Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: 16 ವರ್ಷದ ಬಾಲಕನನ್ನು ಪ್ರೀತಿಸಿ ಮದುವೆಯಾದ 25ರ ಶಿಕ್ಷಕಿ

ಉತ್ತರ ಪ್ರದೇಶದ ಮೀರತ್‌ನಲ್ಲಿ 25 ವರ್ಷದ ಶಿಕ್ಷಕಿಯೊಬ್ಬರು 16 ವರ್ಷದ ಅಪ್ರಾಪ್ತ ಬಾಲಕನೊಂದಿಗೆ ಮದುವೆಯಾಗಿರುವ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬಾಲಕನ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ನಕಲಿ ದಾಖಲೆಗಳನ್ನು ಬಳಸಿ ಮದುವೆಯನ್ನು ನೋಂದಾಯಿಸಲಾಗಿದೆ ಎಂದು ಆರೋಪಿಸಿದ್ದಾರೆ.

Viral News: 16 ವರ್ಷದ ಬಾಲಕನನ್ನು ಪ್ರೀತಿಸಿ ಮದುವೆಯಾದ 25ರ ಶಿಕ್ಷಕಿ
ಸಾಂದರ್ಭಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
|

Updated on:Dec 04, 2024 | 12:42 PM

ಉತ್ತರ ಪ್ರದೇಶ: ಶಿಕ್ಷಕಿಯೊಬ್ಬಳು ಅಪ್ರಾಪ್ತ ವಯಸ್ಸಿನ ಬಾಲಕನನ್ನು ಪ್ರೀತಿಸಿ ಮದುವೆಯಾಗಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ ಮೀರತ್​​ನಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಬಾಲಕನ ಪೋಷಕರು ಕಂಗಾಲಾಗಿದ್ದು, ಪೊಲೀಸ್​ ಠಾಣೆಯಲ್ಲಿ ಶಿಕ್ಷಕಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯ ಈ ಘಟನೆ ಸೋಶಿಯಲ್​ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್‌ನ ಸ್ಥಳೀಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ 25 ವರ್ಷದ ಯುವತಿ ಕೆಲವು ದಿನಗಳ ಹಿಂದೆ ಮೀರತ್‌ನ 16 ವರ್ಷದ ಬಾಲಕನನ್ನು ಸಾಮಾಜಿಕ ಮಾಧ್ಯಮದ ಮೂಲಕ ಭೇಟಿಯಾಗಿದ್ದಳು. ಬಳಿಕ ಇವರಿಬ್ಬರ ಪರಿಚಯ ಪ್ರೀತಿಯಾಗಿ ತಿರುಗಿದೆ. ಇತ್ತೀಚೆಗೆ ಶಿಕ್ಷಕಿ ಕಾರಿನಲ್ಲಿ ಮೀರತ್‌ಗೆ ಹೋಗಿ, ಬಾಲಕನ್ನು ಕಾರಿನಲ್ಲಿ ಗಾಜಿಯಾಬಾದ್‌ಗೆ ಕರೆದುಕೊಂಡು ಹೋಗಿದ್ದರು. ಗಾಜಿಯಾಬಾದ್‌ನಲ್ಲಿಯೇ ಬಾಲಕ ಮೇಜರ್ ಎಂಬಂತೆ ನಕಲಿ ದಾಖಲೆ ಸೃಷ್ಟಿಸಿ ಮದುವೆ ನೋಂದಣಿ ಮಾಡಿಸಿಕೊಂಡಿದ್ದಾಳೆ. ತಮ್ಮ ಮಗನ ಮದುವೆಯ ಬಗ್ಗೆ ತಿಳಿದ ಹುಡುಗನ ಪೋಷಕರು ಆಘಾತಕ್ಕೊಳಗಾಗಿ ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಕ್ಷಕಿ ತಮ್ಮ ಮಗನಿಗೆ ಹೆದರಿಸಿ ಮದುವೆಯಾಗಿದ್ದಾರೆ ಮತ್ತು ಅಪ್ರಾಪ್ತನಾಗಿದ್ದರೂ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಇದನ್ನೂ ಓದಿ: 4 ಕಾಲಿನೊಂದಿಗೆ ಜನಿಸಿದ 9 ತಿಂಗಳ ಮಗುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಪೋಷಕರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬಾಲಕನ ಒಪ್ಪಿಗೆಯೊಂದಿಗೆ ಈ ಮದುವೆ ನಡೆದಿದ್ದರೂ, ಅದಕ್ಕೆ ಕಾನೂನು ಮಾನ್ಯತೆ ಇಲ್ಲ. ಭಾರತೀಯ ಕಾನೂನಿನ ಪ್ರಕಾರ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಯೊಂದಿಗೆ ಮದುವೆಯನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗಿದೆ. ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:05 pm, Wed, 4 December 24

Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​