18 ತಿಂಗಳ ಮಗುವನ್ನು ಥಳಿಸುತ್ತಿರುವ ತಾಯಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​

ಮಗುವಿನ ಬಾಯಿ ಮತ್ತು ಮೂಗಿನಿಂದ ರಕ್ತಸ್ರಾವವಾಗಲು ಆರಂಭಿಸಿದೆ. ಆದರೂ ಸಹ ಮಹಿಳೆ ಬಿಡದೇ ಪುನಃ ಮಗುವಿಗೆ ಥಳಿಸುತ್ತಿದ್ದಾಳೆ.

18 ತಿಂಗಳ ಮಗುವನ್ನು ಥಳಿಸುತ್ತಿರುವ ತಾಯಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on:Aug 30, 2021 | 12:53 PM

ಹೈದರಾಬಾದ್: ಆಂಧ್ರಪ್ರದೇಶದ ಮಹಿಳೆಯೊಬ್ಬಳು ತನ್ನ 18 ತಿಂಗಳ ಮಗುವಿನ ಮೇಲೆ ಹಲ್ಲೆ ನಡೆಸಿದ್ದಾಳೆ. ಮಗುವಿಗೆ ಥಳಿಸುತ್ತಿರುವ ದೃಶ್ಯವನ್ನು ಮೊಬೈಲ್​ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾಳೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 22 ವರ್ಷದ ಮಹಿಳೆಯನ್ನು ತುಳಸಿ ಎಂದು ಗುರುತಿಸಲಾಗಿದೆ. ತುಳಸಿ ನಾಲ್ಕು ವರ್ಷಗಳ ಹಿಂದೆ ವಡಿವಳಗನ್ ಅವರನ್ನು ವಿವಾಹವಾದರು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಅವರು ತಮಿಳುನಾಡಿನ ಮೊತ್ತೂರು ಗ್ರಾಮದಲ್ಲಿ ವಾಸವಾಗಿದ್ದರು. 

ವಡಿವಳಗನ್​  ಮತ್ತು ತುಳಸಿ ಪದೆ ಪದೇ ಜಗಳವಾಡುತ್ತಿದ್ದರು. ಈ ಕಾರಣಕ್ಕಾಗಿ ವಡಿವಳಗನ್ ಅವರು ತುಳಸಿ ಅವರನ್ನು ತೊರೆದರು. ಬಳಿಕ ಆಂಧ್ರ ಪ್ರದೇಶದಲ್ಲಿ ತನ್ನ ಹೆತ್ತವರೊಂದಿಗೆ ವಾಸಿಸಲು ಪ್ರಾರಂಭಿಸಿದರು. ತುಳಸಿಯು ತನ್ನ ಮಗುವನ್ನು ಥಳಿಸುವ ವಿಡಿಯೋವನ್ನು ನೋಡಿದ ಸಂಬಂಧಿಕರು ವಾಡಿವಾಜಗನ್ ಅವರಿಗೆ ಮಾಹಿತಿ ತಿಳಿಸಿದ್ದಾರೆ.

18 ತಿಂಗಳ ಮಗುವನ್ನು ಮಹಿಳೆ ಥಳಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮಗುವಿನ ಬಾಯಿ ಮತ್ತು ಮೂಗಿನಿಂದ ರಕ್ತಸ್ರಾವವಾಗಲು ಆರಂಭಿಸಿದೆ. ಆದರೂ ಸಹ ಮಹಿಳೆ ಬಿಡದೇ ಪುನಃ ಮಗುವಿಗೆ ಥಳಿಸುತ್ತಿದ್ದಾಳೆ ಎಂದು ಇಂಡಿಯಾ ಟು ಡೇ ಸುದ್ದಿ ಮಾಧ್ಯಮ ವರದಿ ಮಾಡಿದೆ.

ಮಹಿಳೆ ತನ್ನ ಮುಷ್ಟಿಯಿಂದ ಮಗುವಿನ ಕಾಲಿಗೆ ಥಳಿಸುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ವಡಿವಳಗನ್ ಅವರು ಆಂಧ್ರಪ್ರದೇಶಕ್ಕೆ ಧಾವಿಸಿ ತಮ್ಮ ಇಬ್ಬರು ಮಕ್ಕಳನ್ನು ತಾವಿರುವ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಮೂಲದ ಮಹಿಳೆಯನ್ನು ಹಿಡಿಯಲು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ಪೊಲೀಸರ ಪ್ರಕಾರ, ವಡಿವಳಗನ್ (37) ಮತ್ತು ತುಳಸಿ (22) ದಂಪತಿಗೆ ಮದುವೆಯಾಗಿ ಐದು ವರ್ಷಗಳಾಗಿವೆ. ಅವರಿಗೆ ನಾಲ್ಕು ವರ್ಷದ ಮತ್ತು 18 ತಿಂಗಳ ಇಬ್ಬರು ಮಕ್ಕಳಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ದಂಪತಿ ಇತ್ತೀಚೆಗೆ ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ನಂತರ ಮಹಿಳೆ ತನ್ನ ಊರಿಗೆ ತೆರಳಿದ್ದಾರೆ ಎಂದು ಪೊಲೀಸ್ ಅಧಿಕಾರಿಯೋರ್ವರು ಮಾಹಿತಿ ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ 323 ಹಾಗೂ ಸೆಕ್ಷನ್ 75 ಅಡಿಯಲ್ಲಿ ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಆಕೆಯ ವಿರುದ್ಧ ಪ್ರಕರಣ ದಾಖಲಾಗಿದೆ. ತುಳಸಿ ಅವರನ್ನು ಬಂಧಿಸಲು ವಿಶೇಷ ಪೊಲೀಸ್ ತಂಡ ಚಿತ್ತೂರಿಗೆ ತೆರಳಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ:

11 ತಿಂಗಳ ಮಗು ಮತ್ತು 11 ವರ್ಷದ ಬಾಲಕಿಗೆ ಕಂಡುಬಂದಿದ್ದ 2 ಅನ್ನನಾಳದ ಸಮಸ್ಯೆ; ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ, ಗುಣಮುಖ

Shocking Video: ಫ್ಯಾಮಿಲಿ ಡಿನ್ನರ್ ವೇಳೆ ಮಗುವಿನ ಪಕ್ಕದಲ್ಲೇ ಮುರಿದು ಬಿತ್ತು ಸೀಲಿಂಗ್ ಫ್ಯಾನ್; ಶಾಕಿಂಗ್ ವಿಡಿಯೋ ಇಲ್ಲಿದೆ

(18 month old baby beaten by mother for making video on mobile)

Published On - 10:57 am, Mon, 30 August 21

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!