AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಲಂಚದ ಹಣವನ್ನು ಪರಸ್ಪರ ಹಂಚಿಕೊಳ್ಳುತ್ತಿರುವ ಟ್ರಾಫಿಕ್ ಪೊಲೀಸರು; ವಿಡಿಯೋ ವೈರಲ್

ಲಂಚದ ಹಣವನ್ನು ಮೂರು ಟ್ರಾಫಿಕ್ ಪೊಲೀಸರು ಕುಳಿತು ಹಂಚಿಕೊಳ್ಳುತ್ತಿರುವ ವಿಡಿಯೋ ಎಲ್ಲೆಡೆ ವೈರಲ್​​ ಆದ ಬೆನ್ನಲ್ಲೇ ಇದೀಗ ಈ ಮೂವರು ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ತಿಳಿಸಿದ್ದಾರೆ.

Video Viral: ಲಂಚದ ಹಣವನ್ನು ಪರಸ್ಪರ ಹಂಚಿಕೊಳ್ಳುತ್ತಿರುವ ಟ್ರಾಫಿಕ್ ಪೊಲೀಸರು; ವಿಡಿಯೋ ವೈರಲ್
ಅಕ್ಷತಾ ವರ್ಕಾಡಿ
|

Updated on: Aug 18, 2024 | 12:51 PM

Share

ಲಂಚದ ಹಣವನ್ನು ಮೂರು ಟ್ರಾಫಿಕ್ ಪೊಲೀಸರು ಕುಳಿತು ಹಂಚಿಕೊಳ್ಳುತ್ತಿರುವ ವಿಡಿಯೋ ವೈರಲ್​​ ಆದ ಬೆನ್ನಲ್ಲೇ ಇದೀಗ ದೆಹಲಿಯ ಮೂವರು ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಕಳೆದ ವಾರ ಗಾಜಿಪುರ ಪೊಲೀಸ್ ಠಾಣೆ ಎದುರು ಮೂವರು ಪೊಲೀಸರು ಲಂಚದ ಹಣವನ್ನು ಹಂಚಿಕೊಳ್ಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದ್ದು,ಸದ್ಯ ಎಲ್ಲೆಡೆ ವೈರಲ್​ ಆಗುತ್ತಿದೆ.

ಪಿಟಿಐ ವರದಿಯ ಪ್ರಕಾರ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಶನಿವಾರ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಮೂವರು ಟ್ರಾಫಿಕ್ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿದ್ದಾರೆ. “ವೀಡಿಯೊವನ್ನು ಗಮನದಲ್ಲಿಟ್ಟುಕೊಂಡು, ಪ್ರಾಥಮಿಕ ತನಿಖೆಯ ನಂತರ, ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ವಿವರವಾದ ಇಲಾಖಾ ವಿಚಾರಣೆ ಕೂಡ ನಡೆಯುತ್ತಿದೆ” ಎಂದು ಸಕ್ಸೇನಾ ಹೇಳಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಈತ ಡಿಜಿಟಲ್​​ ಕಳ್ಳ, ದೇವರ ಹುಂಡಿ ಮೇಲೆ ತನ್ನ QR Code ಅಂಟಿಸಿ ಲಕ್ಷ ಲಕ್ಷ ದೋಚಿದ್ದ ಖದೀಮ

ಮೂವರು ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಲಂಚ ಸ್ವೀಕರಿಸಿದ ಲಂಚದ ಹಣವನ್ನು ಪರಸ್ಪರ ಹಂಚುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ವಶಪಡಿಸಿಕೊಂಡ ವಾಹನಗಳನ್ನು ಹಿಂತಿರುಗಿಸುವುದರ ವಿರುದ್ಧ ಸಹಾಯಕ ಉಪ-ತಪಾಸಣಾ (ಎಎಸ್‌ಐ) ಮತ್ತು ಅವರ ತಂಡವು ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ವರದಿಗಳು ಸೂಚಿಸಿವೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಗಾಜಿಪುರ ಪೊಲೀಸ್ ಠಾಣೆ ಬಳಿ ತಾತ್ಕಾಲಿಕವಾಗಿ ಟ್ರಾಫಿಕ್ ಪೊಲೀಸರು ಲಂಚದ ದಂಧೆ ನಡೆಸುತ್ತಿದ್ದಾರೆ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​​ನಲ್ಲಿ ಬರೆದು ಆಕ್ರೋಶ ವ್ಯಕ್ತಪಡಿಸಿದ್ದರು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ