Viral Video: ಯಮನಂತೆ ಹಾರಿ ಬಂದು ಯುವಕನ ಪ್ರಾಣ ತೆಗೆದ ನೀಲಗಾಯ್

ಅಯೋಧ್ಯೆ ನಗರದ 28 ವರ್ಷದ ಯುವಕನೊಬ್ಬ ಹೆದ್ದಾರಿಯಲ್ಲಿ ಬೈಕ್ ಅಲ್ಲಿ ಹೋಗುತ್ತಿದ್ದ ವೇಳೆ ನೀಲಗಾಯ್ ಎಂಬ ಅಪರೂಪದ ಪ್ರಾಣಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಭೀಕರ ಅಪಘಾತದ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.  

Viral Video: ಯಮನಂತೆ ಹಾರಿ ಬಂದು ಯುವಕನ ಪ್ರಾಣ ತೆಗೆದ ನೀಲಗಾಯ್
ವೈರಲ್ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 19, 2024 | 12:51 PM

ಹುಟ್ಟು ಸಾವು ಪ್ರಕೃತಿಯ ನಿಯಮ. ಮನುಷ್ಯ ಯಾವಾಗ ಹುಟ್ಟಬಹುದು ಎಂಬುದನ್ನು ಹೇಳಬಹುದು, ಆದರೆ ಮನುಷ್ಯ ಯಾವಾಗ ಸಾಯುತ್ತಾನೆ ಎಂದು ಹೇಳಲು ಯಾರಿಗೂ ಸಾಧ್ಯವಿಲ್ಲ. ಹೌದು ಸಾವು ಹೇಗೆ, ಯಾವಾಗ ಬರುತ್ತದೆ ಎಂದು ಯಾರು ಊಹಿಸಲು ಸಾಧ್ಯವಿಲ್ಲ. ಸಣ್ಣ ಸಣ್ಣ ಕಾರಣಗಳಿಂದಲೂ ಸಾವು ಸಂಭವಿಸಿದ ಉದಾಹರಣೆಗಳಿವೆ. ಅದೇ ರೀತಿ ಇಲ್ಲೊಬ್ಬ ಯುವಕ ರಸ್ತೆಯಲ್ಲಿ ಬೈಕ್ ಅಲ್ಲಿ ಹೋಗುತ್ತಿದ್ದ ವೇಳೆ ನೀಲಗಾಯ್ ಎಂಬ ಅಪರೂಪದ ಪ್ರಾಣಿಯೊಂದು ಡಿಕ್ಕಿಯೊಡೆದ ಪರಿಣಾಮ ಆತ ಮೃತಪಟ್ಟಿದ್ದಾನೆ. ಈ ಭೀಕರ ಅಪಘಾತದ ದೃಶ್ಯ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನೀಲಗಾಯ್ ಎಂಬ ಪ್ರಾಣಿ ಉತ್ತರ ಭಾರತದಲ್ಲಿ ಅತ್ಯಂತ ಹೆಚ್ಚಾಗಿ ಕಾಣಸಿಗುವ ಪ್ರಾಣಿಯಾಗಿದೆ. ಇದೀಗ ಈ ನೀಲಗಾಯ್ ಪ್ರಾಣಿ ಅವಸರದಲ್ಲಿ ರಸ್ತೆದಾಟುವಾಗ ಬೈಕ್ ಸವಾರರೊಬ್ಬರಿಗೆ ಡಿಕ್ಕಿ ಹೊಡೆದಿದ್ದು, ನೀಲಗಾಯ್ ಕೊಂಬು ಆತನ ಎದೆಗೆ ಚುಚ್ಚಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಾಗೂ ಈ ಪ್ರಾಣಿಗೂ ಸಣ್ಣಪುಟ್ಟ ಗಾಯಗಳಾಗಿದ್ದು,   ಈ ದೃಶ್ಯ ಹೆದ್ದಾರಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.  ಮೃತಪಟ್ಟ ಯುವಕನನ್ನು ಮುಕೇಶ್ ಪಾಂಡೆ ಎಂದು ಗುರುತಿಸಲಾಗಿದೆ. ಮುಕೇಶ್ ಇನಾಯತ್ ನಗರ ಮಾರುಕಟ್ಟೆಗೆ ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಈ ಕುರಿತ ವಿಡಿಯೋವನ್ನು ಆನಂದ್ ಶಂಕರ್ (@kalapian_) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಅಯೋಧ್ಯೆಯಲ್ಲಿ ಬೈಕ್ ಸವಾರನೊಬ್ಬ ನೀಲಗಾಯ್ ಪ್ರಾಣಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ ಆಘಾತಕಾರಿ ವಿಡಿಯೋ. ಬೈಕ್ ಸವಾರನ ಎದೆಗೆ ಈ ಪ್ರಾಣಿಯ ಕೊಂಬು ಚುಚ್ಚಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಈ ವೈರಲ್​​ ಜೀನ್ಸ್​​ ಪ್ಯಾಂಟ್​ ಕಂಡು ‘ಬೇಸಿಗೆಗೆ ಹೇಳಿ ಮಾಡಿಸಿದ ಜೀನ್ಸ್’​​ ಎಂದ ನೆಟ್ಟಿಗರು

6 ಸೆಕೆಂಡುಗಳ ವೈರಲ್ ವಿಡಿಯೋದಲ್ಲಿ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ಹೋಗುತ್ತಿರುವ ವೇಳೆ, ವೇಗವಾಗಿ ರಸ್ತೆ ದಾಟುತ್ತಿದ್ದ ನೀಲಗಾಯ್ ಆತನ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಆತ ಬೈಕಿನಿಂದ ಕೆಳಗೆ ಉರುಳಿ ಬೀಳುವ ದೃಶ್ಯವನ್ನು ಕಾಣಬಹುದು. ಈ ಭೀಕರ ದೃಶ್ಯವನ್ನು ಕಂಡು ನೆಟ್ಟಿಗರು ಬೆಚ್ಚಿಬಿದ್ದಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್