Video Viral: 2 ವರ್ಷದ ಮಗುವಿನ ಮೇಲೆ ಹರಿದ ಕಸದ ಟ್ರಕ್‌; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಎಲಿನಾ ಎಂದು ಗುರುತಿಸಲಾಗಿರುವ ಎರಡು ವರ್ಷದ ಮಗು ತನ್ನ ಸಹೋದರಿಯೊಂದಿಗೆ ಮನೆಯ ಹೊರಗೆ ರಸ್ತೆ ನಿಂತಿದ್ದಾಗ ಕಸದ ಟ್ರಕ್ ಆಕೆಯ ಮೇಲೆ ಹರಿದಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಆರೋಪಿಯು ಟ್ರಕ್ ಅನ್ನು ರಸ್ತೆಯಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

Video Viral: 2 ವರ್ಷದ ಮಗುವಿನ ಮೇಲೆ ಹರಿದ ಕಸದ ಟ್ರಕ್‌; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Follow us
ಅಕ್ಷತಾ ವರ್ಕಾಡಿ
|

Updated on: Sep 01, 2024 | 5:34 PM

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಭಾನುವಾರ ಟ್ರಕ್ ಚಾಲಕನೊಬ್ಬ ಎರಡು ವರ್ಷದ ಮಗುವಿನ ಮೇಲೆ ಟ್ರಕ್ ಹರಿಸಿರುವ ಭೀಕರ ಘಟನೆ ನಡೆದಿದೆ. ಆ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಆಘಾತಕಾರಿ ಘಟನೆ ಸೆರೆಯಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಗರ ನಿಗಮ ಗಾಜಿಯಾಬಾದ್ (ಜಿಎನ್‌ಎನ್) ಎಂದೂ ಕರೆಯಲ್ಪಡುವ ಗಾಜಿಯಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನ ಕಸದ ಟ್ರಕ್‌ ಡ್ರೈವರ್​​​ ಪುಟ್ಟ ಬಾಲಕಿಯ ನಿಂತಿರುವುದನ್ನು ನೋಡಿಯೂ ಆಕೆಯ ಮೇಲೆ ಟ್ರಕ್ ಹರಿಸಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಇಂದು(ಸೆ.01) ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೈಲಾ ಭಟ್ಟ ವಾರ್ಡ್ ಸಂಖ್ಯೆ 93 ರ ಇಸ್ಲಾಂ ನಗರದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಎಲಿನಾ ಎಂದು ಗುರುತಿಸಲಾಗಿರುವ ಬಾಲಕಿ ತನ್ನ ಸಹೋದರಿಯೊಂದಿಗೆ ಲೇನ್‌ನಲ್ಲಿ ನಿಂತಿದ್ದಾಗ ಕಸದ ಟ್ರಕ್ ಆಕೆಯ ಮೇಲೆ ಹರಿದಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ಬಾಲಕಿಯನ್ನು ಸಂತೋಷ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.

ಟ್ರಕ್ ಚಾಲಕ ಆಕೆಗೆ ಡಿಕ್ಕಿ ಹೊಡೆದಿದ್ದು, ಕಸದ ಲಾರಿಯ ಮುಂಭಾಗದ ಟೈರ್ 2 ವರ್ಷದ ಬಾಲಕಿಯ ಮೇಲೆ ಹರಿದಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ಟ್ರಕ್‌ನತ್ತ ಧಾವಿಸಿ ಬಾಲಕಿಯನ್ನು ಟ್ರಕ್‌ನ ಕೆಳಗೆಯಿಂದ ಎಳೆದಿದ್ದಾನೆ.

ಇದನ್ನೂ ಓದಿ: ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾದ ಗೂಬೆಗಳೆರಡು ಚುಂಬಿಸುತ್ತಿರುವ ಅಪರೂಪದ ದೃಶ್ಯ

ಟ್ರಕ್ ಚಾಲಕ ವಾಹನದಿಂದ ಇಳಿದು ಸಹಾಯ ಮಾಡುವ ಬದಲು ಸ್ಥಳದಿಂದ ಪರಾರಿಯಾಗಿದ್ದಾನೆ. ಅಪಘಾತ ಸಂಭವಿಸಿದ ನಂತರ ಆರೋಪಿಯು ಟ್ರಕ್ ಅನ್ನು ಲೇನ್ ಮಧ್ಯದಲ್ಲಿ ಬಿಟ್ಟು ಸ್ಥಳದಿಂದ ಪರಾರಿಯಾಗುತ್ತಿರುವಾಗ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಪೊಲೀಸ್ ಕ್ರಮದ ವರದಿಗಳಿಲ್ಲ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ನೆಲಮಂಗಲ ಅಪಘಾತ: ದುರಂತಕ್ಕೂ ಮುನ್ನ ಚಂದ್ರಮ್ ಕೊನೆಯ ದೃಶ್ಯ ಇಲ್ಲಿದೆ ನೋಡಿ
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ತಮ್ಮ ರಾಜಕೀಯ ವೈರಿ ಚಲುವರಾಯಸ್ವಾಮಿ ಕೆಲಸವನ್ನು ಶ್ಲಾಘಿಸಿದ ಕುಮಾರಣ್ಣ..!
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಚಿತ್ರದುರ್ಗದಲ್ಲಿ ಮ್ಯಾಕ್ಸ್ ಟ್ರೇಲರ್ ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಬಾಡೇ ನಮ್ಮ ಮನೆ ಗಾಡು:ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾನುವಾರದ ಬಾಡೂಟ ಜೋರು
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಚೈತ್ರಾ ಡವ್ ಮಾಡೋದು ಕಣ್ಣಿಗೆ ಕಾಣುತ್ತಿದೆ: ಕಿಚ್ಚನ ಎದುರಲ್ಲೇ ಹೇಳಿದ ರಜತ್
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಕುವೈತ್‌ನ ಬಯಾನ್ ಅರಮನೆಯಲ್ಲಿ ಪ್ರಧಾನಿ ಮೋದಿಗೆ ಗಾರ್ಡ್ ಆಫ್ ಆನರ್ ಪ್ರದಾನ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
ಪ್ರತ್ಯೇಕ ಸಚಿವಾಲಯ: ಕಲ್ಯಾಣ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಸಿಎಂ
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
‘ಯುಐ’ ನೋಡಿ ಉಪೇಂದ್ರ ಆಧುನಿಕ ಬುದ್ಧ ಎಂದ ಆರ್ ಚಂದ್ರು
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಬಿಗ್​ಬಾಸ್ ಮನೆಯಲ್ಲಿ ಕಸದ ಬುಟ್ಟಿ: ಚೈತ್ರಾ ಕಸಕ್ಕೆ ಸಮಾನವೆ?
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​
ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​