ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿಕೊಂಡ 9 ಕಾರ್ಮಿಕರು; ರಕ್ಷಣೆಗೆ ಎಸ್​ಡಿಇಆರ್​ಎಫ್​ ತಂಡ ಹರಸಾಹಸ

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಒಂಬತ್ತು ಕಾರ್ಮಿಕರಲ್ಲಿ ಏಳು ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿಕೊಂಡ 9 ಕಾರ್ಮಿಕರು; ರಕ್ಷಣೆಗೆ ಎಸ್​ಡಿಇಆರ್​ಎಫ್​ ತಂಡ ಹರಸಾಹಸ
ಸುರಂಗದಲ್ಲಿ ಸಿಲಿಕಿಕೊಂಡಿರುವವರನ್ನು ರಕ್ಷಿಸುತ್ತಿರುವುದು
Updated By: ಗಂಗಾಧರ​ ಬ. ಸಾಬೋಜಿ

Updated on: Feb 13, 2022 | 10:54 AM

ಭೋಪಾಲ್: ಬಾರ್ಗಿ ಕಾಲುವೆ ಯೋಜನೆಯ ನಿರ್ಮಾಣ ಹಂತದ ಸುರಂಗದಲ್ಲಿ ಒಂಬತ್ತು ಕಾರ್ಮಿಕರು (labourers) ಸಿಕ್ಕಿಬಿದ್ದಿರುವಂತಹ ಘಟನೆ ಸಂಭವಿಸಿದೆ. ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಸ್ಲೀಮನಾಬಾದ್‌ನಲ್ಲಿ ಈ ಘಟನೆ ನಡೆದಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಒಂಬತ್ತು ಕಾರ್ಮಿಕರಲ್ಲಿ ಏಳು ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆ (SDERF) ತಂಡದೊಂದಿಗೆ ಸ್ಥಳೀಯ ಅಧಿಕಾರಿಗಳು ಉಳಿದ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಎಸ್‌ಡಿಇಆರ್‌ಎಫ್ ತಂಡ ಜಬಲ್‌ಪುರದಿಂದ ಆಗಮಿಸಿದೆ ಎಂದು ಕಟ್ನಿ ಕಲೆಕ್ಟರ್ ಪ್ರಿಯಾಂಕ್ ಮಿಶ್ರಾ ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ

ಮಧ್ಯಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜೇಶ್ ರಾಜೋರಾ ಅವರು ರಾಜ್ಯ ಸಚಿವಾಲಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಅಗತ್ಯ ಸಾಧನಗಳೊಂದಿಗೆ ಎಸ್‌ಡಿಇಆರ್‌ಎಫ್ ತಂಡವು ಶಾಫ್ಟ್ ಅಗೆಯುವ ಮೂಲಕ ಕಾರ್ಮಿಕರನ್ನು ತಲುಪಲು ಪ್ರಯತ್ನಿಸುತ್ತಿದೆ. ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಸ್ಥಳದಲ್ಲಿ ಬಿಡು ಬಿಟ್ಟಿದ್ದಾರೆ ಎಂದು ಶ್ರೀ ರಾಜೋರಾ ಪಿಟಿಐಗೆ ತಿಳಿಸಿದ್ದಾರೆ.

ಸಿಕ್ಕಿಬಿದ್ದ ಕಾರ್ಮಿಕರು ರಕ್ಷಣಾ ಸಿಬ್ಬಂದಿಯ ಕರೆಗಳಿಗೆ ಸ್ಪಂದಿಸುತ್ತಿದ್ದಾರೆ ಎಂದು ಸ್ಲೀಮನಾಬಾದ್ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಸಂಘ ಮಿತ್ರ ಗೌತಮ್ ಹೇಳಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೂಡ ಸ್ಲೀಮನಾಬಾದ್‌ನಲ್ಲಿ ನಡೆದ ಘಟನೆಯ ಬಗ್ಗೆ ಗಮನ ಹರಿಸಿದ್ದಾರೆ. ಕಟ್ನಿ ಸಂಗ್ರಾಹಕರೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ಅವರು ಘಟನೆಯ ಬಗ್ಗೆ ಮಾಹಿತಿ ಪಡೆದಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ:

Shocking Video: ಕೆಳಗೆ ಬಿದ್ದ ಬಟ್ಟೆ ತರಲು ಮಗನನ್ನು ಸೀರೆಗೆ ಕಟ್ಟಿ 10ನೇ ಮಹಡಿಯಿಂದ ನೇತಾಡಿಸಿದ ತಾಯಿ!