ಸವದತ್ತಿ ಯಲ್ಲಮ್ಮನ ದರ್ಶನಕ್ಕೆ 200 ರೂ. ಬೇಡಿಕೆ: ಖಾಕಿ ಎದುರೇ ಭರ್ಜರಿ ರೋಲ್​ಕಾಲ್!

ಬೆಳಗಾವಿ: ಜಿಲ್ಲೆಯ ಸುಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನಕ್ಕೆ ಭಕ್ತರ ಬಳಿ ಮಧ್ಯವರ್ತಿಗಳು 200 ರೂಪಾಯಿ ನೀಡಲು ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಚ್ಚರಿಯ ಸಂಗತಿಯೆಂದರೆ ಇದೆಲ್ಲಾ ಲಂಚಾವತಾರಗಳು ಪೊಲೀಸರ ಎದರೇ ನಡೆಯುತ್ತಿದೆ.
ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಕೊರೊನಾ ಹಿನ್ನೆಲೆಯಲ್ಲಿ ಅಕ್ಟೋಬರ್ 31ರವರೆಗೆ ಮುಚ್ಚಲಾಗಿದೆ. ಯಲ್ಲಮ್ಮನ ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಸವದತ್ತಿ ಮತ್ತು ಜೋಗುಳಬಾವಿಯಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದ್ದು ಪೊಲೀಸರನ್ನು ಸಹ ನಿಯೋಜಿಸಲಾಗಿದೆ.

ಆದರೆ, ಇಂದಿನಿಂದ ಅಕ್ಟೋಬರ್ 25ರವರೆಗೆ ನವರಾತ್ರಿ ಉತ್ಸವವಿರುವ ಹಿನ್ನೆಲೆಯಲ್ಲಿ ಯಲ್ಲಮ್ಮ ದೇವಿಯ ದರ್ಶನಕ್ಕೆ ಭಕ್ತರ ದಂಡು ಆಗಮಿಸುತ್ತಿದೆ. ಇದನ್ನೆ ಬಳಸಿಕೊಳ್ಳಲು ಮುಂದಾಗಿರುವ ಮಧ್ಯವರ್ತಿಗಳು ಪೊಲೀಸರ ಸಮ್ಮುಖದಲ್ಲೇ ಭಕ್ತರ ಬಳಿ 200 ರೂ. ಲಂಚ ಬೇಡುತ್ತಿರುವ ದೃಶ್ಯಗಳು ಕಂಡು ಬಂದಿದೆ.

ಭಕ್ತರ ಬಳಿ ಲಂಚಕ್ಕೆ ಬೇಡಿಕೆ ಇಡುತ್ತಿರುವ ವ್ಯಕ್ತಿಯ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಲಂಚ ಪಡೆಯುವ ಖಾಸಗಿ ವ್ಯಕ್ತಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡುತ್ತಿದ್ದಾರಾ ಎಂದು ಜನರು ಆರೋಪಿಸುತ್ತಿದ್ದಾರೆ.

Related Tags:

Related Posts :

Category:

error: Content is protected !!