Sign In

By signing in or creating an account, you agree with Associated Broadcasting Company's Terms & Conditions and Privacy Policy.

500 Rupee Note: 500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ; ಪೋಸ್ಟ್​​​ ವೈರಲ್​​

500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ ಹಾಗೂ 'ಸ್ವಚ್ಛ ಭಾರತ', ಬದಲಿಗೆ ಶ್ರೀ ರಾಮನ ಬಾಣ ಮತ್ತು ಬಿಲ್ಲು ಇರುವಂತೆ ವಿನ್ಯಾಸಗೊಳಿಸಲಾಗಿರುವ 500 ರೂ ಮುಖ ಬೆಲೆಯ ನೋಟುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

500 Rupee Note: 500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ; ಪೋಸ್ಟ್​​​ ವೈರಲ್​​
Fake Rs.500 Note With Lord RamaImage Credit source: Twitter
Follow us
ಅಕ್ಷತಾ ವರ್ಕಾಡಿ
|

Updated on: Jan 17, 2024 | 1:00 PM

ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ದಿನ ಸಮೀಪಿಸುತ್ತಿದ್ದಂತೆ ಗಾಂಧಿ ಬದಲು ಶ್ರೀರಾಮನ ಫೋಟೋ ಇರುವ 500 ರೂ ಮುಖ ಬೆಲೆಯ ನೋಟುಗಳು ಎಲ್ಲೆಡೆ ವೈರಲ್​​ ಆಗಿವೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾ ಮಹೋತ್ಸವದ ಸಂದರ್ಭದಲ್ಲಿ ರೂ. 500 ನೋಟುಗಳಲ್ಲಿ ಗಾಂಧೀಜಿಯ ಬದಲು ಶ್ರೀರಾಮನ ಚಿತ್ರ ಮುದ್ರಿಸಲಾಗುವುದು ಎಂಬ ಪ್ರಚಾರ ಜೋರಾಗಿದೆ.ಇದಕ್ಕೆ ಸಂಬಂಧಿಸಿದ ಫೋಟೋವೊಂದು ವೈರಲ್ ಆಗಿದ್ದು, ಗಾಂಧೀಜಿಯವರ ‘ಸ್ವಚ್ಛ ಭಾರತ’, ಬದಲಿಗೆ ಭಗವಾನ್ ರಾಮನ ಬಾಣ ಮತ್ತು ಬಿಲ್ಲು ಇರುವಂತೆ ವಿನ್ಯಾಸಗೊಳಿಸಲಾಗಿರುವುದನ್ನು ಕಾಣಬಹುದು.

500ರ ನೋಟಿನಲ್ಲಿ ಗಾಂಧಿ ಬದಲು ಶ್ರೀರಾಮನ ಫೋಟೋ ಹಾಕಿರುವ ನೋಟಿನ ಪೋಟೋವನ್ನು ‘X’ಬಳಕೆದಾರರಾದ @TenthPlanet1 ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದು, ಸದ್ಯ ಫೋಟೋ ಎಲ್ಲೆಡೆ ವೈರಲ್​ ಆಗಿದೆ.

ವೈರಲ್​​ ಪೋಸ್ಟ್​​​ ಇಲ್ಲಿದೆ ನೋಡಿ:

ಇದನ್ನೂ ಓದಿ: ತಲೆ ಕೆಳಗಾಗಿ ನಡೆಯುತ್ತಾ ಪ್ರಭು ಶ್ರೀರಾಮನ ದರ್ಶನಕ್ಕೆ ಅಯೋಧ್ಯೆಗೆ ಹೊರಟ ರಾಮಭಕ್ತ 

ಈ ನೋಟುಗಳ ಬದಲಾವಣೆಗೆ ಸಂಬಂಧಿಸಿದಂತೆ ಆರ್‌ಬಿಐ ಯಾವುದೇ ಮಾಹಿತಿ ಪ್ರಕಟಿಸಿಲ್ಲರುವುದರಿಂದ ಇದು ಫೇಕ್​​​ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡಿದ್ದಾರೆ. ಇದು ಎಡಿಟ್​​ ಮಾಡಲಾಗುರುವ ಫೋಟೋ ಎಂದು ಸೋಶಿಯಲ್​ ಮೀಡಿಯಾ ಬಳಕೆದಾರರು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ