AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾರ್ಗೆಟ್​ ತಲುಪೋ ಭರದಲ್ಲಿ ರಾತ್ರಿ ಹಗಲೆನ್ನದೇ ಕೆಲಸ ಮಾಡಿ ಯುವತಿ ಸಾವು

ಮೃತ ಯುವತಿ ಅನ್ನಾ 2023 ರಲ್ಲಿ ತಮ್ಮ CA ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಮಾರ್ಚ್ 2024 ರಲ್ಲಿ ಇವೈ ಇಂಡಿಯಾದ ಪುಣೆಯ ಕಂಪೆನಿಗೆ ಕೆಲಸಕ್ಕೆ ಸೇರಿಕೊಂಡಿದ್ದರು. ಇದೀಗ ಕೆಲಸಕ್ಕೆ ಸೇರಿಕೊಂಡ ಕೇವಲ 4 ತಿಂಗಳಲ್ಲಿ ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು EY ಕಂಪೆನಿಯ ವಿರುದ್ದ ಅನ್ನಾ ತಾಯಿ ದೂರು ದಾಖಲಿಸಿದ್ದಾರೆ.

ಟಾರ್ಗೆಟ್​ ತಲುಪೋ ಭರದಲ್ಲಿ ರಾತ್ರಿ ಹಗಲೆನ್ನದೇ ಕೆಲಸ ಮಾಡಿ ಯುವತಿ ಸಾವು
ಚಾರ್ಟರ್ಡ್ ಅಕೌಂಟೆಂಟ್ ಅನ್ನಾ ಸೆಬಾಸ್ಟಿಯನ್ (26)
ಅಕ್ಷತಾ ವರ್ಕಾಡಿ
|

Updated on: Sep 19, 2024 | 11:23 AM

Share

ಪುಣೆಯ ಇವೈ ನಲ್ಲಿ ಉದ್ಯೋಗಿಯಾಗಿದ್ದ ಚಾರ್ಟರ್ಡ್ ಅಕೌಂಟೆಂಟ್ ಅನ್ನಾ ಸೆಬಾಸ್ಟಿಯನ್ (26) ಅವರು “ಕೆಲಸದ ಒತ್ತಡ” ದಿಂದ ನಿಧನರಾಗಿದ್ದಾರೆ ಎಂದು ಅವರ ತಾಯಿ ಅನಿತಾ ಆಗಸ್ಟಿನ್ ಅವರು ಇವೈ ಇಂಡಿಯಾ ಅಧ್ಯಕ್ಷರಿಗೆ ಬರೆದ ಇಮೇಲ್‌ ಸದ್ಯ ಎಲ್ಲೆಡೆ ವೈರಲ್​​ ಆಗುತ್ತಿದೆ. ಟಾರ್ಗೆಟ್​ ತಲುಪೋ ಭರದಲ್ಲಿ ರಾತ್ರಿ ಹಗಲೆನ್ನದೇ ನನ್ನ ಮಗಳಿಂದ ಕೆಲಸ ಮಾಡಿಸಿದ್ದಾರೆ. ಇದರಿಂದಾಗಿ ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು ತಾಯಿ ಇಮೇಲ್‌ನಲ್ಲಿ ಬರೆದುಕೊಂಡಿದ್ದಾರೆ.

ಮೃತ ಯುವತಿ ಅನ್ನಾ 2023 ರಲ್ಲಿ ತಮ್ಮ CA ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ, ಮಾರ್ಚ್ 2024 ರಲ್ಲಿ EY ಪುಣೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಇದೀಗ ಕೆಲಸಕ್ಕೆ ಸೇರಿಕೊಂಡ ಕೇವಲ 4 ತಿಂಗಳಲ್ಲಿ ನನ್ನ ಮಗಳು ಸಾವನ್ನಪ್ಪಿದ್ದಾಳೆ ಎಂದು EY ಕಂಪೆನಿಯ ವಿರುದ್ದ ಅನ್ನಾ ತಾಯಿ ದೂರು ದಾಖಲಿಸಿದ್ದಾರೆ. ಕಂಪೆನಿಗೆ ಸೇರಿದ ಕೂಡಲೇ ಕೆಲಸದ ಹೊರೆ, ಹೊಸ ಪರಿಸರ ಮತ್ತು ಆತಂಕ, ನಿದ್ರಾಹೀನತೆ ಮತ್ತು ಒತ್ತಡವನ್ನು ಅನುಭವಿಸಲು ಪ್ರಾರಂಭಿಸಿದ್ದಳು, ಆದರೆ ಕಠಿಣ ಪರಿಶ್ರಮ ಯಶಸ್ಸಿಗೆ ಹಾದಿ ನಂಬುತ್ತಾ ಅವಳು ತನ್ನನ್ನು ತಾನೇ ಬಲಿ ತೆಗೆದುಕೊಂಡಿದ್ದಾಳೆ” ಎಂದು ಇಮೇಲ್‌ನಲ್ಲಿ ಬರೆಯಲಾಗಿದೆ.

ಇದನ್ನೂ ಓದಿ: ಸತತ 18 ಗಂಟೆಗಳ ಕಾಲ ಕೆಲಸ ಮಾಡಿ ಬೈಕ್​ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಡೆಲಿವರಿ ಏಜೆಂಟ್​ ಸಾವು

“ಈ ಸಂಸ್ಥೆಯ ಅತಿಯಾದ ಅತಿಯಾದ ಕೆಲಸದ ಹೊರೆಯಿಂದಾಗಿ ಅನೇಕ ಉದ್ಯೋಗಿಗಳು ಸಂಸ್ಥೆಯನ್ನು ತೊರೆದಿದ್ದರು. ಆಕೆ ಈಕೆ ಕೆಲಸಕ್ಕೆ ಸೇರಿರೋ ನಾಲ್ಕು ತಿಂಗಳಿನಲ್ಲಿಯೇ ಸಾವನ್ನಪ್ಪಿದ್ದಾಳೆ. ಇನ್ನೂ ದುರಂತದ ಸಂಗತಿ ಎಂದರೆ, ಆಕೆಯ ಅಂತ್ಯಕ್ರಿಯೆಗೆ ಕಂಪೆನಿಯ ಒಬ್ಬರೇ ಒಬ್ಬರು ಅಧಿಕಾರಿಗಳು ಬರಲಿಲ್ಲ ಎನ್ನುವುದು!” ಎಂದು ಆಕೆಯ ತಾಯಿ ನೋವನ್ನು ಹೊರ ಹಾಕಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ