
Waqf Bill
ವಕ್ಫ್ ತಿದ್ದುಪಡಿ ಮಸೂದೆ
ವಕ್ಫ್ ತಿದ್ದುಪಡಿ ಮಸೂದೆ-2024 ಅನ್ನು ಆಗಸ್ಟ್ 8, 2024ರಂದು ಲೋಕಸಭೆಯಲ್ಲಿ ಪರಿಚಯಿಸಲಾಯಿತು. ಒಂದು ದಿನದ ನಂತರ ಇದನ್ನು ಸಂಸತ್ತಿನ ಎರಡೂ ಸದನಗಳ ಜಂಟಿ ಸಮಿತಿಗೆ ಉಲ್ಲೇಖಿಸಲಾಯಿತು. ಬಿಜೆಪಿಯ ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಸಮಿತಿಯು ಈ ವರ್ಷ ಫೆಬ್ರವರಿ 13ರಂದು ಸಂಸತ್ತಿಗೆ ತನ್ನ ವರದಿಯನ್ನು ಸಲ್ಲಿಸಿತು. ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಪಾರದರ್ಶಕತೆ ಕೊರತೆ, ದುರುಪಯೋಗ, ಭ್ರಷ್ಟಾಚಾರದ ಆರೋಪದ ಹಿನ್ನೆಲೆ, ಈ ತಿದ್ದುಪಡಿ ಪರಿಚಯಿಸಲಾಯಿತು. ಮಸೂದೆಯು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲಾಯಿತು. ಸಮಿತಿಯು ವರದಿಯನ್ನು 2025ರ ಫೆಬ್ರವರಿ 3ರಂದು ಮಂಡಿಸಿರು. ಈ ಮಸೂದೆಯಲ್ಲಿನ ಪ್ರಸ್ತಾಪಗಳಲ್ಲಿ ಒಂದು ಕೇಂದ್ರ ವಕ್ಫ್ ಮಂಡಳಿ ಮತ್ತು ರಾಜ್ಯ ವಕ್ಫ್ ಮಂಡಳಿಗಳ ಸಂಯೋಜನೆಯಲ್ಲಿ ಬದಲಾವಣೆಗಳನ್ನು ಒಳಗೊಂಡಿದೆ. ಈ ಮಸೂದೆಯು ಮುಸ್ಲಿಮೇತರರನ್ನು ಅದರ ಸದಸ್ಯರನ್ನಾಗಿ ಸೇರಿಸಿಕೊಳ್ಳುವುದನ್ನು ಕಡ್ಡಾಯಗೊಳಿಸುತ್ತದೆ. 2024ರಲ್ಲಿ ಮಂಡಿಸಲಾದ ಮೂಲ, ಜೆಪಿಸಿ ಪೂರ್ವ ಮಸೂದೆಯು ಜಿಲ್ಲಾಧಿಕಾರಿಯನ್ನು ಅಂತಿಮ ಅಧಿಕಾರವನ್ನಾಗಿ ಮಾಡುವ ಪ್ರಸ್ತಾಪವನ್ನು ಹೊಂದಿತ್ತು. ಪ್ರಸ್ತುತ ಕಾನೂನಿನಡಿಯಲ್ಲಿ, ಈ ನಿರ್ಧಾರಗಳನ್ನು ವಕ್ಫ್ ನ್ಯಾಯಮಂಡಳಿ ತೆಗೆದುಕೊಳ್ಳುತ್ತದೆ
ಮಂಗಳೂರಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸಲ್ಮಾನರಿಂದ ಬೃಹತ್ ಪ್ರತಿಭಟನೆ, ನಿರೀಕ್ಷೆಗೂ ಮೀರಿದ ಜನ
ಪ್ರತಿಭಟನೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಅಡ್ಯಾರ್ ಕಣ್ಣೂರು ಷಾ ಮೈದಾನದ ಸುತ್ತಮುತ್ತ ಮತ್ತು ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಾಟು ಮಾಡಲಾಗಿದೆ. ಅದರೆ, ನಿರೀಕ್ಷೆಗೆ ಮೀರಿದ ಜನ ಧರಣಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರಿಂದ ಅವರನ್ನು ನಿಯಂತ್ರಿಸಲು ಪೊಲೀಸರು ಕಷ್ಟ ಪಡಬೇಕಾಯಿತು. ಪ್ರತಿಭಟನೆಯ ಕಾರಣ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73ಅನ್ನು ಬಂದ್ ಮಾಡಲಾಗಿದೆ.
- Arun Belly
- Updated on: Apr 18, 2025
- 6:16 pm
ವಕ್ಫ್ ವಿರುದ್ಧ ಮುಸ್ಲಿಂ ಸಂಘಟನೆಗಳ ಹೋರಾಟ: ಹೈಕೋರ್ಟ್ ಖಡಕ್ ಸೂಚನೆ
ಮಂಗಳೂರಿನಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ ಏಪ್ರಿಲ್ 18ರಂದು ನಡೆಯಲಿದೆ. ಆದರೆ, ಹೈಕೋರ್ಟ್ ರಸ್ತೆ ಸಂಚಾರ ನಿರ್ಬಂಧಿಸದಂತೆ ಸೂಚನೆ ನೀಡಿದೆ. ಸುಪ್ರೀಂ ಕೋರ್ಟ್ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಸರಿಯಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಕರ್ನಾಟಕ ಉಲಮಾ ಸಮನ್ವಯ ಸಮಿತಿ ಈ ಪ್ರತಿಭಟನೆಗೆ ಕರೆ ನೀಡಿದ್ದು, ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಪ್ರತಿಭಟನೆಯು ಶಾಂತಿಯುತವಾಗಿರಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
- Pruthviraj
- Updated on: Apr 17, 2025
- 8:31 pm
ವಕ್ಫ್ ತಿದ್ದುಪಡಿ ಕಾಯ್ದೆಗೆ ಧನ್ಯವಾದ ಸಲ್ಲಿಸಲು ಪ್ರಧಾನಿ ಮೋದಿಯನ್ನು ಭೇಟಿಯಾದ ಮುಸ್ಲಿಮರ ನಿಯೋಗ
ವಕ್ಫ್ ತಿದ್ದುಪಡಿ ಕಾಯ್ದೆಗೆ ಕೃತಜ್ಞತೆ ಸಲ್ಲಿಸಲು ದಾವೂದಿ ಬೊಹ್ರಾ ಸಮುದಾಯದ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ. ಈ ಸಭೆಯ ಸಂದರ್ಭದಲ್ಲಿ ಮೋದಿಗೆ ಧನ್ಯವಾದ ತಿಳಿಸಿದ ಬೊಹ್ರಾ ಸಮುದಾಯದ ಸದಸ್ಯರು ಇದು ಬಹಳ ದಿನಗಳಿಂದ ಬಾಕಿ ಉಳಿದಿದ್ದ ಬೇಡಿಕೆಯಾಗಿದೆ. ಇದನ್ನು ಈಗ ಈಡೇರಿಸಲಾಗಿದೆ ಎಂದು ಹೇಳಿದ್ದಾರೆ."ಪ್ರಧಾನ ಮಂತ್ರಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬ ದೃಷ್ಟಿಕೋನದಲ್ಲಿ ದಾವೂದಿ ಬೊಹ್ರಾ ಸಮುದಾಯವು ನಂಬಿಕೆ ಇಟ್ಟಿದೆ" ಎಂದು ಅವರು ಹೇಳಿದ್ದಾರೆ.
- Sushma Chakre
- Updated on: Apr 17, 2025
- 7:29 pm
ಮುಂದಿನ ವಿಚಾರಣೆಯವರೆಗೆ ವಕ್ಫ್ ಕಾಯ್ದೆಯಲ್ಲಿ ಬದಲಾವಣೆ ಮಾಡುವಂತಿಲ್ಲ; ಸುಪ್ರೀಂ ಕೋರ್ಟ್
ವಕ್ಫ್ ತಿದ್ದುಪಡಿ ಕಾಯ್ದೆಯಡಿ ಯಾವುದೇ ನೇಮಕಾತಿ ಮಾಡುವಂತಿಲ್ಲ. ಕೇಂದ್ರ ಸರಕಾರ 7 ದಿನದಲ್ಲಿ ಪ್ರತಿಕ್ರಿಯೆ ನೀಡಬೇಕು. ಹೊಸ ನೇಮಕಾತಿ ಮಾಡದಂತೆ ಕೇಂದ್ರ ಸರ್ಕಾರ ಭರವಸೆ ನೀಡಬೇಕು. ವಕ್ಫ್ ಆಸ್ತಿಗಳ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ. ವಕ್ಫ್ ತಿದ್ದುಪಡಿ ಕಾಯ್ದೆಯ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸಿದೆ. ಸಿಜೆಐ ಸಂಜೀವ್ ಖನ್ನಾ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಸಲಾಗಿದೆ. ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲ ಭಾಗಗಳಿಗೆ ತಡೆ ನೀಡುವುದು ಬೇಡ. ಈ ನಡೆ ಕಠಿಣ ಹೆಜ್ಜೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದೆ.
- Sushma Chakre
- Updated on: Apr 17, 2025
- 4:26 pm
ಹಿಂದೂ ಟ್ರಸ್ಟ್ನಲ್ಲಿ ಮುಸ್ಲಿಮರಿಗೆ ಅವಕಾಶ ನೀಡಲು ಸಿದ್ಧರಿದ್ದೀರಾ?; ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ
ವಕ್ಫ್ ಕಾನೂನಿನ ವಿರುದ್ಧದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವು ಕೆಲವು ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿದೆ. ಇತ್ತೀಚೆಗೆ ಜಾರಿಗೆ ತಂದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧದ ಅರ್ಜಿಗಳ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಮುಸ್ಲಿಮರಿಗೆ ಹಿಂದೂ ಟ್ರಸ್ಟ್ಗಳಲ್ಲಿ ಅವಕಾಶ ನೀಡಲು ಸಿದ್ಧರಿದ್ದೀರಾ? ಮುಕ್ತವಾಗಿ ಹೇಳಿ ಎಂದು ಸೂಚಿಸಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ, 2025 ಅನ್ನು ಏಪ್ರಿಲ್ 4ರಂದು ಸಂಸತ್ತು ಅಂಗೀಕರಿಸಿತು. ಇದು ಏಪ್ರಿಲ್ 5ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು. ನಂತರ ಕೇಂದ್ರ ಸರ್ಕಾರವು ಈ ಕಾಯ್ದೆಯ ಜಾರಿಯನ್ನು ಅಧಿಸೂಚನೆಗೊಳಿಸಿತು. ಇದು ಏಪ್ರಿಲ್ 8ರಿಂದ ಜಾರಿಗೆ ಬಂದಿತು.
- Sushma Chakre
- Updated on: Apr 16, 2025
- 6:45 pm
ನಿಮ್ಮ ಪಕ್ಷದ ಮುಖ್ಯಸ್ಥರನ್ನಾಗಿ ಮುಸ್ಲಿಂ ನಾಯಕರನ್ನು ನೇಮಿಸಿ; ವಕ್ಫ್ ಕಾಯ್ದೆ ಬಗ್ಗೆ ಕಾಂಗ್ರೆಸ್‌ಗೆ ಪ್ರಧಾನಿ ಮೋದಿ ಸವಾಲು
ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್‌ನಿಂದ ಮುಸ್ಲಿಮರಿಗೆ ಶೇ. 50ರಷ್ಟು ಚುನಾವಣಾ ಟಿಕೆಟ್‌ಗಳನ್ನು ನೀಡುವಂತೆ ಚಾಲೆಂಜ್ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಕಾಂಗ್ರೆಸ್ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಓಲೈಕೆ ರಾಜಕೀಯ ಎಂದು ಆರೋಪಿಸಿದ್ದಾರೆ. ಹಾಗೇ, ಕಾಂಗ್ರೆಸ್ ಪಕ್ಷವು ಮುಸ್ಲಿಂ ನಾಯಕನನ್ನು ಅಧ್ಯಕ್ಷರನ್ನಾಗಿ ನೇಮಿಸುವಂತೆ ಸವಾಲು ಹಾಕಿತು. ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆಯನ್ನು ವಿರೋಧಿಸಿದ್ದಕ್ಕಾಗಿ ಮೋದಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ಯಾವಾಗಲೂ ಮುಸ್ಲಿಂ ಮೂಲಭೂತವಾದಿಗಳನ್ನು ಓಲೈಸಿದೆ ಮತ್ತು ಹೊಸ ಕಾನೂನಿನ ವಿರುದ್ಧದ ಅವರ ಪ್ರತಿಭಟನೆಯು ಅದನ್ನೇ ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ.
- Sushma Chakre
- Updated on: Apr 14, 2025
- 10:20 pm
ಬಂಗಾಳದಲ್ಲಿ ಹಿಂಸಾಚಾರಕ್ಕೆ ತಿರುಗಿದ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಭಂಗಾರ್‌ನಲ್ಲಿ ಜನಸಮೂಹವನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಆದರೂ ಪೊಲೀಸರ ಐದು ಬೈಕ್‌ಗಳು ಮತ್ತು ಒಂದು ವ್ಯಾನ್ ಅನ್ನು ಗುಂಪೊಂದು ಸುಟ್ಟುಹಾಕಿದೆ. ಪೊಲೀಸರ ಪ್ರಕಾರ, ಪಕ್ಷದ ನಾಯಕ ಮತ್ತು ಭಂಗಾರ್ ಶಾಸಕ ನೌಶಾದ್ ಸಿದ್ದೀಕ್ ಅವರು ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿ ರ್ಯಾಲಿಯಲ್ಲಿ ಭಾಗವಹಿಸಲು ಮಧ್ಯ ಕೋಲ್ಕತ್ತಾದ ರಾಮಲೀಲಾ ಮೈದಾನದ ಕಡೆಗೆ ಹೋಗುತ್ತಿದ್ದ ಬಸಂತಿ ಹೆದ್ದಾರಿಯ ಭೋಜೆರ್‌ಹತ್ ಬಳಿ ಪೊಲೀಸರು ಐಎಸ್‌ಎಫ್ ಬೆಂಬಲಿಗರನ್ನು ತಡೆದಾಗ ಘರ್ಷಣೆ ಭುಗಿಲೆದ್ದಿತು.
- Sushma Chakre
- Updated on: Apr 14, 2025
- 8:52 pm
ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಈ ಹಿಂದೆ ವಕ್ಫ್ ಕಾನೂನು ರೂಪಿಸಿತ್ತು: ಮೋದಿ
ಬಿ.ಆರ್. ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಸಂವಿಧಾನದ ದೃಷ್ಟಿಕೋನವನ್ನು ತಮ್ಮ ಸ್ವಂತ ಲಾಭಕ್ಕಾಗಿ ಅಸ್ತ್ರವಾಗಿಟ್ಟುಕೊಂಡು ಅದನ್ನು ತುಷ್ಟೀಕರಣದ ಸಾಧನವಾಗಿ ಪರಿವರ್ತಿಸುವ ಮೂಲಕ ಕಾಂಗ್ರೆಸ್ ದ್ರೋಹ ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಕಾಂಗ್ರೆಸ್ ನಮ್ಮ ಪವಿತ್ರ ಸಂವಿಧಾನವನ್ನು ಅಧಿಕಾರ ಪಡೆಯುವ ಅಸ್ತ್ರವನ್ನಾಗಿ ಪರಿವರ್ತಿಸಿಕೊಂಡಿದೆ. ಕಾಂಗ್ರೆಸ್ ತನ್ನ ಅಧಿಕಾರದ ಮೇಲಿನ ಹಿಡಿತಕ್ಕೆ ಬೆದರಿಕೆ ಬಂದಾಗಲೆಲ್ಲಾ ಅದು ಸಂವಿಧಾನವನ್ನು ತುಳಿದಿದೆ ಎಂದು ಹೇಳಿದ್ದಾರೆ.
- Nayana Rajeev
- Updated on: Apr 14, 2025
- 12:30 pm
ವಕ್ಫ್ ಪ್ರತಿಭಟನೆ; ಬಂಗಾಳದ ಮುರ್ಷಿದಾಬಾದ್‌ನಲ್ಲಿ 110ಕ್ಕೂ ಹೆಚ್ಚು ಜನರ ಬಂಧನ
ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳು ಇಂದು ತೀವ್ರಗೊಂಡಿದ್ದು, ಮುರ್ಷಿದಾಬಾದ್ ಜಿಲ್ಲೆಯಿಂದ 110ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಪೊಲೀಸರು ಸುತಿ ಮತ್ತು ಸಂಸರ್‌ಗಂಜ್‌ನಂತಹ ಪ್ರದೇಶಗಳಲ್ಲಿ ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಗಸ್ತು ತಿರುಗಿದ್ದಾರೆ. ಬಂಗಾಳದ ಜಂಗಿಪುರ, ಮುರ್ಷಿದಾಬಾದ್, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ಹಿಂಸಾತ್ಮಕ ಘಟನೆಗಳು ನಡೆದಿರುವುದರಿಂದ ಬಂಗಾಳದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಪೊಲೀಸ್ ವ್ಯಾನ್‌ಗಳು ಸೇರಿದಂತೆ ಅನೇಕ ವಾಹನಗಳಿಗೆ ಬೆಂಕಿ ಹಚ್ಚಲಾಯಿತು.
- Sushma Chakre
- Updated on: Apr 12, 2025
- 3:41 pm
Fact Check: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ ಎಂದು 2022ರ ವಿಡಿಯೋ ವೈರಲ್
Priyanka Gandhi Waqf Protest: ಪ್ರಿಯಾಂಕಾ ಗಾಂಧಿ ಅವರು ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಪ್ರತಿಭಟಿಸುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ಅನೇಕ ಬಳಕೆದಾರರು ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಸುದ್ದಿಯ ಸತ್ಯಾಸತ್ಯತೆಯನ್ನು ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಅಸಲಿಗೆ ಈ ವೈರಲ್ ವಿಡಿಯೋ ಇತ್ತೀಚಿನದಲ್ಲ, ಇದು 2022 ರದ್ದಾಗಿದೆ.
- Vinay Bhat
- Updated on: Apr 9, 2025
- 4:42 pm