Video: ಬೈಕ್​​ನಲ್ಲಿದ್ದ 1.5 ಲಕ್ಷ ರೂ. ಹಣದ ಬ್ಯಾಗ್​ನ್ನು ಎಗರಿಸಿದ ಮಂಗಣ್ಣ​​

ಮಂಗವೊಂದು ಬೈಕಿನಿಂದ ಹಣವನ್ನು ಕಳ್ಳತನ ಮಾಡುತ್ತಿದೆ ಎಂದು ಹೇಳುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Video: ಬೈಕ್​​ನಲ್ಲಿದ್ದ 1.5 ಲಕ್ಷ ರೂ. ಹಣದ ಬ್ಯಾಗ್​ನ್ನು ಎಗರಿಸಿದ ಮಂಗಣ್ಣ​​
ವೈರಲ್​​ ವೀಡಿಯೊ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 06, 2023 | 5:43 PM

ಲಕ್ನೋ: ಮನುಷ್ಯರು ಮಾತ್ರ ಕಳ್ಳತನ ಮಾಡುವುದನ್ನು ನೋಡಿರಬಹುದು, ಆದರೆ ಇಲ್ಲೊಂದು ವೈರಲ್​​ ಆಗಿರುವ ವೀಡಿಯೊದಲ್ಲಿ ಮಂಗವೊಂದು ಬೈಕಿನಿಂದ 1.5 ಲಕ್ಷ ರೂ. ಹಣವನ್ನು ಕಳ್ಳತನ ಮಾಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೊವೊಂದು ಭಾರೀ ವೈರಲ್​​ ಆಗುತ್ತಿದೆ.  ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಪೊಲೀಸರಿಗೆ ಯಾರು ಜೂಡ ದೂರ ನೀಡಿಲ್ಲ, ಉತ್ತರ ಪ್ರದೇಶದ ಶಹಾಬಾದ್​​ನಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಉತ್ತರ ಪ್ರದೇಶದ ಶಹಾಬಾದ್‌ ನೋಂದಾವಣೆ ಕಚೇರಿಯ ಹೊರಭಾಗದಲ್ಲಿ ದ್ವಿಚಕ್ರವಾಹನದಲ್ಲಿ ₹ 1.5 ಲಕ್ಷ ನಗದು ಇರುವ ಬ್ಯಾಗನ್ನು ಕೋತಿ ತೆಗೆಯುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ . ಬೈಕ್ ಮಾಲೀಕ ಶರಾಫತ್ ಹುಸೇನ್ ಸೇಲ್ ಡೀಡ್​​ಗಾಗಿ ಕಚೇರಿಗೆ ಬಂದಿದ್ದರು ಎಂದು ಹೇಳಿದ್ದಾರೆ. ಈ ಸಮಯದಲ್ಲಿ ಈ ಘಟನೆ ನಡೆದಿದೆ

ನೋಂದಾವಣೆ ಕಚೇರಿಯ ಹೊರಗಿನ ಪಾರ್ಕಿಂಗ್ ಸ್ಥಳದಲ್ಲಿ ಮಂಗ ಎಲ್ಲಾ ಬೈಕ್‌ಗಳಲ್ಲಿರುವ ಬ್ಯಾಗ್‌ಗಳನ್ನು ಪರಿಶೀಲನೆ ನಡೆಸುತ್ತಿರುವುದನ್ನು ಈ ವೀಡಿಯೊದಲ್ಲಿ ನೋಡಬಹುದು. ಎಲ್ಲಾ ಬ್ಯಾಗ್‌ಗಳ ಸಂಪೂರ್ಣ ಹುಡುಕಾಟ ನಡೆಸಿದ ನಂತರ ಈ ಕೋತಿ ₹ 1.5 ಲಕ್ಷ ನಗದು ಇರುವ ಬ್ಯಾಗ್​​ನ್ನು ತೆಗೆದುಕೊಂಡು ಹೋಗಿದೆ.

ಹುಸೇನ್ ಅವರು ಹಣ ಕಳವಾಗಿರುವುದನ್ನು ತಿಳಿದುಕೊಂಡು, ಕಚೇರಿಯ ಹೊರಗೆ ಬಂದಿದ್ದರೆ, ಸ್ವಲ್ಪ ಹೊತ್ತು, ಗಾಬರಿಯಾಗಿದ್ದರು. ಅವರು ಹೊರಗೆ ಬರುವಷ್ಟರಲ್ಲಾಗಲೇ ಕೋತಿ ಸ್ಥಳದಿಂದ ನಾಪತ್ತೆಯಾಗಿತ್ತು. ನಂತರ ಎಲ್ಲರೂ ಕೋತಿಯ ಕೈಯಲ್ಲಿದ್ದ 1.5 ಲಕ್ಷ ಹಣವನ್ನು ಪಡೆದುಕೊಳ್ಳಲು ಹರಸಾಹಸ ಪಟ್ಟಿದ್ದಾರೆ. ಹೇಗಾದರೂ ಕೋತಿಯ ಕೈಯಿಂದ ಬ್ಯಾಗ್​​ನ್ನು ಹಿಂಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ, ಅದರಲ್ಲಿದ್ದ ಹಣಕ್ಕೆ ಮಂಗ ಯಾವುದೇ ತೊಂದರೆ ಮಾಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:Viral Video: ಕಾಡಾನೆಗಳ ಹಿಂಡಿನೊಂದಿಗೆ ಸೆಲ್ಫಿ ತೆಗೆಯಲು ಹೋದ ಯುವಕರು, ಮುಂದೇನಾಯಿತು?; ವಿಡಿಯೋ ವೈರಲ್​​

ಶಹಾಬಾದ್‌ನಲ್ಲಿ ಮಂಗಗಳ ಹಾವಳಿ ಹೆಚ್ಚಾಗಿದೆ ಎಂದು ಜಿಲ್ಲಾಡಳಿತ ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ತಂಡವನ್ನು ನೇಮಿಸಿ ಮಂಗಗಳನ್ನು ಹಿಡಿದು ಕಾಡಿಗೆ ಬಿಡಲಾಗುವುದು ಎಂದು ಹೇಳಿದರು. ಮಂಗಗಳ ಹಾವಳಿಯನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ ಎಂದು ಶಹಾಬಾದ್ ಉಪ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನಿಲ್ ಕುಮಾರ್ ಹೇಳಿದರು.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 5:05 pm, Thu, 6 July 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ