AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: 155 ವರ್ಷ ಹಳೆಯ MIT ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ವೈರಲ್, ಹೇಗಿತ್ತು ನೋಡಿ ಬೀಜ ಗಣಿತ ಪ್ರಶ್ನೆ

1869 ರಲ್ಲಿ ನಡೆದ ಮ್ಯಾಸಚೂಸೆಟ್ಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (MIT) ಸಂಸ್ಥೆಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆಯೊಂದರ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಬೀಜಗಣಿತದ ಈ ಸರಳ ಪ್ರಶ್ನೆಗಳನ್ನು ಕಂಡು ಅರೇ ಇಷ್ಟೊಂದು ಸುಲಭವಾಗಿತ್ತೇ ಅಂದಿನ ಪರೀಕ್ಷೆಗಳು ಎಂದು ನೆಟ್ಟಿಗರು ಬಾಯಿ ಮೇಲೆ ಬೆರಳಿಟ್ಟುಕೊಂಡಿದ್ದಾರೆ.

Viral Post: 155 ವರ್ಷ ಹಳೆಯ MIT ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ವೈರಲ್, ಹೇಗಿತ್ತು ನೋಡಿ ಬೀಜ ಗಣಿತ ಪ್ರಶ್ನೆ
ವೈರಲ್​​ ಫೋಟೋ
ಮಾಲಾಶ್ರೀ ಅಂಚನ್​
| Edited By: |

Updated on: Oct 03, 2024 | 4:41 PM

Share

ಈಗಿನ ಕಾಲದಲ್ಲಿ ಇರುವಂತೆ 80, 90 ರ ದಶಕದಲ್ಲೂ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳು, ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳನ್ನು ಏರ್ಪಡಿಸಲಾಗುತ್ತಿತ್ತು. ಇದಕ್ಕೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಯ ಫೋಟೋವೊಂದು ಇದೀಗ ವೈರಲ್‌ ಆಗಿದೆ. ಹೌದು 1869 ರಲ್ಲಿ ನಡೆದ ಮ್ಯಾಸಚೂಸೆಟ್ಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (MIT) ಸಂಸ್ಥೆಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಬೀಜಗಣಿತದ ಈ ಸರಳ ಪ್ರಶ್ನೆಗಳನ್ನು ಕಂಡು ಅರೇ ಇಷ್ಟೊಂದು ಸುಲಭವಾಗಿತ್ತೇ ಅಂದಿನ ಪರೀಕ್ಷೆಗಳು ಎಂದು ನೆಟ್ಟಿಗರು ಬಾಯಿ ಮೇಲೆ ಬೆರಳಿಟ್ಟುಕೊಂಡಿದ್ದಾರೆ.

ಮ್ಯಾಸಚೂಸೆಟ್ಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (MIT) ಸಂಸ್ಥೆ ಎಂಜಿನಿಯರಿಂಗ್‌, ಗಣಿತ ಮತ್ತು ವಿಜ್ಞಾನದ ಅಧ್ಯಯನಕ್ಕಾಗಿ ಇರುವ ವಿಶ್ವದ ಅತ್ಯಂತ ಪ್ರಸಿದ್ಧ ಮತ್ತು ಪ್ರತಿಷ್ಠಿತ ಸಂಸ್ಥೆಯಾಗಿದೆ. ಸುಮಾರು 200 ವರ್ಷಗಳ ಹಿಂದೆ ಅಂದ್ರೆ 1861 ರಲ್ಲಿ ಪ್ರಾರಂಭವಾದ ಈ ಸಂಸ್ಥೆಯಲ್ಲಿ ಹಲವಾರು ಜೀನಿಯಸ್‌ಗಳು ವಿದ್ಯಾಭ್ಯಾಸ ಮಾಡಿದ್ದಾರೆ. ಈ ಸಂಸ್ಥೆಯಲ್ಲಿ ಕಲಿತ 101 ಕ್ಕೂ ಹೆಚ್ಚು ಜನ ನೊಬೆಲ್‌ ಪ್ರಶಸ್ತಿ ಮತ್ತು ಇತರೆ ಪ್ರಸಿದ್ಧ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇಂತಹ ಸಂಸ್ಥೆಗೆ ಪ್ರವೇಶ ಪಡೆಯುವುದು ಅಷ್ಟು ಸುಲಭವಲ್ಲ. ಇಲ್ಲಿ ಇಲ್ಲಿ ವಿದ್ಯಾಭ್ಯಾಸ ಪಡೆಯಬೇಕೆಂದರೆ ಹಲವು ಸುತ್ತುಗಳ ಅರ್ಹತಾ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಅವುಗಳೆಲ್ಲದರಲ್ಲಿ ಪಾಸ್‌ ಆದ್ರೆ ಮಾತ್ರ ಪ್ರವೇಶ ಪಡೆಯಲು ಸಾಧ್ಯ. ಇದೀಗ ಈ ಸಂಸ್ಥೆಯಲ್ಲಿ 155 ವರ್ಷ ಹಿಂದೆ ನಡೆದ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಫೋಟೋವೊಂದು ಸಖತ್‌ ವೈರಲ್‌ ಆಗುತ್ತಿದೆ.

ಈ ಕುರಿತ ಪೋಸ್ಟ್‌ ಒಂದನ್ನು fermatslibrary ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “1869-1870 ರ MIT ಪ್ರವೇಶ ಪರೀಕ್ಷೆ ಪ್ರಶ್ನೆ ಪತ್ರಿಕೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಈ ಫೋಟೋದಲ್ಲಿ ಪ್ರವೇಶ ಪರೀಕ್ಷೆಯಲ್ಲಿ ಬೀಜ ಗಣಿತದ ಸುಲಭ ಪ್ರಶ್ನೆಗಳನ್ನು ಕೊಟ್ಟಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಗರ್ಲ್‌ಫ್ರೆಂಡ್‌ ಜೊತೆ ಸುತ್ತಾಡುವಾಗ ಹೆಂಡ್ತಿ ಕೈಗೆ ತಗ್ಲಾಕೊಂಡ ಪತಿರಾಯ, ಮುಂದೇನಾಯ್ತು ನೋಡಿ

ಸೆಪ್ಟೆಂಬರ್‌ 30 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 6.5 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಪ್ರಶ್ನೆಗಳಲ್ಲಿ 7 ತರಗತಿಯ ಮಕ್ಕಳು ಬೇಕಾದರೂ ಉತ್ತರಿಸುತ್ತಾರೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಷ್ಟು ಸುಲಭದ ಪ್ರಶ್ನೆಗಳನ್ನು ಕೊಟ್ಟಿರುವುದು ನಿಜಕ್ಕೂ ಆಶ್ಚರ್ಯಕರವಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್