AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಕೊಲೇಟ್ ನೀಡುವೇ ಬಾ ಎಂದು ಕರೆದು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ

ಆರೋಪಿ ಮೌಲಾನಾ ಮುಖ್ತಾರ್ 7 ವರ್ಷದ ಬಾಲಕಿಗೆ ಚಾಕೊಲೇಟ್‌ ಕೊಡಿಸುವುದಾಗಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಆತನೊಂದಿಗೆ ಬಾಲಕಿ ಹೋಗುವುದನ್ನು ಸ್ಥಳೀಯರೊಬ್ಬರು ನೋಡಿದ್ದು, ಅನುಮಾನ ಬಂದು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಬಳಿಕ ಮನೆಯ ಕಿಟಕಿಯಿಂದ ಒಳಗಿನ ದೃಶ್ಯವನ್ನು ನೋಡಿ ಆಘಾತಕ್ಕೊಳಗಾಗಿದ್ದಾರೆ.

ಚಾಕೊಲೇಟ್ ನೀಡುವೇ ಬಾ ಎಂದು ಕರೆದು 7 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೌಲ್ವಿ
ಅಕ್ಷತಾ ವರ್ಕಾಡಿ
|

Updated on: Aug 13, 2024 | 11:05 AM

Share

ಉತ್ತರಪ್ರದೇಶ: 7 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸುತ್ತಿದ್ದಾಗ 70 ವರ್ಷದ ಧರ್ಮಗುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಮಕ್ಬರಾದಲ್ಲಿ ನಡೆದಿದೆ. ಆಗಸ್ಟ್ 9 ರ ಶುಕ್ರವಾರದಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮಗುವಿಗೆ ಚಾಕೊಲೇಟ್ ಕೊಡಿಸುವುದಾಗಿ ಆಮಿಷ ಒಡ್ಡಿ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿದ್ದು, ವಿಷಯ ತಿಳಿದ ಜನರು ಬಾಲಕಿಯನ್ನು ಆತನಿಂದ ರಕ್ಷಿಸಿದ್ದಾರೆ.

ಎಬಿಪಿ ವರದಿಯ ಪ್ರಕಾರ, ಮಕ್ಬರಾ ಪ್ರದೇಶದಲ್ಲಿ ವಾಸಿಸುವ ಆರೋಪಿ ಮೌಲಾನಾ ಮುಖ್ತಾರ್ ಎಂಬಾತ ಹಲವು ವರ್ಷಗಳಿಂದ ಧರ್ಮಗುರುವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇತ್ತೀಚಿಗಷ್ಟೇ ನೆರೆಮನೆಯ ಏಳು ವರ್ಷದ ಮುಗ್ಧ ಬಾಲಕಿಗೆ ಚಾಕೊಲೇಟ್‌ ಕೊಡಿಸುವುದಾಗಿ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಬಳಿಕ ಅಮಾನವೀಯ ಕೃತ್ಯಕ್ಕೆ ಯತ್ನಿಸಿದ್ದಾನೆ.

ಧರ್ಮಗುರುವಿನೊಂದಿಗೆ ಬಾಲಕಿ ಮನೆಗೆ ಹೋಗುವುದನ್ನು ಸ್ಥಳೀಯರೊಬ್ಬರು ನೋಡಿದ್ದು, ಅನುಮಾನ ಬಂದು ಹಿಂಬಾಲಿಸಿಕೊಂಡು ಹೋಗಿದ್ದಾರೆ. ಬಳಿಕ ಅವನು ಕಿಟಕಿಯಿಂದ ಒಳಗಿನ ದೃಶ್ಯವನ್ನು ನೋಡಿ ಆಘಾತಕ್ಕೊಳಗಾಗಿ ಆರೋಪಿಯ ಕೊಳಕು ಕೃತ್ಯವನ್ನು ತನ್ನ ಮೊಬೈಲ್ ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿ ಸ್ಥಳೀಯ ಜನರನ್ನು ಕರೆಸಿ ಆತನ ಹೀನಾ ಕೃತ್ಯವನ್ನು ಬಯಲಿಗೆಳೆದಿದ್ದಾನೆ. ಸ್ಥಳೀಯರು ಆತನನ್ನು ಬೆತ್ತಲೆ ಸ್ಥಿತಿಯಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದು ಮನಬಂದಂತೆ ಥಳಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪುರುಷರೇ ಇಲ್ಲಿನ ಕಾಗೆಗಳ ಟಾರ್ಗೆಟ್, ಹೋಗೋ-ಬರೋ ಗಂಡಸ್ರ ತಲೆಗೆ ಈ ಕಾಗಕ್ಕಗಳು ಹೇಗೆ ಕುಕ್ಕುತ್ತವೆ ನೋಡಿ

ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಆರೋಪಿ ತನ್ನ ಮನೆಯ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಅಧಿಕಾರಿಗಳು ಹಲವು ತಂಡಗಳನ್ನು ರಚಿಸಿ ತಲೆಮರೆಸಿಕೊಂಡಿರುವ ಧರ್ಮಗುರುಗಳ ಹುಡುಕಾಟ ನಡೆಸಿ, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು