AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudha Yadav

Sudha Yadav

ಡಾ. ಸುಧಾ ಯಾದವ್ ಬಿಜೆಪಿಯ ಹಿರಿಯ ಮಹಿಳಾ ನಾಯಕಿ ಹಾಗೂ ಮಾಜಿ ಸಂಸದೆ. ಇವರು ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲರಾಗಿದ್ದಾರೆ. ಹರಿಯಾಣದ ರೇವಾರಿ ಜಿಲ್ಲೆಯ ಮೊಟ್ಲಾ ಕಲನ್ ಗ್ರಾಮದಲ್ಲಿ 1965ರ ಅಕ್ಟೋಬರ್​​ 16ರಂದು ಸುಧಾ ಯಾದವ್​​​​ ಜನಿಸಿರುತ್ತಾರೆ. ಇವರು ಐಐಟಿ ರೂರ್ಕಿಯಿಂದ ಎಂಎಸ್ಸಿ ಪದವಿ ಪಡೆದಿದ್ದು, ರಸಾಯನಶಾಸ್ತ್ರದಲ್ಲಿ ಪಿಎಚ್‌ಡಿ ಕೂಡ ಪಡೆದಿದ್ದಾರೆ. ಸುಧಾ ಯಾದವ್ ಅವರ ಪತಿ ಸುಖಬೀರ್ ಸಿಂಗ್ ಯಾದವ್ ಅವರು ಬಿಎಸ್‌ಎಫ್​ಯಲ್ಲಿ ಡೆಪ್ಯುಟಿ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸಿದ್ದರು. 1999ರ ಕಾರ್ಗಿಲ್ ಯುದ್ಧದಲ್ಲಿ ಅವರು ಹುತಾತ್ಮರಾದರು. ಪತಿಯ ನಿಧನದ ಬಳಿಕ ಸುಧಾ ಯಾದವ್ ಸಾರ್ವಜನಿಕ ಜೀವನದಲ್ಲಿ ಗುರುತಿಸಿಕೊಂಡಿದ್ದು, ಆ ಬಳಿಕ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಸ್ಥಾನವನ್ನು ಗಳಿಸಿದರು. ಸುಧಾ ಯಾದವ್ ಅವರು ಭಾರತೀಯ ಜನತಾ ಪಕ್ಷದ ಹಿರಿಯ ಮಹಿಳಾ ನಾಯಕಿಯಾಗಿದ್ದು, ಮಾಜಿ ಲೋಕಸಭಾ ಸಂಸದರಾಗಿದ್ದಾರೆ. ಅವರು 1994ರಿಂದ 2004ರವರೆಗೆ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಇವರು, ತಮ್ಮ ಮೊದಲ ಚುನಾವಣೆಯಲ್ಲೇ ಗಮನಾರ್ಹ ಗೆಲುವು ಸಾಧಿಸಿದ್ದರು. 1999ರ ಚುನಾವಣೆಯಲ್ಲಿ ಹರಿಯಾಣದ ಕಾಂಗ್ರೆಸ್ ನಾಯಕ ರಾವ್ ಇಂದ್ರಜಿತ್ ಸಿಂಗ್ ಅವರನ್ನು ಸೋಲಿಸಿದ್ದರು. ಸುಧಾ ಯಾದವ್ ಅವರು ಪ್ರಸ್ತುತ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿದ್ದಾರೆ. ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರ ನಿಧನದ ಬಳಿಕ ಪಕ್ಷದ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದ ಏಕೈಕ ಮಹಿಳಾ ನಾಯಕಿ ಎಂಬ ಹೆಗ್ಗಳಿಕೆ ಇವರಿಗಿದೆ. 2015ರಲ್ಲಿ ಅವರನ್ನು ಬಿಜೆಪಿ ಒಬಿಸಿ ಮೋರ್ಚಾದ ಪ್ರಭಾರಿಯಾಗಿ ನೇಮಕ ಮಾಡಲಾಗಿತ್ತು. 2022ರ ಆಗಸ್ಟ್‌ನಲ್ಲಿ ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿಗೂ ಅವರನ್ನು ನೇಮಕ ಮಾಡಲಾಗಿತ್ತು.

ಇನ್ನೂ ಹೆಚ್ಚು ಓದಿ
Follow us:

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣ ವಚನ ಎಲ್ಲಿ, ಯಾವಾಗ, ಯಾರು ಬೋಧಿಸ್ತಾರೆ?

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರ ನೇಮಕ ಮಾಡಲಾಗಿದೆ.ಹೀಗಾಗಿ ಸುಮಾರು ಐದು ವರ್ಷಗಳ ಕಾಲ ಕರ್ನಾಟಕದ ರಾಜ್ಯಪಾಲರಾಗಿದ್ದ ಥಾವರ್ ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, ನಿನ್ನೆ (ಅಕ್ಟೋಬರ್ 14) ಲೋಕಭವನದಿಂದ ಅವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಲಾಯ್ತು. ಇನ್ನು ಕರ್ನಾಟಕದ ನೂತನ ರಾಜ್ಯಪಾಲರಾಗಿರುವ ಸುಧಾ ಯಾದವ್ ಅವರ ಪ್ರಮಾಣ ವಚನ ಕಾರ್ಯಕ್ರಮ ನಾಳೆ(ಅ.15) ನಿಗದಿಯಾಗಿದೆ. ಹಾಗಾದ್ರೆ, ಪ್ರಮಾಣವಚನ ಕಾರ್ಯಕ್ರಮ ಎಲ್ಲಿ ನಡೆಯಲಿದೆ? ಯಾರು ಬೋಧಿಸಲಿದ್ದಾರೆ ಎನ್ನುವ ವಿವರ ಇಲ್ಲಿದೆ.

ಕಾರ್ಗಿಲ್​​ ಯುದ್ಧದಲ್ಲಿ ಹುತಾತ್ಮ ಡೆಪ್ಯುಟಿ ಕಮಾಂಡೆಂಟ್ ಪತ್ನಿ ಕರ್ನಾಟಕದ ರಾಜ್ಯಪಾಲೆ: ಸುಧಾ ಯಾದವ್ ವ್ಯಕ್ತಿಚಿತ್ರ

Dr. Sudha Yadav Profile: ಬರೋಬ್ಬರಿ ಐದು ವರ್ಷಗಳ ಬಳಿಕ ಕರ್ನಾಟಕದ ರಾಜ್ಯಪಾಲರನ್ನು ಬದಲಾವಣೆ ಮಾಡಲಾಗಿದೆ. 2021ರಲ್ಲಿ ಕರ್ನಾಟಕದ ರಾಜ್ಯಪಾಲರಾಗಿದ್ದ ಥಾವರ್ ಚಂದ್ ಗೆಹ್ಲೋಟ್ ಅವರ ಸ್ಥಾನಕ್ಕೆ ಡಾ. ಸುಧಾ ಯಾದವ್ ಅವರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಇನ್ನು ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲ ಎನಿಸಿಕೊಂಡ ಸುಧಾ ಯಾದವ್ ಯಾರು? ಎಲ್ಲಿಯವರು? ಎನ್ನುವ ಅವರ ವ್ಯಕ್ತಿಚಿತ್ರ ಇಲ್ಲಿದೆ.

6 ರಾಜ್ಯಗಳಿಗೆ ಹೊಸ ರಾಜ್ಯಪಾಲರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ನೇಮಕ

ಕರ್ನಾಟಕ ಸೇರಿ ವಿವಿಧ 6 ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ, ಉತ್ತರಾಖಂಡ,ಸಿಕ್ಕಿಂ,ಕೇರಳ, ಒಡಿಶಾ ಹಾಗೂ ತಮಿಳುನಾಡಿಗೆ ಹೊಸ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ಕರ್ನಾಟಕದ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹ್ಲೋಟ್ ಅವರ ಅಧಿಕಾರ ಅಂತ್ಯವಾಗಿದ್ದು, ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಅವರನ್ನ ನೇಮಕ ಮಾಡಲಾಗಿದೆ.