ಸಲಿಂಗಕಾಮಿ ಜೋಡಿಗೆ 100 ವರ್ಷ ಜೈಲು ಶಿಕ್ಷೆ; ಅಪರಾಧದ ಬಗ್ಗೆ ತಿಳಿದರೆ ನಿಮ್ಮ ರಕ್ತ ಕುದಿಯುವುದಂತೂ ಖಂಡಿತಾ

ಜಾರ್ಜಿಯಾದ ನ್ಯಾಯಾಲಯವೊಂದು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಒಂದು ಸಲಿಂಗ ದಂಪತಿಗೆ 100 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ದಂಪತಿ ದತ್ತು ಪಡೆದ ಮಕ್ಕಳನ್ನು ಲೈಂಗಿಕವಾಗಿ ದುರುಪಯೋಗಪಡಿಸಿಕೊಂಡು ಅಶ್ಲೀಲ ವಿಡಿಯೋಗಳನ್ನು ಮಾಡಿ ಮಾರಾಟ ಮಾಡಿದ್ದರು. ಈ ಘಟನೆಯು 'ಹೌಸ್ ಆಫ್ ಹಾರರ್' ಎಂದು ನ್ಯಾಯಾಲಯ ಬಣ್ಣಿಸಿದ್ದು, ಜೊತೆಗೆ ದತ್ತು ಪಡೆಯುವ ಪ್ರಕ್ರಿಯೆಯಲ್ಲಿ ಹೆಚ್ಚಿನ ಜಾಗೃತೆ ಅಗತ್ಯವಿದೆ ಎಂದು ಎಚ್ಚರಿಕೆ ನೀಡಿದೆ.

ಸಲಿಂಗಕಾಮಿ ಜೋಡಿಗೆ 100 ವರ್ಷ ಜೈಲು ಶಿಕ್ಷೆ; ಅಪರಾಧದ ಬಗ್ಗೆ ತಿಳಿದರೆ ನಿಮ್ಮ ರಕ್ತ ಕುದಿಯುವುದಂತೂ ಖಂಡಿತಾ
100 Year Sentence Georgia Court Convicts Gay Couple
Follow us
ಅಕ್ಷತಾ ವರ್ಕಾಡಿ
|

Updated on:Dec 25, 2024 | 11:44 AM

ಅಮೆರಿಕದ ಜಾರ್ಜಿಯಾದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಇಲ್ಲಿನ ನ್ಯಾಯಾಲಯವೊಂದು ಸಲಿಂಗಕಾಮಿ ದಂಪತಿಗೆ 100 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಷ್ಟೇ ಅಲ್ಲ, ಅಪರಾಧದ ಗಂಭೀರತೆಯನ್ನು ಪರಿಗಣಿಸಿ ನ್ಯಾಯಾಧೀಶರು ಅವರಿಗೆ ಪೆರೋಲ್ ನೀಡಲಾಗುವುದಿಲ್ಲ ಎಂದು ಹೇಳಿದ್ದರಿಂದ ಇಬ್ಬರೂ ಈಗ ತಮ್ಮ ಇಡೀ ಜೀವನವನ್ನು ಜೈಲಿನಲ್ಲೇ ಕಳೆಯಬೇಕಾಗಿದೆ. ಅಷ್ಟಕ್ಕೂ ಇಷ್ಟು ಕಠಿಣ ಶಿಕ್ಷೆ ಕೊಡಲು ಕಾರಣವೇನು ಎಂದು ತಿಳಿದರೆ ನಿಮ್ಮ ರಕ್ತ ಕುದಿಯುವುದಂತೂ ಖಂಡಿತಾ.

34 ವರ್ಷದ ವಿಲಿಯಂ ಮತ್ತು 36 ವರ್ಷದ ಜಕಾರಿ ಜುಲಾಕ್ ಎಂಬ ಸಲಿಂಗಕಾಮಿಗಳು ಇತ್ತೀಚಿಗಷ್ಟೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದಾರೆ. ವರ್ಷಗಳ ಬಳಿಕ ಈ ಜೋಡಿ 12 ಮತ್ತು 10 ವರ್ಷ ವಯಸ್ಸಿನ ಇಬ್ಬರು ಮಕ್ಕಳನ್ನು ದತ್ತು ಪಡೆದಿದ್ದು, ಈ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಅಪರಾಧಿಗಳು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಸ್ನೇಹಿತರಿಗೆ ಮಾರಾಟ ಮಾಡಿದ್ದಾರೆ.

ವಾಲ್ಟನ್ ಕೌಂಟಿ ಪೊಲೀಸರು ಸಲಿಂಗಕಾಮಿ ದಂಪತಿಗಳ ಮನೆಯ ಮೇಲೆ ದಾಳಿ ನಡೆಸಿದ್ದು, ತನಿಖೆಯ ವೇಳೆ ಕಂಡುಬಂದ ದೃಶ್ಯಗಳನ್ನು ನೋಡಿ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ವರದಿಯ ಪ್ರಕಾರ, ಪೊಲೀಸರು ಸಲಿಂಗಕಾಮಿ ದಂಪತಿಗಳ ಮನೆಯಿಂದ 7TB ಗಿಂತ ಹೆಚ್ಚಿನ ಡಿಜಿಟಲ್ ಡೇಟಾ ಮತ್ತು ಗ್ರಾಫಿಕ್ ಫೋಟೋಗಳು ಮತ್ತು ಅಶ್ಲೀಲ ವೀಡಿಯೊಗಳನ್ನು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ವಾಕಿಂಗ್ ಮಾಡುವಾಗ ವೃದ್ಧೆಯನ್ನು ದರದರನೆ ಎಳೆದುಕೊಂಡು ಹೋಗಿ ಕಚ್ಚಿ ಕೊಂದ 7 ಬೀದಿ ನಾಯಿಗಳು; ವಿಡಿಯೋ ನೋಡಿ

‘ಹೌಸ್ ಆಫ್ ಹಾರರ್’:

ಇನ್ಮುಂದೆ ನಿರ್ಗತಿಕ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಮುಂದೆ ಬರುವ ಜನರ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಬೇಕು ಎಂದು ನ್ಯಾಯಲಯ ಎಚ್ಚರಿಕೆ ನೀಡಿದೆ. ಇಬ್ಬರು ಅನಾಥ ಮಕ್ಕಳನ್ನು ಈ ರೀತಿ ಬಳಸಿಕೊಂಡ ಸಲಿಂಗಕಾಮಿ ದಂಪತಿಗಳ ಮನೆಯನ್ನು ‘ಹೌಸ್ ಆಫ್ ಹಾರರ್’ ಎಂದು ಬಣ್ಣಿಸಿದ ನ್ಯಾಯಾಲಯ, ಈ ದಂಪತಿಗೆ 100 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:42 am, Wed, 25 December 24

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
Video: ಕಜಾಕಿಸ್ತಾನದಲ್ಲಿ 110 ಮಂದಿ ಪ್ರಯಾಣಿಕರಿದ್ದ ವಿಮಾನ ಪತನ
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು
ಮ್ಯಾಕ್ಸ್ ಸಿನಿಮಾ ಬಗ್ಗೆ ಪ್ರಾಮಾಣಿಕ ವಿಮರ್ಶೆ ತಿಳಿಸಿದ ಯಶ್ ಅಭಿಮಾನಿಗಳು