿದೆ. ಹೈಕಮಾಂಡ್ನ ಈ ‘ಏಜ್ ಬೇಸ್ಡ್ ಫಾರ್ಮುಲಾ’ ಈಗ ಸಚಿವಾಕಾಂಕ್ಷಿಗಳಲ್ಲಿ ಆತಂಕ ಮೂಡಿಸಿದೆ.
- Harish GR
- Updated on: Jun 2, 2026
- 1:00 pm
ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ! ಉಭಯ ಕುಶಲೋಪರಿ
ನೂತನ ಸಚಿವ ಸಂಪುಟ ರಚನೆಯ ವಿಚಾರವಾಗಿ ಹೈಕಮಾಂಡ್ ಜತೆ ಸಭೆಗಾಗಿ ದೆಹಲಿಯಲ್ಲಿರುವ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಐಟಿಸಿ ಮೌರ್ಯ ಹೋಟೆಲ್ ಬಳಿ ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಆಕಸ್ಮಿಕವಾಗಿ ಭೇಟಿಯಾದರು. ಇದೇ ವೇಳೆ, ಉಭಯ ನಾಯಕರು ಆತ್ಮೀಯವಾಗಿ ಸೌಜನ್ಯದ ಮಾತುಕತೆ ನಡೆಸಿದ್ದಾರೆ.
- Ganapathi Sharma
- Updated on: Jun 2, 2026
- 12:38 pm
ಸಚಿವ ಸಂಪುಟ ರಚನೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು: ವರಿಷ್ಠರಿಗೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿ!
ಕರ್ನಾಟಕ ಸಚಿವ ಸಂಪುಟ ರಚನೆ ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಪ್ರತ್ಯೇಕ ಪಟ್ಟಿಗಳನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದು, ದೆಹಲಿಯಲ್ಲಿ ಮ್ಯಾರಥಾನ್ ಸಭೆಗಳು ನಡೆದಿವೆ. ಜಾತಿ ಸಮೀಕರಣ, ಹಿರಿಯರಿಗೆ ಹಾಗೂ ಹೊಸಬರಿಗೆ ಅವಕಾಶ ಕಲ್ಪಿಸುವ ಬಗ್ಗೆ ಹೈಕಮಾಂಡ್ ತೀವ್ರ ಚಿಂತನೆ ನಡೆಸಿದೆ. ಮೊದಲ ಹಂತದ ಪಟ್ಟಿ ಇಂದೇ ಅಂತಿಮವಾಗುವ ಸಾಧ್ಯತೆ ಇದೆ.
- Prasanna Gaonkar
- Updated on: Jun 2, 2026
- 11:56 am
‘ಎಷ್ಟು ಬಾರಿ ಅಂತ ತುಳಿಸಿಕೊಳ್ಳಬೇಕು?’ ಸಿಎಂ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಿ ಪರಮೇಶ್ವರ್ ಮಾರ್ಮಿಕ ವಿಡಿಯೋ ವೈರಲ್
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ, ಹಿರಿಯ ದಲಿತ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಬೇಸತ್ತಿರುವ ಅಭಿಮಾನಿಗಳು, ‘ಎಷ್ಟು ಬಾರಿ ಅಂತ ತುಳಿಸಿಕೊಳ್ಳಬೇಕು? ನನಗೂ 3 ಬಾರಿ ಸಿಎಂ ಸ್ಥಾನ ತಪ್ಪಿತು’ ಎಂದು ಪರಮೇಶ್ವರ್ ಮಾತನಾಡಿದ್ದ ಹಳೇ ವಿಡಿಯೋವನ್ನು ವೈರಲ್ ಮಾಡಿ ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ.
- Ganapathi Sharma
- Updated on: Jun 2, 2026
- 9:07 am
ಡಿಕೆ ಶಿವಕುಮಾರ್ ಸಂಪುಟ ಸೇರಲು ಆಕಾಂಕ್ಷಿಗಳ ಭರ್ಜರಿ ಲಾಬಿ, ದೆಹಲಿ ದಂಡಯಾತ್ರೆ: ಸ್ಪೀಕರ್ ಆಗಲು ನಾಯಕರ ಹಿಂದೇಟು
ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಸರ್ಕಸ್ ಜೋರಾಗಿದೆ. ಸಚಿವ ಸ್ಥಾನಕ್ಕಾಗಿ ಶಾಸಕರು ದೆಹಲಿಗೆ ಲಗ್ಗೆ ಇಟ್ಟಿದ್ದರೆ, ಇತ್ತ ಸಿದ್ದರಾಮಯ್ಯ ಆಪ್ತ ನಾಯಕರಿಗಾಗಿ 3 ಡಿಸಿಎಂ ಹುದ್ದೆಗಳ ಸೃಷ್ಟಿಗೆ ಹೈಕಮಾಂಡ್ ಮುಂದೆ ಪಟ್ಟು ಹಿಡಿದಿದ್ದಾರೆ.
- Prasanna Gaonkar
- Updated on: Jun 2, 2026
- 6:56 am