Viral Video: ಏನಿದು ಆಶ್ಚರ್ಯ; ಶನಿ ದೇವರಿಗೆ ಪ್ರದಕ್ಷಿಣೆ ಹಾಕಿದ ಬೆಕ್ಕಣ್ಣ…

ಸಾಮಾನ್ಯವಾಗಿ ದೇವಾಲಯಕ್ಕೆ ಹೋದಾಗ ದೇವರಿಗೆ ಪ್ರದಕ್ಷಿಣೆ ಹಾಕಿ ದೇವರಲ್ಲಿ ಇಷ್ಟಾರ್ಥಗಳನ್ನು ಪೂರೈಸುವಂತೆ ಬೇಡಿಕೊಳ್ಳುತ್ತೇವೆ. ಆದರೆ ನೀವು ಎಂದಾದರೂ ಪ್ರಾಣಿಗಳು ದೇವರಿಗೆ ಪ್ರದಕ್ಷಿಣೆ ಹಾಕೋದನ್ನು ನೋಡಿದ್ದೀರಾ? ಪ್ರಾಣಿಗಳಿಗೆ ಇದೆಲ್ಲಾ ಹೇಗೆ ಗೊತ್ತಿರಲು ಸಾಧ್ಯ ಅಂತ ನೀವು ಯೋಚ್ನೆ ಮಾಡ್ಬೋದಲ್ವಾ. ಆದರೆ ಇಲ್ಲೊಂದು ಬೆಕ್ಕು ಶನಿ ದೇವರಿಗೆ ಭಕ್ತಪೂರ್ವಕವಾಗಿ ಪ್ರದಕ್ಷಿಣೆಯನ್ನು ಹಾಕುವ ಮೂಲಕ ಎಲ್ಲರಲ್ಲೂ ಅಚ್ಚರಿಯನ್ನು ಮೂಡಿಸಿದೆ.

Viral Video: ಏನಿದು ಆಶ್ಚರ್ಯ; ಶನಿ ದೇವರಿಗೆ ಪ್ರದಕ್ಷಿಣೆ ಹಾಕಿದ ಬೆಕ್ಕಣ್ಣ…
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Mar 17, 2024 | 3:45 PM

ಮನುಷ್ಯ ಮನಸ್ಸಿಗೆ ನೆಮ್ಮದಿ ಸಿಗಲೆಂದು ಆಗಾಗ್ಗೆ ದೇವಾಲಯಗಳಿಗೆ ಭೇಟಿ ನೀಡುತ್ತಿರುತ್ತೇವೆ. ದೇವರಿಗೆ ಪ್ರದಕ್ಷಿಣೆಯನ್ನು ಹಾಕಿ ಸಕಲ ಇಷ್ಟಾರ್ಥಗಳನ್ನು ಪೂರೈಸುವಂತೆ ಬೇಡಿಕೊಳ್ಳುತ್ತೇವೆ. ನಾವೆಲ್ಲರೂ ದೇವಾಲಕ್ಕೆ ಭೇಟಿ ನೀಡುವಂತಹದ್ದು, ಭಕ್ತಿ ಪೂರ್ವಕವಾಗಿ ದೇವರಿಗೆ ಪ್ರಾರ್ಥನೆ ಸಲ್ಲಿಸುವುದು ಸಾಮಾನ್ಯ. ಆದರೆ ನೀವು ಎಂದಾದರೂ ಪ್ರಾಣಿಗಳು ದೇವರಿಗೆ ಪ್ರಾರ್ಥನೆ ಸಲ್ಲಿಸುವುದನ್ನಾಗಲಿ ಅಥವಾ ದೇವರಿಗೆ ಪ್ರದಕ್ಷಿಣೆ ಹಾಕುವುದನ್ನಾಗಲಿ ನೋಡಿದ್ದೀರಾ? ಅರೇ ಪ್ರಾಣಿಗಳಿಗಳಿಗೆ ಅದೆಲ್ಲಾ ಹೇಗೆ ಗೊತ್ತಾಗುತ್ತೆ ಅಂತ ನೀವು ಅಂದುಕೊಳ್ಳಬಹುದಲ್ವಾ? ಆದರೆ ಇಲ್ಲೊಂದು ಬೆಕ್ಕು ಶನಿ ದೇವಾಲಯಕ್ಕೆ ಭೇಟಿ ನೀಡಿ ದೇವರಿಗೆ ಭಕ್ತಿ ಪೂರ್ವಕವಾಗಿ ಪ್ರದಕ್ಷಿಣೆಯನ್ನು ಹಾಕಿದೆ. ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಈ ಹಿಂದೆ ಶ್ವಾನವೊಂದು ದೇವಾಲಯದಲ್ಲಿ ಪ್ರದಕ್ಷಿಣೆ ಹಾಕಿದಂತಹ ಹಾಗೂ ಹಸುವೊಂದು ಅಯ್ಯಪ್ಪ ದೇಗುಲಕ್ಕೆ ಪ್ರದಕ್ಷಿಣೆ ಹಾಕಿದ ಸುದ್ದಿಗಳು ವೈರಲ್ ಆಗಿದ್ದವು. ಇದೀಗ ಅದೇ ರೀತಿ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದ್ದು, ಇಲ್ಲಿನ ಶನಿ ದೇವಾಲಯಕ್ಕೆ ಭೇಟಿ ನೀಡಿದಂತಹ ಬೆಕ್ಕೊಂದು ಶನಿ ದೇವರ ವಿಗ್ರಹದ ಸುತ್ತ ಭಕ್ತಿ ಪೂರ್ವಕವಾಗಿ ಪ್ರದಕ್ಷಿಣೆ ಹಾಕಿದೆ. ಈ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

ಮಂಜುನಾಥ್ ಹೆಚ್.ಸಿ (@manjunath HC) ಎಂಬವರು ಈ ವಿಡಿಯೋವನ್ನು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಬಾಯಿ ಇಲ್ಲದ ಮೂಕ ಜೀವಿ ಬೆಕ್ಕು, ಆದರೂ ಹಿಂದಿನ ಜನ್ಮದ ಸಂಸ್ಕಾರದಿಂದ ದೈವತ್ವವನ್ನು ಗುರುತಿಸಿ ಈ ರೀತಿ ಶನಿ ದೇವರಿಗೆ ಪ್ರದಕ್ಷಿಣೆ ಹಾಕುತ್ತಿರುವ ದೃಶ್ಯ ಮಹಾರಾಷ್ಟ್ರದಲ್ಲಿ ಕಂಡು ಬಂದಿದೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಮಹಾರಾಷ್ಟ್ರದಲ್ಲಿನ ಶನಿ ದೇವಾಲಯಕ್ಕೆ ಭೇಟಿ ನೀಡಿದಂತಹ ಬೆಕ್ಕೊಂದು ಶನಿ ದೇವರ ವಿಗ್ರಹದ ಸುತ್ತ ಭಕ್ತಿಪೂರ್ವಕವಾಗಿ ಪ್ರದಕ್ಷಿಣೆ ಹಾಕುತ್ತಿರುವಂತಹ ದೃಶ್ಯವನ್ನು ಕಾಣಬಹುದು. ದೇವಾಲಯಕ್ಕೆ ಬಂದಂತಹ ಭಕ್ತರೆಲ್ಲರೂ ಬೆಕ್ಕಿನ ಭಕ್ತಿಯನ್ನು ಕಂಡು ಆಶ್ಚರ್ಯಚಕಿತರಗಿದ್ದಾರೆ. ಅಲ್ಲದೆ ಹಲವರು ಈ ಅಚ್ಚರಿಯ ದೃಶ್ಯವನ್ನು ಕಂಡು ವಿಡಿಯೋ ಚಿತ್ರೀಕರಣ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ.

ಇದನ್ನೂ ಓದಿ: ನಾಲ್ಕು ಇಂಚಿನ ಬಾಲದೊಂದಿಗೆ ಜನಿಸಿದ ಮಗು; ಬೆರಗಾದ ವೈದ್ಯ ಲೋಕ 

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ಆರು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ 18 ಸಾವಿರಕ್ಕೂ ಅಧಿಕ ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಲವಾರು ಕಾಮೆಂಟ್ಸ್ ಗಳೂ ಹರಿದು ಬಂದಿವೆ. ಒಬ್ಬ ಬಳಕೆದಾರರು “ಬೆಕ್ಕು ಸಾಕಿದರೆ ಅನಿಷ್ಟ ಅಂತಾರೆ ಆದರೆ ಈ ಬೆಕ್ಕು ಭಕ್ತಿಯಿಂದ ಪ್ರದಕ್ಷಿಣೆ ಹಾಕೋದು ನೋಡಿದ್ರೆ ಬೆಕ್ಕು ಸಾಕ್ಬೇಕು ಅಂತ ಅನ್ಸುತ್ತೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಅಬ್ಬಬ್ಬಾ ಈ ದೃಶ್ಯ ನಿಜಕ್ಕೂ ರೋಮಾಂಚನಕಾರಿಯಾಗಿದೆʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಬೆಕ್ಕು ದೇವರಿಗೆ ಪ್ರದಕ್ಷಿಣೆ ಹಾಕುವ ದೃಶ್ಯವನ್ನು ಕಂಡು ಆಶ್ಚರ್ಯಚಕಿತರಾಗಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್