AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು; ಮುಂದೆ ಆಗಿದ್ದೇನು ಗೊತ್ತಾ?

ಯೂಟ್ಯೂಬ್‌ ನೋಡಿ ಐವರು ಮಕ್ಕಳು ಬಾಂಬ್ ತಯಾರಿಸಲು ಮುಂದಾಗಿದ್ದಾರೆ. ತಯಾರಿಸುತ್ತಿದ್ದಂತೆ ಏಕಾಏಕಿ ಸ್ಫೋಟಗೊಂಡಿದ್ದು, ಪರಿಣಾಮ ಒಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ನಾಲ್ಕು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಂತಹ ಘಟನೆಗಳು ಮರುಕಳಿಸದಿರಲು ಪೋಷಕರು ತಮ್ಮ ಮಕ್ಕಳ ಆನ್‌ಲೈನ್ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Viral: ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು; ಮುಂದೆ ಆಗಿದ್ದೇನು ಗೊತ್ತಾ?
ಯೂಟ್ಯೂಬ್ ನೋಡಿ ಬಾಂಬ್ ತಯಾರಿಸಿದ ಮಕ್ಕಳು
ಅಕ್ಷತಾ ವರ್ಕಾಡಿ
|

Updated on: Aug 09, 2024 | 11:35 AM

Share

ಪಾಟ್ನಾ: ಇತ್ತೀಚೆಗಷ್ಟೇ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ಐವರು ಮಕ್ಕಳು ಯೂಟ್ಯೂಬ್‌ ನೋಡಿ ಬಾಂಬ್‌ ತಯಾರಿಸಲು ಮುಂದಾಗಿದ್ದಾರೆ. ಬೆಂಕಿಕಡ್ಡಿಗಳಿಂದ ಹಿಡಿದು ಗನ್‌ಪೌಡರ್‌ನವರೆಗೆ ಎಲ್ಲವನ್ನೂ ಸಂಗ್ರಹಿಸಿ ಟಾರ್ಚ್‌ಲೈಟ್‌ಗೆ ಸುರಿದು ಬಾಂಬ್​​​ ಒಂದನ್ನು ತಯಾರಿಸಿದ್ದಾರೆ. ಏಕಾಏಕಿ ಅದು ಸ್ಫೋಟಗೊಂಡಿದ್ದು, ಪರಿಣಾಮ ಒಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ನಾಲ್ಕು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಬಿಹಾರದ ಮುಜಾಫರ್‌ಪುರದ ಗೈಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ಮುನ್ನಿ ಬಂಗ್ರಾ ಕಲ್ಯಾಣ್ ಗ್ರಾಮದಲ್ಲಿ ಐವರು ಮಕ್ಕಳು ಯೂಟ್ಯೂಬ್ ವಿಡಿಯೋ ನೋಡಿ ಬಾಂಬ್ ತಯಾರಿಸಲು ಬಯಸಿದ್ದರು. ಮಕ್ಕಳು ಬೆಂಕಿಕಡ್ಡಿಗಳು ಮತ್ತು ಗನ್‌ಪೌಡರ್‌ಗಳನ್ನು ಸಂಗ್ರಹಿಸಿ ಟಾರ್ಚ್‌ಲೈಟ್‌ಗೆ ಸುರಿದಿದ್ದರು. ನಂತರ, ಅವರು ಅದರಲ್ಲಿ ಬ್ಯಾಟರಿಯನ್ನು ಹಾಕಿದ್ದಾರೆ. ಏಕಾಏಕಿ ಅದು ಸ್ಫೋಟಗೊಂಡಿದೆ. ಈ ಅವಘಡದಲ್ಲಿ ಒಂದು ಮಗು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ನಾಲ್ಕು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಕ್ರಾಪ್ ಓವರ್ ಫೆಸ್ಟಿವಲ್​​ನಲ್ಲಿ ಪಾಪ್ ಗಾಯಕಿ ರಿಹಾನ್ನಾ ಅವತಾರ ಹೇಗಿದೆ ನೋಡಿ

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಯೂಟ್ಯೂಬ್ ವಿಡಿಯೋ ನೋಡಿ ಮಕ್ಕಳು ತಯಾರಿಸಲು ಪ್ರಯತ್ನಿಸಿದ್ದು ಈ ವೇಳೆ ದೊಡ್ಡ ಸ್ಫೋಟ ಸಂಭವಿಸಿ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಕುಮಾರ್ ತಿಳಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಪೋಷಕರು ತಮ್ಮ ಮಕ್ಕಳ ಆನ್‌ಲೈನ್ ಚಟುವಟಿಕೆಗಳ ಮೇಲೆ ನಿಗಾ ಇಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!