AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weather Forecast

Weather Forecast

ಕರ್ನಾಟಕವು ಮೂರು ಬಗೆಯ ಹವಾಮಾನ ಬದಲಾವಣೆಗೆ ಪ್ರತಿವರ್ಷ ಸಾಕ್ಷಿಯಾಗುತ್ತದೆ. ಅದು ಸ್ಥಳದಿಂದ ಸ್ಥಳಕ್ಕೆ ಬದಲಾಗುತ್ತಿರುತ್ತದೆ. ಸಾಮಾನ್ಯವಾಗಿ ಹವಾಮಾನ ಇಲಾಖೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಪ್ರದೇಶ ಎಂದು ವಿಂಗಡಣೆ ಮಾಡಿದೆ.
ಸಾಮಾನ್ಯವಾಗಿ ಮಳೆಗಾಲ, ಬಳಿಕ ಚಳಿಗಾಲ ಹಾಗೆಯೇ ಬೇಸಿಗೆ ಕಾಲ ಮೂರು ಕಾಲಗಳಿರುತ್ತವೆ.
ರೈತಾಪಿ ವರ್ಗವು ಮುಂಗಾರು ಮಳೆಯನ್ನು ಅವಲಂಬಿಸಿದೆ, ಮುಂಗಾರು ಜೂನ್​ನಿಂದ ಸೆಪ್ಟೆಂಬರ್​ವರೆಗೆ ಇರಲಿದೆ. ಅದಾದ ಬಳಿಕ ಚಳಿಗಾಲ ಶುರುವಾಗಲಿದೆ. ಕರ್ನಾಟಕದಲ್ಲಿ ಅಕ್ಟೋಬರ್​ನಿಂದ ಡಿಸೆಂಬರ್​-ಜನವರಿವರೆಗೂ ಚಳಿ ಇರಲಿದ್ದು ಬಳಿಕ ತಾಪಮಾನ ಹೆಚ್ಚಾಗುತ್ತದೆ. ಕರಾವಳಿ ಬಯಲು ಪ್ರದೇಶಗಳಲ್ಲಿ ತಾಪಮಾನವು ಮೇ ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ತಲುಪುತ್ತದೆ. ಮಳೆಗಾಲದ ನಂತರ, ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ರಾಜ್ಯದಲ್ಲಿ ತಾಪಮಾನವು ಕಡಿಮೆಯಾಗುತ್ತದೆ ಮತ್ತು ಡಿಸೆಂಬರ್ ತಿಂಗಳಲ್ಲಿ ಮತ್ತಷ್ಟು ಕಡಿಮೆಯಾಗುತ್ತದೆ. ಬೇಸಿಗೆಯಲ್ಲಿ ಸರಾಸರಿ ಹೆಚ್ಚಿನ ತಾಪಮಾನವು ರಾಜ್ಯದಾದ್ಯಂತ 34 ಡಿಗ್ರಿ ಸೆಲ್ಸಿಯಸ್ ಆಗಿದೆ. ಮಳೆಗಾಲದಲ್ಲಿ ದಿನದ ಸರಾಸರಿ ತಾಪಮಾನ 29 ಡಿಗ್ರಿ ಸೆಲ್ಸಿಯಸ್. ಚಳಿಗಾಲದಲ್ಲಿ ತಾಪಮಾನವು 32 ಡಿಗ್ರಿ ಸೆಲ್ಸಿಯಸ್‌ನಿಂದ 20 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುತ್ತದೆ

ಇನ್ನೂ ಹೆಚ್ಚು ಓದಿ

Karnataka Weather Forecast: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ಅಬ್ಬರ; ತೀವ್ರ ಗಾಳಿಯ ಎಚ್ಚರಿಕೆ

Monsoon 2026: ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆ ಹಾಗೂ ಬಲವಾದ ಬಿರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ವರುಣಾರ್ಭಟದ ಸಾಧ್ಯತೆ ಇದ್ದು, ಯಾವ್ಯಾವ ಪ್ರದೇಶಗಳಲ್ಲಿ ತೀವ್ರ ಮಳೆಯಾಗಬಹುದೆಂಬ ಮಾಹಿತಿ ಇಲ್ಲಿದೆ.

Karnataka Weather forecast: ಮುಂದಿನ 5 ದಿನ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ ಅರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗಾದ್ರೆ, ಯಾವಾಗ, ಯಾವ್ಯಾವ ಕಡೆ ಮಳೆಯಾಗಲಿದೆ ಎನ್ನುವ ಡಿಟೇಲ್ಸ್ ಈ ಕೆಳಗಿನಂತಿದೆ ನೋಡಿ.

TV9 Kannada Live: ಇಂದಿನ ಇಡೀ ದಿನದ ಪ್ರಮುಖ ಸುದ್ದಿಗಳ ಮುಖ್ಯಾಂಶಗಳು

Karnataka News Live Updates: ಕರ್ನಾಟಕದಲ್ಲಿ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಸಚಿವ ಸಂಪುಟದಲ್ಲಿನ ಖಾತೆ ಹಂಚಿಕೆ ಅಸಮಾಧಾನ, ಸಂಪುಟ ವಿಸ್ತರಣೆ ಕಸರತ್ತು, ಸುದೀರ್ಘ ಅವಧಿಗೆ ಪ್ರಧಾನಿಯಾದ ದಾಖಲೆ ನಿರ್ಮಿಸಿದ ನರೇಂದ್ರ ಮೋದಿ, ರಾಜ್ಯಸಭೆ ಚುನಾವಣೆ, ಇರಾನ್ ಯುದ್ಧ ಸೇರಿದಂತೆ ಪ್ರಮುಖ ವಿದ್ಯಮಾನಗಳ ಕ್ಷಣಕ್ಷಣದ ಮಾಹಿತಿ ಇಲ್ಲಿದೆ.

Karnataka Weather Forecast: ರಾಜ್ಯದ ಈ ಜಿಲ್ಲೆಗಳಲ್ಲಿ ಜೋರಾಗಲಿದೆ ಮಳೆಯ ಅಬ್ಬರ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್ ಘೋಷಣೆ!

Monsoon 2026: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹವಾಮಾನ ಇಲಾಖೆಯು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಇನ್ನು ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಮುನ್ನೆಚ್ಚರಿಕೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆಡೆ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಭಾಗದಲ್ಲಿ ಬಲವಾದ ಗಾಳಿ ಬೀಸಲಿದೆ.

Karnataka Weather Forecast: ರಾಜ್ಯದ ಎರಡು ಜಿಲ್ಲೆಗಳಿಗೆ ನಾಳೆ ಆರೆಂಜ್​​ ಅಲರ್ಟ್​​; ಎಲ್ಲೆಲ್ಲಿ ವರುಣಾರ್ಭಟ?

Monsoon 2026: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಜೂನ್ 10 ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದ್ದು, ಉಳಿದ ಹಲವೆಡೆ ಸಾಧಾರಣ ಮಳೆಯ ನಿರೀಕ್ಷೆ ಇದೆ.

Karnataka Weather Forecast: ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ! ರಾಜ್ಯಾದ್ಯಂತ ಮುಂದಿನ 3 ದಿನ ಭಾರಿ ಮಳೆ

Monsoon 2026: ಕರ್ನಾಟಕದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕರಾವಳಿಯ 3 ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ರೆಡ್ ಅಲರ್ಟ್' ಘೋಷಿಸಿದೆ. ಮುಂದಿನ 3 ದಿನ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತ 24 ಗಂಟೆಗಳ ತುರ್ತು ಸಹಾಯವಾಣಿ ಆರಂಭಿಸಿದೆ. ಸಾರ್ವಜನಿಕರು ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಡಿಸಿ ಭಂವರ್ ಸಿಂಗ್ ಮೀನಾ ಆದೇಶಿಸಿದ್ದಾರೆ.

Karnataka Weather Forecast: ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಮುಂದಿನ 6 ದಿನ ಭಾರೀ ಮಳೆ ಎಚ್ಚರಿಕೆ,ಕರಾವಳಿಗೆ ರೆಡ್ ಅಲರ್ಟ್

ರಾಜ್ಯದಲ್ಲಿ ನೈಋತ್ಯ ಮುಂಗಾರು (Monsoon 2026) ಚುರುಕುಗೊಂಡಿದ್ದು, ಮುಂದಿನ ಆರು ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ 'ಅತಿ ಭಾರೀ ಮಳೆ'ಯಾಗುವ ಸಾಧ್ಯತೆ ಇದ್ದು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

Karnataka Weather Forecast: ಮುಂಗಾರು ಮಳೆ ಚುರುಕು, ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ; 2 ದಿನ ರೆಡ್‌ ಅಲರ್ಟ್‌

Monsoon 2026: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಭಾರಿ ಮಳೆಯಿಂದ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ನೀರು ನುಗ್ಗಿದ್ದರೆ, ಬಾಗಲಕೋಟೆಯಲ್ಲಿ ದೇವಸ್ಥಾನ ಜಲಾವೃತಗೊಂಡಿದೆ. ಹವಾಮಾನ ಇಲಾಖೆಯು ಜೂನ್ 9 ಮತ್ತು 10 ರಂದು ಬೆಂಗಳೂರು ಸೇರಿ ರಾಜ್ಯಾದ್ಯಂತ ರೆಡ್ ಅಲರ್ಟ್ ಘೋಷಿಸಿದೆ.

Karnataka Weather forecast: ಕರ್ನಾಟಕದಲ್ಲಿ 1 ವಾರ ಭಾರೀ ಮಳೆ ಮುನ್ಸೂಚನೆ: ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ನೈಋತ್ಯ ಮುಂಗಾರು (Southwest Monsoon) ಕರ್ನಾಟಕ ಪ್ರವೇಶಿಸಿದ್ದು, ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕವಾಗಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ಅರಬ್ಬೀ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗದಲ್ಲಿ ಅತ್ಯಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ತೀವ್ರ ಮುನ್ನೆಚ್ಚರಿಕೆಯನ್ನು (ರೆಡ್/ಆರೆಂಜ್ ಅಲರ್ಟ್) ನೀಡಿದೆ.

Karnataka Weather Forecast: ಕರಾವಳಿಯಲ್ಲಿ ಅಬ್ಬರಿಸಲಿರುವ ವರುಣ, ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

Monsoon 2026: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ಉತ್ತರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಬೆಳಗಾವಿ ಸೇರಿದಂತೆ 10 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಲಾಗಿದೆ. ಉತ್ತರ ಒಳನಾಡಿನ ಹಲವೆಡೆ ಗಂಟೆಗೆ 40-50 ಕಿಮೀ ವೇಗದ ಬಿರುಗಾಳಿ ಸಹಿತ ಗುಡುಗು ಮಳೆಯಾಗಲಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚಿಸಿದೆ.

Karnataka Weather Forecast: ಕರಾವಳಿಯಲ್ಲಿಂದು ವರುಣಾರ್ಭಟ! ಆರೆಂಜ್ ಅಲರ್ಟ್​ ಘೋಷಣೆ

Monsoon 2026:ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 'ಯೆಲ್ಲೋ ಅಲರ್ಟ್' ನೀಡಲಾಗಿದೆ. ಸಾರ್ವಜನಿಕರು ಹಾಗೂ ಮೀನುಗಾರರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.

ಇಂದಿನಿಂದ ಜೂನ್ 11 ರವರೆಗೆ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮೀನುಗಾರರಿಗೆ, ಪ್ರವಾಸಿಗರಿಗೆ ಬಿಗ್​​​ ಅಲರ್ಟ್

ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗಲಿದ್ದು, IMD ಜೂನ್ 11ರವರೆಗೆ ಭಾರೀ ಮಳೆ ಮುನ್ಸೂಚನೆ ನೀಡಿದೆ. ಒಳನಾಡಿಗೆ 'ಯೆಲ್ಲೋ ಅಲರ್ಟ್', ಕರಾವಳಿಗೆ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ. ಸಿಡಿಲು, ಮಿಂಚು ಹಾಗೂ ಬಿರುಗಾಳಿಯೊಂದಿಗೆ ಮಳೆ ಸುರಿಯುವ ಸಾಧ್ಯತೆ ಇದೆ. ಸಾರ್ವಜನಿಕರು, ರೈತರು, ಮೀನುಗಾರರು ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಪ್ರವಾಹ ಭೀತಿ ಇರುವ ನದಿಪಾತ್ರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.