Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ಪ್ರಿಯಕರರಿಂದ 20 ಐಫೋನ್​​​ ಗಿಫ್ಟ್​​​​​, ಕೊನೆಗೆ ಎಲ್ಲ ಫೋನ್​​ ಮಾರಿ ಹೊಸ ಮನೆ ಖರೀದಿಸಿದ ಯುವತಿ

ಬಡ ಕುಟುಂಬದಿಂದ ಬಂದ ಈಕೆ ಸ್ವಂತ ಮನೆ ಖರೀದಿಸಲು 20 ಯುವಕರನ್ನು ತನ್ನ ಪ್ರೇಮದ ಬಲೆಗೆ ಬೀಳಿಸಿ ಅವರಿಂದ ದುಬಾರಿ ಬೆಲೆಯ ಐಫೋನ್​​ಗಳನ್ನು ಗಿಫ್ಟ್​​ ಆಗಿ ಪಡೆದುಕೊಂಡಿದ್ದಾಳೆ. ಬಳಿಕ ಎಲ್ಲ ಫೋನ್​​ಗಳನ್ನು 14 ಲಕ್ಷಕ್ಕೂ ಅಧಿಕ ಬೆಲೆಗೆ ಮಾರಿ ಡೌನ್​​ ಪೇಮೆಂಟ್​​ನಲ್ಲಿ ಹೊಸ ಮನೆ ಖರೀದಿಸಿದ್ದಾಳೆ.

20 ಪ್ರಿಯಕರರಿಂದ 20 ಐಫೋನ್​​​ ಗಿಫ್ಟ್​​​​​, ಕೊನೆಗೆ ಎಲ್ಲ ಫೋನ್​​ ಮಾರಿ ಹೊಸ ಮನೆ ಖರೀದಿಸಿದ ಯುವತಿ
20 boyfriends and 20 iPhones
Follow us
ಅಕ್ಷತಾ ವರ್ಕಾಡಿ
|

Updated on: Jul 09, 2024 | 1:13 PM

ಯುವತಿಯೊಬ್ಬಳು ಸಿಟಿಯಲ್ಲಿ ಹೊಸ ಮನೆ ಖರೀದಿಸಲು 20 ಯುವಕರ ಜೊತೆಗೆ ಪ್ರೇಮದ ನಾಟಕವಾಡಿದ್ದಾಳೆ. 20 ಯುವಕರನ್ನು ತನ್ನ ಬಲೆಗೆ ಬೀಳಿಸಿ ಅವರಿಂದ ದುಬಾರಿ ಬೆಲೆಯ ಐಫೋನ್​​ಗಳನ್ನು ಗಿಫ್ಟ್​​ ಆಗಿ ಪಡೆದುಕೊಂಡಿದ್ದಾಳೆ. ಬಳಿಕ ಅವರೊಂದಿಗೆ ಬ್ರೇಕ್​ ಅಪ್​ ಮಾಡಿಕೊಂಡು ಲಕ್ಷ ಲಕ್ಷ ಬೆಲೆ ಬಾಳುವ ಬರೋಬ್ಬರಿ 20 ಐಫೋನ್​​​ಗಳನ್ನು ಮಾರಿ ಹೊಸ ಮನೆ ಖರೀದಿಸಿದ್ದಾಳೆ. ಈ ಘಟನೆ ಚೀನಾದಲ್ಲಿ ನಡೆದಿದೆ.

ಚೀನಾದ ಮೂಲದ ಈ ಯುವತಿಯ ಹೆಸರು Xiaoli. ಸದ್ಯ ಈಕೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪೋಸ್ಟ್​​ಗಳು ಹರಿದಾಡುತ್ತಿದೆ. ವಾಸ್ತವವಾಗಿ ಈ ಘಟನೆ 2016ರಲ್ಲಿ ನಡೆದಿದೆ. @tech_grammm ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಈಕೆಯ ಕುರಿತು ಹಾಕಲಾದ ಫೋಸ್ಟ್​ ಒಂದು ಸದ್ಯ ಎಲ್ಲೆಡೆ ವೈರಲ್​​ ಆಗಿದೆ. ಮೇ 06ರಂದು ಹಂಚಿಕೊಂಡಿರುವ ಈ ಪೋಸ್ಟ್​ ಇಲ್ಲಿಯವರೆಗೆ 187,016 ಲೈಕ್ಸ್​ಗಳನ್ನು ಪಡೆದುಕೊಂಡಿದೆ.

ವೈರಲ್​​ ಫೋಸ್ಟ್​​ ಇಲ್ಲಿದೆ ನೋಡಿ:

View this post on Instagram

A post shared by Tech Grammm (@tech_grammm)

ಇದನ್ನೂ ಓದಿ: 8,000 ಕಿಮೀ ದೂರದಿಂದ ರೋಗಿಗೆ ರೋಬೋಟಿಕ್ ಸರ್ಜರಿ ಮಾಡಿದ ವೈದ್ಯರು

ಬಡ ಕುಟುಂಬದಿಂದ ಬಂದ ಈಕೆ ಸ್ವಂತ ಮನೆ ಖರೀದಿಸಲು ಈ ರೀತಿ ಪ್ಲ್ಯಾನ್​ ಮಾಡಿದ್ದಾಳೆ ಎಂದು ತಿಳಿದುಬಂದಿದೆ. ತನ್ನ ಎಲ್ಲ ಐಫೋನ್​​ಗಳನ್ನು ಭಾರತದ ಕರೆನ್ಸಿಯ ಅಂದಾಜಿನ ಪ್ರಕಾರ 14 ಲಕ್ಷಕ್ಕೂ ಅಧಿಕ ಬೆಲೆಗೆ ಮಾರಿ ಡೌನ್​​ ಪೇಮೆಂಟ್​​ನಲ್ಲಿ ಹೊಸ ಮನೆ ಖರೀದಿಸಿದ್ದಾಳೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು