AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Trending : ಮದುವೆಯಾದ 8 ವರ್ಷಗಳ ನಂತರ ಬಹಿರಂಗವಾದ ಪತಿಯ ಸತ್ಯ

Cheating : ಸ್ಥೂಲಕಾಯಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕೆಂದು ಹೇಳಿದ ಪತಿ, ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಗಾದರು. ಈ ವಿಷಯ ಬಹಿರಂಗಪಡಿಸಿದರೆ ಭಯಂಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪತ್ನಿಯನ್ನು ಹೆದರಿಸಿದರು.

Trending : ಮದುವೆಯಾದ 8 ವರ್ಷಗಳ ನಂತರ ಬಹಿರಂಗವಾದ ಪತಿಯ ಸತ್ಯ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Sep 17, 2022 | 11:08 AM

Share

Trending : ತನ್ನ ಪತಿ ವಿರಾಜ್ ವರ್ಧನ್ (ವಿಜಯತಾ) ಅಸ್ವಾಭಾವಿಕ ಲೈಂಗಿಕತೆಯಡಿ ತನಗೆ ವಂಚನೆ ಮಾಡಿದ್ದಾರೆ ಎಂದು ಗುಜರಾತ್​ನ ವಡೋದರಾ ನಿವಾಸಿ ಶೀತಲ್ (40)​ ಆರೋಪಿಸಿ ಪತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. 2014 ರಲ್ಲಿ ಇವರಿಬ್ಬರೂ ಮದುವೆಯಾದರು. ಹನಿಮೂನ್​ಗಾಗಿ ಕಾಶ್ಮೀರಕ್ಕೂ ತೆರಳಿದರು. ಎಂಟು ವರ್ಷಗಳ ನಂತರ ಪತಿಯ ಲಿಂಗತ್ವದ ಬಗ್ಗೆ ಸತ್ಯ ತಿಳಿದು ಶೀತಲ್​ ಆಘಾತಕ್ಕೆ ಒಳಗಾದರು. ನಂತರ ಪತಿಯು ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಗಾದ ವಿಷಯವೂ ಬಹಿರಂಗಗೊಂಡಿತು. ಗುಜರಾತಿನ ಗೋತ್ರಿ ಪೊಲೀಸ್​ ಠಾಣೆಯಲ್ಲಿ ಪತಿ ಮತ್ತು ಕುಟುಂಬದವರ ವಿರುದ್ಧ ಇದೀಗ ಪ್ರಕರಣ ದಾಖಲಿಸಿದ್ದಾರೆ ಶೀತಲ್.

ಶೀತಲ್​ ಮೊದಲ​ ಪತಿ ರಸ್ತೆ ಅಪಘಾತದಲ್ಲಿ ನಿಧನರಾದರು. ಆಗ ಅವರಿಗೆ ಹದಿನಾಲ್ಕು ವರ್ಷದ ಮಗಳಿದ್ದಳು.  ಎರಡನೇ ಮದುವೆಯ ಬಗ್ಗೆ ಅವರಿಗೆ ಆಲೋಚನೆ ಬಂದಿತು. ನಂತರ ಮ್ಯಾಟ್ರಿಮೋನಿಯಲ್ ವೆಬ್‌ಸೈಟ್ ಒಂದನ್ನು ಸಂಪರ್ಕಿಸಿದರು. ಆಗ ವಿರಾಜ್ ವರ್ಧನ್ ಎನ್ನುವವರ ಪರಿಚಯವಾಯಿತು. 2014ರಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿರಾಜ್ ವರ್ಧನ್​ ಅವರೊಂದಿಗೆ ಶಾಸ್ತ್ರೋಕ್ತವಾಗಿ ಶೀತಲ್​ ಮದುವೆಯಾದರು.

ಆದರೆ ಗಂಡಹೆಂಡತಿ ಮಧ್ಯೆ ಲೈಂಗಿಕ ಜೀವನಕ್ಕೆ ಸಂಬಂಧಿಸಿ ಪ್ರಶ್ನೆಗಳು ಎದ್ದಾಗೆಲ್ಲ ವಿರಾಜ್​, ಶೀತಲ್​ ಬಳಿ ಕ್ಷಮೆ ಕೇಳಲಾರಂಭಿಸಿದರು. ಆದರೆ ಶೀತಲ್​ ಒತ್ತಾಯ ಮಾಡಿದಾಗ, ಕೆಲ ವರ್ಷಗಳ ಹಿಂದೆ ರಷ್ಯಾದಲ್ಲಿ ಸಂಭವಿಸಿದ ಅಪಘಾತದಲ್ಲಿ ತಾನು ಲೈಂಗಿಕ ಶಕ್ತಿಯನ್ನು ಕಳೆದುಕೊಂಡಿದ್ದು, ಸಣ್ಣ ಶಸ್ತ್ರಚಿಕಿತ್ಸೆಯ ನಂತರ ಸರಿಹೋಗುತ್ತದೆ ಎಂದು ಭರವಸೆ ನೀಡಿದರು. ಅಲ್ಲಿಗೆ ಸಂಸಾರ ಸುಗಮವಾಗಿ ಸಾಗಬಹುದೆಂದು ಶೀತಲ್​ ಸಮಾಧಾನಿಸಿಕೊಂಡರು.

ಇದನ್ನೂ ಓದಿ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಇದನ್ನೂ ಓದಿ : Trending : ಒಡಿಶಾದ ವಿವಾಹಿತ ಪುರುಷನೊಂದಿಗೆ ತೃತೀಯಲಿಂಗಿ ಮಹಿಳೆಯ ವಿವಾಹ

ಆದರೆ ಜನವರಿ 2020ರಲ್ಲಿ, ಸ್ಥೂಲಕಾಯಕ್ಕೆ ಸಂಬಂಧಿಸಿದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕೆಂದು ಸುಳ್ಳು ಹೇಳಿದ ವಿರಾಜ್, ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆಗೆ ಒಳಗಾದರು. ನಂತರ ಈ ವಿಷಯವನ್ನು ಶೀತಲ್​ ಅವರಿಗೆ ಈ ವಿಷಯ ತಿಳಿದು ಆಕೆ ಆಘಾತಕ್ಕೆ ಒಳಗಾದರು. ಅಷ್ಟಕ್ಕೆ ಸುಮ್ಮನಾಗದ ವಿರಾಜ್ ಅಸಹಜ ಲೈಂಗಿಕ ಕ್ರಿಯೆಯಲ್ಲಿ ಒಳಗೊಳ್ಳಲು ಒತ್ತಾಯಿಸಲಾರಂಭಿಸಿದರು. ಈ ವಿಷಯವನ್ನು ಬಹಿರಂಗಪಡಿದಿರೆ ಭಯಂಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದೂ ಬೆದರಿಸಿದರು.

ಉಪಾಯಗಾಣದ ಶೀತಲ್​ ಪೊಲೀಸರಿಗೆ ಈ ವಿಷಯ ತಿಳಿಸಿ ಪ್ರಕರಣ ದಾಖಲಿಸಿದರು. ದೆಹಲಿ ನಿವಾಸಿಯಾಗಿರುವ ಆರೋಪಿ ವಿರಾಜ್​ ಇದೀಗ ವಡೋದರಾ ಪೊಲೀಸರ ಬಂಧನದಲ್ಲಿದ್ದಾರೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 10:51 am, Sat, 17 September 22

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​