AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women's T20 World Cup 2026

Women's T20 World Cup 2026

Women’s T20 World Cup 2026 – 10 ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್​ ಜೂನ್ 12 ರಿಂದ ಜುಲೈ 5 ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ನಡೆಯಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಬಾರಿ, ಪಂದ್ಯಾವಳಿಯ ಒಟ್ಟು ಬಹುಮಾನದ ಹಣವನ್ನು 83ಕೋಟಿ ರೂ.ಗೆ ಏರಿಸಲಾಗಿದೆ ಎಂಬುದು ಗಮನಿಸಬೇಕಾದ ಸಂಗತಿಯಾಗಿದೆ. ಇನ್ನು ಈ ಪಂದ್ಯಾವಳಿಯ ಅತ್ಯಂತ ಯಶಸ್ವಿ ತಂಡವೆನಿಸಿಕೊಂಡಿರುವ ಆಸ್ಟ್ರೇಲಿಯಾ 6 ಬಾರಿ ಚಾಂಪಿಯನ್ ಆಗಿದ್ದರೆ, ಇಂಗ್ಲೆಂಡ್ 3 ಬಾರಿ ಟ್ರೋಫಿ ಎತ್ತಿಹಿಡಿದಿದೆ. ಟೀಂ ಇಂಡಿಯಾ ಒಮ್ಮೆ ಫೈನಲ್ ಆಡಿದೆಯಾದರೂ ಟ್ರೋಫಿ ಗೆಲ್ಲುವಲ್ಲಿ ವಿಫಲವಾಗಿದೆ.

ಇನ್ನೂ ಹೆಚ್ಚು ಓದಿ

ಆಸ್ಟ್ರೇಲಿಯಾ ಮುಡಿಗೆ ‘ಸಪ್ತ’ಮ ಕಿರೀಟ

ICC Women's T20 World Cup 2026: ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್ ತಂಡವು ಜಾಗತಿಕ ಕ್ರಿಕೆಟ್‌ನಲ್ಲಿ ತನ್ನ ಅಪ್ರತಿಮ ಪ್ರಾಬಲ್ಯವನ್ನು ಮುಂದುವರಿಸಿದೆ. ಈ ಪ್ರಾಬಲ್ಯದೊಂದಿಗೆ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಬರೋಬ್ಬರಿ 7ನೇ ಬಾರಿಗೆ ವಿಶ್ವಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಬಾರಿ ಆಸೀಸ್ ಪಡೆ ಒಂದೇ ಒಂದು ಮ್ಯಾಚ್​ನಲ್ಲಿ ಸೋಲದೇ ವಿಶ್ವ ಕಿರೀಟವನ್ನು ಮುಡಿಗೇರಿಸಿಕೊಂಡಿರುವುದು ವಿಶೇಷ.

ಟಿ20 ವಿಶ್ವಕಪ್ ವಿಜೇತ ತಂಡಕ್ಕೆ ಸಿಗುವ ಹಣವೆಷ್ಟು? ಭಾರತಕ್ಕೆ ಸಿಕ್ಕಿದ್ದೇಷ್ಟು?

Women's T20 World Cup 2026 Prize Money: 2026ರ ಮಹಿಳಾ ಟಿ20 ವಿಶ್ವಕಪ್ ಫೈನಲ್ ಜುಲೈ 5 ರಂದು ಲಾರ್ಡ್ಸ್‌ನಲ್ಲಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿದೆ. ಐಸಿಸಿ ಈ ವರ್ಷ ಬಹುಮಾನದ ಮೊತ್ತವನ್ನು 82 ಕೋಟಿ ರೂ.ಗಳಿಗೆ ಹೆಚ್ಚಿಸಿದೆ. ವಿಜೇತರಿಗೆ 22 ಕೋಟಿ ರೂ., ರನ್ನರ್‌ಅಪ್‌ಗೆ 11 ಕೋಟಿ ರೂ. ಸಿಗಲಿದೆ. ಸೆಮಿಫೈನಲಿಸ್ಟ್‌ಗಳಿಗೆ ತಲಾ 6.29 ಕೋಟಿ ರೂ. ಮತ್ತು ಗುಂಪು ಹಂತದ ಪ್ರತಿ ಗೆಲುವಿಗೆ 29 ಲಕ್ಷ ರೂ. ದೊರೆಯಲಿದೆ.

ಆಫ್ರಿಕಾ ತಂಡಕ್ಕೆ ಮತ್ತೆ ನಿರಾಸೆ; ಟಿ20 ವಿಶ್ವಕಪ್ ಫೈನಲ್​ಗೇರಿದ ಇಂಗ್ಲೆಂಡ್

Women's T20 World Cup 2026: 2026ರ ICC ಮಹಿಳಾ T20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್, ದಕ್ಷಿಣ ಆಫ್ರಿಕಾವನ್ನು 40 ರನ್‌ಗಳಿಂದ ಸೋಲಿಸಿ ಫೈನಲ್‌ಗೆ ಪ್ರವೇಶಿಸಿದೆ. ನಾಯಕಿ ನ್ಯಾಟ್ ಸಿವರ್-ಬ್ರಂಟ್ (75) ಮತ್ತು ಹೀದರ್ ನೈಟ್ (58) ಅವರ ಅಮೋಘ ಜೊತೆಯಾಟದಿಂದ ಇಂಗ್ಲೆಂಡ್ 169 ರನ್ ಗಳಿಸಿತು. ದಕ್ಷಿಣ ಆಫ್ರಿಕಾ 129 ರನ್ ಗಳಿಸಿ ಸೋತಿತು. ಇಂಗ್ಲೆಂಡ್ ಈಗ ಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

ಅಮೋಘ ಗೆಲುವಿನೊಂದಿಗೆ ಫೈನಲ್​ಗೇರಿದ ಆಸ್ಟ್ರೇಲಿಯಾ

Australia Women vs West Indies Women: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 20 ಓವರ್​​ಗಳಲ್ಲಿ 7 ವಿಕೆಟ್ ಕಳೆದುಕೊಂಡು 125 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 13 ಓವರ್​​ಗಳಲ್ಲಿ 127 ರನ್​ ಬಾರಿಸಿ 8 ವಿಕೆಟ್​​ಗಳ ಅಮೋಘ ಗೆಲುವು ದಾಖಲಿಸಿದೆ.

ಮಹಿಳಾ ಟಿ20 ವಿಶ್ವಕಪ್​ ಸೆಮಿಫೈನಲ್ ವೇಳಾಪಟ್ಟಿ ಪ್ರಕಟ

 ICC Women's T20 World Cup 2026: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಹತ್ತು ತಂಡಗಳೊಂದಿಗೆ ಶುರುವಾದ ಈ ಟೂರ್ನಿಯಲ್ಲಿ ಇದೀಗ ಉಳಿದಿರುವುದು ನಾಲ್ಕು ಟೀಮ್​ಗಳು ಮಾತ್ರ, ಇನ್ನುಳಿದ ಭಾರತ, ಪಾಕಿಸ್ತಾನ್, ಐರ್ಲೆಂಡ್, ನ್ಯೂಝಿಲೆಂಡ್, ಶ್ರೀಲಂಕಾ ಮತ್ತು ಸ್ಕಾಟ್‌ಲ್ಯಾಂಡ್ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.

ಬಾಂಗ್ಲಾದೇಶ ವಿರುದ್ಧ ಗೆದ್ದ ದಕ್ಷಿಣ ಆಫ್ರಿಕಾ; ಭಾರತ ಗೆದ್ದರಷ್ಟೇ ಸೆಮಿಫೈನಲ್ ಟಿಕೆಟ್

Women's T20 World Cup 2026: 2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದ ದಕ್ಷಿಣ ಆಫ್ರಿಕಾ ಸೆಮಿಫೈನಲ್ ರೇಸ್‌ನಲ್ಲಿ ಜೀವಂತವಾಗಿದೆ. ಈ ನಿರ್ಣಾಯಕ ಗೆಲುವು ಪಾಯಿಂಟ್ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾವನ್ನು ಎರಡನೇ ಸ್ಥಾನಕ್ಕೆ ಏರಿಸಿದೆ. ಇದರ ಪರಿಣಾಮವಾಗಿ, ಭಾರತ ತಂಡವು ಇಂದು ಆಸ್ಟ್ರೇಲಿಯಾ ವಿರುದ್ಧ ಗೆದ್ದರೆ ಮಾತ್ರ ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಸೋತರೆ ಲೀಗ್ ಹಂತದಲ್ಲೇ ಟೂರ್ನಿಯಿಂದ ಹೊರಬೀಳುವ ಅಪಾಯವಿದೆ.

ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲೆಂಡ್; ನಿವೃತ್ತಿ ಘೋಷಿಸಿದ ಮೂವರು ಲೆಜೆಂಡರಿ ಪ್ಲೇಯರ್ಸ್​

Women's T20 World Cup 2026: 2026ರ ಮಹಿಳಾ T20 ವಿಶ್ವಕಪ್‌ನಲ್ಲಿ ಹಾಲಿ ಚಾಂಪಿಯನ್ ನ್ಯೂಜಿಲೆಂಡ್ ನಿರಾಶಾದಾಯಕ ಪ್ರದರ್ಶನ ನೀಡಿ ಲೀಗ್ ಹಂತದಲ್ಲೇ ಹೊರಬಿದ್ದಿದೆ. ಈ ಆಘಾತದ ನಡುವೆ, ತಂಡದ ಮೂವರು ದಿಗ್ಗಜ ಆಟಗಾರ್ತಿಯರಾದ ಸೋಫಿ ಡಿವೈನ್, ಸುಜಿ ಬೇಟ್ಸ್ ಮತ್ತು ಲಿಯಾ ತಹುಹು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಕೊನೆಯ ಪಂದ್ಯ ಸೋತಿದ್ದರಿಂದ, ಈ ಶ್ರೇಷ್ಠ ಆಟಗಾರ್ತಿಯರಿಗೆ ಗೆಲುವಿನ ವಿದಾಯ ಸಾಧ್ಯವಾಗಲಿಲ್ಲ.

24 ಗಂಟೆಗಳ ಅಂತರದಲ್ಲಿ 2 ಐತಿಹಾಸಿಕ ಜಯ ಸಾಧಿಸಿದ ಐರ್ಲೆಂಡ್..!

Ireland Cricket's Golden Week: ಕ್ರಿಕೆಟ್ ಲೋಕದಲ್ಲಿ ಈಗಷ್ಟೇ ಬೆಳೆಯುತ್ತಿರುವ ಐರ್ಲೆಂಡ್ ತಂಡವು ಕೇವಲ 24 ಗಂಟೆಗಳ ಅಂತರದಲ್ಲಿ ಎರಡು ಐತಿಹಾಸಿಕ ಗೆಲುವುಗಳನ್ನು ದಾಖಲಿಸಿದೆ. ಐರ್ಲೆಂಡ್ ಪುರುಷರ ತಂಡವು ಭಾರತದ ವಿರುದ್ಧ ಮೊದಲ T20 ಪಂದ್ಯವನ್ನು ಗೆದ್ದು ಇತಿಹಾಸ ಸೃಷ್ಟಿಸಿತು. ಬೆನ್ನಲ್ಲೇ, ಐರ್ಲೆಂಡ್ ಮಹಿಳಾ ತಂಡವು T20 ವಿಶ್ವಕಪ್‌ನಲ್ಲಿ ಬಲಿಷ್ಠ ವೆಸ್ಟ್ ಇಂಡೀಸ್ ಅನ್ನು ಸೋಲಿಸಿ ತಮ್ಮ ಮೊದಲ ಗೆಲುವನ್ನು ಸಾಧಿಸಿತು. ಇದು ಕ್ರಿಕೆಟ್‌ನಲ್ಲಿ ಐರ್ಲೆಂಡ್‌ಗೆ ಒಂದು ಸುವರ್ಣ ಕ್ಷಣವಾಗಿದೆ.

ಸೌತ್ ಆಫ್ರಿಕಾ ಎಷ್ಟು ರನ್​​​ಗಳಿಂದ ಗೆದ್ದರೆ ಟೀಮ್ ಇಂಡಿಯಾ ಹೊರಬೀಳಲಿದೆ?

ICC Women's T20 World Cup 2026: ವುಮೆನ್ಸ್ ಟಿ20 ವಿಶ್ವಕಪ್​ ಲೀಗ್​ ಹಂತದ ಕೊನೆಯ ಎರಡು ಪಂದ್ಯಗಳಲ್ಲಿ ಸೌತ್ ಆಫ್ರಿಕಾ, ಬಾಂಗ್ಲಾದೇಶ್ ಹಾಗೂ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳು ಕಣಕ್ಕಿಳಿಯಲಿವೆ. ಇಲ್ಲಿ ಸೌತ್ ಆಫ್ರಿಕಾ ಬಾಂಗ್ಲಾದೇಶ್ ತಂಡವನ್ನು ಎದುರಿಸಿದರೆ, ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲಿದೆ.

ಹೀಗಾದ್ರೆ ಮಾತ್ರ ಟೀಮ್ ಇಂಡಿಯಾ ಸೆಮಿಫೈನಲ್​ಗೇರಲಿದೆ..!

Womens T20 World Cup 2026: ಮಹಿಳಾ ಟಿ20 ವಿಶ್ವಕಪ್‌ನ ನಿಯಮಾವಳಿಗಳ ಪ್ರಕಾರ ಲೀಗ್ ಹಂತದ ಮುಕ್ತಾಯದ ವೇಳೆಗೆ ಪ್ರತಿ ಗ್ರೂಪ್‌ನಲ್ಲಿ ಮೊದಲ ಎರಡು ಸ್ಥಾನಗಳನ್ನು ಪಡೆಯುವ ತಂಡಗಳು ಮಾತ್ರ ನೇರವಾಗಿ ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ. ಪ್ರಸ್ತುತ ಗ್ರೂಪ್ ‘ಎ’ ಪಾಯಿಂಟ್ಸ್ ಟೇಬಲ್‌ನಲ್ಲಿ ತೀವ್ರ ಪೈಪೋಟಿ ಏರ್ಪಟ್ಟಿದೆ.

ಭಾರತ- ಆಸ್ಟ್ರೇಲಿಯಾ ನಡುವೆ ಹೈವೋಲ್ಟೇಜ್ ಕದನ; ಹರ್ಮನ್ ಪಡೆ ಗೆದ್ದರಷ್ಟೇ ಸೆಮೀಸ್ ಆಸೆ ಜೀವಂತ

India Women vs Australia T20 World Cup 2026: 2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ತಂಡ ಆಸ್ಟ್ರೇಲಿಯಾ ವಿರುದ್ಧ ತನ್ನ ಕೊನೆಯ ಗುಂಪು ಪಂದ್ಯವನ್ನು ಆಡಲಿದೆ. ಸೆಮಿಫೈನಲ್ ಪ್ರವೇಶಿಸಲು ಭಾರತಕ್ಕೆ ಈ ಪಂದ್ಯ ಗೆಲ್ಲಲೇಬೇಕು. ಜೂನ್ 28ರಂದು ಲಾರ್ಡ್ಸ್‌ನಲ್ಲಿ ಸಂಜೆ 7 ಗಂಟೆಗೆ ನಡೆಯುವ ಈ ನಿರ್ಣಾಯಕ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ವೀಕ್ಷಿಸಬಹುದು. ಉಭಯ ತಂಡಗಳ ಸ್ಕ್ವಾಡ್ ವಿವರ ಇಲ್ಲಿದೆ.

ಒಂದೇ ಒಂದು ಪಂದ್ಯ ಗೆದ್ದು ಟಿ20 ವಿಶ್ವಕಪ್​ನಿಂದ ಹೊರಬಿದ್ದ ಪಾಕಿಸ್ತಾನ

Pakistan Women's T20 World Cup 2026: 2026ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಮಹಿಳಾ ತಂಡ ಗುಂಪು ಹಂತದಿಂದ ಹೊರಬಿದ್ದಿದೆ. ಮೊದಲ ನಾಲ್ಕು ಪಂದ್ಯಗಳಲ್ಲಿ ಸೋತರೂ, ಲೀಗ್‌ನ ಕೊನೆಯ ಪಂದ್ಯದಲ್ಲಿ ನೆದರ್‌ಲ್ಯಾಂಡ್ಸ್ ತಂಡವನ್ನು 37 ರನ್‌ಗಳಿಂದ ಸೋಲಿಸಿ ಗೆಲುವಿನೊಂದಿಗೆ ವಿದಾಯ ಹೇಳಿದೆ. ಗುಲ್ ಫಿರೋಜಾ 63* ರನ್ ಗಳಿಸಿ ಮಿಂಚಿದರು. ಸೆಮಿಫೈನಲ್ ನಿರೀಕ್ಷೆಯಿಲ್ಲದಿದ್ದರೂ, ಕೊನೆಯ ಗೆಲುವು ತಂಡಕ್ಕೆ ಒಂದಿಷ್ಟು ಸಮಾಧಾನ ತಂದಿದೆ.