AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಪುಟ್ಟ ಪುಟ್ಟ ಹೆಜ್ಜೆಯನ್ನಿಟ್ಟು ಪಾರಿವಾಳವನ್ನು ಬೆನ್ನಟ್ಟಿದ ಮರಿಯಾನೆ

ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧ ಪಟ್ಟ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಪುಟಾಣಿ ಆನೆಯ ಕ್ಯೂಟ್ ವಿಡಿಯೋ ವೈರಲ್ ಆಗಿದೆ. ಮರಿಯಾನೆಯೊಂದು ಪುಟ್ಟ ಪುಟ್ಟ ಹೆಜ್ಜೆಯನ್ನಿಟ್ಟು ಪಾರಿವಾಳವನ್ನು ಅಟ್ಟಿಸಿಕೊಂಡು ಹೋಗಿದೆ. ಈ ಮರಿಯನೆ ತುಂಟಾಟಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಪುಟ್ಟ ಪುಟ್ಟ ಹೆಜ್ಜೆಯನ್ನಿಟ್ಟು ಪಾರಿವಾಳವನ್ನು ಬೆನ್ನಟ್ಟಿದ ಮರಿಯಾನೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 28, 2026 | 7:11 PM

Share

ಮರಿಯಾನೆಗಳು (baby elephant) ಏನು ಮಾಡಿದ್ರೂ ನೋಡೋಕೆ ಖುಷಿ ಎನಿಸುತ್ತದೆ. ಕೆಲವೊಮ್ಮೆ ತನ್ನ ಆಟ ತುಂಟಾಟಗಳಿಂದಲೇ ಗಮನ ಸೆಳೆಯುತ್ತವೆ. ಪಾರಿವಾಳವನ್ನು ಕಂಡೊಡನೆ ಪುಟ್ಟ ಪುಟ್ಟ ಹೆಜ್ಜೆಯನ್ನಿಟ್ಟು ಮರಿಯಾನೆ ಬೆನ್ನಟ್ಟಿಕೊಂಡು ಓಡಿದೆ. ಈ ಕ್ಯೂಟ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ದೃಶ್ಯ ನೋಡಿ ನೆಟ್ಟಿಗರು ಫುಲ್‌ ಫಿದಾ ಆಗಿದ್ದಾರೆ.

ಪಾರಿವಾಳವನ್ನು ಅಟ್ಟಾಡಿಸಿಕೊಂಡು ಹೋದ ಮರಿಯಾನೆ

ಅನಿಮಲ್ ಟ್ರಾವೆಲ್ ಅಡ್ವೇಚರ್ (Animal travel adventures) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಮರಿಯಾನೆ ಪಾರಿವಾಳ ಕಂಡೊಡನೆ ಪುಟ್ಟ ಪುಟ್ಟ ಹೆಜ್ಜೆಯಿಟ್ಟು ಅಟ್ಟಾಡಿಸಿಕೊಂಡು ಹೋಗಿದೆ. ಈ ಆನೆ ಮರಿ ಬೆನ್ನಟ್ಟಿ ಬರುವುದನ್ನು ಕಂಡ ಪಾರಿವಾಳ ಓಡುತ್ತಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಖುಷಿ ಖುಷಿಯಾಗಿ ಚೆಂಡಾಟ ಆಡಿದ ಮರಿಯಾನೆ, ವೈರಲ್ ಆಯ್ತು ದೃಶ್ಯ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದು ಕೊಂಡಿವೆ. ಒಬ್ಬ ಬಳಕೆದಾರ, ಕ್ಯೂಟ್ ದೃಶ್ಯ ಎಂದರೆ, ಮತ್ತೊಬ್ಬರು ಪ್ಲೇ ಸ್ಕೂಲ್ ಬೇಬಿ ಎಂದು ಹೇಳಿದ್ದಾರೆ. ಇನ್ನೊಬ್ಬರು, ತುಂಬಾ ಮುದ್ದಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More