AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈತ ಡಿಜಿಟಲ್​​ ಕಳ್ಳ, ದೇವರ ಹುಂಡಿ ಮೇಲೆ ತನ್ನ QR Code ಅಂಟಿಸಿ ಲಕ್ಷ ಲಕ್ಷ ದೋಚಿದ್ದ ಖದೀಮ

ದೇವಸ್ಥಾನದ ಹುಂಡಿಯ ಕ್ಯೂಆರ್ ಕೋಡ್ ಮೇಲೆ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್‌ ಅಂಟಿಸಿ ಹಣ ದೋಚುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಖದೀಮ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾನೆ ಎಂದು ವರದಿಗಳು ಸೂಚಿಸಿವೆ.

ಈತ ಡಿಜಿಟಲ್​​ ಕಳ್ಳ, ದೇವರ ಹುಂಡಿ ಮೇಲೆ ತನ್ನ QR Code ಅಂಟಿಸಿ ಲಕ್ಷ ಲಕ್ಷ ದೋಚಿದ್ದ ಖದೀಮ
ಅಕ್ಷತಾ ವರ್ಕಾಡಿ
|

Updated on: Aug 17, 2024 | 5:03 PM

Share

ಚೀನಾ: ಹಲವಾರು ಬೌದ್ಧ ದೇವಾಲಯಗಳ ಹೆಸರಿನಲ್ಲಿ ದೇಣಿಗೆ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಚೀನಾದ ವ್ಯಕ್ತಿಯನ್ನು ಬಂಧಿಸಲಾಗಿದೆ. ವರದಿಗಳ ಪ್ರಕಾರ, ಈತ ದೇವಸ್ಥಾನದ ಹುಂಡಿಯ ಕ್ಯೂಆರ್ ಕೋಡ್ ಅನ್ನು ಮೇಲೆ ತನ್ನ ವೈಯಕ್ತಿಕ ಬ್ಯಾಂಕ್ ಖಾತೆಯ ಕ್ಯೂಆರ್ ಕೋಡ್‌ ಅಂಟಿಸಿದ್ದ ಎಂದು ತಿಳಿದುಬಂದಿದೆ. ಇದಲ್ಲದೇ ಮನೆಮನೆ ಭೇಟಿ ನೀಡಿ ದೇವಾಲಯಗಳ ದೇಣಿಗೆಯ ಹೆಸರಿನಲ್ಲಿ ತನ್ನ ಖಾತೆಗೆ ಹಣ ವರ್ಗಾಯಿಸುತ್ತಿದ್ದ. ಇದೀಗ ಈತನ ಕಳ್ಳಾಟ ಬೆಳಕಿಗೆ ಬಂದಿದೆ.

ಈ ಖದೀಮ ಪ್ರತಿಷ್ಠಿತ ವಿಶ್ವವಿದ್ಯಾಲಯದಿಂದ ಕಾನೂನಿನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾನೆ ಎಂದು ವರದಿಗಳು ಸೂಚಿಸಿವೆ. ಈ ವರ್ಷ ಶಾಂಕ್ಸಿ, ಸಿಚುವಾನ್ ಮತ್ತು ಚಾಂಗ್‌ಕಿಂಗ್ ಪ್ರಾಂತ್ಯಗಳಲ್ಲಿನ ದೇವಾಲಯಗಳಿಂದ 30,000 ಯುವಾನ್ (ಅಂದಾಜು ₹ 3.5 ಲಕ್ಷ) ಕದ್ದಿರುವುದಾಗಿ ತನಿಖೆಯ ವೇಳೆ ಒಪ್ಪಿಕೊಂಡಿದ್ದಾನೆ. ತನಿಖಾಧಿಕಾರಿಗಳ ಪ್ರಕಾರ, ಈತ ಕದ್ದ ಎಲ್ಲಾ ಹಣವನ್ನು ಹಿಂದಿರುಗಿಸಿರುವುದಾಗಿ ತಿಳಿದುಬಂದಿದೆ.

ಕೆಲವು ದಿನಗಳ ನಂತರ ದೇವಸ್ಥಾನದ ಆಡಳಿತ ಮಂಡಳಿಯವರು ಇದನ್ನು ಅರಿತು ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಶಾಂಕ್ಸಿ ಪೊಲೀಸರು ತನಿಖೆ ನಡೆಸಿ ದೇವಸ್ಥಾನದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಇದಾದ ಬಳಿಕ ಈ ವ್ಯಕ್ತಿ ಕೆಲ ದಿನಗಳ ಹಿಂದೆ ಬಂದಿದ್ದು, ವಿಗ್ರಹದ ಮುಂದೆ ನಮಸ್ಕರಿಸಿ ಬಳಿಕ ಕಾಣಿಕೆ ಡಬ್ಬದ ಮೇಲೆ ಕ್ಯೂಆರ್ ಹಾಕಿರುವುದು ಬೆಳಕಿಗೆ ಬಂದಿದೆ. ದೇವಸ್ಥಾನದಲ್ಲಿ ದೇಣಿಗೆ ನೀಡಲು ಭಕ್ತ ಮೊಬೈಲ್‌ನಿಂದ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿದಾಗ, ದೇಣಿಗೆ ಮೊತ್ತವನ್ನು ನೇರವಾಗಿ ಆ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿರುವುದು ಗೊತ್ತಾಗಿದೆ.

ಇದನ್ನೂ ಓದಿ: ‌Richard Lugner: 2 ತಿಂಗಳ ಹಿಂದಷ್ಟೇ 6ನೇ ಮದುವೆಯಾಗಿದ್ದ 91 ವರ್ಷದ ಬಿಲಿಯನೇರ್ ನಿಧನ

ಬಳಿಕ ಪೊಲೀಸರು ತನಿಖೆ ನಡೆಸಿ ವ್ಯಕ್ತಿಯನ್ನು ಬಂಧಿಸಿದ್ದಾರೆ. ಅಲ್ಲಿ ಹಲವು ದೇವಸ್ಥಾನಗಳಿಗೆ ಈ ರೀತಿ ವಂಚನೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈ ಪ್ರಕರಣದ ತನಿಖೆ ನಡೆಸುತ್ತಿರುವವರು ಆರೋಪಿಯು ಇಲ್ಲಿಯವರೆಗೆ ಎಲ್ಲಾ ಕದ್ದ ಹಣವನ್ನು ಹಿಂದಿರುಗಿಸಿದ್ದಾನೆ. ಈ ಪ್ರಕರಣವು ಪ್ರಪಂಚದಾದ್ಯಂತ ಇದೀಗ ಭಾರೀ ಚರ್ಚೆಯಲ್ಲಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ