
ನ್ಯೂಯಾರ್ಕ್, ಮೇ10: ಕಳೆದ ವಾರ ನ್ಯೂಯಾರ್ಕ್ ನಗರದ ಬೀದಿಯಲ್ಲಿ 45 ವರ್ಷದ ಮಹಿಳೆಯೊಬ್ಬರು ಭಯಾನಕ ಹಲ್ಲೆಗೆ ಒಳಗಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೇ 1 ರಂದು ಮುಂಜಾನೆ 3 ಗಂಟೆಯ ಸುಮಾರಿಗೆ ಈಸ್ಟ್ 152 ನೇ ಸ್ಟ್ರೀಟ್ ಥರ್ಡ್ ಅವೆನ್ಯೂನಲ್ಲಿ ಮಾರ್ಗದಲ್ಲಿ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮುಸುಕುಧಾರಿ ದುಷ್ಕರ್ಮಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಹಿಂದಿನಿಂದ ಬಂದು ದಾಳಿ ಮಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಹಿಳೆಯ ಹಿಂದಿನಿಂದ ಬಂದ ವ್ಯಕ್ತಿ ಬೆಲ್ಟ್ನಿಂದ ಆಕೆಯ ಕತ್ತನ್ನು ಬಲವಾಗಿ ಹಿಡಿದು ಉಸಿರುಗಟ್ಟುವಂತೆ ಮಾಡಿದ್ದಾನೆ. ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿ ನೆಲಕ್ಕೆ ಬಿದ್ದ ಮಹಿಳೆಯನ್ನು ಎಳೆದುಕೊಂಡು ಹೋಗಿ ಎರಡು ಕಾರುಗಳ ನಡುವೆ ಎಳೆದುಕೊಂಡು ಹೋಗಿದ್ದಾನೆ. ಬಳಿಕ ಬೆಲ್ಟ್ ಬಳಸಿ ಮಹಿಳೆಯನ್ನು ಉಸಿರುಗಟ್ಟಿಸಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.
ಇದನ್ನೂ ಓದಿ: ಸಂತೋಷ, ಆರೋಗ್ಯ ವೃದ್ಧಿಗಾಗಿ ಮುಖಕ್ಕೆ ಮಸಿ ಬಳಿದು ಸಂಭ್ರಮಿಸುತ್ತಾರೆ ಇಲ್ಲಿನ ಜನ
ಇದೀಗ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಆರೋಪಿ ಪರಾರಿಯಾಗಿ ತಲೆಮರೆಸಿಕೊಂಡಿದ್ದು, ಸದ್ಯ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದು ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:00 pm, Fri, 10 May 24