Crime: ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದ 15 ರ ಬಾಲಕ

ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತಂದೆ-ತಾಯಿ ಹಾಗೂ ಸಹೋದರನನ್ನು 15 ವರ್ಷದ ಬಾಲಕ ಬರ್ಬರವಾಗಿ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಕೊಲೆ ಮಾಡಿರುವುದಾಗಿ ಒಪ್ಪಿಕೊಂಡ ಬಾಲಾಪರಾಧಿಯನ್ನು ಗಾಜಿಪುರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

Crime: ಪ್ರೀತಿಗೆ ವಿರೋಧ; ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದ 15 ರ ಬಾಲಕ
ತಂದೆ-ತಾಯಿ ಹಾಗೂ ಸಹೋದರನನ್ನು ಕೊಂದ 15 ರ ಬಾಲಕ
Follow us
ಅಕ್ಷತಾ ವರ್ಕಾಡಿ
|

Updated on: Jul 11, 2024 | 10:55 AM

ವಾರಣಾಸಿ: ಕಳೆದ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತಂದೆ-ತಾಯಿ ಹಾಗೂ ಸಹೋದರನನ್ನು ಬರ್ಬರವಾಗಿ ಕೊಂದಿರುವುದಾಗಿ ಒಪ್ಪಿಕೊಂಡ 15 ವರ್ಷದ ಬಾಲಕನನ್ನು ಗಾಜಿಪುರ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಜುಲೈ 7 ಮತ್ತು 8 ರ ಮಧ್ಯರಾತ್ರಿ ಘಾಜಿಪುರ ಜಿಲ್ಲೆಯ ನಂದಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಸುಮ್ಹಿಕಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬಾಲಾಪರಾಧಿಯನ್ನು ಬಂಧಿಸಲಾಗಿದ್ದು, ಆತನ ತಂದೆ ಮುನ್ಷಿ ಬಿಂದ್ (45), ತಾಯಿ ದೇವಂತಿ ಬಿಂದ್(40) ಮತ್ತು ಸಹೋದರನ ಕತ್ತು ಸೀಳಲು ಬಳಸಿದ್ದ ಹರಿತವಾದ ಆಯುಧವನ್ನು ವಶಪಡಿಸಿಕೊಂಡಿರುವುದಾಗಿ ಎಂದು ಗಾಜಿಪುರ ಎಸ್ಪಿ ಓಂವಿರ್ ಸಿಂಗ್ ಮಂಗಳವಾರ ತಿಳಿಸಿದ್ದಾರೆ.

ಇದನ್ನೂ ಓದಿ: ಡ್ರಾಪ್ ಕೇಳಿದ ಬಾಲಕಿ‌ ಮೇಲೆ ಅತ್ಯಾಚಾರ: ತಮ್ಮೊಂದಿಗೆ ಬಂದಿದ್ದ ಯುವಕರಿಂದಲೇ ಕೃತ್ಯ

ಹಲವು ದಿನಗಳ ಹಿಂದೆ ಮೂವರನ್ನು ಕೊಲ್ಲಲು ನಿರ್ಧರಿಸಿದ್ದೆ, ಆದರೆ ಸಾಧ್ಯವಾಗಲಿಲ್ಲಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ. ಭಾನುವಾರ ರಾತ್ರಿ, ಕುಟುಂಬದ ಸದಸ್ಯರೆಲ್ಲರೂ ಮಲಗಿದ್ದಾಗ ಮದ್ಯ ಸೇವಿಸಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬಂದ ಬಾಲಕ ತಂದೆ, ತಾಯಿ ಹಾಗೂ ಸಹೋದರನ ಕತ್ತು ಸೀಳಿದ್ದಾನೆ. ಅಪರಾಧ ಮಾಡಿದ ನಂತರ, ಮನೆಯಿಂದ ಸ್ವಲ್ಪ ದೂರದಲ್ಲಿರುವ ಹೊಲದಲ್ಲಿ ಚಾಕುವನ್ನು ಬಚ್ಚಿಟ್ಟು ಹತ್ತಿರದ ಆರ್ಕೆಸ್ಟ್ರಾ ಪ್ರದರ್ಶನವನ್ನು ನೋಡಲು ಹೋಗಿದ್ದಾನೆ. ಬಳಿಕ ಬೆಳಗಿನ ಜಾವ 1.45 ರ ಸುಮಾರಿಗೆ ಮನೆಗೆ ಹಿಂದಿರುಗಿದ ಬಾಲಕ ಮನೆಯವರನ್ನು ಯಾರೋ ಕೊಂದು ಹೋಗಿರುವುದಾಗಿ ಗ್ರಾಮಸ್ಥರಿಗೆ ಕರೆ ಮಾಡಿ ತಿಳಿಸಿದ್ದಾನೆ. ಬಳಿಕ ಪೊಲೀಸ್​​ ವಿಚಾರಣೆ ವೇಳೆ ಬಾಲಕ ತನ್ನ ತಪ್ಪನ್ನು ಒಪ್ಪಿಕೊಂಡಿರುವುದಾಗಿ ತಿಳಿದುಬಂದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ