ಉತ್ತರ ಪ್ರದೇಶ: ಶಿಕ್ಷಕಿಯೊಬ್ಬಳು ಅಪ್ರಾಪ್ತ ವಯಸ್ಸಿನ ಬಾಲಕನನ್ನು ಪ್ರೀತಿಸಿ ಮದುವೆಯಾಗಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಬಾಲಕನ ಪೋಷಕರು ಕಂಗಾಲಾಗಿದ್ದು, ಪೊಲೀಸ್ ಠಾಣೆಯಲ್ಲಿ ಶಿಕ್ಷಕಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯ ಈ ಘಟನೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್‌ನ ಸ್ಥಳೀಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ 25 ವರ್ಷದ ಯುವತಿ ಕೆಲವು ದಿನಗಳ ಹಿಂದೆ ಮೀರತ್‌ನ 16 ವರ್ಷದ ಬಾಲಕನನ್ನು ಸಾಮಾಜಿಕ ಮಾಧ್ಯಮದ ಮೂಲಕ ಭೇಟಿಯಾಗಿದ್ದಳು. ಬಳಿಕ ಇವರಿಬ್ಬರ ಪರಿಚಯ ಪ್ರೀತಿಯಾಗಿ ತಿರುಗಿದೆ. ಇತ್ತೀಚೆಗೆ ಶಿಕ್ಷಕಿ ಕಾರಿನಲ್ಲಿ ಮೀರತ್‌ಗೆ ಹೋಗಿ, ಬಾಲಕನ್ನು ಕಾರಿನಲ್ಲಿ ಗಾಜಿಯಾಬಾದ್‌ಗೆ ಕರೆದುಕೊಂಡು ಹೋಗಿದ್ದರು. ಗಾಜಿಯಾಬಾದ್‌ನಲ್ಲಿಯೇ ಬಾಲಕ ಮೇಜರ್ ಎಂಬಂತೆ ನಕಲಿ ದಾಖಲೆ ಸೃಷ್ಟಿಸಿ ಮದುವೆ ನೋಂದಣಿ ಮಾಡಿಸಿಕೊಂಡಿದ್ದಾಳೆ. ತಮ್ಮ ಮಗನ ಮದುವೆಯ ಬಗ್ಗೆ ತಿಳಿದ ಹುಡುಗನ ಪೋಷಕರು ಆಘಾತಕ್ಕೊಳಗಾಗಿ ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಶಿಕ್ಷಕಿ ತಮ್ಮ ಮಗನಿಗೆ ಹೆದರಿಸಿ ಮದುವೆಯಾಗಿದ್ದಾರೆ ಮತ್ತು ಅಪ್ರಾಪ್ತನಾಗಿದ್ದರೂ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಇದನ್ನೂ ಓದಿ: 4 ಕಾಲಿನೊಂದಿಗೆ ಜನಿಸಿದ 9 ತಿಂಗಳ ಮಗುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಪೋಷಕರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬಾಲಕನ ಒಪ್ಪಿಗೆಯೊಂದಿಗೆ ಈ ಮದುವೆ ನಡೆದಿದ್ದರೂ, ಅದಕ್ಕೆ ಕಾನೂನು ಮಾನ್ಯತೆ ಇಲ್ಲ. ಭಾರತೀಯ ಕಾನೂನಿನ ಪ್ರಕಾರ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಯೊಂದಿಗೆ ಮದುವೆಯನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗಿದೆ. ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:05 pm, Wed, 4 December 24