CCTV Footage: ಸೈಕಲ್ಗೆ ಡಿಕ್ಕಿ ಹೊಡೆದ ಬಸ್; ವೃದ್ಧ ಸ್ಥಳದಲ್ಲೇ ಸಾವು, ಸಿಸಿಟಿವಿಯಲ್ಲಿ ಸೆರೆ
ಸೈಕಲ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದ್ದು, ನೆಲಕ್ಕೆ ಬಿದ್ದ ವ್ಯಕ್ತಿಯ ತಲೆಯ ಮೇಲಿಂದ ಬಸ್ ಚಕ್ರ ಹರಿದಿದೆ. ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಹಾರಾಷ್ಟ್ರ: ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ ಪುಣೆ ಪೋರ್ಷೆ ಕಾರು ಅಪಘಾತದ ನಂತರ, ಇದೀಗ ಅಂತಹುದೇ ಹಿಟ್ ರನ್ ಕೇಸ್ ನಾಗ್ಪುರದಲ್ಲಿ ನಡೆದಿದೆ. ಅಪಘಾತದ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ. ವೇಗವಾಗಿ ಬಂದ ಬಸ್ಸೊಂದು ಸೈಕಲ್ನಲ್ಲಿ ಹೋಗುತ್ತಿದ್ದ ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ವೃದ್ಧ ರಸ್ತೆಗೆ ಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
60 ವರ್ಷದ ವ್ಯಕ್ತಿ ಸೈಕಲ್ ನಲ್ಲಿ ಹೋಗುತ್ತಿದ್ದಾಗ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ರಭಸಕ್ಕೆ ವ್ಯಕ್ತಿ ಕೆಳಗೆ ಬಿದ್ದಿದ್ದಾನೆ. ಪರಿಣಾಮ ವ್ಯಕ್ತಿಯ ತಲೆಯ ಮೇಲಿಂದ ಬಸ್ ಚಕ್ರ ಹರಿದು ಹೋಗಿದೆ. ಗಾಯಗೊಂಡ ವ್ಯಕ್ತಿಯನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅಷ್ಟೊತ್ತಿಗಾಗಲೇ ತಡವಾಗಿದ್ದು, ವ್ಯಕ್ತಿ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಪೊಲೀಸರು ಈ ಬಸ್ ಅನ್ನು ಗುರುತಿಸಿದ್ದು, ಬಸ್ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ವಿಡಿಯೋ ಇಲ್ಲಿದೆ ನೋಡಿ:
महाराष्ट्र के नागपुर में तेज रफ्तार स्कूल बस ने साइकिल सवार बुजुर्ग को कुचल दिया। व्यक्ति की मौत हो गई। #Maharashtra pic.twitter.com/6popvV9Xan
— Versha Singh (@Vershasingh26) July 9, 2024
ಇದನ್ನೂ ಓದಿ: 8,000 ಕಿಮೀ ದೂರದಿಂದ ರೋಗಿಗೆ ರೋಬೋಟಿಕ್ ಸರ್ಜರಿ ಮಾಡಿದ ವೈದ್ಯರು
@Vershasingh26 ಎಂಬ ಹೆಸರಿನ ಟ್ವಿಟರ್ ಖಾತೆಯಲ್ಲಿ ಈ ಅಪಘಾತದ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ವಿಡಿಯೋದಲ್ಲಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ವೃದ್ಧ ರಸ್ತೆಗೆ ಬಿದ್ದರುವ ದೃಶ್ಯ ಸೆರೆಯಾಗಿದೆ. ಈ ಆಘಾತಕಾರಿ ವಿಡಿಯೋ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ