AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಟ್ಯಾಕ್‌ ಮಾಡಲು ಬಂದ ಬೆಕ್ಕನ್ನೇ ಹೆದರಿಸಿ ಓಡಿಸಿದ ವಿಷಕಾರಿ ಹಾವು, ವೈರಲ್‌ ಆಯ್ತು ದೃಶ್ಯ

ಪ್ರಾಣಿ ಸಾಮ್ರಾಜ್ಯಕ್ಕೆ ಸಂಬಂಧಿಸಿದ ಕುತೂಹಲಕಾರಿ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಪ್ರತಿನಿತ್ಯ ಕಾಣಸಿಗುತ್ತಿರುತ್ತವೆ. ಇಲ್ಲೊಂದು ಅಂತಹದ್ದೇ ದೃಶ್ಯ ವೈರಲ್‌ ಆಗಿದ್ದು, ಬೆಕ್ಕೊಂದು ವಿಷಕಾರಿ ಸರ್ಪದ ಮೇಲೆ ಏಕಾಏಕಿ ದಾಳಿ ಮಾಡಿವೆ. ಈ ದೃಶ್ಯವು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಅಟ್ಯಾಕ್‌ ಮಾಡಲು ಬಂದ ಬೆಕ್ಕನ್ನೇ ಹೆದರಿಸಿ ಓಡಿಸಿದ ವಿಷಕಾರಿ ಹಾವು, ವೈರಲ್‌ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Sep 25, 2026 | 4:44 PM

Share

ನೀವು ಹಾವು (snakes) ಮುಂಗುಸಿಯ ಕಾದಾಟದ ವಿಡಿಯೋಗಳನ್ನು ನೋಡಿರುತ್ತೀರಿ. ಇಲ್ಲೊಂದು ಬೆಕ್ಕು ಹಾವಿನೊಂದಿಗೆ ಕಾದಾಟಕ್ಕೆ ಇಳಿದಿದೆ. ತನ್ನ ಮೇಲೆ ಅಟ್ಯಾಕ್ ಮಾಡಲು ಬಂದ ಬೆಕ್ಕನ್ನೇ ವಿಷಕಾರಿ ಹಾವು ಪ್ರತಿ  ದಾಳಿ ನಡೆಸಿ ಓಡಿಸಿದೆ. ಈ ಬಿಗ್ ಫೈಟ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ದೃಶ್ಯ ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ.

ಬೆಕ್ಕು ಹಾವಿನ ನಡುವೆ ಬಿಗ್ ಫೈಟ್

ಕಿಕಾ ಬಾಗ್ (Kika bog) ಹೆಸರಿನ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಬೆಕ್ಕು ಹಾಗೂ ವಿಷಕಾರಿ ಹಾವಿನ ಕಾಳಗವನ್ನು ನೋಡಬಹುದು. ಹಾವನ್ನು ಕಂಡ ಬೆಕ್ಕು ಅದರ ಮೇಲೆ ದಾಳಿ ಮಾಡಿದೆ. ತನ್ನ ಮೇಲೆ ಅಟ್ಯಾಕ್ ಮಾಡಲು ಬಂದ ಬೆಕ್ಕಿನ ಮೇಲೆ ಪ್ರತಿ ದಾಳಿ ನಡೆಸಿದೆ. ಬೆಕ್ಕು ಹಾವಿನ ದಾಳಿಗೆ ಹೌಹಾರಿದ ದೃಶ್ಯವನ್ನು ನೀವಿಲ್ಲಿ ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ತನ್ನ ಮೇಲೆ ಅಟ್ಯಾಕ್‌ ಮಾಡಲು ಬಂದ ಕಿಂಗ್ ಕೋಬ್ರಾವನ್ನೇ ಹಿಮ್ಮೆಟ್ಟಿಸಿದ ಬೆಕ್ಕು

ಈ ವಿಡಿಯೋ ಇದುವರೆಗೆ 2 ಮಿಲಿಯನ್ ಗೂ ಅಧಿಕ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅಟ್ಯಾಕ್ ಹಾಗೂ ಡಿಫೆನ್ಸ್ ಒಂದೇ ವೇಗದಲ್ಲಿದೆ ಎಂದಿದ್ದಾರೆ. ಇನ್ನೊಬ್ಬರು, ಇದು ನಿಜವೇ ಎಂದು ಕೇಳಿದ್ದಾರೆ. ಮತ್ತೊಬ್ಬರು, ಕ್ಯಾಟ್ ರೆಫ್ಲೆಕ್ಸ್ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More