Viral: ನನ್ಗೂ ಒಂದು ಸೀಟು ಕೊಡಿ ಮಾರ್ರೆ, ಕಾಲೇಜಿಗೆ ಡೈರೆಕ್ಟ್‌ ಎಂಟ್ರಿ ಕೊಟ್ಟ ಎಮ್ಮೆ

ಪ್ರತಿನಿತ್ಯವೂ ಸೋಷಿಯಲ್‌ ಮೀಡಿಯಾದಲ್ಲಿ ಹಲವಾರು ತಮಾಷೆಯ ವಿಡಿಯೋಗಳು ಹರಿದಾಡುತ್ತಿರುತ್ತವೆ. ಈ ಫನ್ನೀ ದೃಶ್ಯಗಳು ನಮ್ಮನ್ನು ಹೊಟ್ಟೆ ಹುಣ್ಣಾಗಿಸುವಂತೆ ನಗಿಸುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ಸಖತ್‌ ವೈರಲ್‌ ಅಗುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು ಶಿಸ್ತಾಗಿ ಕುಳಿತು ಪಾಠ ಕೇಳುತ್ತಿರುವ ಸಂದರ್ಭದಲ್ಲಿ ಎಮ್ಮೆಯೊಂದು ಡೈರೆಕ್ಟ್‌ ಆಗಿ ತರಗತಿಯ ಒಳಗೆ ಎಂಟ್ರಿ ಕೊಟ್ಟಿದೆ. ಈ ದೃಶ್ಯ ಕಂಡು ಎಮ್ಮೆಗೂ ಒಂದು ಸೀಟ್‌ ಕೊಡಿ ಎಂದು ನೆಟ್ಟಿಗರು ಕಾಮೆಂಟ್ಸ್‌ ಮಾಡಿದ್ದಾರೆ.

Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 12, 2024 | 3:09 PM

ಶಾಲೆಯೊಳಗೆ ಹಾವು, ಕೋತಿ ನುಗ್ಗಿದಂತಹ ಅಥವಾ ಶಾಲೆಯೊಳಗೆ ನಾಯಿಗಳು ನುಗ್ಗಿದಂತಹ ಸುದ್ದಿಗಳನ್ನು ಕೇಳಿರುತ್ತೀರಿ ಅಲ್ವಾ. ಇದೀಗ ಅಂತಹದ್ದೇ ತಮಾಷೆಯ ಘಟನೆಯೊಂದು ನಡೆದಿದ್ದು, ಯಾವುದೋ ಒಂದು ಕಾಲೇಜಿಗೆ ಎಮ್ಮೆಯೊಂದು ಬಂದಿದೆ. ಹೌದು ಪಾಠದ ವೇಳೆಯೇ ಕಲಿಯೋಕೆ ನನ್ಗೂ ಒಂದು ಅವಕಾಶ ಸಿಗ್ಬೋದಾ ಎನ್ನುತ್ತಾ ಎಮ್ಮೆಯೊಂದು ಡೈರೆಕ್ಟ್‌ ಆಗಿ ತರಗತಿಯೊಳಗೆ ಎಂಟ್ರಿ ಕೊಟ್ಟಿದೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದ್ದು, ಎಮ್ಮೆಗೂ ಒಂದು ಸೀಟ್‌ ಕೊಡಿ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

doaba_x08 ಹೆಸರಿನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ಕುರಿತ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ಈ ವಿಡಿಯೋದಲ್ಲಿ ಯಾವುದೋ ಒಂದು ಕಾಲೇಜಿನಲ್ಲಿ ಎಮ್ಮೆಯೊಂದು ಕ್ಲಾಸ್‌ ರೂಮ್‌ಗೆ ರಾಜಾರೋಷವಾಗಿ ನುಗ್ಗುವಂತಹ ದೃಶ್ಯವನ್ನು ಕಾಣಬಹುದು. ಇದ್ದಕ್ಕಿದ್ದಂತೆ ಎಮ್ಮೆ ಕ್ಲಾಸ್‌ ರೂಮ್‌ಗೆ ಎಂಟ್ರಿ ಕೊಟ್ಟಿದ್ದನ್ನು ಕಂಡು ಅಲ್ಲಿದ್ದ ವಿದ್ಯಾರ್ಥಿಗಳು ಗಾಬರಿಗೊಂಡಿದ್ದು, ನಂತರ ವಿದ್ಯಾರ್ಥಿಯೊಬ್ಬ ಆ ಎಮ್ಮೆಯನ್ನು ತರಗತಿಯಿಂದ ಹೊರ ದಬ್ಬಿದ್ದಾನೆ.

ಇದನ್ನೂ ಓದಿ: ಅಬ್ಬಬ್ಬಾ ಲಾಟ್ರಿ…. ಜಪಾನ್‌ಗೆ ‌ ಹೋಗುವ ಭಾರತೀಯ ಪ್ರವಾಸಿಗರಿಗೆ ಫ್ಲೈಟ್‌ ಟಿಕೆಟ್‌ ಫ್ರೀ ಫ್ರೀ ಫ್ರೀ….

ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 9 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಬಹುಶಃ ಅದು ತನ್ನ ಸ್ನೇಹಿತರನ್ನು ಭೇಟಿಯಾಗಲು ಬಂದಿರಬಹುದುʼ ಎಂದು ತಮಾಷೆಯ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇದು ಸ್ಪಾಟ್‌ ಇನ್ಸ್‌ಪೆಕ್ಷನ್‌ಗೆ ಬಂದ ಅಧಿಕಾರಿʼ ಎಂದು ತಮಾಷೆ ಮಾಡಿದ್ದಾರೆ. ಇನ್ನೂ ಅನೇಕರು ಈ ದೃಶ್ಯವನ್ನು ಕಂಡು ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ