Weight Loss Surgery: ಬೊಜ್ಜು ಕರಗಿಸೋ ಶಸ್ತ್ರಚಿಕಿತ್ಸೆಗೆ ಒಳಗಾದ 26ರ ಯುವಕ ಸಾವು

ಪುದುಚೇರಿ ನಿವಾಸಿ ಹೇಮಚಂದ್ರನ್ (26) ಸುಮಾರು 150 ಕೆ.ಜಿ. ತೂಕವನ್ನು ಹೊಂದಿದ್ದು, ಸ್ಥೂಲಕಾಯತೆಯ ಜೊತೆಗೆ ಸಾಕಷ್ಟು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ. ಈತನ ಬೊಜ್ಜನ್ನು ಶಸ್ರಚಿಕಿತ್ಸೆಯ ಮೂಲಕ ಕರಗಿಸುವುದಾಗಿ ವೈದ್ಯರು ಭರವಸೆ ನೀಡಿದ್ದರು. ಆದರೆ ಚಿಕಿತ್ಸೆ ಆರಂಭಿಸಿದ 15 ನಿಮಿಷದಲ್ಲಿ ಆತನಿಗೆ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ.

Weight Loss Surgery: ಬೊಜ್ಜು ಕರಗಿಸೋ ಶಸ್ತ್ರಚಿಕಿತ್ಸೆಗೆ ಒಳಗಾದ 26ರ ಯುವಕ ಸಾವು
ಬೊಜ್ಜು ಕರಗಿಸೋ ಶಸ್ತ್ರಚಿಕಿತ್ಸೆಗೆ ಒಳಗಾದ 26ರ ಯುವಕ ಸಾವು
Follow us
ಅಕ್ಷತಾ ವರ್ಕಾಡಿ
|

Updated on: Apr 26, 2024 | 6:44 PM

ತಮಿಳುನಾಡು:  ರಾಜಧಾನಿ ಚೆನ್ನೈನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಬೊಜ್ಜು ಕರಗಿಸೋ ಶಸ್ತ್ರಚಿಕಿತ್ಸೆಯಲ್ಲಿ 26 ವರ್ಷದ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ಶಸ್ತ್ರಚಿಕಿತ್ಸೆಗೆ ಒಳಗಾದ 15 ನಿಮಿಷದಲ್ಲಿ ಯುವಕ ಮೃತಪಟ್ಟಿದ್ದಾನೆ. ಪುದುಚೇರಿ ಮೂಲದ 26 ವರ್ಷದ ಹೇಮಚಂದ್ರನ್ ಅವರು ಚೆನ್ನೈನ ಪಮ್ಮಲ್‌ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ತೂಕ ಇಳಿಸುವ ಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಚಿಕಿತ್ಸೆ ಆರಂಭಿಸಿದ 15 ನಿಮಿಷದಲ್ಲಿ ಅವರಿಗೆ ಹೃದಯಾಘಾತವಾಗಿದೆ ಎಂದು ವರದಿಯಾಗಿದೆ. ಹೇಮಚಂದ್ರನ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ವೇಳೆ ಯುವಕನ ಸಾವಿನ ತನಿಖೆಗೆ ಇಬ್ಬರು ಜಂಟಿ ನಿರ್ದೇಶಕರನ್ನೊಳಗೊಂಡ ಸಮಿತಿ ರಚಿಸುವಂತೆ ವೈದ್ಯಕೀಯ ಇಲಾಖೆ ಆದೇಶ ನೀಡಿದೆ. ಯುವಕನ ಸಾವಿನ ಕುರಿತು 2 ದಿನಗಳಲ್ಲಿ ತನಿಖಾ ವರದಿ ಸಲ್ಲಿಸುವಂತೆ ಆದೇಶಿಸಿದೆ. ಸೂಕ್ತ ಚಿಕಿತ್ಸೆ ದೊರೆಯದೇ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಚೆನ್ನೈ ಪೊಲೀಸ್​​​ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪುದುಚೇರಿ ನಿವಾಸಿ ಹೇಮಚಂದ್ರನ್ (26) ಸುಮಾರು 150 ಕೆ.ಜಿ. ತೂಕವನ್ನು ಹೊಂದಿದ್ದ. ಸ್ಥೂಲಕಾಯತೆಯಿಂದ ಸಾಕಷ್ಟು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಈತನ ಬೊಜ್ಜನ್ನು ಶಸ್ರಚಿಕಿತ್ಸೆಯ ಮೂಲಕ ಕರಗಿಸುವುದಾಗಿ ವೈದ್ಯರು ಭರವಸೆ ನೀಡಿದ್ದರು. ಪಮ್ಮಲ್‌ನಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿದ್ದರು. ಇಲ್ಲಿ ಈ ಶಸ್ತ್ರಚಿಕಿತ್ಸೆಗೆ ರೂ.4 ಲಕ್ಷ ವೆಚ್ಚವಾಗಲಿದೆ ಎಂದು ತಿಳಿಸಿದ್ದರು. ಹೇಮಚಂದ್ರನ್ ಏಪ್ರಿಲ್ 3 ರಂದು ಅಲ್ಲಿಗೆ ಹೋಗಿದ್ದರು. ನಂತರ ಆ ಆಸ್ಪತ್ರೆಯಲ್ಲಿ ಹೇಮಚಂದ್ರನ್ ಶಸ್ತ್ರಚಿಕಿತ್ಸೆಗೆ ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಿದ್ದರು. ಹೇಮಚಂದ್ರನ್ ಮಧುಮೇಹದಿಂದ ಬಳಲುತ್ತಿದ್ದು, ನಂತರ ಶಸ್ತ್ರಚಿಕಿತ್ಸೆ ನಡೆಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯರು ಹೇಳಿದಂತೆ ಕೆಲವು ದಿನಗಳ ನಂತರ ಹೇಮಚಂದ್ರನ್ ಏಪ್ರಿಲ್ 21 ರಂದು ಬೆಳಿಗ್ಗೆ ಆಸ್ಪತ್ರೆಗೆ ಹೋಗಿದ್ದಾರೆ. ಮರುದಿನ ಶಸ್ತ್ರಚಿಕಿತ್ಸೆ ಒಳಪಡಿಸಲಾಗಿದೆ.

ಮತ್ತಷ್ಟು ಓದಿ: 110 ವರ್ಷ ವಯಸ್ಸು, ಒಬ್ಬರೇ ಇರ್ತಾರೆ, ಕಾರು ಓಡಿಸ್ತಾರೆ, ಯಾವುದೇ ರೋಗ ಇಲ್ಲ, ಆಹಾರ ಕ್ರಮ ಹೇಗಿದೆ ಗೊತ್ತೇ?

ಮಂಗಳವಾರ ಬೆಳಿಗ್ಗೆ 9:30 ಕ್ಕೆ ಆಪರೇಷನ್ ಥಿಯೇಟರ್‌ನಲ್ಲಿ ಹೇಮಚಂದ್ರನಿಗೆ ಮೆಟಾಬಾಲಿಕ್ ಮತ್ತು ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ. ಕಾರ್ಯಾಚರಣೆಯ ಮಧ್ಯದಲ್ಲಿ ಹೇಮಚಂದ್ರನ್ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದು, ತಕ್ಷಣ ವೈದ್ಯರು ಆತನನ್ನು ಬೇರೆ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮಗನ ಸಾವಿನ ಬಗ್ಗೆ ಹಲವು ಅನುಮಾನಗಳಿವೆ ಎಂದು ಶಂಕರನಗರ ಪೊಲೀಸ್ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದಾರೆ. ಸೂಕ್ತ ಚಿಕಿತ್ಸೆ ನೀಡದ ವೈದ್ಯರ ವಿರುದ್ಧ ಹಾಗೂ ಶಸ್ತ್ರ ಚಿಕಿತ್ಸೆ ನಡೆದಿರುವ ಪಮ್ಮಲ್‌ನ ಸಂಬಂಧಪಟ್ಟ ಆಸ್ಪತ್ರೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು