Sonia Gandhi
ರಾಜಕಾರಣಿ ಮತ್ತು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ. ಡಿಸೆಂಬರ್ 9, 1946 ರಂದು ಜನನ. ಇಟಲಿಯಲ್ಲಿ ಜನಿಸಿದ ಅವರು ಪ್ರಧಾನಿ ಇಂದಿರಾ ಗಾಂಧಿಯವರ ಮಗ ರಾಜೀವ್ ಗಾಂಧಿ ಅವರನ್ನು ವಿವಾಹವಾದರು ಮತ್ತು ಭಾರತದ ರಾಜಕೀಯದ ಅವಿಭಾಜ್ಯ ಅಂಗವಾದರು. ಪತಿಯ ದುರಂತ ಹತ್ಯೆಯ ನಂತರ ಸೋನಿಯಾ ಗಾಂಧಿ ಆರಂಭದಲ್ಲಿ ರಾಜಕೀಯದಿಂದ ದೂರವೇ ಉಳಿದಿದ್ದರು. ಆದಾಗ್ಯೂ, ಅವರು 1997 ರಲ್ಲಿ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದರು ಮತ್ತು 1998 ರಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತವನ್ನು ವಹಿಸಿಕೊಂಡರು. ಅವರ ವಿದೇಶಿ ಮೂಲದ ಕಾರಣದಿಂದಾಗಿ ಆರಂಭಿಕ ಟೀಕೆಗಳ ಹೊರತಾಗಿಯೂ, 2004 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಗೆಲುವಿನತ್ತ ಮುನ್ನಡೆಸುವಲ್ಲಿ ಸೋನಿಯಾ ಗಾಂಧಿ ಪ್ರಮುಖ ಪಾತ್ರ ವಹಿಸಿದರು.ಪ್ರಧಾನಿ ಸ್ಥಾನವನ್ನು ನಿರಾಕರಿಸಿದ ಅವರು ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಸೋನಿಯಾ ಗಾಂಧಿ ಅವರು ಭಾರತದ ರಾಜಕೀಯದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. ಕಾಂಗ್ರೆಸ್‌ನ ರಾಜಕೀಯ ಕಾರ್ಯತಂತ್ರಕ್ಕೆ ಕೊಡುಗೆ ನೀಡಿರುವ ಸೋನಿಯಾ ವಿವಿಧ ರಾಷ್ಟ್ರೀಯ ವಿಷಯಗಳ ಬಗ್ಗೆ ಪಕ್ಷದ ನಿಲುವನ್ನು ರೂಪಿಸಿದ್ದಾರೆ.
ಕೇರಳ, ತಮಿಳುನಾಡು ಮಾದರಿ: ಡಿಕೆಶಿ ಸಂಪುಟದಲ್ಲಿ 3-4 ಯುವ ಮುಖಗಳಿಗೆ ಮಣೆ ಸಾಧ್ಯತೆ
ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆ ಬದಲಾವಣೆಯ ಕಸರತ್ತು ಜೋರಾಗಿದ್ದು, ಸಿಎಂ ಡಿಕೆ ಶಿವಕುಮಾರ್ ಹಾಗೂ ಡಿಸಿಎಂ ಡಾ. ಜಿ ಪರಮೇಶ್ವರ್ ದೆಹಲಿ ತಲುಪಿದ್ದಾರೆ. ಭರತ್ ರೆಡ್ಡಿ, ಪ್ರದೀಪ್ ಈಶ್ವರ್ ಸೇರಿದಂತೆ ಯುವ ಮುಖಗಳಿಗೆ ಮಣೆ ಹಾಕುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಕೇರಳ, ತಮಿಳುನಾಡು ರೀತಿ ಹೊಸ ಹಾಗೂ ಯುವ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ದಟ್ಟವಾಗಿದೆ.
- Prasanna Gaonkar
- Updated on: Jun 11, 2026
- 7:12 am
ಕಾಂಗ್ರೆಸ್ ಜೊತೆ ವಿಲೀನವಾಗುತ್ತಾ ಟಿಎಂಸಿ? ಮಮತಾ ಬ್ಯಾನರ್ಜಿಗೆ ದೊಡ್ಡ ಹುದ್ದೆಯ ಆಫರ್
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷದಲ್ಲಿ ಭುಗಿಲೆದ್ದ ಭಿನ್ನಮತದ ಹಿನ್ನೆಲೆಯಲ್ಲಿ ಟಿಎಂಸಿ ಸಂಸದರು ಮತ್ತು ನಾಯಕರು ಸಾಲು ಸಾಲು ರಾಜೀನಾಮೆ ನೀಡುತ್ತಿದ್ದಾರೆ. ಇದರ ಬೆನ್ನಲ್ಲೇ ಟಿಎಂಸಿ ಕಾಂಗ್ರೆಸ್ ಜೊತೆ ವಿಲೀನವಾಗಲಿದೆ ಎಂಬ ಸುದ್ದಿಗಳೂ ಹರಿದಾಡುತ್ತಿವೆ. ಮಮತಾ ಬ್ಯಾನರ್ಜಿ 2 ದಿನಗಳಿಂದ ಕಾಂಗ್ರೆಸ್ ನಾಯಕರೊಂದಿಗೆ ಸಾಲು ಸಾಲು ಮಾತುಕತೆ ನಡೆಸುತ್ತಿರುವುದು ಈ ವದಂತಿಗೆ ಇನ್ನಷ್ಟು ಪುಷ್ಠಿ ನೀಡಿದೆ. ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಜೊತೆ ಟಿಎಂಸಿ ವಿಲೀನವಾಗುತ್ತಾ? ಎಂಬ ಕುತೂಹಲ ಮೂಡಿದೆ.
- Sushma Chakre
- Updated on: Jun 10, 2026
- 5:27 pm
ಟಿಎಂಸಿ ಬಿಕ್ಕಟ್ಟಿನ ನಡುವೆ ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ
ವಿರೋಧ ಪಕ್ಷಗಳ 'ಇಂಡಿಯ' ಒಕ್ಕೂಟದ ಸಭೆಯು ಮೈತ್ರಿಕೂಟದ ಪಾಲುದಾರರ ನಡುವೆ ಒಗ್ಗಟ್ಟು ಮತ್ತು ಉತ್ತಮ ಸಮನ್ವಯಕ್ಕೆ ಒತ್ತು ನೀಡಿದ ಒಂದು ದಿನದ ಬಳಿಕ ಇಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಇತ್ತೀಚಿನ ಬಂಗಾಳ ಚುನಾವಣೆಯಲ್ಲಿ ಬಿಜೆಪಿಗೆ ತೃಣಮೂಲ ಕಾಂಗ್ರೆಸ್ ಸೋತ ನಂತರ ಪಕ್ಷದಲ್ಲಿ ಉಂಟಾಗಿರುವ ಸದಸ್ಯರ ವಲಸೆ ಮತ್ತು ಒಕ್ಕೂಟದ ಸಭೆಯ ಮುಂದಿನ ಕಾರ್ಯತಂತ್ರಗಳ ಕುರಿತು ಉಭಯ ನಾಯಕಿಯರು ಚರ್ಚಿಸಿದ್ದಾರೆ ಎಂದು ಪಿಟಿಐ ಮೂಲಗಳು ತಿಳಿಸಿವೆ.
- Sushma Chakre
- Updated on: Jun 9, 2026
- 5:36 pm
ಕೇರಳ ಸಿಎಂ ಆಯ್ಕೆಯ ಕಗ್ಗಂಟು ಬಿಡಿಸಿದ ಸೋನಿಯಾ-ಆಂಟನಿ ‘ಮಾಸ್ಟರ್ ಪ್ಲಾನ್’! ರಟ್ಟಾಯ್ತು ವಿಡಿ ಸತೀಶನ್ ಆಯ್ಕೆ ಹಿಂದಿನ ಗುಟ್ಟು
ಕೇಂದ್ರ ಸಚಿವರಾಗಿ, ಮೂರು ಬಾರಿ ಕೇರಳದ ಮುಖ್ಯಮಂತ್ರಿಯಾಗಿ ಹಾಗೂ ಕಾಂಗ್ರೆಸ್ ಹೈಕಮಾಂಡ್‌ಗೆ, ಅದರಲ್ಲೂ ಗಾಂಧಿ ಕುಟುಂಬಕ್ಕೆ ನಿಷ್ಠರಾಗಿ ಇರುವವರು ಎಕೆ ಆಂಟನಿ. ಇದೀಗ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಮತ್ತೆ ಪಕ್ಷವನ್ನು ಬಚಾವ್ ಮಾಡಿದ್ದಾರೆ! ಕೇರಳ ಸಿಎಂ ಆಯ್ಕೆ ಕಗ್ಗಂಟು ಬಿಡಿಸಲು ಸೋನಿಯಾ ಗಾಂಧಿಗೆ ಅವರೇ ನೆರವಾಗಿದ್ದಾರೆ. ಆಂಟನಿ ನೀಡಿದ ಸಲಹೆಯೇ ಕೇರಳ ಸಿಎಂ ಆಯ್ಕೆ ಕಗ್ಗಂಟು ಬಗೆಹರಿಸಿತು ಎಂಬ ಅಚ್ಚರಿಯ ಮಾಹಿತಿ ಉನ್ನತ ಮೂಲಗಳಿಂದ ತಿಳಿದುಬಂದಿದೆ.
- Ganapathi Sharma
- Updated on: May 15, 2026
- 12:54 pm
Sonia Gandhi Hospitalised: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು
Sonia Gandhi admitted to Hospital: ಕಾಂಗ್ರೆಸ್ ವರಿಷ್ಠೆ, ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಗುರುವಾರ ಗುರುಗಾಂವ್‌ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿಯಮಿತ ತಪಾಸಣೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿರುವುದಾಗಿ ಮೂಲಗಳಿಂದ ಮಾಹಿತಿ ದೊರೆತಿದೆ. ಆದರೆ, ಆಸ್ಪತ್ರೆಯಿಂದ ಅಧಿಕೃತ ಪ್ರಕಟಣೆ ಇನ್ನಷ್ಟೇ ಪ್ರಕಟವಾಗಬೇಕಿದೆ.
- Ganapathi Sharma
- Updated on: May 13, 2026
- 12:49 pm
ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ? ಬಿಗ್ ಅಪ್ಡೇಟ್ ಕೊಟ್ಟ ರಾಬರ್ಟ್ ವಾದ್ರಾ
ಬೆಂಗಳೂರಿಗೆ ಆಗ್ರಹಿಸಿರುವ ರಾಬರ್ಟ್ ವಾದ್ರಾ ಇಸ್ಕಾನ್ ದೇವಸ್ಥಾನ, ಮಸೀದಿ ಮತ್ತು ಮಿಷನರೀಸ್ ಆಫ್ ಚಾರಿಟಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದ ಜನರು ಪ್ರೀತಿ ತೋರಿಸಿದ್ದು, ಬೆಂಗಳೂರು ಎರಡನೇ ಮನೆಯಂತಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಒಟ್ಟಾಗಿ ಜನರ ಪ್ರಗತಿಗೆ ಶ್ರಮಿಸುತ್ತಿದ್ದು, ನಾಯಕತ್ವ ಬದಲಾವಣೆಯ ಯಾವುದೇ ಸಾಧ್ಯತೆಯ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ತಿಳಿಸಿದ್ದಾರೆ.
- Malatesh Jaggin
- Updated on: Feb 27, 2026
- 6:45 pm
ಇಡೀ ನೆಹರು-ಗಾಂಧಿ ಕುಟುಂಬವೇ ದೇಶದ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದೆ; ಪಿಯೂಷ್ ಗೋಯಲ್ ಆರೋಪ
ಅಮೆರಿಕದ ಜೊತೆಗಿನ ವ್ಯಾಪಾರ ಒಪ್ಪಂದದ ನಂತರ "ಪ್ರಧಾನಿ ನರೇಂದ್ರ ಮೋದಿ ದೇಶದ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಂಡಿದ್ದಾರೆ" ಎಂದು ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಪದೇಪದೆ ಆರೋಪ ಮಾಡುತ್ತಲೇ ಇದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರು ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದರು. ಇದೀಗ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸುದ್ದಿಗೋಷ್ಠಿ ಮಾಡುವ ಮೂಲಕ ಕಾಂಗ್ರೆಸ್ ನಾಯಕರ ಹಾಗೂ ಯುಪಿಎ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
- Sushma Chakre
- Updated on: Feb 25, 2026
- 5:03 pm
ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ
ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮಂಡಿಸಿದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಿಗೆ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB-G RAM G) ಮಸೂದೆಯನ್ನು ಸಂಸತ್ತು ಅಂಗೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿ ಸರ್ಕಾರವು ನರೇಗಾ ಮೇಲೆ ಬುಲ್ಡೋಜರ್ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
- Sushma Chakre
- Updated on: Dec 20, 2025
- 7:52 pm
ಬಹಿರಂಗವಾಗಿ ಕ್ಷಮೆ ಕೇಳಿ; ರ‍್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ ಕೂಗಿದ ಕಾಂಗ್ರೆಸ್ ವಿರುದ್ಧ ಕಿರಣ್ ರಿಜಿಜು ಆಕ್ರೋಶ
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಿವಾದಾತ್ಮಕ ಘೋಷಣೆಗಳನ್ನು ಕೂಗಲಾಗಿತ್ತು. ಮೋದಿ ಸಮಾಧಿ ಅಗೆಯಬೇಕು ಎಂಬೆಲ್ಲ ಘೋಷಣೆಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಕೂಗಿದ್ದರು. ಹೀಗಾಗಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಯಾಚಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.
- Sushma Chakre
- Updated on: Dec 15, 2025
- 4:45 pm
ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ; ಅಮಿತ್ ಶಾ ವಾಗ್ದಾಳಿ
ಲೋಕಸಭಾ ಅಧಿವೇಶನದಲ್ಲಿ ಮತ್ತೊಮ್ಮೆ ಎಸ್ಐಆರ್ ಕುರಿತು ಚರ್ಚೆ ಭುಗಿಲೆದ್ದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಗೃಹ ಸಚಿವ ಅಮಿತ್ ಶಾ ನಡುವೆ ಈ ಚರ್ಚೆ ಕಾವೇರಿದ್ದು, ಈ ವೇಳೆ ಅಮಿತ್ ಶಾ ಕಾಂಗ್ರೆಸ್ ನಾಯಕರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದಾರೆ. ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಗೂ ಮತಗಳ್ಳತನಕ್ಕೂ ನಂಟಿದೆ ಎಂದು ಅವರು ಹೇಳಿದ್ದಾರೆ. ಇದರಿಂದ ಇಬ್ಬರೂ ನಾಯಕರ ನಡುವೆ ತೀವ್ರ ಚರ್ಚೆ ಏರ್ಪಟ್ಟಿತು.
- Sushma Chakre
- Updated on: Dec 10, 2025
- 7:16 pm
ಡಿಕೆಶಿ ಬುಡಕ್ಕೆ ಮತ್ತೆ ನ್ಯಾಷನಲ್ ಹೆರಾಲ್ಡ್ ಕೇಸ್: ದೆಹಲಿಯಿಂದ ಬಂತು ನೋಟಿಸ್
ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ಈಗಾಗಲೇ ಈ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಹಲವಾರು ಪ್ರಮುಖ ವ್ಯಕ್ತಿಗಳ ವಿರುದ್ಧ ಹೊಸ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತೆ ಕೆಪಿಸಿಸಿ ಅಧ್ಯಕ್ಷ, ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಡಕ್ಕೂ ಬಂದಿದೆ.
- Harish GR
- Updated on: Dec 5, 2025
- 9:38 pm
ಗುಂಪುಗಾರಿಕೆ ಇಲ್ಲ ಎನ್ನುತ್ತಲೇ ಗೇಮ್ ಪ್ಲ್ಯಾನ್: ಕರ್ನಾಟಕ ಕಾಂಗ್ರೆಸ್ ಬಗ್ಗೆ ದೆಹಲೀಲಿ ಸೋನಿಯಾ, ರಾಹುಲ್ ಚರ್ಚೆ?
ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವಿನ ‘ಕೊಟ್ಟ ಮಾತು’ ಕುರಿತ ವಿವಾದ ತೀವ್ರಗೊಂಡಿದೆ. ಹೈಕಮಾಂಡ್‌ಗೆ ಬಿಸಿತುಪ್ಪವಾಗಿರುವ ಈ ಚರ್ಚೆ, 2023ರ ಸಿಎಂ ಆಯ್ಕೆ ವೇಳೆ ನಡೆದ ಒಪ್ಪಂದದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಬಗ್ಗೆ ದೆಹಲಿಯಲ್ಲಿ ಸೋನಿಯಾ, ರಾಹುಲ್ ಗಾಂಧಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
- Prasanna Gaonkar
- Updated on: Dec 2, 2025
- 11:12 am