ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಮಕರ ಸಂಕ್ರಾಂತಿ ಹಬ್ಬ ಸಮೀಪಿಸುತ್ತಿದ್ದಂತೆ ಹಬ್ಬದ ಸಂಭ್ರಮದ ನಡುವೆ ಅಘಾತಕಾರಿ ಘಟನೆಯೊಂದು ನಡೆದಿದೆ. ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತಪಟ್ಟಿದ್ದು, ಹಬ್ಬದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.

ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು
Follow us
TV9 Web
| Updated By: ಅಕ್ಷತಾ ವರ್ಕಾಡಿ

Updated on:Jan 13, 2024 | 6:27 PM

ಹೈದರಾಬಾದ್: ಪ್ರತಿವರ್ಷ ವರ್ಷದ ಆರಂಭದಲ್ಲಿ  ಆಚರಿಸುವ ಹಬ್ಬಗಳಲ್ಲಿ ಮಕರ ಸಂಕ್ರಾಂತಿ ಕೂಡಾ ಒಂದು. ಎಳ್ಳು ಬೆಲ್ಲವನ್ನು ಹಂಚಿ ಜನರು ಈ ದಿನ ಸಂಭ್ರಮಿಸುತ್ತಾರೆ. ಮಕರ ಸಂಕ್ರಾಂತಿಯ ಸಂಭ್ರಮದಲ್ಲಿ ಗಾಳಿಪಟ ಹಾರಿಸುವ ಪದ್ಧತಿ ಕೂಡಾ ಬೆಸೆದುಕೊಂಡಿದೆ. ಈ ದಿನ ಎಲ್ಲರೂ ಒಟ್ಟಾಗಿ ಖುಷಿಯಿಂದ ಗಾಳಿಪಟ ಹಾರಿಸಿ ಸಂಭ್ರಮಿಸುತ್ತಾರೆ. ಆದರೆ ಹಬ್ಬ ಸಮೀಪಿಸುತ್ತಿದ್ದಂತೆ ಹಬ್ಬದ ಸಂಭ್ರಮದ ನಡುವೆ ಅಘಾತಕಾರಿ ಘಟನೆಯೊಂದು ನಡೆದಿದೆ. ಮನೆಯ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ತನಿಷ್ಕ್ (11) ಮೃತಪಟ್ಟಿರುವ ಘಟನೆ ಅತ್ತಾಪುರ ಪ್ರದೇಶದಲ್ಲಿ ನಡೆದಿದೆ. ಮನೆಗೆ ತಂದಿದ್ದ ಗಾಳಿಪಟ ಹಾರಿಸುವ ಖಷಿಯಲ್ಲಿ ಪುಟ್ಟ ಬಾಲಕ ಮನೆಯ ಟೆರೇಸ್ ಮೇಲೆ ಹೋಗಿದ್ದಾನೆ. ಆದರೆ ಟೆರೇಸ್ ಮೇಲೆ ಗಾಳಿಪಟ ಹಾರಿಸುತ್ತಿದ್ದಾಗ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಮೃತಪಟ್ಟಿರುವುದು ಹಬ್ಬದ ಮನೆಯಲ್ಲಿ ಸೂತಕದ ವಾತಾವಾರಣಕ್ಕೆ ಕಾರಣವಾಗಿದೆ.

ತನಿಷ್ಕ್ ತಮ್ಮ ಮನೆಯ ಮಹಡಿ ಮೇಲೆ ನಿಂತು ಗಾಳಿ ಪಟ ಹಾರಿಸುವ ವೇಳೆ ಗಾಳಿ ಪಟದ ದಾರ ವಿದ್ಯುತ್​ ತಂತಿಗೆ ಸಿಲುಕಿಕೊಂಡಿದೆ. ಅದನ್ನು ಬಿಡಿಸಲು ಹೋದಾಗ ಬಾಲಕಿನಿಗೆ ವಿದ್ಯುತ್​ ಪ್ರವಹಿಸಿದೆ. ತಕ್ಷಣ ಬಾಲಕ ಕಿರುಚಿಕೊಂಡಿದ್ದಾನೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಇಂತಹ ಘಟನೆಗಳು ಇದೇ ಮೊದಲೇನಲ್ಲಾ ಕಳೆದ ವರ್ಷವೂ ಕೂಡ ಇಂತಹದ್ದೇ ಅಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಉತ್ತರ ಬೆಂಗಳೂರಿನ ಆರ್‌ಟಿ ನಗರದ ಎಚ್‌ಎಂಟಿ ಲೇಔಟ್‌ನಲ್ಲಿ 13 ವರ್ಷದ ಬಾಲಕ ಗಾಳಿಪಟ ಹಾರಿಸುವಾಗ ಹೈಟೆನ್ಷನ್ ತಂತಿ ಸ್ಪರ್ಶಿಸಿ ಮೃತಪಟ್ಟಿದ್ದ.

Published On - 6:26 pm, Sat, 13 January 24

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು