Viral: ನೋಡ ನೋಡುತ್ತಲೇ ತರಗತಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ; ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ

18 ವರ್ಷದ ಯುವಕ ತನ್ನ ಸ್ನೇಹಿತರೊಂದಿಗೆ ಕೋಚಿಂಗ್ ಕ್ಲಾಸ್‌ನಲ್ಲಿ ಪಾಠ ಕೇಳುತ್ತಿರುವ ವೇಳೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ.

Viral: ನೋಡ ನೋಡುತ್ತಲೇ ತರಗತಿಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ; ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ
ಸಿಸಿಟಿವಿ ದೃಶ್ಯಾವಳಿ

Updated on: Jan 19, 2024 | 11:12 AM

ಮಧ್ಯಪ್ರದೇಶ: ಇಂದೋರ್​ನ ಖಾಸಗಿ ಕೋಚಿಂಗ್ ಕ್ಲಾಸ್‌ನಲ್ಲಿ ಕುಳಿತಿದ್ದ ವಿದ್ಯಾರ್ಥಿಯೊಬ್ಬ ನೋಡ ನೋಡುತ್ತಲೇ ತನ್ನ ಸ್ನೇಹಿತರ ಮುಂದೆಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ನಗರದ ಭನ್ವಾರ್ಕುವಾನ್ ನಿವಾಸಿ ಮಾಧವ್ (18), ಮಧ್ಯಪ್ರದೇಶ ಲೋಕಸೇವಾ ಆಯೋಗದ (ಎಂಪಿಪಿಎಸ್‌ಸಿ) ಪ್ರವೇಶ ಪರೀಕ್ಷೆಗೆ ಖಾಸಗಿ ಕೋಚಿಂಗ್ ಕ್ಲಾಸ್‌ನಲ್ಲಿ ತಯಾರಿ ನಡೆಸುತ್ತಿದ್ದ. ತನ್ನ ಸ್ನೇಹಿತರೊಂದಿಗೆ ತರಗತಿಯಲ್ಲಿ ಪಾಠ ಕೇಳುತ್ತಿರುವ ವೇಳೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿಸಿಟಿವಿ ದೃಶ್ಯಾವಳಿ ಇಲ್ಲಿದೆ ನೋಡಿ:

ಇದನ್ನೂ ಓದಿ: ಆಫ್ರಿಕಾದಲ್ಲಿ ಶ್ರೀರಾಮ ಘೋಷ; ಅಯೋಧ್ಯೆಗೆ ಭೇಟಿ ನೀಡಲು ಉತ್ಸುಕರಾದ ಕಿಲಿ ಪೌಲ್

32 ಸೆಕೆಂಡುಗಳ ವೀಡಿಯೊದಲ್ಲಿ, ಮಾಧವ್ ಆರಂಭದಲ್ಲಿ MPPSC ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಇತರ ಎಲ್ಲ ವಿದ್ಯಾರ್ಥಿಗಳ ನಡುವೆ ಕುಳಿತುಕೊಂಡು ತನ್ನ ಅಧ್ಯಯನದಲ್ಲಿ ತೊಡಗಿಸಿಕೊಂಡಿರುವುದನ್ನು ಕಾಣಬಹುದು. ಕೆಲಹೊತ್ತಿನಲ್ಲೇ ಮೇಜಿನ ಮೇಲೆ ಬಿದ್ದರೂ ಕೂಡ ಯಾರಿಗೂ ತಿಳಿದಿಲ್ಲ. ಕೆಲ ಸೆಕೆಂಡುಗಳಲ್ಲಿ ಪಕ್ಕದಲ್ಲಿ ಕುಳಿತಿದ್ದ ವಿದ್ಯಾರ್ಥಿಗೆ ತಿಳಿಸಿದೆ. ಮಾಧವ್​ ನೆಲಕ್ಕೆ ಕುಸಿದು ಬಿದ್ದಾಗ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಸುತ್ತುವರಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us