Viral Video: ಮಾವಿನ ಹಣ್ಣು ಕದ್ದರೆಂದು 3 ಮಕ್ಕಳನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಮಾಲೀಕ; ವಿಡಿಯೋ ವೈರಲ್‌

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಕೆಲವೊಂದು ವಿಡಿಯೋಗಳು ನಿಜಕ್ಕೂ ಮನಸ್ಸಿಗೆ ಘಾಸಿಯುಂಟುಮಾಡುತ್ತವೆ. ಇದೀಗ ಅಂತಹದೇ ವಿಡಿಯೋವೊಂದು ವೈರಲ್‌ ಆಗಿದ್ದು, ಮಾವಿನ ಹಣ್ಣು ಕದ್ದರೆಂಬ ಒಂದೇ ಒಂದು ಕಾರಣಕ್ಕೆ ತೋಟದ ಮಾಲೀಕ ಮೂವರು ಪುಟ್ಟ ಮಕ್ಕಳನ್ನು ಮರಕ್ಕೆ ಕಟ್ಟಿ ಹಾಕಿ, ಅವರ ಬಾಯಿಗೆ ಮಾವು ತುರುಕಿ ಅಮಾನುಷವಾಗಿ ಥಳಿಸಿದ್ದಾನೆ. ಮಾಲೀಕನ ಈ ಅಮಾನವೀಯ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

Viral Video: ಮಾವಿನ ಹಣ್ಣು ಕದ್ದರೆಂದು 3 ಮಕ್ಕಳನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಮಾಲೀಕ; ವಿಡಿಯೋ ವೈರಲ್‌
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Jul 14, 2024 | 3:08 PM

ಸಾಮಾನ್ಯವಾಗಿ ಈ ತುಂಟ ಮಕ್ಕಳಿಗೆ ಮರಗಳಲ್ಲಿ ಹಣ್ಣುಗಳು ಕಂಡ್ರೆ ಅದನ್ನು ಕಿತ್ತು ತಿನ್ನುವ ಅಭ್ಯಾಸ ಇರುತ್ತೆ. ಅದೇ ರೀತಿ ಇಲ್ಲೊಂದು ಮೂವರು ಮಕ್ಕಳು ತೋಟವೊಂದರಲ್ಲಿ ಮಾವು ಬೆಳೆದಿರುವುದನ್ನು ಕಂಡು, ಅಲ್ಲಿಗೆ ಹೋಗಿ ಮಾವಿನ ಹಣ್ಣನ್ನು ಕಿತ್ತಿದ್ದಾರೆ. ಈ ವಿಷಯ ತಿಳಿದ ತೋಟದ ಮಾಲೀಕ ಆ ಮಕ್ಕಳನ್ನು ಮರಕ್ಕೆ ಕಟ್ಟಿ, ಅವರ ಬಾವಿಗೆ ಮಾವಿನ ಕಾಯಿ ತುರುಕಿ ಅಮಾನುಷವಾಗಿ ಥಳಿಸಿದ್ದಾನೆ. ಈ ಆಘಾತಕಾರಿ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ ಎಂಬಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಮಾವಿನ ಹಣ್ಣನ್ನು ಕದ್ದರೆಂಬ ಒಂದೇ ಒಂದು ಕಾರಣಕ್ಕೆ ತೋಟದ ಮಾಲೀಕ ಮೂವರು ಪುಟ್ಟ ಮಕ್ಕಳನ್ನು ಮರಕ್ಕೆ ಕಟ್ಟಿಹಾಕಿ, ಮಕ್ಕಳು ಕಿರಿಚಾಡುವ ಸದ್ದು ಯಾರಿಗೂ ಕೇಳಬಾರದೆಂದು ಅವರ ಬಾಯಿಗೆ ಮಾವಿನ ಹಣ್ಣು ತುರುಕಿ, ಕ್ರೂರವಾಗಿ ಥಳಿಸಿದ್ದಾನೆ. ತೋಟದ ಮಾಲೀಕ ಸುದರ್ಶನ್‌ ಎಂದು ಗುರುತಿಸಲಾಗಿದೆ. ಇದೀಗ ಈತನ ವಿರುದ್ಧ ಚೌಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈ ವಿಡಿಯೋ ತುಣುಕು ಸೋಷಿಯಲ್‌ ಮಿಡಿಯಾದಲ್ಲಿ ವೈರಲ್‌ ಆಗುತ್ತಿದ್ದಂತೆ ಮಾಲೀಕನನ್ನು ಬಂಧಿಸಲಾಗಿದೆ.

ಈ ಕುರಿತ ಪೋಸ್ಟ್‌ ಒಂದನ್ನು ಸಚಿನ್‌ ಗುಪ್ತಾ (sachinGuptaUP) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ತೋಟದ ಮಾಲೀಕ ಎಷ್ಟು ಕ್ರೂರಿ ನೋಡಿ… ತೋಟದಲ್ಲಿ ಮಾವಿನ ಕಾಯಿ ಕೀಳಲು ಬಂದ ಮಕ್ಕಳನ್ನು ಹಗ್ಗದಿಂದ ಕಟ್ಟಿ ಥಳಿಸಿದ್ದಾನೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಸುಮಾರು 6 ವರ್ಷ ವಯಸ್ಸಿನ ಮೂವರು ಮಕ್ಕಳನ್ನು ತೋಟದ ಮಾಲೀಕ ಮರಕ್ಕೆ ಕಟ್ಟಿ ಹಾಕಿರುವಂತಹ ದೃಶ್ಯವನ್ನು ಕಾಣಬಹುದು.

ಜುಲೈ 12 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ನಿಷ್ಕಲ್ಮಶ ಮನಸ್ಸಿನ ಮಕ್ಕಳೊಂದಿಗೆ ಇಷ್ಟು ಕ್ರೂರವಾಗಿ ವರ್ತಿಸುವುದು ಎಷ್ಟು ಸರಿ ಎಂದು ನೆಟ್ಟಿಗರು ಮಾಲೀಕನ ವಿರುದ್ಧ ಕಿಡಿ ಕಾರಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್