AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Varanasi Movie

Varanasi Movie

ವಾರಣಾಸಿ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಇದಕ್ಕೆ ಕಾರಣ, ಈ ಚಿತ್ರವನ್ನು ನಿರ್ದೇಶನ ಮಾಡುತ್ತಿರುವುದು ರಾಜಮೌಳಿ ಹಾಗೂ ಈ ಚಿತ್ರದಲ್ಲಿ ನಟಿಸುತ್ತಿರುವುದು ಮಹೇಶ್ ಬಾಬು. ಇವರ ಕಾಂಬಿನೇನ್​ನಲ್ಲಿ ಮೂಡಿ ಬರುತ್ತಿರುವ ಮೊದಲ ಸಿನಿಮಾ ಇದಾಗಿದೆ. ಈ ಕಾರಣದಿಂದಲೇ ಸಾಕಷ್ಟು ನಿರೀಕ್ಷೆ ಮೂಡಿದೆ. ಈ ಚಿತ್ರಕ್ಕೆ ಪ್ರಿಯಾಂಕಾ ಚೋಪ್ರಾ ನಾಯಕಿ. ಹಲವು ವರ್ಷಗಳ ಬಳಿಕ ಅವರು ಭಾರತೀಯ ಸಿನಿಮಾ ರಂಗಕ್ಕೆ ಕಂಬ್ಯಾಕ್ ಮಾಡಿದ್ದಾರೆ. ಈ ಚಿತ್ರಕ್ಕೆ ಆಸ್ಕರ್ ವಿಜೇತ ಎಂಎಂ ಕಿರವಾಣಿ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. 2027ರ ಸಮ್ಮರ್​ಗೆ ಈ ಚಿತ್ರ ರಿಲೀಸ್ ಆಗುವ ಸಾಧ್ಯತೆ ಇದೆ. ಕೀನ್ಯಾ ಸೇರಿದಂತೆ ಅನೇಕ ಕಡೆಗಳಲ್ಲಿ ಸಿನಿಮಾ ಶೂಟ್ ಮಾಡಲಾಗುತ್ತಿದೆ ಅನ್ನೋದು ವಿಶೇಷ. ‘ಆರ್​ಆರ್​ಆರ್’ ಯಶಸ್ಸಿನ ಬಳಿಕ ರಾಜಮೌಳಿ ಕೈಗೆತ್ತಿಕೊಂಡ ಸಿನಿಮಾ ಇದು ಎಂಬ ಕಾರಣದಿಂದಲೂ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನೂ ಹೆಚ್ಚು ಓದಿ

‘ವಾರಣಾಸಿ’ ಸಿನಿಮಾದಲ್ಲಿ ಕನ್ನಡದ ಖ್ಯಾತ ಹೀರೋಗೆ ಅವಕಾಶ ಕೊಟ್ಟ ರಾಜಮೌಳಿ

ರಾಜಮೌಳಿ ನಿರ್ದೇಶನದ 'ವಾರಣಾಸಿ' ಸಿನಿಮಾ ಮಹೇಶ್ ಬಾಬು ನಾಯಕತ್ವದಲ್ಲಿ 2027ರಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ಕನ್ನಡದ ಹೀರೋ ಪ್ರಮುಖ ಪಾತ್ರದಲ್ಲಿ, ಮಹೇಶ್ ಬಾಬು ಅವರ ತಂದೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಪ್ರಿಯಾಂಕಾ ಚೋಪ್ರಾ ಕೂಡ ನಟಿಸುತ್ತಿರುವ ಈ ಬಹುಭಾಷಾ ಚಿತ್ರವು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

ದೇವರ ಮೇಲೆ ನಂಬಿಕೆ ಇಲ್ಲದಿದ್ದರೂ ರಾಜಮೌಳಿಗೆ ದೊಡ್ಡ ಗೆಲುವು ಸಿಕ್ಕಿದೆ: ಆರ್​ಜಿವಿ ಬೆಂಬಲ

‘ವಾರಾಣಸಿ’ ಸಿನಿಮಾದ ನಿರ್ದೇಶಕ ರಾಜಮೌಳಿ ಅವರು ದೇವರ ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಶುರುವಾಗಿದೆ. ಈ ವಿಚಾರದಲ್ಲಿ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ರಾಜಮೌಳಿ ಪರವಾಗಿ ವಾದ ಮುಂದಿಟ್ಟಿದ್ದಾರೆ. ದೇವರನ್ನು ನಂಬದೇ ಇರುವ ವಿಷಯಕ್ಕೆ ಸಂಬಂಧಿಸಿದಂತೆ ಅವರು ತಮ್ಮ ಅಭಿಪ್ರಾಯವನ್ನು ದೀರ್ಘವಾಗಿ ತಿಳಿಸಿದ್ದಾರೆ.

ಗ್ರ್ಯಾಂಡ್ ಟೈಟಲ್ ಲಾಂಚ್ ಈವೆಂಟ್ ವ್ಯರ್ಥ; ಬದಲಾಗಲಿದೆ ‘ವಾರಣಾಸಿ’ ಟೈಟಲ್?

ಎಸ್​ಎಸ್ ರಾಜಮೌಳಿ ಅವರ 'ವಾರಣಾಸಿ' ಸಿನಿಮಾದ ಶೀರ್ಷಿಕೆ ವಿವಾದ ಸೃಷ್ಟಿ ಮಾಡಿದೆ. ಸಿಎಚ್ ಸುಬ್ಬಾ ರೆಡ್ಡಿ 'ವಾರಣಾಸಿ' (Vaaranasi) ಟೈಟಲ್ ನೋಂದಾಯಿಸಿದ್ದರೆ, ರಾಜಮೌಳಿ 'ವಾರಣಾಸಿ' (Varanasi) ಟೈಟಲ್ ನೋಂದಾಯಿಸಿದ್ದಾರೆ. ಶೀರ್ಷಿಕೆ ಬದಲಾದರೆ ₹27 ಕೋಟಿ ನಷ್ಟವಾಗುವ ಸಾಧ್ಯತೆಯಿದೆ. ಈಗ ಈ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಮಾತುಕತೆ ನಡೆಯುತ್ತಿದೆ.

ಹಿಂದೂ ಭಾವನೆಗೆ ಧಕ್ಕೆ; ರಾಜಮೌಳಿ ವಿರುದ್ಧ ದಾಖಲಾಯ್ತು ದೂರು

ನಿರ್ದೇಶಕ ಎಸ್.ಎಸ್. ರಾಜಮೌಳಿ 'ವಾರಣಾಸಿ' ಚಿತ್ರದ ಕಾರ್ಯಕ್ರಮದಲ್ಲಿ ತಾಂತ್ರಿಕ ದೋಷದಿಂದ ಹನುಮಂತ ದೇವರ ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಇದು ಹಿಂದೂ ಭಾವನೆಗೆ ಧಕ್ಕೆ ತಂದಿದೆ ಎಂದು ರಾಷ್ಟ್ರೀಯ ವಾನರ ಸೇನಾ ದೂರು ದಾಖಲಿಸಿದೆ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ದೂರುದಾರರು ಒತ್ತಾಯಿಸಿದ್ದಾರೆ.

‘ವಾರಣಾಸಿ’ ಈವೆಂಟ್ ಹಣದಲ್ಲಿ ಬಿಗ್ ಬಜೆಟ್ ಸಿನಿಮಾ ಮಾಡಬಹುದು; ಖರ್ಚಾಗಿದ್ದು ಇಷ್ಟೊಂದಾ?

ರಾಜಮೌಳಿ ಮತ್ತು ಮಹೇಶ್ ಬಾಬು ಅವರ ಬಹುನಿರೀಕ್ಷಿತ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಕಾರ್ಯಕ್ರಮಕ್ಕೆ ಬರೋಬ್ಬರಿ ಸಾಕಷ್ಟು ಖರ್ಚಾದಿದೆ. ರಾಮೋಜಿ ಫಿಲ್ಮ್ ಸಿಟಿಯಲ್ಲಿ ಅದ್ದೂರಿಯಾಗಿ ನಡೆದ ಈವೆಂಟ್​ಗೆ ಪ್ರಿಯಾಂಕಾ ಚೋಪ್ರಾ, ಶ್ರುತಿ ಹಾಸನ್ ಮುಂತಾದವರು ಭಾಗವಹಿಸಿದ್ದರು. ಒಂದು ಸಣ್ಣ ಚಿತ್ರವನ್ನೇ ನಿರ್ಮಿಸುವಷ್ಟು ಹಣವನ್ನು ರಾಜಮೌಳಿ ತಮ್ಮ ಸಿನಿಮಾದ ಪ್ರಚಾರಕ್ಕೆ ಸುರಿದಿರುವುದು ಅಚ್ಚರಿ ಮೂಡಿಸಿದೆ.

‘ವಾರಣಾಸಿ’ ಚಿತ್ರಕ್ಕಾಗಿ ಹಾಲಿವುಡ್ ದೃಶ್ಯಗಳ ಕಾಪಿ ಮಾಡಿದ್ರಾ ರಾಜಮೌಳಿ? ಶುರುವಾಗಿದೆ ಚರ್ಚೆ

ರಾಜಮೌಳಿ ಅವರ ಬಹುನಿರೀಕ್ಷಿತ 'ವಾರಣಾಸಿ' ಸಿನಿಮಾದ ಟೀಸರ್ ಕೃತಿ ಚೌರ್ಯದ ಆರೋಪ ಎದುರಿಸುತ್ತಿದೆ. ನೆಟ್ಟಿಗರು ಟೀಸರ್​ನ ದೃಶ್ಯಗಳನ್ನು ಹಾಲಿವುಡ್ ಚಿತ್ರಗಳೊಂದಿಗೆ ಹೋಲಿಕೆ ಮಾಡುತ್ತಿದ್ದಾರೆ. ಇದು ಹಿಂದೆ ಕೂಡ ರಾಜಮೌಳಿ ಎದುರಿಸಿದ ಟೀಕೆಯಾಗಿತ್ತು. ಮಹೇಶ್ ಬಾಬು ಅಭಿನಯದ ಈ ಚಿತ್ರ 2027ಕ್ಕೆ ಬಿಡುಗಡೆಯಾಗಲಿದೆ.

ಮಹೇಶ್ ಬಾಬು vs ಪ್ರಿಯಾಂಕಾ ಚೋಪ್ರಾ; ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು?

‘ಬಾಹುಬಲಿ' ಮತ್ತು ‘ಆರ್‌ಆರ್‌ಆರ್' ನಂತಹ ಬ್ಲಾಕ್‌ಬಸ್ಟರ್ ಚಿತ್ರಗಳ ನಂತರ, ಈಗ ಎಸ್‌ಎಸ್ ರಾಜಮೌಳಿ ‘ವಾರಣಾಸಿ' ಎಂಬ ಹೊಸ ಚಿತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈ ಚಿತ್ರದಲ್ಲಿ ಮಹೇಶ್ ಬಾಬು ಮತ್ತು ಪ್ರಿಯಾಂಕಾ ಚೋಪ್ರಾ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಇಬ್ಬರು ತಾರೆಯರ ಒಟ್ಟು ಸಂಪತ್ತನ್ನು ಈ ಲೇಖನದಲ್ಲಿ ಹೋಲಿಸಲಾಗಿದೆ.

‘ವಾರಣಾಸಿ’ ಈವೆಂಟ್​ನಲ್ಲಿ ಹಿಂದೂ ದೇವರ ಬಗ್ಗೆ ರಾಜಮೌಳಿ ಟೀಕೆ; ಸಿನಿಮಾ ಬ್ಯಾನ್ ಮಾಡಲು ಆಗ್ರಹ

SS Rajamouli: ರಾಜಮೌಳಿ-ಮಹೇಶ್ ಬಾಬು ಅವರ ಹೊಸ ಚಿತ್ರ ‘ವಾರಣಾಸಿ’ 2027ಕ್ಕೆ ಬಿಡುಗಡೆಯಾಗಲಿದ್ದು, ಅದ್ದೂರಿ ಕಾರ್ಯಕ್ರಮದಲ್ಲಿ ಅನಾವರಣಗೊಂಡಿದೆ. ತಾಂತ್ರಿಕ ಸಮಸ್ಯೆಯಿಂದ ಸಿಟ್ಟಿಗೆದ್ದ ರಾಜಮೌಳಿ ಹನುಮಂತನ ಬಗ್ಗೆ ಆಡಿದ ಮಾತುಗಳು ಭಾರಿ ವಿವಾದ ಸೃಷ್ಟಿಸಿವೆ. ಅವರ ಕ್ಷಮೆಗೆ ಸಾರ್ವಜನಿಕವಾಗಿ ಒತ್ತಾಯ ಕೇಳಿಬರುತ್ತಿದೆ .

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ