Supreme Court

Supreme Court

ನವದೆಹಲಿಯಲ್ಲಿ ನೆಲೆಗೊಂಡಿರುವ ಭಾರತದ ಸರ್ವೋಚ್ಚ ನ್ಯಾಯಾಲಯವು ದೇಶದ ಅತ್ಯುನ್ನತ ನ್ಯಾಯಾಂಗ ವ್ಯವಸ್ಥೆಯಾಗಿದೆ. ಇದನ್ನು ಜನವರಿ 28, 1950 ರಂದು ಸ್ಥಾಪಿಸಲಾಯಿತು, ಇದು ಮೇಲ್ಮನವಿಯ ಅಂತಿಮ ನ್ಯಾಯಾಲಯವಾಗಿ ಮತ್ತು ಸಂವಿಧಾನದ ಖಾತರಿಗಾರನಾಗಿ ಕಾರ್ಯನಿರ್ವಹಿಸುತ್ತದೆ. ನ್ಯಾಯಾಲಯವು ಭಾರತದ ಮುಖ್ಯ ನ್ಯಾಯಾಧೀಶರ ನೇತೃತ್ವದಲ್ಲಿದೆ ಮತ್ತು ಗರಿಷ್ಠ 34 ನ್ಯಾಯಾಧೀಶರನ್ನು ಒಳಗೊಂಡಿದೆ. ಸಂವಿಧಾನವನ್ನು ವ್ಯಾಖ್ಯಾನಿಸುವಲ್ಲಿ, ನ್ಯಾಯಾಂಗ ಪರಿಶೀಲನೆಯನ್ನು ಖಾತ್ರಿಪಡಿಸುವಲ್ಲಿ ಮತ್ತು ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ ಸುಪ್ರೀಂ ಕೋರ್ಟ್ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಇದು ಮೇಲ್ಮನವಿಗಳು, ರಿಟ್ ಅರ್ಜಿಗಳು ಮತ್ತು ವಿಶೇಷ ರಜೆ ಅರ್ಜಿಗಳನ್ನು ಆಲಿಸುತ್ತದೆ. ಅದರ ನಿರ್ಧಾರಗಳು ದೇಶದ ಇತರ ಎಲ್ಲಾ ನ್ಯಾಯಾಲಯಗಳಿಗೆ ಬದ್ಧವಾಗಿರುತ್ತವೆ. ನ್ಯಾಯಾಲಯವು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ನಡುವಿನ ಅಥವಾ ರಾಜ್ಯಗಳ ನಡುವಿನ ವಿವಾದಗಳನ್ನು ಸಹ ನಿರ್ಣಯಿಸುತ್ತದೆ.ಸುಪ್ರೀಂ ಕೋರ್ಟ್ ನ್ಯಾಯದ ಸ್ತಂಭವಾಗಿ ನಿಂತಿದ್ದು, ಕಾನೂನಿನ ನಿಯಮವನ್ನು ಎತ್ತಿಹಿಡಿಯುತ್ತದೆ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುತ್ತದೆ.

ಇನ್ನೂ ಹೆಚ್ಚು ಓದಿ

ತಿರುಪತಿ ಲಡ್ಡು ವಿವಾದ; ಸುಪ್ರೀಂ ಕೋರ್ಟ್ ವಿಚಾರಣೆ ನಾಳೆಗೆ ಮುಂದೂಡಿಕೆ

ತಿರುಪತಿ ದೇಗುಲದ ಲಡ್ಡು ವಿವಾದಕ್ಕೆ ಸಂಬಂಧಿಸಿದಂತೆ ಕಳೆದ ವಿಚಾರಣೆ ವೇಳೆ ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ತನಿಖೆಯನ್ನು ಈ ವಿಷಯದಲ್ಲಿ ಮುಂದುವರಿಸಬೇಕೆ ಅಥವಾ ಸ್ವತಂತ್ರ ಸಂಸ್ಥೆಗೆ ತನಿಖೆಯ ಜವಾಬ್ದಾರಿಯನ್ನು ವಹಿಸಬೇಕೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ನ್ಯಾಯಾಲಯ ಕೇಳಿತ್ತು.

ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್: ಪೂರ್ವಾನುಮತಿ ಇಲ್ಲದೆ ಬಳ್ಳಾರಿ ಪ್ರವೇಶಕ್ಕೆ ಅನುಮತಿ

ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಕೊನೆಗೂ ರಿಲೀಫ್ ದೊರೆತಿದೆ. ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಇದರೊಂದಿಗೆ ರೆಡ್ಡಿ ಬಳ್ಳಾರಿ ಎಂಟ್ರಿ ನಿರಾಳವಾಗಿದೆ. ರೆಡ್ಡಿ ಕುರಿತು ಸುಪ್ರೀಂ ಕೋರ್ಟ್ ನೀಡಿದ ಆದೇಶದ ಮಾಹಿತಿ ಇಲ್ಲಿದೆ.

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರಿಂದ ‘ಪಾಕಿಸ್ತಾನ ಹೋಲಿಕೆ’ ಆರೋಪ: ವರದಿ ಕೇಳಿದ ಸುಪ್ರೀಂ ಕೋರ್ಟ್

ಕರ್ನಾಟಕ ಹೈಕೋರ್ಟ್​ನ ಜಡ್ಜ್​​​ವೊಬ್ಬರು ಬೆಂಗಳೂರಿನ ನಿರ್ದಿಷ್ಟ ಪ್ರದೇಶವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿ ಮಾತನಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್​ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ಕೈಗೆತ್ತಿಕೊಂಡಿದೆ. ಹೈಕೋರ್ಟ್​ ಜಡ್ಜ್ ವಿರುದ್ಧದ ಆರೋಪ ಸಂಬಂಧ ಹೈಕೋರ್ಟ್ ರಿಜಿಸ್ಟ್ರಾರ್​​​ರಿಂದ ವರದಿ ಕೇಳಿದೆ.

ದೇಶಾದ್ಯಂತ ಬುಲ್ಡೋಜರ್​​ ಕಾರ್ಯಾಚರಣೆಗೆ ತಡೆ; ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಅಕ್ಟೋಬರ್ 1ರವರೆಗೆ ಭಾರತದಾದ್ಯಂತ ಬುಲ್ಡೋಜರ್ ಕಾರ್ಯಾಚರಣೆ ನಡೆಸದಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಕೋರ್ಟ್ ಅನುಮತಿ ಇಲ್ಲದೆ ಬುಲ್ಡೋಜರ್ ಕಾರ್ಯಾಚರಣೆ ನಡೆಸಬಾರದು. ದೇಶದಲ್ಲಿ ಎಲ್ಲಿಯೂ ಕಟ್ಟಡ, ಮನೆಗಳ ನೆಲಸಮ ಕಾರ್ಯ ನಡೆಸಬಾರದು ಎಂದು ಎಲ್ಲಾ ರಾಜ್ಯ, ಕೇಂದ್ರಾಡಳಿತ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ಅಬಕಾರಿ ನೀತಿ ಪ್ರಕರಣ; ಸುಪ್ರೀಂ ಕೋರ್ಟ್​ನಲ್ಲಿ ಇಂದು ಅರವಿಂದ್ ಕೇಜ್ರಿವಾಲ್‌ ಭವಿಷ್ಯ ನಿರ್ಧಾರ

Excise Policy Case: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿರುವುದನ್ನು ಪ್ರಶ್ನಿಸಿ ಮತ್ತು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಸೆಪ್ಟೆಂಬರ್ 13) ಮಹತ್ವದ ತೀರ್ಪನ್ನು ನೀಡಲಿದೆ.

ಮದ್ಯ ನೀತಿ ಪ್ರಕರಣ; ಸುಪ್ರೀಂ ಕೋರ್ಟ್​ನಿಂದ ನಾಳೆ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಯ ತೀರ್ಪು

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜೂನ್ 26ರಂದು ಸಿಬಿಐ ಬಂಧಿಸಿತ್ತು. ಆಗಸ್ಟ್ 14ರಂದು ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿತ್ತು. ತಮ್ಮ ಬಂಧನವನ್ನು ಪ್ರಶ್ನಿಸಿ ಅವರು ಸಲ್ಲಿಸಿದ ಮನವಿಯ ಕುರಿತು ತನಿಖಾ ಸಂಸ್ಥೆಯಿಂದ ಪ್ರತಿಕ್ರಿಯೆಯನ್ನು ಕೋರಿತ್ತು.

ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಯತ್ನಾಳ್

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ಗೆ ಸದ್ಯಕ್ಕೆ ಸಂಪೂರ್ಣ ರಿಲೀಫ್ ದೊರೆಯುವ ಲಕ್ಷಣ ಕಾಣಿಸುತ್ತಿಲ್ಲ. ಪ್ರಕರಣದ ಸಿಬಿಐ ತನಿಖೆ ರದ್ದುಗೊಳಿಸಿದ ಕರ್ನಾಟಕ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ಕೆಲವೇ ದಿನಗಳ ಹಿಂದೆ ವಜಾಗೊಳಿಸಿತ್ತು. ಆದರೆ, ಇದೀಗ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಕೆಯಾಗಿದೆ.

ಮದ್ಯ ನೀತಿ ಪ್ರಕರಣ; 5 ತಿಂಗಳ ಬಳಿಕ ಕೊನೆಗೂ ಜೈಲಿನಿಂದ ಬಿಡುಗಡೆಯಾದ ಕವಿತಾ

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. 5 ತಿಂಗಳ ಬಳಿಕ ಕವಿತಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಸಂಭ್ರಮಾಚರಿಸಿದ್ದಾರೆ.

30 ವರ್ಷಗಳಲ್ಲಿ ಈ ರೀತಿಯ ಪ್ರಕರಣವನ್ನು ನೋಡಿಲ್ಲ: ಕೋಲ್ಕತ್ತಾ ಕೇಸ್ ಬಗ್ಗೆ ಸುಪ್ರೀಂಕೋರ್ಟ್

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ವಿಚಾರಣೆ ವೇಳೆ ಬಂಗಾಳ ಸರ್ಕಾರ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿರುವ ನ್ಯಾಯಪೀಠ ಮರಣೋತ್ತರ ಪರೀಕ್ಷೆ ನಡೆಸಲು ವಿಳಂಬ ಮಾಡಿದ್ದೇಕೆ ಎಂದು ಪ್ರಶ್ನಿಸಿದೆ. ಅದೇ ವೇಳೆ 30 ವರ್ಷಗಳಲ್ಲಿ ಈ ರೀತಿಯ ಪ್ರಕರಣವನ್ನು ನೋಡಿಲ್ಲ ಎಂದು ಹೇಳಿದೆ.

ಬಿಸಿಸಿಐಗೆ ಬೈಜುಸ್ ಕೊಟ್ಟ 158 ಕೋಟಿ ರೂ ತಾತ್ಕಾಲಿಕ ಅಕೌಂಟ್​ಗೆ ವರ್ಗಾವಣೆ; ಇನ್ಸಾಲ್ವೆನ್ಸಿ ಕೇಸ್​ಗೆ ಮರುಜೀವ ಕೊಟ್ಟ ಸುಪ್ರೀಂ

BCCI vs Byjus vs Supreme Court vs Lenders: ಬೈಜುಸ್ ಮತ್ತು ಬಿಸಿಸಿಐ ಆಫ್​ಕೋರ್ಟ್ ಸೆಟಲ್ಮೆಂಟ್​ಗೆ ಅವಕಾಶ ಕೊಟ್ಟಿದ್ದ ಎನ್​ಸಿಎಲ್​ಎಟಿ ಆದೇಶಕ್ಕೆ ಸುಪ್ರೀಂ ನ್ಯಾಯಪೀಠ ತಡೆ ನೀಡಿದೆ. ಇದರೊಂದಿಗೆ ಬಿಸಿಸಿಐಗೆ ಬೈಜುಸ್ ಪಾವತಿಸಿದ್ದ 158 ಕೋಟಿ ರೂ ಹಣವನ್ನು ತಾತ್ಕಾಲಿಕ ಖಾತೆಯೊಂದಕ್ಕೆ ವರ್ಗಾವಣೆ ಮಾಡಲಾಗಿದೆ. ಬೈಜುಸ್ ವಿರುದ್ಧದ ಇನ್ಸಾಲ್ವೆನ್ಸಿ ಕ್ರಮ ರದ್ದುಗೊಳಿಸಿದ್ದ ನ್ಯಾಯಮಂಡಳಿ ಆದೇಶಕ್ಕೂ ಸರ್ವೋಚ್ಚ ನ್ಯಾಯಾಲಯ ತಡೆ ಕೊಟ್ಟಿದೆ.