What India Thinks Today WITT
ದೇಶದ ಅತಿದೊಡ್ಡ ಸುದ್ದಿಸಂಸ್ಥೆ ಟಿವಿ9 ನೆಟ್ವವರ್ಕ್ ನಡೆಸುತ್ತಿರುವ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಕಾರ್ಯಕ್ರಮ ದೆಹಲಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ಹಿರಿಯ ರಾಜಕೀಯ ನಾಯಕರು, ಕೇಂದ್ರ ಸರ್ಕಾರದ ಸಚಿವರು, ವಿಜ್ಞಾನಿಗಳು, ಕ್ರೀಡಾ ಸಾಧಕರು, ಉದ್ಯಮಿಗಳು, ಸಿನಿಮಾ ನಟ-ನಟಿಯರು, ವಿಶ್ವದ ನಾಯಕರು ಭಾಗವಹಿಸಲಿದ್ದಾರೆ. ಈ ವೇದಿಕೆಯಲ್ಲಿ ಹಲವು ವಿಚಾರಗಳ ಕುರಿತು ಅವರು ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಫೆ.25ರಿಂದ ಫೆ.27ರವರೆಗೆ ದೆಹಲಿಯಲ್ಲಿ ನಡೆಯಲಿದೆ. ಪ್ರಧಾನಿ ಮೋದಿ ಅವರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದು, ಅವರು ಕೂಡ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದರ ಜತೆಗೆ ಸಾಂಸ್ಕೃತಿಕ ಹಾಗೂ ಅನೇಕ ಪ್ರದರ್ಶನಗಳು ನಡೆಯಲಿದೆ.
ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಭೂಪೇಂದ್ರ ಯಾದವ್, ಸ್ಮೃತಿ ಇರಾನಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಯುಪಿ ಸಿಎಂ ಯೋಗಿ ಆದಿತ್ಯನಾಥ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ, ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, ಛತ್ತೀಸ್‌ಗಢ ಸಿಎಂ ವಿಷ್ಣು ದೇವ್ ಸಾಯಿ, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಪಂಜಾಬ್ ಸಿಎಂ ಭಗವಂತ ಮನ್ ಖಟ್ಟರ್ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಕಾಂಗ್ರೆಸ್ ನಾಯಕ ಪವನ್ ಖೇಡಾ, ಯೋಗ ಗುರು ಬಾಬಾ ರಾಮದೇವ್ ಮತ್ತು ನೀತಿ ಆಯೋಗದ ಮಾಜಿ ಸಿಇಒ ಅಮಿತಾಭ್ ಕಾಂತ್ ಕೂಡ ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ. ಇದಲ್ಲದೆ, ಆಸ್ಟ್ರೇಲಿಯಾದ ಮಾಜಿ ಪ್ರಧಾನಿ ಟೋನಿ ಅಬಾಟ್, ಮಾಲ್ಡೀವ್ಸ್ ಮಾಜಿ ರಕ್ಷಣಾ ಸಚಿವೆ ಮರಿಯಾ ಅಹ್ಮದ್ ದೀದಿ, ವೆಲಿನಾ ಟ್ಚಕರೋವಾ, ವಿಶ್ವಸಂಸ್ಥೆಯ ಭಾರತದ ಮಾಜಿ ಖಾಯಂ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಸೇರಿದಂತೆ ಕಲಾ ಕ್ಷೇತ್ರ ಮತ್ತು ಕ್ರೀಡಾ ಕ್ಷೇತ್ರದ ಪ್ರಮುಖರು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ.